Site icon Vistara News

BBK SEASON 10: ಡಬಲ್ ವೈಲ್ಡ್‌ಕಾರ್ಡ್ ಎಂಟ್ರಿ; ಮನೆಯಲ್ಲಿ ಎಂಥ ಬಿರುಗಾಳಿ ಎಬ್ಬಿಸಬಹುದು?

double wildcard entry BBK SEASON 10

ಬೆಂಗಳೂರು: ಈ ವಾರದ ‘ಸೂಪರ್ ಸಂಡೆ ವಿಥ್ ಸುದೀಪ್‌’ (BBK SEASON 10) ಎಪಿಸೋಡ್‌ನಲ್ಲಿ ಐವತ್ತು ದಿನಗಳ ಪಯಣದ ವಿಟಿಯನ್ನೂ ಹಾಕಿ ತೋರಿಸಲಾಗಿದೆ. ಐವತ್ತು ದಿನಗಳ ಕಾಲದ ಏಳುಬೀಳಿನ ಹಾದಿಯನ್ನು ನೋಡಿ ಸ್ಪರ್ಧಿಗಳು ಖುಷಿಪಟ್ಟರು. ನಂತರ ನಾಮಿನೇಷನ್‌ ಲೀಸ್ಟ್‌ನಲ್ಲಿರುವ ಸ್ಪರ್ಧಿಗಳಲ್ಲಿ ಮೊದಲು ನಮ್ರತಾ ಅವರು ಸೇಫ್‌ ಎಂದು ಕಿಚ್ಚ ಘೋಷಣೆ ಮಾಡಿದರು. ನಂತರ ಸೇಫ್‌ ಆಗಿದ್ದು, ತುಕಾಲಿ ಸಂತೋಷ್. ಸ್ನೇಹಿತ್‌ ಕೂಡ ಸೇಫ್‌ ಆದರು. ಆ ಹಂತದಲ್ಲಿ ನಾಮಿನೇಷನ್ ಲೀಸ್ಟ್‌ನಲ್ಲಿ ಉಳಿದವರು ನೀತು ಮತ್ತು ಸಿರಿ. ಅವರಿಬ್ಬರಲ್ಲಿ ಸಿರಿ ಸೇಫ್ ಆಗಿದ್ದಾರೆ ಮತ್ತು ನೀತು ವನಜಾಕ್ಷಿ ಅವರ ಬಿಗ್‌ಬಾಸ್ ಪಯಣ ಮುಗಿದಿದೆ. ಬಿಗ್ ಬಾಸ್​ನ ಪ್ರತೀ ಸೀಸನ್​ಲ್ಲಿ ವೈಲ್ಡ್ ಕಾರ್ಡ್ ಮೂಲಕ ಸ್ಪರ್ಧಿಗಳು ಎಂಟ್ರಿ ಪಡೆಯುತ್ತಾರೆ. ಮಾಡೆಲ್ ಆಗಿ ಗುರುತಿಸಿಕೊಂಡಿರುವ ಪವಿ ಪೂವಪ್ಪ, ಮಾಡೆಲ್ ಹಾಗೂ ಕ್ರಿಕೆಟರ್ ಅವಿನಾಶ್ ಶೆಟ್ಟಿ ಕೂಡ ದೊಡ್ಮನೆಗೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಬಿಗ್‌ಬಾಸ್‌ ಸೀಸನ್‌ 10ರ ಹೊಸ ಮನೆಯ ಮುಂದೆ ನಿಂತುಕೊಂಡಿರುವ ಉದಯ್ ಸೂರ್ಯ ಅವರು ತಾನು ಮನೆಯ ಒಳಗೆ ಹೋಗುವುದಾಗಿ ಕೈ ತೋರಿಸಿದ್ದಾರೆ. ಈ ಫೋಟೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬಿಗ್‌ಬಾಸ್‌ ಮನೆಗೆ 50 ದಿನಗಳ ನಂತರ ಉದಯ್‌ ಸೂರ್ಯ ವೈಲ್ಡ್ ಕಾರ್ಡ್‌ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೂಡ ಕೇಳಿಬರುತ್ತಿದೆ.

ಇನ್ನು 50 ದಿನ ಕಳೆದರೆ ಬಿಗ್ ಬಾಸ್ ಫಿನಾಲೆ ಬರಲಿದೆ. ಈಗ ಬಿಗ್ ಬಾಸ್ ಮನೆಗೆ ಇಬ್ಬರು ಸ್ಪರ್ಧಿಗಳ ಆಗಮನ ಆಗಿದೆ ಎಂದು ವರದಿ ಆಗಿದೆ. ಮಾಡೆಲ್ ಆಗಿ ಗುರುತಿಸಿಕೊಂಡಿರುವ ಪವಿ ಪೂವಪ್ಪ ಅವರು ದೊಡ್ಮನೆಗೆ ಬರಲಿದ್ದಾರೆ ಎಂದು ವರದಿಯಾಗಿದೆ. ಮಾಡೆಲ್ ಆಗಿ ಅವರು ಹೆಚ್ಚು ಜನಪ್ರಿಯತೆ ಪಡೆದಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ 1 ಲಕ್ಷ ಫಾಲೋವರ್ಸ್‌ ಹೊಂದಿದ್ದಾರೆ. ಖತ್ ಬೋಲ್ಡ್ ಆಗಿ ಅವರು ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ ಪೋಸ್ಟ್‌ ಮಾಡುತ್ತಲೇ ಇರುತ್ತಾರೆ. ನಟ, ಮಾಡೆಲ್, ಕ್ರಿಕೆಟರ್ ಅವಿನಾಶ್ ಶೆಟ್ಟಿ ಕೂಡ ದೊಡ್ಮನೆಗೆ ಬಂದಿದ್ದಾರೆ.

ಇದನ್ನೂ ಓದಿ: BBK SEASON 10: ನಾನು ಹೇಟ್‌ ಮಾಡೋರು ಜನರಿಗೆ ಇಷ್ಟ,ಅವಮಾನ ಆಗ್ತಿದೆ; ನಮ್ರತಾ ಗೌಡ!

ಸದ್ಯ ಮನೆಯಲ್ಲಿ ಮೈಕಲ್‌ ಈ ವಾರ ಕ್ಯಾಪ್ಟನ್‌ ಆಗಿದ್ದಾರೆ. ಬಿಗ್‌ಬಾಸ್‌ ಕನ್ನಡ ಇತಿಹಾಸದಲ್ಲಿಯೇ, ಕ್ಯಾಪ್ಟನ್‌ಶಿಪ್‌ನಲ್ಲಿ ಇದ್ದು, ಎಲಿಮಿನೇಟ್‌ ಆದ ಮೊದಲ ಸ್ಪರ್ಧಿಯಾಗಿ ನೀತು ಹೊರಗೆ ಹೋಗಿದ್ದಾರೆ. ಹೊರಹೋಗುವ ಮುನ್ನ ಅವರು ಅವರ ಕ್ಯಾಪ್ಟನ್‌ನ ಜವಾಬ್ದಾರಿಯನ್ನು ಒಬ್ಬರನ್ನು ನೇಮಿಸುವಂತೆ ಬಿಗ್‌ಬಾಸ್ ಆದೇಶಿಸಿದ್ದಾರೆ. ಅದಕ್ಕೆ ನೀತು ಮೈಕಲ್ ಅವರನ್ನು ನಾಯಕನನ್ನಾಗಿ ನೇಮಿಸಿ ಹೊರಬಿದ್ದಿದ್ದಾರೆ.

Exit mobile version