ಬೆಂಗಳೂರು: ಈಗಾಗಲೇ ಬಿಗ್ ಬಾಸ್ (Bigg Boss Kannada) ಹಿಂದಿ ಒಟಿಟಿ ಸೀಸನ್ ಮುಕ್ತಾಯವಾಗಿದೆ. ಕನ್ನಡದಲ್ಲಿ ಯಾವಾಗ ಸೀಸನ್ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 11 ಶೀಘ್ರದಲ್ಲಿಯೇ ಶುರು ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರತಿ ಬಾರಿ ಅಕ್ಟೋಬರ್ ತಿಂಗಳಲ್ಲಿ ಶೋ ಆರಂಭವಾಗುತ್ತದೆ. ಈ ಬಾರಿ ಅದೇ ರೀತಿ ಪ್ಲ್ಯಾನ್ ಮಾಡಲಾಗುತ್ತಿದೆ. ತೆರೆಮರೆಯಲ್ಲಿ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ನಡೀತಿದೆ ಎನ್ನಲಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಸಂಭಾವಿತರ ಪಟ್ಟಿ ವೈರಲ್ ಆಗುತ್ತಿದೆ. ಈ ಬಾರಿ ಸುದೀಪ್ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿಲ್ಲ ಎಂದು ವರದಿಯಾಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ಕಿಚ್ಚ ಸುದೀಪ್ ಅವರು ಕಾರ್ಯಕ್ರಮದಿಂದ ಹೊರ ಬಂದಿದ್ದಾರೆ ಎನ್ನಲಾಗುತ್ತಿದೆ. ರಮೇಶ್ ಅರವಿಂದ್ ಮತ್ತು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇಬ್ಬರಲ್ಲಿ ಒಬ್ಬರು ಹೋಸ್ಟ್ ಮಾಡಲಿದ್ದಾರೆ ಎನ್ನಲಾಗುತ್ತಿದೆ, ರಮೇಶ್ ಅರವಿಂದ ಈಗಾಗಲೇ ಮಹಾನಟಿ ಶೋ ಮೂಲಕ ವೀಕ್ಷಕರನ್ನು ತಲುಪಿದಿದ್ದಾರೆ. ಈಗಾಗಲೆ ಕೋಟ್ಯಾಧಿಪತಿ ಮತ್ತು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರದಲ್ಲಿ ರಮೇಶ್ ಅರವಿಂದ್ ಹೋಸ್ಟ್ ಮಾಡಿದ್ದಾರೆ.ಇನ್ನು ರಿಷಬ್ ಕೂಡ ಮಾಡಬಹುದು ಎನ್ನಲಾಗಿದೆ.
ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ.
ಬಿಗ್‌ಬಾಸ್ ಕನ್ನಡ ಸೀಸನ್ʼ 10 (Bigg Boss Kannada OTT)ರ ಚಾಂಪಿಯನ್ ಆಗಿ ಕಾರ್ತಿಕ್ ಮಹೇಶ್ ಹೊರ ಹೊಮ್ಮಿದರೆ, ಡ್ರೋನ್ ಪ್ರತಾಪ್ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡು ರನ್ನರ್ ಅಪ್ ಆಗಿದ್ದಾರೆ. ಬಿಗ್ ಬಾಸ್ ಸೀಸನ್ 10 ಭರ್ಜರಿ ಟಿಆರ್‌ಪಿಯನ್ನು ಪಡೆದು ವೀಕ್ಷಕರ ಮನ ಸೆಳೆದಿತ್ತು. ಕಿಚ್ಚ ಸುದೀಪ್ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸುದೀಪ್ ಆ್ಯಂಕರಿಂಗ್ ನೋಡಲು ಅನೇಕರು ಕಾದಿದ್ದಾರೆ.. ‘ಡ್ರೋನ್’ ಪ್ರತಾಪ್, ಸೋನು ಶ್ರೀನಿವಾಸ್ ಗೌಡ ಅವರಿಗೆ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಇದನ್ನೂ ಓದಿ: Bigg Boss Kannada: ಈ ಬಾರಿ ಬಿಗ್ ಬಾಸ್ ಮನೆಗೆ ʻಪಾರುʼ ಹೋಗ್ತಾರಾ? ನಟಿ ಹೇಳಿದ್ದೇನು?
ಈ ಬಾರಿ ಯಾರು ಯಾರು ಬರಲಿದ್ದಾರೆ ಎಂದು ಕಾದು ನೋಡಬೇಕಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸಾಕಷ್ಟು ವಿವಾದಗಳು ಸೃಷ್ಟಿ ಆಗಿತ್ತು. ಹುಲಿ ಉಗುರು ಧರಿಸಿದ್ದಾರೆ ಎನ್ನುವ ಕಾರಣಕ್ಕೆ ವರ್ತೂರು ಸಂತೋಷ್ ಅವರು ಒಂದಷ್ಟು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ತನಿಷಾ ಕುಪ್ಪಂಡ ಅವರು ಒಂದು ಸಮುದಾಯಕ್ಕೆ ಬೇಸರ ತರಿಸುವ ಮಾತಾಡಿದರು ಎಂಬ ದೂರು ಕೇಳಿ ಬಂತು.