ಬೆಂಗಳೂರು: ಈಗಾಗಲೇ ಬಿಗ್ ಬಾಸ್ (Bigg Boss Kannada) ಹಿಂದಿ ಒಟಿಟಿ ಸೀಸನ್ ಶುರುವಾಗಿದೆ. ಕನ್ನಡದಲ್ಲಿ ಯಾವಾಗ ಸೀಸನ್ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 11 ಶೀಘ್ರದಲ್ಲಿಯೇ ಶುರು ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರತಿ ಬಾರಿ ಅಕ್ಟೋಬರ್ ತಿಂಗಳಲ್ಲಿ ಶೋ ಆರಂಭವಾಗುತ್ತದೆ. ಈ ಬಾರಿ ಅದೇ ರೀತಿ ಪ್ಲ್ಯಾನ್ ಮಾಡಲಾಗುತ್ತಿದೆ. ತೆರೆಮರೆಯಲ್ಲಿ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ನಡೀತಿದೆ ಎನ್ನಲಾಗುತ್ತಿದೆ. ಲೆಲವು ದಿನಗಳಿಂದ ನಟಿ ಮೋಕ್ಷಿತಾ ಪೈ ಅವರು ಬಿಗ್‌ಬಾಸ್‌ಗೆ ಬರಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವ್ಯಾಪಕವಾಗಿ ಕೇಳಿ ಬರುತ್ತಿತ್ತು. ಈ ಬಗ್ಗೆ ಸ್ವತಃ ನಟಿಯೇ ಮಾಧ್ಯಮವೊಂದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.
ಪಾರು ಧಾರಾವಾಹಿ ಮುಕ್ತಾಯದ ನಂತರ ಮೋಕ್ಷಿತಾ ಯಾವುದೇ ಪ್ರಾಜೆಕ್ಟ್‌ಗಳನ್ನು ಒಕೆ ಮಾಡದೇ ಕುಟುಂಬಸ್ಥರ ಜತೆ ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ಮೋಕ್ಷಿತಾಗೆ ಬಿಗ್ಬಾಸ್ಮನೆ ಹೋಗುತ್ತಾರೆ ಎನ್ನಲಾಗಿತ್ತು. ಇದೀಗ ನಟಿ ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯಿ ನೀಡಿ ʻʻಬಿಗ್ ಬಾಸ್ ಮನೆಗೆ ಹೋಗುವ ಯಾವ ಆಲೋಚನೆ ಸದ್ಯಕ್ಕೆ ನನಗೆ ಇಲ್ಲ . ನನಗೆ ಯಾವುದೇ ಕರೆ ಬಂದಿಲ್ಲ. ಯಾರೂ ಕೂಡ ಚರ್ಚೆ ಮಾಡಿಲ್ಲʼʼ ಎಂದಿದ್ದಾರೆ.
ಬಿಗ್‌ಬಾಸ್‌ನಲ್ಲಿ ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ತುಕಾಲಿ ಸಂತು ಪತ್ನಿ ಮಾನಸಾ, ಮಜಾಭಾರತ ಖ್ಯಾತಿಯ ರಾಘವೇಂದ್ರ, ನಟ ಸುನೀಲ್ ರಾವ್, ಭವ್ಯಾ ಗೌಡ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ.
ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ.
ಇದನ್ನೂ ಓದಿ: Bigg Boss Kannada: ಬಿಗ್ ಬಾಸ್ ಕನ್ನಡ ಸೀಸನ್ 11 ಯಾವಾಗಿನಿಂದ ಶುರು? ಸ್ಪರ್ಧಿಗಳು ಇವರೇನಾ?
ಬಿಗ್‌ಬಾಸ್ ಕನ್ನಡ ಸೀಸನ್ʼ 10 (Bigg Boss Kannada OTT)ರ ಚಾಂಪಿಯನ್ ಆಗಿ ಕಾರ್ತಿಕ್ ಮಹೇಶ್ ಹೊರ ಹೊಮ್ಮಿದರೆ, ಡ್ರೋನ್ ಪ್ರತಾಪ್ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡು ರನ್ನರ್ ಅಪ್ ಆಗಿದ್ದಾರೆ. ಬಿಗ್ ಬಾಸ್ ಸೀಸನ್ 10 ಭರ್ಜರಿ ಟಿಆರ್‌ಪಿಯನ್ನು ಪಡೆದು ವೀಕ್ಷಕರ ಮನ ಸೆಳೆದಿತ್ತು. ಕಿಚ್ಚ ಸುದೀಪ್ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸುದೀಪ್ ಆ್ಯಂಕರಿಂಗ್ ನೋಡಲು ಅನೇಕರು ಕಾದಿದ್ದಾರೆ.. ‘ಡ್ರೋನ್’ ಪ್ರತಾಪ್, ಸೋನು ಶ್ರೀನಿವಾಸ್ ಗೌಡ ಅವರಿಗೆ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಈ ಬಾರಿ ಯಾರು ಯಾರು ಬರಲಿದ್ದಾರೆ ಎಂದು ಕಾದು ನೋಡಬೇಕಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸಾಕಷ್ಟು ವಿವಾದಗಳು ಸೃಷ್ಟಿ ಆಗಿತ್ತು. ಹುಲಿ ಉಗುರು ಧರಿಸಿದ್ದಾರೆ ಎನ್ನುವ ಕಾರಣಕ್ಕೆ ವರ್ತೂರು ಸಂತೋಷ್ ಅವರು ಒಂದಷ್ಟು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ತನಿಷಾ ಕುಪ್ಪಂಡ ಅವರು ಒಂದು ಸಮುದಾಯಕ್ಕೆ ಬೇಸರ ತರಿಸುವ ಮಾತಾಡಿದರು ಎಂಬ ದೂರು ಕೇಳಿ ಬಂತು.