Site icon Vistara News

BBK SEASON 10: ನಮ್ರತಾ ಸಿಕ್ಸ್ತ್‌ ಸೆನ್ಸ್ ಪ್ರಕಾರ ಗೆಲ್ಲುವ ಸ್ಪರ್ಧಿ ಇವರು

namrutha

namrutha

ಬೆಂಗಳೂರು: ಬಿಗ್‌ಬಾಸ್‌ ಹತ್ತನೇ ಸೀಸನ್‌ನ (BBK SEASON 10) ಅಂತಿಮ ಏಳು ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ನಮ್ರತಾ ಈ ವಾರ ಮನೆಯಿಂದ ಹೊರ ಬಿದ್ದಿದ್ದಾರೆ. ‘ʼಬಿಗ್‌ಬಾಸ್‌ ಈ ಸೀಸನ್‌ನಲ್ಲಿ ನಿಮ್ಮ ಕೊಡುಗೆ ನಿಜಕ್ಕೂ ಮಹತ್ವದ್ದು. ನೀವು ಯಾರು ಎಂದು ನನಗೂ ತೋರಿಸಿಕೊಟ್ಟಿದ್ದೀರಿʼʼ ಎಂಬ ಮೆಚ್ಚುಗೆಯ ಮಾತನ್ನು ಕಿಚ್ಚ ಸುದೀಪ್‌ ಅವರಿಂದ ಕೇಳಿಸಿಕೊಂಡಿರುವ ನಮ್ರತಾ ಮನೆಯಿಂದ ಹೊರಗೆ ಬಂದ ಕೂಡಲೇ ತಮ್ಮ ಜರ್ನಿಯ ಬಗ್ಗೆ ಜಿಯೊ ಸಿನಿಮಾಗೆ ಸಂದರ್ಶನ ನೀಡಿದ್ದಾರೆ. ಅವರು ಏನು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಎಲಿಮಿನೇಷನ್ ಶಾಕ್!

ಹತ್ತೊಂಬತ್ತು ಜನರಲ್ಲಿ ಏಳನೇ ಸ್ಥಾನದವರೆಗೂ ಬಂದಿರುವುದು ಖಂಡಿತ ಸುಲಭವ ಸಂಗತಿ ಅಲ್ಲ. ಮೂರು ದಿನಗಳ ಹಿಂದೆ ಹಳೆಯ ಸ್ಪರ್ಧಿಗಳೆಲ್ಲ ಬಂದು ಒಂದು ಬಾಂಬ್ ಹಾಕಿದ್ದರು. ನಿಂಗೆ ಚಾನ್ಸ್ ಇಲ್ಲ ಅಂತ. ಆಗ ನನ್ನ ಆತ್ಮವಿಶ್ವಾಸ ಕುಗ್ಗಲು ಶುರುವಾಯ್ತು. ಆದರೂ ನನ್ನನ್ನು ನಾನು ಸಂಭಾಳಿಸಿಕೊಂಡು ಆಟ ಆಡಲು ಶುರು ಮಾಡಿದೆ. ಆದರೆ ಈಗ ಮನೆಯಿಂದ ಹೊರಗೆ ಬಂದಿದ್ದು ನಿಜಕ್ಕೂ ಶಾಕ್‌. ಈ ನೂರಾ ಆರು ದಿನಗಳ ಪಯಣವನ್ನು ಸಣ್ಣದಾಗಿ ವಿವರಿಸಲು ಸಾಧ್ಯವೇ ಇಲ್ಲ. ಅದರಲ್ಲಿಯೂ ನನ್ನದು ನಿಜವಾಗಿಯೂ ಏರಿಳಿತದ ಪಯಣವಾಗಿತ್ತು. ಎಲ್ಲಿಂದಲೋ ಶುರು ಮಾಡಿ ಎಲ್ಲಿಗೋ ಹೋಗಿ, ಕೆಳಗೆ ಇಳಿದು ಮತ್ತೆ ಮೇಲೆ ಏರಿ ಹೋದ ಜರ್ನಿ ನಂದು ಎಂದು ನಮ್ರತಾ ಹೇಳಿದ್ದಾರೆ.

ಸ್ನೇಹಿತರ ಜತೆಗೆ ಮಾತನಾಡಿದ್ದು ನನಗೆ ತುಂಬ ಖುಷಿ ಕೊಟ್ಟಿತ್ತು. ಆದರೆ ಆ ಫ್ರೆಂಡ್‌ಶಿಪ್‌ನಲ್ಲಿ ಮಾತಾಡುತ್ತಿದ್ದಾಗ ಬೇರೆಯವರ ಬಗ್ಗೆ ಒಂದು ಒಪಿನಿಯನ್ ಕ್ರಿಯೇಟ್ ಆಗುತ್ತದೆ. ಅವರು ಕೆಟ್ಟವರು, ಅವರು ಒಳ್ಳೆಯವರು ಎಂದೆಲ್ಲ. ಆದರೆ ಹೋಗ್ತಾ ಹೋಗ್ತಾ ನಾನು ಮೈ ಚಳಿ ಬಿಟ್ಟು ಅವರ ಜತೆಗೆ ಸೇರಲು ಪ್ರಾರಂಭಿಸಿದಾಗ ಅವರು ನಾನು ಅಂದುಕೊಂಡಷ್ಟು ಕೆಟ್ಟವರಲ್ಲ ಅನಿಸಿತು. ಎಲ್ಲರೂ ಒಳ್ಳೆಯವರೇ ಆಗಿರುತ್ತಾರೆ. ಆದರೆ ಆಯಾ ಸಂದರ್ಭದಲ್ಲಿ ಕೆಟ್ಟವರ ಹಾಗೆ ಕಾಣಿಸುತ್ತಿರುತ್ತಾರೆ. ನಾನೂ ಅಂಥ ಕೆಲವು ಸಂದರ್ಭಗಳಲ್ಲಿ ಕೆಟ್ಟವಳಾಗಿರುತ್ತೇನೆ. ಬಿಗ್‌ಬಾಸ್‌ ಮನೆಯಲ್ಲಿ ನಾನು ಸಣ್ಣಪುಟ್ಟ ತಪ್ಪುಗಳನ್ನು ಮಾಡಿರಬಹುದು. ಆದರೆ ಇವೆಲ್ಲ ಹೇಳುವ ಥರ, ಶಾಡೊ, ಇನ್‌ಪ್ಲ್ಯೂಯೆನ್ಸ್‌ ಎಲ್ಲ ಆಗಿಲ್ಲ. ನಾನು ನಿಜವಾದ ಸ್ನೇಹಿತರನ್ನು ಕಂಡುಕೊಂಡಿದ್ದೇನೆ. ಆರಂಭದಲ್ಲಿ ಗೇಮ್ ಆಡಲು, ಸ್ಟ್ರಾಟಜಿ ಮಾಡಲು ಗೊತ್ತಾಗುತ್ತಿರಲಿಲ್ಲ. ಆದರೆ ನಾನು ಕಲಿಯುತ್ತಾ ಬಂದೆ. ಕಲಿಯುವಷ್ಟರಲ್ಲಿ ಸ್ವಲ್ಪ ಸಮಯ ತಗುಲಿತು ಅಷ್ಟೆ. ನಂತರ ನಾನು ಆಟದಲ್ಲಿ ಇಳಿದೆ ಎಂದು ಅವರು ವಿವರಿಸಿದ್ದಾರೆ.

ಇದೊಂದು ಸೋಲ್‌ಫುಲ್ ಜರ್ನಿ

ಬಿಗ್‌ಬಾಸ್‌ ಮನೆಯಲ್ಲಿ ಕಳೆದ ದಿನಗಳು ನನ್ನ ಪಾಲಿಗೆ ಸೋಲ್‌ಫುಲ್ ಜರ್ನಿ. ಇಲ್ಲಿ ಯಾರೂ ಕೆಟ್ಟವರಲ್ಲ. ಈ ಪ್ರಯಾಣವನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ರಿಯಲ್ ಫ್ರೆಂಡ್‌ಶಿಪ್‌ ಮನೆಯೊಳಗಲ್ಲ, ಹೊರಗೇ ಮುಂದುರಿಯುತ್ತದೆ ಅಂದುಕೊಂಡಿದ್ದೇನೆ. ಎಲ್ಲರ ಜತೆಗೂ ಸಂಪರ್ಕದಲ್ಲಿ ಇರಲು ಬಯಸುತ್ತೇನೆ. ನನ್ನ-ಸಂಗೀತಾ ನಡುವಿನ ಫ್ರೆಂಡ್‌ಶಿಪ್‌ ಅನ್ನು ಒಂದೇ ಪದದಲ್ಲಿ ಹೇಳಬೇಕು ಅಂದರೆ ಸಿಸ್ಟರ್‌ಹುಡ್‌. ಅವರು ನನಗೆ ಸಹೋದರಿಯ ಹಾಗೆ. ನನಗೆ ಆ ಥರ ಬಾಂಡಿಂಗ್ ಆಗೋದು ಕಡಿಮೆ. ಆದರೆ ಇಲ್ಲಿ ಆಯ್ತು. ಸಂಗೀತಾ ಏನೇ ಇದ್ರೂ ಮುಖದ ಮೇಲೇ ಹೇಳ್ತಾರೆ. ನೀನು ಇಲ್ಲಿ ತಪ್ಪು ಮಾಡಿದೆ. ಇದು ಸರಿ ಎಂಬುದನ್ನು ನೇರವಾಗಿ ಹೇಳ್ತಾರೆ. ಅಂಥ ಕ್ರಿಟಿಕ್ ಎಲ್ಲರ ಬದುಕಿನಲ್ಲಿಯೂ ಇರಬೇಕು ಅನಿಸುತ್ತದೆ ಎಂದು ನಮ್ರತಾ ತಿಳಿಸಿದ್ದಾರೆ.

ನನಗೆ ಅಣ್ಣ ಇಲ್ಲ ಎಂಬ ಕೊರಗು ಯಾವಾಗಲೂ ಇತ್ತು. ಆ ಸ್ಥಾನವನ್ನು ವಿನಯ್ ತುಂಬಿದ್ದಾರೆ. ಹೊರಗಡೆ ಕೂಡ ಆ ಬಾಂಧ್ಯವವನ್ನು ಮುಂದುವರಿಸಿಕೊಳ್ಳಲು ಬಯಸುತ್ತೇನೆ. ಇಡೀ ಮನೆಯಲ್ಲಿ ನನಗೆ ಬಹುಬೇಗ ಮನಸ್ಸಿಗೆ ಹತ್ತಿರವಾದವನು ಪ್ರತಾಪ್. ಆವಾಗಾವಾಗ ವಿಯರ್ಡ್ ಆಗಿ ಆಡ್ತಾನೆ ನಿಜ. ಆದರೆ ಅವನು ಇರೋದೇ ಹಾಗೆ. ಅವನನ್ನು ಹಾಗೆಯೇ ಒಪ್ಪಿಕೊಂಡಿದ್ದೇನೆ ನಾನು. ಮೊದಲು ಅವನು ಒಪಿನಿಯನ್ ಹೇಳಬೇಕಾದರೆ, ಕಮೆಂಟ್ ಮಾಡುವುದನ್ನು ಕೇಳಿದಾಗ ಕೋಪ ಬರುತ್ತಿತ್ತು. ಏನೋ ಹೇಳಿದ್ದನ್ನು ಪರ್ಸನಲ್ ಆಗಿಟ್ಟುಕೊಂಡು ತುಂಬ ದಿನ ಸಾಧಿಸ್ತಿದ್ದ. ಆದರೆ ಈಗ, ಅವನೂ ಅದನ್ನೆಲ್ಲ ಬಿಟ್ಟು ತುಂಬ ಬದಲಾಗಿದ್ದಾನೆ ಎಂದು ಅಭಿಪ್ರಾಯಪಟ್ಟರು.

ಅವನ ಅಪ್ಪ, ಅಮ್ಮ ಇಬ್ಬರೂ ಸಿಕ್ಕಾಪಟ್ಟೆ ಒಳ್ಳೆಯ ಜನ, ಮುಗ್ಧರು. ನಾನು ನೋಡಿದ ತಕ್ಷಣ ಪಟ್ ಅಂತ ಕನೆಕ್ಟ್ ಆದೆ. ಅವರಿಬ್ಬರ ಸೆಲ್ಫ್‌ಸೆಲ್ ಮಾತು ನೋಡಿ ಇಷ್ಟವಾಯ್ತು. ಅವನು ‘ʼನಾನು ನಿಮಗೆ ಸೀರೆ ಕೊಡಿಸ್ತೀನಿ ದೀ… ನಿಮಗೆ ಓಲೆ ಜುಮುಕಿ ಕೊಡಿಸ್ತೀನಿ’ʼ ಎಂದು ಹೇಳುತ್ತಿದ್ದ. ಅವರ ತಂದೆ ತಾಯಿ ಸೀರೆ ತಂದುಕೊಟ್ಟಿದ್ದು ನೋಡಿ ಬಹಳ ಎಮೋಷನಲ್ ಆಯ್ತು. ನಮ್ಮೋರು ಅಂತ ಅನಿಸಿತು. ಬೇಕೋ ಬೇಡವೋ ನಾನು ಯಾವಾಗಲೂ ಅವನ ದೀದಿ ಆಗಿಯೇ ಇರುತ್ತೇನೆ. ಅವನು ಯಾವಾಗಲೂ ನನ್ನ ಪುಟ್ಟ ತಮ್ಮನೇ ಎಂದು ನಮ್ರತಾ ಭಾವುಕರಾದರು.

ತುಕಾಲಿಯೇ ಫೇಕ್

ನನಗೆ ಅಕ್ಷರಶಃ ಫೇಕ್ ಅನಿಸಿದ್ದು ತುಕಾಲಿ ಸಂತೋಷ್. ಅವರನ್ನು ಬಿಟ್ಟರೆ ಮತ್ತೆ ವಾಪಸ್ ಮನೆಯೊಳಗೆ ಬಂದಾಗ ಅನಿಸಿದ್ದು ಸ್ನೇಹಿತ್‌ ಕೂಡ ಫೇಕ್ ಎನಿಸಿತು. ನಾನು ಅವರ ಕಡೆಯಿಂದ ಸಾಕಷ್ಟು ಬೆಂಬಲ ನಿರೀಕ್ಷಿಸಿದ್ದೆ. ಆದರೆ ಅವರು ಬಂದು ನನ್ನ ತುಂಬ ಡಿಮೋಟಿವೇಟ್ ಮಾಡಿದ್ದು ಸ್ನೇಹಿತ್‌. ಇಡೀ ಮನೆಯಲ್ಲಿ ನಾನು ತುಂಬ ಜೆನ್ಯೂನ್ ಆಗಿದ್ದೆ. ಒಬ್ಬರನ್ನು ಬೈದರೂ ಉಗಿದರೂ, ಪ್ರೀತಿಸದರೂ ಹೃದಯದಿಂದ ಮಾಡ್ತಿದ್ದೆ. ನನ್ನ ಬಿಟ್ರೆ ವಿನಯ್. ಅವರಲ್ಲಿ ನನಗೆ ಯಾವತ್ತೂ ಕಲ್ಮಶ ಕಾಣಿಸಲಿಲ್ಲ. ಸಂಗೀತಾ ಕೂಡ. ಅವರನ್ನು ನಾನು ತುಂಬ ತಪ್ಪು ತಿಳ್ಕೊಂಡಿದ್ದೆ. ಅವರು ಏನನಿಸುತ್ತದೋ ಅದನ್ನೇ ಮಾತಾಡ್ತಾರೆ. ಹೇಗನಿಸ್ತಾರೋ ಹಾಗೇ ಇರ್ತಾರೆ. ಅವರೂ ಜೆನ್ಯೂನ್ ಅನಿಸುತ್ತಾರೆ ನನಗೆ. ಟಾಪ್‌ 3ನಲ್ಲಿ ವಿನಯ್, ಸಂಗೀತಾ ಮತ್ತು ತುಕಾಲಿ ಇರ್ತಾರೆ. ನನಗೆ ವಿನಯ್ ವಿನ್ ಆಗ್ಬೇಕು ಅಂತ ಇದೆ. ಆದರೆ ಯಾಕೋ ನನ್ನ ಸಿಕ್ಸ್ತ್ ಸೆನ್ಸ್ ಹೇಳ್ತಿದೆ ಸಂಗೀತಾ ವಿನ್ ಆಗ್ತಾರೆ ಅಂತ. ನನ್ನ ಪ್ರಕಾರ ಈ ಸೀಟಲ್ಲಿ ನನ್ನ ನಂತರ ಕಾರ್ತಿಕ್ ಮಹೇಶ್ ಕೂತಿರ್ತಾರೆ ಎಂದು ಊಹಿಸಿದ್ದಾರೆ.

ಜಿಯೊ ಸಿನಿಮಾ ಫನ್ ಫ್ರೈಡೆ

ಜಿಯೊ ಸಿನಿಮಾ ಫನ್ ಫ್ರೈಡೆಯ ಎಲ್ಲ ಟಾಸ್ಕ್‌ಗಳನ್ನೂ ನಾನು ಎಂಜಾಯ್ ಮಾಡಿದ್ದೇನೆ. ಅದರಲ್ಲಿ ತಲೆಗೆ ಹೆಲ್ಮೆಟ್ ಹಾಕಿಕೊಂಡು ಬಲೂನ್ ಒಡೆಯುವ ಟಾಸ್ಕ್‌ ಅನ್ನು ನಾನು ಸಖತ್ ಎಂಜಾಯ್ ಮಾಡಿದೆ. ಸಂತು-ಪಂತು ಆಟ ನೋಡಿ ಸಿಕ್ಕಾಪಟ್ಟೆ ನಕ್ಕಿದ್ದೇನೆ. ಫುಟ್‌ಬಾಲ್‌ ಆಟದಲ್ಲಿಯೂ ಖುಷಿಯಿಂದ ಭಾಗವಹಿಸಿದ್ದೆ. ಅದನ್ನು ಸ್ಮೈಲಿ ಬಾಲ್‌ನಲ್ಲಿ ಹೊಡೆದು ತಳ್ಳಬೇಕು. ಅಲ್ಲಿಯೂ ನಾನು ಸಖತ್ ಎಂಜಾಯ್ ಮಾಡಿದ್ದು ಸಂತು-ಪಂತು ಆಟ ನೋಡಿ.

ಇದನ್ನೂ ಓದಿ: BBK SEASON 10:  ಏರಿಳಿತದ ಹಾದಿಯಲ್ಲಿ ನಮ್ರತಾ ʻಬಿಗ್‌ಬಾಸ್ʼ ಪಯಣ

ಮೈಕ್ ಮಸಲ್ ಮೆಮರಿ ಆಗ್ಬಿಟ್ಟಿದೆ

ನಾನು ತುಂಬ ಮಿಸ್ ಮಾಡ್ಕೊಳ್ಳೋದು ಮೈಕ್ ಅನ್ನು. ಅದು ನನ್ನ ಮಸಲ್ ಮೆಮರಿ ಆಗ್ಬಿಟ್ಟಿದೆ. ಈಗಲೂ ನಾನು ಮೈಕ್ ಅಂತ ನೋಡ್ಕೋತಿರ್ತಿನಿ. ಬಿಗ್‌ಬಾಸ್ ಧ್ವನೀನ ಮಿಸ್ ಮಾಡ್ಕೋತೀನಿ. ಅವರ ಜತೆಗೆ ಫ್ಲರ್ಟ್ ಮಾಡಿದ್ದನ್ನು ಮಿಸ್ ಮಾಡ್ಕೋತೀನಿ. ಬೆಳಗ್ಗೆ ಸಾಂಗ್ಸ್‌ ಮಿಸ್ ಮಾಡ್ಕೋತೀನಿ. ಆ ಮನೆಯ ಒಂದೊಂದು ಮೂಲೆಯಲ್ಲಿ ಒಂದೊಂದು ಮೆಮರಿ ಇದೆ. ಅದನ್ನು ಕೇಳಿದ್ರೆ ಹೇಳೋಕೆ ಕಷ್ಟವಾಗತ್ತೆ. ಕೊನೆದಾಗಿ ನಾನು ಬಿಗ್‌ಬಾಸ್‌ಗೆ ಹೇಳಬೇಕು ʼʼಬಿಗ್‌ಬಾಸ್, ನಾನು ನಿಮ್ ಧ್ವನಿಗೆ ಬಿದ್ದೋಗಿದೀನಿ. ಫಿದಾ ಆಗಿದೀನಿ. ನೀವು ಹೇಗಿದೀರಾ ನೋಡ್ಬೇಕು. ಹ್ಯಾಪಿಯೆಸ್ಟ್ ವರ್ಷನ್ ಆಫ್ ನಮ್ರತಾ ಇದು. ನನ್ನನ್ನು ನಾನು ಪ್ರೀತಿಸಲು ಶುರು ಮಾಡಿದೀನಿ. ನೀವು ಕೊಟ್ಟ ಎಲ್ಲ ಟಾಸ್ಕ್‌ಗಳ ಪಾಠ ನನ್ನನ್ನು ಗಟ್ಟಿಗೊಳಿಸಿವೆ. ಇಲ್ಲಿ ಇಷ್ಟೊಂದು ಫೇಸ್ ಮಾಡಿದವಳು ಹೊರಗಡೆ ಏನು ಬೇಕಾದ್ರೂ ಫೇಸ್ ಮಾಡೋಕೆ ರೆಡಿ ಇದೀನಿ. ಥ್ಯಾಂಕ್ಯೂ ಸೋ ಮಚ್ ಬಿಗ್‌ಬಾಸ್!ʼʼ ಎಂದು ನಮ್ರತಾ ಹೇಳಿದ್ದಾರೆ.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Exit mobile version