ಬೆಂಗಳೂರು: ನಿರೀಕ್ಷೆಯಂತೆ ರಾಜ್ಯ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಸ್ಪರ್ಧಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 42 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಎರಡನೇ ಪಟ್ಟಿಯಲ್ಲಿಯೂ ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರು ಸ್ಪರ್ಧಿಸುವ ಕುರಿತು ಇನ್ನೂ ಪಕ್ಷ ತೀರ್ಮಾನ ತೆಗೆದುಕೊಂಡಿಲ್ಲ. ಈ ಬಗ್ಗೆ ಇದ್ದ ಕುತೂಹಲ ಹಾಗೆಯೇ ಮುಂದುವರಿದಿದೆ.
ಕಳೆದ ವಾರವೇ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆಗ 124 ಕ್ಷೇತ್ರಗಳಿಗೆ ಸ್ಪರ್ಧಿಗಳ ಹೆಸರು ಅಂತಿಮಗೊಳಿಸಲಾಗಿತ್ತು. ತೀವ್ರ ಪೈಪೋಟಿಗೆ ಕಾರಣವಾಗಿದ್ದ ಕೆಲವು ಕ್ಷೇತ್ರಗಳಿಗೆ ಈಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ತೀರ್ಥಹಳ್ಳಿ ಕ್ಷೇತ್ರದಿಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ಗೆ ಟಿಕೆಟ್ ಘೋಷಿಸಲಾಗಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಗೆದ್ದಿದ್ದ ಬಾದಾಮಿ ಕ್ಷೇತ್ರದ ಟಿಕೆಟ್ ಅನ್ನು ನಿರೀಕ್ಷೆಯಂತೆ ಭಿಮಸೇನ ಬಿ. ಚಿಮ್ಮನಕಟ್ಟಿ ಅವರಿಗೆ ನೀಡಲಾಗಿದೆ. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಚಿವ ವಿ.ಎಸ್. ದತ್ತಾಗೆ ಕಡೂರು ಕ್ಷೇತ್ರದ ಟಿಕೆಟ್ ನೀಡಲಾಗಿಲ್ಲ, ಬದಲಾಗಿ ಆನಂದ್ ಕೆ.ಎಸ್ ಕಣಕ್ಕಿಳಿಯಲಿದ್ದಾರೆ.
ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧಿಸಲಿರುವ ರೈತ ನಾಯಕ ದಿವಂಗತ ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಕಾಂಗ್ರೆಸ್ ಬೆಂಬಲ ಘೋಷಿಸಿದೆ. ಇದನ್ನು ಎರಡನೇ ಪಟ್ಟಿಯಲ್ಲಿಯೇ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ;
ಇದನ್ನೂ ಓದಿ: Karnataka Elections : ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ರಾಸಲೀಲೆ ಫೋಟೊ ವೈರಲ್?