ಬೆಂಗಳೂರು: ಈ ವಾರ ಎಲ್ಲ ಟಾಸ್ಕ್‌ಗಳಲ್ಲಿಯೂ (BBK SEASON 10) ‘ಮಣ್ಣಿನ ಮಕ್ಕಳು’ ತಂಡ ಸೋತು ಸುಣ್ಣವಾಗಿದೆ. ಆ ತಂಡದ ನಾಯಕತ್ವವನ್ನು ವಹಿಸಿದ್ದ ಡ್ರೋಣ್ ಪ್ರತಾಪ್ ಜೈಲುಪಾಲಾಗಿದ್ದಾರೆ. ನಾಯಕತ್ವದ ಪರಿಣಾಮವಾಗಿ ಜೈಲುಡುಗೆ ತೊಟ್ಟ ಪ್ರತಾಪ್ ಚಿತ್ರ ಜಯೋ ಸಿನಿಮಾ ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಜಾಹೀರುಗೊಂಡಿದೆ. ವಾರದ ಕೊನೆಗೆ ಕಳಪೆ ಯಾರು ಉತ್ತಮ ಯಾರು ಎಂಬುದನ್ನು ಆರಿಸುವ ಸಂದರ್ಭದಲ್ಲಿ ಎರಡೂ ತಂಡದ ಬಹುತೇಕ ಸದಸ್ಯರು ಪ್ರತಾಪ್ ಹೆಸರನ್ನು ಸೂಚಿಸಿದ್ದಾರೆ.
‘ನನ್ನನ್ನು ಕ್ಯಾಪ್ಟನ್ಸಿ ಟಾಸ್ಕ್‌ನಿಂದ ಹೊರಗಿಟ್ಟಿದ್ದು ಬೇಜಾರಾಯ್ತು’ ಎಂದು ನಮ್ರತಾ ಕಾರಣ ಕೊಟ್ಟಿದ್ದರೆ, ‘ಕಾರ್ತಿಕ್ ಅವರಂತಹ ಆಟಗಾರನನ್ನು ಹೊರಗಿಟ್ಟಿದ್ದರಿಂದ ತಂಡ ವಾರದ ಎಲ್ಲ ಟಾಸ್ಕ್‌ಗಳಲ್ಲಿಯೂ ಸೋಲುವಂತಾಯ್ತು’ ಎಂದು ವಿನಯ್ ಕಾರಣ ನೀಡಿದ್ದಾರೆ. ‘ಎಲ್ಲೋ ಒಂದು ಕಡೆ ಕೋಪದಿಂದ ಮಾತಾಡ್ತಾರೆ ಎಂದು ಈ ವಾರನೂ ಅಗ್ರೆಶನ್‌ನಲ್ಲಿಯೇ ಆಡ್ತಾರೆ ಅಂದುಕೊಳ್ಳುವುದು ಸರಿಯಲ್ಲ’ ಎಂದು ತನಿಷಾ ಹೇಳಿದ್ದಾರೆ. ವರ್ತೂರು, ಸ್ನೇಹಿತ್ ಕೂಡ ಪ್ರತಾಪ್ ಹೆಸರನ್ನೇ ಹೇಳಿದ್ದಾರೆ.
ಮನೆಯವರ ನಿರ್ಧಾರಕ್ಕೆ ಬದ್ಧನಾಗಿ ಪ್ರತಾಪ್ ಜೈಲುಡುಗೆಯೇನೋ ತೊಟ್ಟಿದ್ದಾರೆ. ಆದರೆ ಅವರ ನಿರ್ಧಾರ ನನಗೆ ಸಮ್ಮತ ಅನಿಸಿಲ್ಲ ಎಂದೂ ಗಟ್ಟಿಯಾಗಿಯೇ ಹೇಳಿದ್ದಾರೆ. ‘ನನ್ನ ಪ್ರಕಾರ ನಾನು ತೆಗೆದುಕೊಂಡ ನಿರ್ಧಾರಗಳು ಸರಿ ಇದ್ದವು. ಎಲ್ಲರೂ ಸೇರಿ ನನಗೆ ಕಳಪೆ ಕೊಟ್ಟಿದ್ದು ಬೇಜಾರಾಗಿದೆ. ಇದಕ್ಕೆ ನನಗೆ ಸಮ್ಮತಿ ಇಲ್ಲ’ ಎಂದು ಹೇಳಿ ಪ್ರತಾಪ್ ಅವರು ಜೈಲಿನೊಳಗೆ ಹೋಗಿ ಕೂತಿದ್ದಾರೆ. ಹಾಗಾದರೆ ಈ ವಾರ ಉತ್ತಮ ಪಟ್ಟ ಯಾರಿಗೆ ಬಂದಿದೆ? ಕ್ಯಾಪ್ಟನ್ಸಿ ಓಟದಲ್ಲಿ ಯಾರು ಗೆದ್ದಿದ್ದಾರೆ? ಈ ಪ್ರಶ್ನೆಗಳಿಗೆ ಉತ್ತರ ಇಂದಿನ ಸಂಚಿಕೆಯಲ್ಲಿ ಗೊತ್ತಾಗಲಿದೆ.
ಇದನ್ನೂ ಓದಿ: BBK SEASON 10: ತನಿಷಾ ಪರ ಆಡಿ ಬೆಸ್ಟಿ ವಿನಯ್‌ರನ್ನು ಹೊರಗಟ್ಟಿದ ನಮ್ರತಾ!
ಈ ವಾರ ಡ್ರೋನ್ ಪ್ರತಾಪ್ ಅವರು ಆಟದ ವಿಚಾರದಲ್ಲಿ ಮನೆಯವರ ಕೆಂಗಣ್ಣಿಗೆ ಗುರಿಯಾದರು. ಕಳೆದ ಸಂಚಿಕೆಯಲ್ಲಿ ತಾವು ತಮ್ಮ ಜೀವನದಲ್ಲಿ ಎದುರಿಸಿದ ಸಂಕಷ್ಟದ ಸಮಯವನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಕಳೆದ ವಾರ ಡ್ರೋನ್ ಅವರು ಅತಿ ಹೆಚ್ಚು ವೋಟ್ ಪಡೆದು ಸೇಫ್ ಆಗಿದ್ದರು. ಆದರೆ ಈ ವಾರ ಆಟದಲ್ಲಿ ಕಳಪೆ ಪ್ರದರ್ಶನ ತೋರಿದ್ದಾರೆ.