20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ. - Vistara News

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

bigbreaking

ಬಿಜೆಪಿಗೆ ಸೇರಿದ ಎಎಪಿ ದಿಗ್ಗಜ ರಾಘವ್ ಚಡ್ಡಾ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್! ಪಕ್ಷಾಂತರಕ್ಕೆ ಕೊಟ್ಟ ಕಾರಣವೇನು?

VISTARANEWS.COM


on

ರಾಷ್ಟ್ರ ರಾಜಕಾರಣದಲ್ಲಿ ಇಂದು ಭಾರಿ ಸಂಚಲನ ಮೂಡಿದ್ದು, ಆಮ್ ಆದ್ಮಿ ಪಕ್ಷದ (AAP) ಅತ್ಯಂತ ಪ್ರಭಾವಿ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಚಡ್ಡಾ ಅವರ ಈ ನಡೆ ಎಎಪಿ ಪಾಳಯಕ್ಕೆ ಅನಿರೀಕ್ಷಿತ ಪೆಟ್ಟು ನೀಡಿದೆ. ಕಳೆದ ಕೆಲವು ದಿನಗಳಿಂದ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದ ಅವರು, ಇಂದು ಕೇಸರಿ ಧ್ವಜ ಹಿಡಿಯುವ ಮೂಲಕ ದೆಹಲಿ ಮತ್ತು ಪಂಜಾಬ್ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

ರಾಘವ್ ಚಡ್ಡಾ ಅವರ ಈ ಪಕ್ಷಾಂತರದ ಹಿಂದೆ ಹಲವು ದಿನಗಳಿಂದ ತಯಾರಿ ನಡೆದಿತ್ತು ಎಂಬ ಮುನ್ಸೂಚನೆಗಳು ಲಭ್ಯವಾಗಿದ್ದವು. ಇತ್ತೀಚೆಗೆ ಆಮ್ ಆದ್ಮಿ ಪಕ್ಷವು ಅವರ ಬಳಿಯಿದ್ದ ಕೆಲವು ಮಹತ್ವದ ಜವಾಬ್ದಾರಿಗಳನ್ನು ಹಿಂಪಡೆದಿದ್ದು ಅವರ ಅಸಮಾಧಾನಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ, ಚಡ್ಡಾ ಅವರು ಕಳೆದ ಕೆಲವು ಸಮಯದಿಂದ ಬಿಜೆಪಿಯ ಕೇಂದ್ರ ನೀತಿಗಳ ವಿರುದ್ಧ ಯಾವುದೇ ಟೀಕೆಗಳನ್ನು ಮಾಡದೆ ಮೌನಕ್ಕೆ ಶರಣಾಗಿದ್ದರು. ಅಷ್ಟೇ ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಈ ಹಿಂದೆ ತಾವು ಮಾಡಿದ್ದ ಹಳೆಯ ಟ್ವೀಟ್‌ಗಳನ್ನು ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿದ್ದು ವದಂತಿಗಳಿಗೆ ಪುಷ್ಟಿ ನೀಡಿತ್ತು.

ತಮ್ಮ ನಿರ್ಧಾರದ ಕುರಿತು ಮಾತನಾಡಿದ ರಾಘವ್ ಚಡ್ಡಾ, ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಧಾನಿ ಮೋದಿಯವರ ದಕ್ಷ ನಾಯಕತ್ವಕ್ಕೆ ಬೆಂಬಲ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಎಎಪಿ ನಾಯಕತ್ವದೊಂದಿಗಿನ ಆಂತರಿಕ ಭಿನ್ನಾಭಿಪ್ರಾಯ ಮತ್ತು ಕಾರ್ಯವೈಖರಿಯ ಬಗ್ಗೆ ಅವರು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಾಣಾಕ್ಷ ರಾಜಕಾರಣಿ ಎಂದು ಹೆಸರಾಗಿದ್ದ ಚಡ್ಡಾ ಅವರ ಸೇರ್ಪಡೆಯಿಂದ ದೆಹಲಿಯಲ್ಲಿ ಬಿಜೆಪಿಗೆ ಹೊಸ ಬಲ ಬಂದಂತಾಗಿದ್ದು, ಕೇಜ್ರಿವಾಲ್ ಪಡೆ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಈಗ ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Continue Reading

bigbreaking

Karnataka SSLC Result 2026 : ಇತಿಹಾಸದಲ್ಲೇ ಮೊದಲ ಬಾರಿಗೆ ಎಸ್‌ಎಸ್‌ಎಲ್‌ಸಿ 94. 1% ಫಲಿತಾಂಶ: 7 ವಿದ್ಯಾರ್ಥಿಗಳಿಗೆ 625ಕ್ಕೆ 625

VISTARANEWS.COM


on

ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಿದ್ದು ಶೇ 94. 1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇದು ರಾಜ್ಯದ ಇತಿಹಾಸದಲ್ಲೇ ದಾಖಲೆಯ ಫಲಿತಾಂಶವಾಗಿದೆ. ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ತೇರ್ಗಡೆಯಾಗಿದ್ದಾರೆ. ಹಾಸನದ ಜಾನವಿ, ಬೆಳಗಾವಿಯ ರೂಪಾ ಚನಗೌಡ ಪಾಟೀಲ, ಹಾಸನದ ಉತ್ಸವ ಪಾಟೀಲ 625ಕ್ಕೆ 625 ಅಂಕ ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು ಕಲುಬುರ್ಗಿ ಕೊನೆಯ ಸ್ಥಾನದಲ್ಲಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ https://karresults.nic.in ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದ್ದು, ತಾಂತ್ರಿಕ ತೊಂದರೆ ತಪ್ಪಿಸಲು ಎಸ್‌ಎಂಎಸ್ ವ್ಯವಸ್ಥೆಯನ್ನೂ ಸಮರ್ಪಕವಾಗಿ ಬಳಸಿಕೊಳ್ಳಲು ಇಲಾಖೆ ಕೋರಿದೆ.

Continue Reading

bigbreaking

Karnataka Election 2023 : ಕಾಂಗ್ರೆಸ್‌ ಎರಡನೇ ಪಟ್ಟಿ ಪ್ರಕಟ; 42 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ

Karnataka Election 2023 : ಎರಡನೇ ಪಟ್ಟಿಯಲ್ಲಿ ಕೋಲಾರ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಇನ್ನೂ ಪ್ರಕಟಿಸಿಲ್ಲ. ಹೀಗಾಗಿ ಈ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ.

VISTARANEWS.COM


on

Congress releases fourth list of 10 candidates for Karnataka Assembly polls

ಬೆಂಗಳೂರು: ನಿರೀಕ್ಷೆಯಂತೆ ರಾಜ್ಯ ವಿಧಾನಸಭೆ ಚುನಾವಣೆಯ ಕಾಂಗ್ರೆಸ್‌ ಸ್ಪರ್ಧಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 42 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಎರಡನೇ ಪಟ್ಟಿಯಲ್ಲಿಯೂ ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರು ಸ್ಪರ್ಧಿಸುವ ಕುರಿತು ಇನ್ನೂ ಪಕ್ಷ ತೀರ್ಮಾನ ತೆಗೆದುಕೊಂಡಿಲ್ಲ. ಈ ಬಗ್ಗೆ ಇದ್ದ ಕುತೂಹಲ ಹಾಗೆಯೇ ಮುಂದುವರಿದಿದೆ.

ಕಳೆದ ವಾರವೇ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆಗ 124 ಕ್ಷೇತ್ರಗಳಿಗೆ ಸ್ಪರ್ಧಿಗಳ ಹೆಸರು ಅಂತಿಮಗೊಳಿಸಲಾಗಿತ್ತು. ತೀವ್ರ ಪೈಪೋಟಿಗೆ ಕಾರಣವಾಗಿದ್ದ ಕೆಲವು ಕ್ಷೇತ್ರಗಳಿಗೆ ಈಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ತೀರ್ಥಹಳ್ಳಿ ಕ್ಷೇತ್ರದಿಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ಗೆ ಟಿಕೆಟ್‌ ಘೋಷಿಸಲಾಗಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಗೆದ್ದಿದ್ದ ಬಾದಾಮಿ ಕ್ಷೇತ್ರದ ಟಿಕೆಟ್‌ ಅನ್ನು ನಿರೀಕ್ಷೆಯಂತೆ ಭಿಮಸೇನ ಬಿ. ಚಿಮ್ಮನಕಟ್ಟಿ ಅವರಿಗೆ ನೀಡಲಾಗಿದೆ. ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದ ಮಾಜಿ ಸಚಿವ ವಿ.ಎಸ್‌. ದತ್ತಾಗೆ ಕಡೂರು ಕ್ಷೇತ್ರದ ಟಿಕೆಟ್‌ ನೀಡಲಾಗಿಲ್ಲ, ಬದಲಾಗಿ ಆನಂದ್‌ ಕೆ.ಎಸ್‌ ಕಣಕ್ಕಿಳಿಯಲಿದ್ದಾರೆ.

ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧಿಸಲಿರುವ ರೈತ ನಾಯಕ ದಿವಂಗತ ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್‌ ಪುಟ್ಟಣ್ಣಯ್ಯ ಅವರಿಗೆ ಕಾಂಗ್ರೆಸ್‌ ಬೆಂಬಲ ಘೋಷಿಸಿದೆ. ಇದನ್ನು ಎರಡನೇ ಪಟ್ಟಿಯಲ್ಲಿಯೇ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ;

ಇದನ್ನೂ ಓದಿ: Karnataka Elections : ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ರಾಸಲೀಲೆ ಫೋಟೊ ವೈರಲ್‌?

Continue Reading
Advertisement
Latest15 minutes ago

ಅಪ್ಪು ಸರ್ ಕೊಟ್ಟ ಆ ಪ್ರೋತ್ಸಾಹವೇ ನನ್ನ ಯಶಸ್ಸಿನ ಗುಟ್ಟು: ಕನ್ನಡಿಗರ ನೆಚ್ಚಿನ ‘ಅಂಜನಿಪುತ್ರ’ನ ಬಗ್ಗೆ ‘ನ್ಯಾಷನಲ್ ಕ್ರಶ್’ ರಶ್ಮಿಕಾ ಹೇಳಿದ್ದೇನು?

bigbreaking34 minutes ago

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

Latest1 hour ago

ಕಿಂಗ್ ಕೊಹ್ಲಿಗಾಗಿ ಪುಟಾಣಿ ಫ್ಯಾನ್ ಹಠ: ಹೋಟೆಲ್ ಸಿಬ್ಬಂದಿ ತಡೆದಿದ್ದಕ್ಕೆ ಕಣ್ಣೀರು ಹಾಕಿದ ಬಾಲಕ

Latest2 hours ago

ಹಣ ಪಡೆಯಲು ಬ್ಯಾಂಕಿಗೆ ಸಹೋದರಿಯ ಅಸ್ಥಿಪಂಜರವನ್ನೇ ತಂದ ವ್ಯಕ್ತಿ!

Latest4 hours ago

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರಾ? ಪರಮೇಶ್ವರ್ ಮೌನದ ಹಿಂದೆ ಅಡಗಿದೆಯೇ ದೊಡ್ಡ ರಹಸ್ಯ?

Latest5 hours ago

ಸಾಲದ ಸುಳಿಯಲ್ಲಿ ರಾಜ್ಯ ಸರ್ಕಾರ! ಆರ್ಥಿಕ ಶಿಸ್ತಿನ ಬಗ್ಗೆ ಹೆಚ್‌ಡಿಕೆ ಆತಂಕ

Latest5 hours ago

ರಿಷಬ್ ಶೆಟ್ಟಿ ಸಿನಿಮಾದ ತೆಲುಗು ವರ್ಷನ್ ರೆಡಿ: ಟಾಲಿವುಡ್‌ನಲ್ಲಿ ಬಿಡುಗಡೆಗೆ ದಿನಾಂಕ ನಿಗದಿ! ಯಾವುದು ಆ ಸಿನಿಮಾ?

Latest6 hours ago

‘ಕೆಡಿ’ ಹಾಡಿನ ವಿವಾದಕ್ಕೆ ತೆರೆ: ಕ್ಷಮೆಯಾಚಿಸಿ 50 ಬುಡಕಟ್ಟು ಹುಡುಗಿಯರ ಶಿಕ್ಷಣದ ಜವಾಬ್ದಾರಿ ಹೊತ್ತ ಸಂಜಯ್ ದತ್!

Latest6 hours ago

ಜಕಾರ್ತಾದಲ್ಲಿ ರೈಲುಗಳ ಮುಖಾಮುಖಿ ಡಿಕ್ಕಿ: 7 ಮಂದಿ ಸಾವು, 81 ಜನರಿಗೆ ಗಾಯ! ಅಪಘಾತಕ್ಕೆ ಕಾರಣವಾಯಿತೇ ಟ್ಯಾಕ್ಸಿ?

Latest23 hours ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌