Bigg Boss Kannada | ಕಪ್‌ ಇಲ್ಲ ಅಂದ್ರೂ ಎಷ್ಟೋ ಹೃದಯ ಗೆದ್ದಿದ್ಯಾ ರಾಕಿ ಎಂದ ಪ್ರೇಕ್ಷಕರು! - Vistara News

ಬಿಗ್ ಬಾಸ್

Bigg Boss Kannada | ಕಪ್‌ ಇಲ್ಲ ಅಂದ್ರೂ ಎಷ್ಟೋ ಹೃದಯ ಗೆದ್ದಿದ್ಯಾ ರಾಕಿ ಎಂದ ಪ್ರೇಕ್ಷಕರು!

ʻರಾಕೇಶ್‌ ಅಡಿಗ ವಿನ್‌ ಆಗಬೇಕಿತ್ತುʼ (Bigg Boss Kannada ) ಎಂದು ಪ್ರೇಕ್ಷಕರು ಸೋಷಿಯಲ್‌ ಮೀಡಿಯಾ ಮೂಲಕ ಅಸಮಾಧಾನ ಹೊರ ಹಾಕುತ್ತಿದ್ದಾರೆ.

VISTARANEWS.COM


on

Bigg Boss Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 9ರಲ್ಲಿ (Bigg Boss Kannada ) ರೂಪೇಶ್‌ ಶೆಟ್ಟಿ ವಿಜೇತರಾಗಿ ಹೊರಹೊಮ್ಮಿದ್ದಾರೆ. ಒಟಿಟಿ ಸೀಸನ್‌ನಲ್ಲಿಯೂ ವಿನ್ನರ್‌ ಆಗಿದ್ದ ರೂಪೇಶ್‌ ಶೆಟ್ಟಿ, ಇದೀಗ ಟಿವಿ ಸೀಸನ್‌ನಲ್ಲಿಯೂ ಬಿಗ್‌ ಬಾಸ್‌ ಕಿರೀಟ್‌ ಮುಡಿಗೇರಿಸಿಕೊಂಡಿದ್ದಾರೆ. ಆದರೆ ಇದೀಗ ʻರಾಕೇಶ್‌ ಅಡಿಗ ವಿನ್‌ ಆಗಬೇಕಿತ್ತುʼ ಎಂದು ಪ್ರೇಕ್ಷಕರು ಸೋಷಿಯಲ್‌ ಮೀಡಿಯಾ ಮೂಲಕ ಅಸಮಾಧಾನ ಹೊರ ಹಾಕುತ್ತಿದ್ದಾರೆ.

ಬಿಗ್​ ಬಾಸ್​ 9ನೇ ಸೀಸನ್​ನ ವಿನ್ನರ್​ ರೂಪೇಶ್‌ ಶೆಟ್ಟಿ ಒಟ್ಟು 60 ಲಕ್ಷ ರೂ. ನಗದು ಬಹುಮಾನ ಮತ್ತು ಒಂದು ಆಕರ್ಷಕ ಟ್ರೋಫಿ ಅವರ ಕೈ ಸೇರಿದೆ. ನಟ ರಾಕೇಶ್​ ಅಡಿಗ ರನ್ನರ್​ ಅಪ್​ ಆಗಿದ್ದಾರೆ. ಒಂದು ವರ್ಗದ ಪ್ರೇಕ್ಷಕರಿಗೆ ಇದು ಬೇಸರ ಮೂಡಿಸಿದೆ. ‘ರಾಕೇಶ್​ ಅಡಿಗ ಅವರೇ ಬಿಗ್​ ಬಾಸ್​ ವಿನ್ನರ್​ ಆಗಬೇಕಿತ್ತು. ಕಪ್‌ ಇಲ್ಲ ಅಂದ್ರೂ ಎಷ್ಟೋ ಹೃದಯ ಗೆದ್ದಿದ್ಯಾ ರಾಕಿʼʼ ಎಂದು ಹಲವರು ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ | Bigg Boss Kannada | ದೀಪಿಕಾ ದಾಸ್‌ ಔಟ್‌: ಮೂರನೇ ರನ್ನರ್ ಅಪ್!

ರಾಕೇಶ್​ ಅಡಿಗ ಮತ್ತು ರೂಪೇಶ್​ ಶೆಟ್ಟಿ ಅವರು ಸಮನಾಗಿ ಫೈಟ್​ ನೀಡುತ್ತಾ ಬಂದಿದ್ದರು. ಇಬ್ಬರೂ ಕೂಡ ಬಿಗ್​ ಬಾಸ್​ ಒಟಿಟಿ ಮೊದಲ ಸೀಸನ್​ನಿಂದ ಟಿವಿ ಸೀಸನ್​ ತನಕ ಬಂದಿದ್ದಾರೆ. 140 ದಿನಗಳ ಜರ್ನಿಯನ್ನು ಪೂರೈಸಿದ್ದಾರೆ. ಗೆದ್ದಿರುವ ರೂಪೇಶ್​ ಶೆಟ್ಟಿಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅವರ ಸಿನಿಮಾ ಜರ್ನಿಗೆ ಶುಭವಾಗಲಿ ಎಂದು ಹಾರೈಸಲಾಗುತ್ತಿದೆ. ʻಯಾರೇ ಕೂಗಾಡಲಿʼ, ʻನಂದ ಗೋಕುಲʼ ʻಮಂದಹಾಸʼ, ʻʻಪ್ರೀತಿಯಿಂದ ʼಹೀಗೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ ರಾಕೇಶ್‌ ಅಡಿಗ.

ಇದನ್ನೂ ಓದಿ | Bigg Boss Kannada | ಕರಾವಳಿ ಕುವರ ರೂಪೇಶ್‌ ಶೆಟ್ಟಿ ಮುಡಿಗೆ ಬಿಗ್‌ಬಾಸ್‌ ಕಿರೀಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Drone Prathap: ಈ ಮುಂಚೆ ಡ್ರೋನ್‌ ಪ್ರತಾಪ್‌ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಾಗಿತ್ತು. ಇದೀಗ ಪ್ರತಾಪ್‌ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌.

VISTARANEWS.COM


on

Drone Prathap prayag
Koo

ಬೆಂಗಳೂರು: ಬಿಗ್​ಬಾಸ್​ ಕನ್ನಡದ 10ನೇ ಆವೃತ್ತಿಯಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿರುವುದು ಗೊತ್ತೇ ಇದೆ. ಡ್ರೋನ್​ ಪ್ರತಾಪ್ ʻಬಿಗ್​ ಬಾಸ್​ʼ ಶೋದಲ್ಲಿ ಬಿಬಿಎಂಪಿ ಅಧಿಕಾರಿಯಾಗಿರುವ ಪಶುವೈದ್ಯ ಡಾ. ಪ್ರಯಾಗ್​ ಎಚ್​ ಎಸ್ (HS Prayag)​ ಮೇಲೆ ಆರೋಪ ಮಾಡಿದ್ದರು. ತಮ್ಮ ಬಗ್ಗೆ ಅನಗತ್ಯ ಆರೋಪಗಳನ್ನು ಮಾಡಿರುವ ಡ್ರೋನ್ ಪ್ರತಾಪ್ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹೂಡಿ ನೋಟಿಸ್​ ಕಳುಹಿಸಿದ್ದರು ಪ್ರಯಾಗ್‌. ಇದಾದ ಬಳಿಕ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ (Drone Prathap Controversy) ವಂಚಿಸುತ್ತಿದ್ದಾರೆ ಎಂದು ಕಳೆದ ಫೆಬ್ರವರಿಯಲ್ಲಿ ಪ್ರತಾಪ್ ವಿರುದ್ದ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ದೂರು ದಾಖಲಿಸಿತ್ತು. ಇದೀಗ ಡ್ರೋನ್ ಪ್ರತಾಪ್‌ (Drone Prathap Issue) ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌. ಡ್ರೋನ್‌ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ತಂಡ ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದೆ.

ಡ್ರೋನ್ ತಯಾರಿಸಲು, ಹಾರಿಸಲು ಅನುಮತಿ ಇಲ್ಲ!

ಡ್ರೋನ್ ಪ್ರತಾಪ್‌ (Drone Prathap) ವಿರುದ್ಧ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಿಸಿದ್ದರು. ಪ್ರತಾಪ್ ಅವರ ʻಡ್ರೋನಾರ್ಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಡಿಜಿಸಿಎ (ನಾಗರೀಕ ವಿಮಾನಯಾನ ಇಲಾಖೆ) ಅಧಿಕೃತವಾಗಿ ಪರವಾನಗಿ ಹೊಂದಿಲ್ಲ. ಜತೆಗೆ ಹೆಸರು ಸಹ ಇಲ್ಲ ಎಂದು ಈ ಮುಂಚೆಯೇ ಡಿಜಿಸಿಎ ಅಧಿಕೃತ ವೆಬ್‌ಸೈಟ್‌ನಿಂದ ಸ್ಪಷ್ಟವಾಗಿತ್ತು. ಡ್ರೋನ್‌ ಪ್ರತಾಪ್‌ಗೆ ಡ್ರೋನ್‌ ಲೈಸೆನ್ಸ್ ಇದೆಯಾ ಎಂದು ಆರ್.ಟಿ.ಐನಲ್ಲಿ ಅರ್ಜಿ ಸಲ್ಲಿಸಿದ್ದರು ಪ್ರಯಾಗ್‌. ಜತೆಗೆ ಡಿಜಿಸಿಎ(ಡೈರೆಕ್ಟರ್ ಜನರಲ್ ಸಿವಿಲ್ ಏವಿಯೇಷನ್)ಗೆ ಆರ್‌ಟಿಐನಲ್ಲಿ ಮಾಹಿತಿ ಕೋರಲಾಗಿತ್ತು.

ಇದೀಗ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ರೈಟ್ ಟೂ ಇನ್ಫಾರ್ಮೇಶನ್ (ಆರ್‌ಟಿಐ) ಮೂಲಕ ಮಾಹಿತಿ ಪಡೆದಿದ್ದಾರೆ. ಡ್ರೋನ್‌ ಪ್ರತಾಪ್‌ಗೆ ಯಾವುದೇ ಪರವಾನಗಿ ಇಲ್ಲ ಎಂದು ಆರ್‌ಟಿಐ ಮಾಹಿತಿಯಲ್ಲಿ ಬಹಿರಂಗಪಡಿಸಿದೆ. ಈ ಬಗ್ಗೆ ಪ್ರಯಾಗ್‌ ಅವರು ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Drone Prathap: ಡ್ರೋನ್​ ಪ್ರತಾಪ್‌ರನ್ನು ಮದುವೆಯಾಗಲು ಮುಗಿಬಿದ್ದ ಹೊಸಪೇಟೆ ಯುವತಿಯರು!

ಪ್ರತಾಪ್‌ ವಿರುದ್ಧ ಕೇಳಿ ಬಂದಿತ್ತು ಹಲವು ಆರೋಪ!

ಪ್ರತಾಪ್‌ (Drone Prathap) ಅವರು ಸಾರಂಗ್‌ ಅವರಿಗೆ ಒಂಬತ್ತು ಡ್ರೋನ್‌ ನೀಡಬೇಕಿತ್ತು. ಹೀಗಾಗಿ ಸಾರಂಗ್‌ ಅವರು ಪ್ರತಾಪ್‌ಗೆ 35 ಲಕ್ಷದ 75 ಸಾವಿರ ನೀಡಿದ್ದರು. ಆದರೆ ಡ್ರೋನ್ ನೀಡಲು ಪ್ರತಾಪ್‌ ಎರಡುವರೆ ತಿಂಗಳು ಸಮಯ ತೆಗೆದುಕೊಂಡಿದ್ದರು. ಇದಾದ ಬಳಿಕ ಎರಡು ಡ್ರೋನ್ ಅನ್ನು ಸಾರಂಗ್‌ ಅವರಿಗೆ ಪ್ರತಾಪ್‌ ನೀಡಿದ್ದರು. ಇದಾದ ಮೇಲೆ ಇನ್ನರೆಡು ಡ್ರೋನ್‌ಗಳನ್ನು ಸಾರಂಗ್‌ಗೆ ಕಳುಹಿಸಿಕೊಟ್ಟಿದ್ದರು. ಆದರೆ ಸಾರಂಗ್‌ ಈ ಬಗ್ಗೆ ಧ್ವನಿ ಎತ್ತಿದ್ದು, ನಾಲ್ಕು ಡ್ರೋನ್‌ಗಳು ಈಗ ಕೆಲಸ ಮಾಡುತ್ತಿಲ್ಲ ಬ್ಯಾಟರಿಗಳ ಕ್ಯಾಲಿಟಿ ಸರಿಯಿಲ್ಲ. ಮತ್ತೊಂದು ಹಾರಬೇಕಾದರೆ, ಕೆಳಗಡೆ ಬಿದ್ದು ಹೋಯಿತು. ನಾವೀಗ ತುಂಬಾ ಲಾಸ್ ನಲ್ಲಿದ್ದೀವಿ ಎಂದು ಆಕ್ರೋಶ ಹೊರಹಾಕಿದ್ದರು.

ಈ ಬಗ್ಗೆ ವಿಸ್ತಾರ ಜತೆ ಸಾರಂಗ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದರು. ಸಾರಂಗ್‌ ಮಾತನಾಡಿ ʻʻನಾನು ಇ-ಮೇಲ್‌ ಮೂಲಕ ವಾರ್ನಿಂಗ್ ನೀಡಿದ್ದೇನೆ ಲೋನ್ ಮೂಲಕ ದುಡ್ಡು ತಂದು, ರೈತರ ಬಳಿ ದುಡ್ಡು ಪಡೆದು ಪ್ರತಾಪ್‌ಗೆ ಕೊಟ್ಟಿದ್ದೆ. ಆದರೆ ಇಲ್ಲಿಯವರೆಗೆ ಆತ ಹಣ ಕೊಟ್ಟಿಲ್ಲ. ಅವರ ಪಿಎ ಸಾಗರ್ ನನಗೆ ಹೇಳಿದ್ದಾರೆ. ಪ್ರತಾಪ್‌ ಕಾರ್ ಸೇಲ್ ಮಾಡಿದ್ದಾನೆ ಅವನ ಬಳಿ ಹಣವಿಲ್ಲ ಎಂದು. ಕಾರ್ ಇರೋದು ಡ್ರೋನ್ ಪ್ರತಾಪ್ ತಂದೆಯ ಹೆಸರಿನಲ್ಲಿ. ಅವರ ಜತೆ ನನಗೆ ಸಂಪರ್ಕ ಇಲ್ಲ. ಪ್ರತಾಪ್ ಬಿಗ್ ಬಾಸ್‌ ಮನೆಯಲ್ಲಿ ಇದ್ದಾರೆ ಬಂದು ಕೊಡ್ತಾರೆ ಎಂದು ಹೇಳಿದ್ದಾರೆ. ಹೀಗಾಗಿ ಸುಮ್ಮನ್ನಿದ್ದೇ. ಪ್ರತಾಪ್‌ಗೆ ಕಿರಣ್ ಮಾಧವ್ ಬೆಂಬಲ ನೀಡುತ್ತಿದ್ದರು. ನನಗೆ ಅವರಿಬ್ಬರು ಸೇರಿ ಬೆಂಗಳೂರಿನಲ್ಲಿ 20 ಸಾವಿರದ ಹೋಟೆಲ್ ಫೆಸಿಲಿಟಿ ನೀಡಿ ಬ್ಯುಸಿನೆಸ್‌ ಮಾಡಿದ್ದರು. ಈಗ ನೋಡಿದ್ರೆ ಈ ರೀತಿ ಮಾಡ್ತಿದ್ದಾರೆ. ನನಗೀಗ ಬಡ್ಡಿ ಎಲ್ಲವೂ ಸೇರಿ 83 ಲಕ್ಷ ರೂ. ಖರ್ಚಾಗಿದೆ. ನಮ್ಮದು ಸ್ಟಾರ್ಟ್ ಅಪ್ ಕಂಪನಿ. ನಮಗೆ ತುಂಬ ಕಷ್ಟ ಆಗಿದೆ ಡ್ರೋನ್ ಪ್ರತಾಪ್ ನಿಂದʼʼ ಎಂದು ಸಾರಂಗ್‌ ಹೇಳಿಕೆ ನೀಡಿದ್ದರು.

ಮತ್ತೊಂದೆಡೆ ಪ್ರತಾಪ್‌ ವಿರುದ್ಧ ಪ್ರಯಾಗ್ ರಾಜ್ (Prayag Raj) 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ.

Continue Reading

ಸಿನಿಮಾ

Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

Elvish Yadav: ಎರಡು ಪ್ರಕರಣದಲ್ಲಿ ಜಾಮೀನು ಪಡೆದಿದ್ದಾರೆ ಬಿಗ್ ಬಾಸ್ OTT 2 ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್. ಇದರ ಬೆನ್ನಲ್ಲೇ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ (Siddhivinayak temple) ಭೇಟಿ ನೀಡಿದ ಕ್ಷಣವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

VISTARANEWS.COM


on

Elvish Yadav visits Siddhivinayak temple
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom)  ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದಿದ್ದಾರೆ. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ. ಹೊರಗೆ ಬರುತ್ತಲೇ ರಿಲ್ಯಾಕ್ಸ್‌ ಮೂಡ್‌ನಲ್ಲಿ ಕುಟುಂಬಸ್ಥರ ಜತೆ ಕಾಲ ಕಳೆಯುತ್ತಿದ್ದಾರೆ ಎಲ್ವಿಶ್ ಯಾದವ್. ಇದೀಗ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ (Siddhivinayak temple) ಭೇಟಿ ನೀಡಿದ ಕ್ಷಣವನ್ನು ಹಂಚಿಕೊಳ್ಳುವುದರ ಜತೆಗೆ ಇನ್‌ಸ್ಟಾದಲ್ಲಿ ಹೃದಯಸ್ಪರ್ಶಿಯಾಗಿ ಪೋಸ್ಟ್ ಶೇರ್‌ ಮಾಡಿಕೊಂಡಿದ್ದಾರೆ.

ಎಲ್ವಿಶ್ ತನ್ನ ಇನ್‌ಸ್ಟಾದಲ್ಲಿ ಕುಟುಂಬದ ಜತೆ ಇರುವ ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ಚಿತ್ರದಲ್ಲಿ, ಅವರ ಪೋಷಕರು, ಅಜ್ಜಿ ಮತ್ತು ಇತರ ಕುಟುಂಬ ಸದಸ್ಯರು ಇದ್ದಾರೆ. “ನನ್ನ ಬೆನ್ನೆಲುಬು”ಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ. ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೊವನ್ನು ಶೇರ್‌ ಮಾಡಿಕೊಂಡಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ  ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಹಾವಿನ ವಿಷ ಬಳಸಿದ  ಪ್ರಕರಣ: ತಪ್ಪೊಪ್ಪಿಕೊಂಡ  ʻಬಿಗ್ ಬಾಸ್ ಹಿಂದಿ ಒಟಿಟಿ 2ʼ ವಿನ್ನರ್‌?

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದಾರೆ, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದಾರೆ.

Continue Reading

ಬಿಗ್ ಬಾಸ್

Anurag Dobhal: ʻಬಿಗ್ ಬಾಸ್‌ʼ ಮಾಜಿ ಸ್ಪರ್ಧಿಯ ಲ್ಯಾಂಬೊರ್ಗಿನಿ ಕಾರು ವಶ, 3 ಕೋಟಿ ರೂ. ದಂಡ!

Anurag Dobhal: ‘ಬಿಗ್ ಬಾಸ್ 17’ ಸ್ಪರ್ಧಿ ಆಗಿದ್ದರು ಅನುರಾಗ್ ದೋಬಲ್. ಅನುರಾಗ್ ದೋಬಲ್ ಐಪಿಎಲ್ ಆಗಿದ್ದರಿಂದ ವಿಡಿಯೊ ಮಾಡಲೆಂದು ಚೆನ್ನೈಗೆ ತಮ್ಮ ದುಬಾರಿ ಲ್ಯಾಂಬೊರ್ಗಿನಿ ಕಾರನ್ನು ತಂದಿದ್ದರು.

VISTARANEWS.COM


on

Bigg Boss contestant Anurag Dobhal
Koo

ಬೆಂಗಳೂರು: ‘ಬಿಗ್ ಬಾಸ್ 17’ ಸ್ಪರ್ಧಿಗಳು ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದ್ದಾರೆ. ಇದೀಗ ಯೂಟ್ಯೂಬರ್ ಅನುರಾಗ್ ದೋಬಲ್ (Anurag Dobhal), ಯುಕೆ 07 ರೈಡರ್ ಹೆಸರಿನ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು ಅವರ ಐಶಾರಾಮಿ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ (Lamborghini seized). ಜತೆಗೆ ಮೂರು ಕೋಟಿ ದಂಡ ವಿಧಿಸಿದ್ದಾರೆ. ಐಪಿಎಲ್ ಆಗಿದ್ದರಿಂದ (Bigg Boss contestant Anurag Dobhal) ವಿಡಿಯೊ ಮಾಡಲೆಂದು ಚೆನ್ನೈಗೆ ತಮ್ಮ ದುಬಾರಿ ಲ್ಯಾಂಬೊರ್ಗಿನಿ ಕಾರನ್ನು ಅನುರಾಗ್ ದೋಬಲ್ ತಂದಿದ್ದರು. ಕ್ರಿಕೆಟಿಗ ಸುರೇಶ್ ರೈನಾ ಜತೆ ವಿಡಿಯೊ ಮಾಡಿ ಹೊರಡಬೇಕಾದರೆ ಅವರ ಕಾರನ್ನು ಚೆನ್ನೈ ಪೊಲೀಸರು ಸೀಜ್ ಮಾಡಿದ್ದಾರೆ.

ಚಿತ್ರೀಕರಣ ಮುಗಿದ ನಂತರ, ಅನುರಾಗ್ ಮುಂಬೈಗೆ ಪ್ರಯಾಣಿಸುವ ಉದ್ದೇಶವನ್ನು ಹೊಂದಿದ್ದರು. ಕಾರನ್ನು ಫ್ಲ್ಯಾಟ್ ಬೆಡ್ ಮೇಲೆ ಇರಿಸಿ ಲಾರಿಯೊಂದಕ್ಕೆ ಕಾರನ್ನು ಹಾಕಿ ದೆಹಲಿಗೆ ಕಳಿಸಿ ತಾವು ದೆಹಲಿಗೆ ವಿಮಾನದಲ್ಲಿ ಹೋಗಲು ತಯಾರಾಗಿದ್ದರು. ಆದರೆ ಆ ಲಾರಿಗೆ ದಾಖಲೆಗಳು ಇಲ್ಲದ ಕಾರಣ ಚೆನ್ನೈ ಪೊಲೀಸರು ಲಾರಿ ಜತೆಗೆ ಲ್ಯಾಂಬೊರ್ಗಿನಿ ಕಾರನ್ನು ಸಹ ಸೀಜ್ ಮಾಡಿದ್ದಾರೆ. ಅಷ್ಟೇ ಅಲ್ಲ, 3-3.5 ಕೋಟಿ ರೂ. ದಂಡವನ್ನೂ ವಿಧಿಸಿದ್ದಾರೆ.

ಅನುರಾಗ್ ಅವರು ತಮ್ಮ ‘ಬಿಗ್ ಬಾಸ್ 17’ ಸಹ-ಸ್ಪರ್ಧಿ ಖಾಂಜಾದಿ ಅವರೊಂದಿಗೆ ಮಿಜಾಜಿ ಮತ್ತು ಮುಫೀದ್ ಹಾಡಿರುವ ‘ರಂಗ್ರೇಜಾ’ ಎಂಬ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದರು. ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳು ಒಂದಲ್ಲ ಒಂದು ವಿಚಾರಕ್ಕೆ ಪೊಲೀಸರು ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ.

ಇದನ್ನೂ ಓದಿ: Munawar Faruqui: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ ಮತ್ತೆ ಅರೆಸ್ಟ್‌!

ಮುನಾವರ್ ಫಾರೂಕಿ ಮತ್ತೆ ಅರೆಸ್ಟ್‌!

ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಇದೀಗ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿಚಾರಣೆ ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2021ರಲ್ಲಿ ಮಧ್ಯಪ್ರದೇಶದಲ್ಲಿ ನಡೆದ ಶೋ ಒಂದರಲ್ಲಿ ʻಬಿಗ್‌ ಬಾಸ್‌ ಸೀಸನ್‌ 17ʼರ ವಿನ್ನರ್‌ ಮುನಾವರ್‌ ಫಾರೂಕಿ (Munawar Faruqui) ಅವರು ಜೋಕ್‌ ಮಾಡುವ ಭರದಲ್ಲಿ ನೀಡಿದ ಹೇಳಿಕೆಯಿಂದ ವಿವಾದ ಸೃಷ್ಟಿಯಾಗಿತ್ತು. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಇದಕ್ಕಾಗಿ ಅವರು ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದರು.

ಹಾವಿನ ವಿಷ ಬಳಸಿದ  ಪ್ರಕರಣ

ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ಬಂಧನವಾದ ಕೆಲವೇ ಗಂಟೆಗಳಲ್ಲಿ ರೇವ್ ಪಾರ್ಟಿಗಳಿಗೆ ಹಾವಿನ ವಿಷವನ್ನು ಬಳಸಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಯ್ತು. ಆ ಬಳಿಕ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.

ಯೂಟ್ಯೂಬರ್‌ ಮೇಲೆ ಹಲ್ಲೆ ನಡೆಸಿದ್ದ ಎಲ್ವಿಶ್‌

ಎಲ್ವಿಶ್ ಯಾದವ್ ವಿವಾದಗಳು ಹೊಸದೇನಲ್ಲ. ಕೆಲವು ದಿನಗಳ ಹಿಂದೆಯಷ್ಟೇ ‘ಬಿಗ್ ಬಾಸ್ ಹಿಂದಿ ಒಟಿಟಿ 2’ (Bigg Boss OTT) ಮೂಲಕ ಖ್ಯಾತಿ ಪಡೆದಿದ್ದ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

Continue Reading

ಬಿಗ್ ಬಾಸ್

Elvish Yadav: ʻಬಿಗ್ ಬಾಸ್ ಹಿಂದಿ ಒಟಿಟಿ 2ʼ ವಿನ್ನರ್‌ ಅರೆಸ್ಟ್‌

Elvish Yadav: ಎಲ್ವಿಶ್ ಯಾದವ್ ಅವರನ್ನು ಇಂದು ವಿಚಾರಣೆಗೆ ಕರೆಸಿ ಬಳಿಕ ಬಂಧಿಸಲಾಗಿದೆ (Noida Police) ಎಂದು ವರದಿಯಾಗಿದೆ. ಇಂದು (ಮಾ.17) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಡಿಸಿಪಿ ನೋಯ್ಡಾ ವಿದ್ಯಾ ಸಾಗರ್ ಮಾಹಿತಿ ಹಂಚಿಕೊಂಡಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ  ಪ್ರಕರಣದಲ್ಲಿ ಬಂಧಿಸಿದ್ದಾರೆ. ಕಳೆದ ವರ್ಷ ನೋಯ್ಡಾ ಪೊಲೀಸರು ಹಾವು ಮತ್ತು ಅವುಗಳ ವಿಷವನ್ನು (Snake Venom Case) ಸರಬರಾಜು ಮಾಡುತ್ತಿದ್ದ ಗ್ಯಾಂಗ್‌ನ ಐವರು ಸದಸ್ಯರನ್ನು ಬಂಧಿಸಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ಇದಾದ ಬಳಿಕ ಎಲ್ವಿಶ್ ಯಾದವ್ ಅವರನ್ನು ಇಂದು ವಿಚಾರಣೆಗೆ ಕರೆಸಿ ಬಳಿಕ ಅರೆಸ್ಟ್‌ (Noida Police) ಮಾಡಲಾಗಿದೆ ಎಂದು ವರದಿಯಾಗಿದೆ. ಇಂದು (ಮಾ.17) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಡಿಸಿಪಿ ನೋಯ್ಡಾ ವಿದ್ಯಾ ಸಾಗರ್ ಮಾಹಿತಿ ಹಂಚಿಕೊಂಡಿದ್ದಾರೆ.

ಏನಿದು ಪ್ರಕರಣ?

ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಸಿದ ಆರೋಪದ ಮೇಲೆ ಯೂಟ್ಯೂಬರ್, ಬಿಗ್ ಬಾಸ್ OTT2 ವಿಜೇತ ಎಲ್ವಿಶ್ ಯಾದವ್ (Elvish Yadav) ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಇವರ ಗ್ಯಾಂಗ್‌ನ ಐವರು ಸದಸ್ಯರನ್ನು ನೋಯ್ಡಾದಲ್ಲಿ ಬಂಧಿಸಲಾಗಿತ್ತು. ಸೆಕ್ಟರ್ 51ರ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಾವಿನ ವಿಷ ಲಭ್ಯವಿತ್ತು ಎಂದು ಪೊಲೀಸರು ತಿಳಿಸಿದ್ದರು. ಬಂಧಿತರನ್ನು ಆಗ್ನೇಯ ದೆಹಲಿಯ ಬದರ್‌ಪುರದ ಮೊಹರ್‌ಬಂದ್ ಗ್ರಾಮದ ನಿವಾಸಿಗಳಾದ ರಾಹುಲ್(32), ತೀತುನಾಥ್ (45), ಜೈಕರನ್ (50), ನಾರಾಯಣ್ (50) ಮತ್ತು ರವಿನಾಥ್ (45) ಎಂದು ಗುರುತಿಸಲಾಗಿತ್ತು.

ವಿದೇಶಿ ಪ್ರಜೆಗಳಿಗೂ ಆತಿಥ್ಯ ನೀಡಿದ ರೇವ್ ಪಾರ್ಟಿಗಳಲ್ಲಿ ಭಾಗವಹಿಸಿದ್ದ ಕೆಲವರು ಹಾವಿನ ವಿಷವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪಿಯಿಂದ ಐದು ನಾಗರಹಾವು ಸೇರಿದಂತೆ ಒಂಬತ್ತು ಹಾವುಗಳು ಹಾಗೂ ಹಾವಿನ ವಿಷವನ್ನು ವಶಪಡಿಸಿಕೊಳ್ಳಲಾಗಿದ್ದು, ಹಾವುಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಆದರೆ ಅಂದು ಎಲ್ವಿಶ್ ಯಾದವ್ ಅವರನ್ನು ಬಂಧಿಸಿರಲಿಲ್ಲ.
ವಿವಿಧ ಸ್ಥಳಗಳಿಂದ ಹಾವುಗಳನ್ನು ಹಿಡಿದು ಅವುಗಳ ವಿಷವನ್ನು ಹೊರತೆಗೆಯುತ್ತಿದ್ದರು, ಎಲ್ವಿಶ್ ಯಾದವ್‌ ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದರು.. ಪಾರ್ಟಿಗಳಲ್ಲಿ ವಿಷವನ್ನು ಪೂರೈಸಲು ಅವರು ಭಾರಿ ಮೊತ್ತದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಈ ಮುಂಚೆ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Elvish Yadav: ಯೂಟ್ಯೂಬರ್‌ ಮೇಲೆ ಹಲ್ಲೆ ನಡೆಸಿದ ʻಬಿಗ್ ಬಾಸ್ ಹಿಂದಿ ಒಟಿಟಿ 2ʼ ವಿನ್ನರ್‌!

ಯೂಟ್ಯೂಬರ್‌ ಮೇಲೆ ಹಲ್ಲೆ ನಡೆಸಿದ್ದ ಎಲ್ವಿಶ್‌

ಎಲ್ವಿಶ್ ಯಾದವ್ ವಿವಾದಗಳು ಹೊಸದೇನಲ್ಲ. ಕೆಲವು ದಿನಗಳ ಹಿಂದೆಯಷ್ಟೇ ‘ಬಿಗ್ ಬಾಸ್ ಹಿಂದಿ ಒಟಿಟಿ 2’ (Bigg Boss OTT) ಮೂಲಕ ಖ್ಯಾತಿ ಪಡೆದಿದ್ದ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

Continue Reading
Advertisement
bengaluru dc
ಬೆಂಗಳೂರು38 seconds ago

Hindu Temple: ದೇವಸ್ಥಾನಗಳ ಜಾತ್ರೆ, ಉತ್ಸವಗಳಲ್ಲಿ ಹಿಂದುಯೇತರರ ಅಂಗಡಿಗೆ ಅನುಮತಿ ನೀಡಬೇಡಿ; ಜಿಲ್ಲಾಧಿಕಾರಿಗೆ ಮನವಿ

minister Lakshmi hebbalkar latest statement
ಬೆಳಗಾವಿ3 mins ago

Belagavi News: ಕರ್ಮಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ? ಶೆಟ್ಟರ್‌ಗೆ ಹೆಬ್ಬಾಳ್ಕರ್ ಪ್ರಶ್ನೆ

Chikkaballapura lok sabha constituency congress ticket aspirants Sivasankar Reddy Veerappa Moily and Raksha Ramayya
Lok Sabha Election 202415 mins ago

Lok Sabha Election 2024: ಕಾಂಗ್ರೆಸ್‌ಗೆ ಚಿಕ್ಕಬಳ್ಳಾಪುರ ಟೆನ್ಶನ್‌; ಟಿಕೆಟ್‌ ಸಿಗದಿದ್ದರೆ ಪಕ್ಷ ತೊರೆಯುವ ಎಚ್ಚರಿಕೆ ಕೊಟ್ಟ ಶಿವಶಂಕರ ರೆಡ್ಡಿ!

Karnataka Weather
ಮಳೆ16 mins ago

Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

Suryakumar Yadav
ಕ್ರೀಡೆ23 mins ago

SuryaKumar Yadav : ಮುಂಬೈ ತಂಡಕ್ಕೆ ಮತ್ತಷ್ಟು ಸಂಕಷ್ಟ; ಸೂರ್ಯಕುಮಾರ್​ ಸೇರ್ಪಡೆ ಅನುಮಾನ

modi
ದೇಶ32 mins ago

ಇತರರನ್ನು ಬೆದರಿಸುವುದು ಕಾಂಗ್ರೆಸ್‌ನ ಸಂಸ್ಕೃತಿ; ಮುಖ್ಯ ನ್ಯಾಯಮೂರ್ತಿಗೆ ಬರೆದ ವಕೀಲರ ಪತ್ರಕ್ಕೆ ಮೋದಿ ಪ್ರತಿಕ್ರಿಯೆ

Lok Sabha Election 202446 mins ago

Lok Sabha Election 2024: ಕೋಲಾರ ಕಾಂಗ್ರೆಸ್‌ ಗಲಾಟೆಗೆ ಸಿಎಂ, ಡಿಸಿಎಂ ಟ್ರೀಟ್ಮೆಂಟ್‌! ತಣ್ಣಗಾದ ರಮೇಶ್‌ ಕುಮಾರ್‌, ಮುನಿಯಪ್ಪ ಬಣ

Health Tips
ಬೆಂಗಳೂರು51 mins ago

Health Tips : ಬೇಸಿಗೆಯಲ್ಲಿ ಲೈಫ್‌ಸ್ಟೈಲ್‌ ಹೇಗಿರಬೇಕು? ಆರೋಗ್ಯ ಇಲಾಖೆಯಿಂದ ಸರಳ ಸೂತ್ರ

Anurag Thakur
ಕ್ರೀಡೆ55 mins ago

Anurag Thakur : 2036ರಲ್ಲಿ ಭಾರತದಲ್ಲಿ ಒಲಿಂಪಿಕ್ಸ್​​; ಅನುರಾಗ್ ಠಾಕೂರ್​

Side Effects Of Pillow
ಆರೋಗ್ಯ1 hour ago

Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20245 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20247 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ14 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌