ಬೆಂಗಳೂರು: ಬಿಗ್ ಬಾಸ್ OTT 2 ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ಪ್ರಕರಣದಲ್ಲಿ ಬಂಧಿಸಿದ್ದಾರೆ. ಕಳೆದ ವರ್ಷ ನೋಯ್ಡಾ ಪೊಲೀಸರು ಹಾವು ಮತ್ತು ಅವುಗಳ ವಿಷವನ್ನು (Snake Venom Case) ಸರಬರಾಜು ಮಾಡುತ್ತಿದ್ದ ಗ್ಯಾಂಗ್‌ನ ಐವರು ಸದಸ್ಯರನ್ನು ಬಂಧಿಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಇದಾದ ಬಳಿಕ ಎಲ್ವಿಶ್ ಯಾದವ್ ಅವರನ್ನು ಇಂದು ವಿಚಾರಣೆಗೆ ಕರೆಸಿ ಬಳಿಕ ಅರೆಸ್ಟ್ (Noida Police) ಮಾಡಲಾಗಿದೆ ಎಂದು ವರದಿಯಾಗಿದೆ. ಇಂದು (ಮಾ.17) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಡಿಸಿಪಿ ನೋಯ್ಡಾ ವಿದ್ಯಾ ಸಾಗರ್ ಮಾಹಿತಿ ಹಂಚಿಕೊಂಡಿದ್ದಾರೆ.
ಏನಿದು ಪ್ರಕರಣ?
ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಸಿದ ಆರೋಪದ ಮೇಲೆ ಯೂಟ್ಯೂಬರ್, ಬಿಗ್ ಬಾಸ್ OTT2 ವಿಜೇತ ಎಲ್ವಿಶ್ ಯಾದವ್ (Elvish Yadav) ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಇವರ ಗ್ಯಾಂಗ್‌ನ ಐವರು ಸದಸ್ಯರನ್ನು ನೋಯ್ಡಾದಲ್ಲಿ ಬಂಧಿಸಲಾಗಿತ್ತು. ಸೆಕ್ಟರ್ 51ರ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಾವಿನ ವಿಷ ಲಭ್ಯವಿತ್ತು ಎಂದು ಪೊಲೀಸರು ತಿಳಿಸಿದ್ದರು. ಬಂಧಿತರನ್ನು ಆಗ್ನೇಯ ದೆಹಲಿಯ ಬದರ್‌ಪುರದ ಮೊಹರ್‌ಬಂದ್ ಗ್ರಾಮದ ನಿವಾಸಿಗಳಾದ ರಾಹುಲ್(32), ತೀತುನಾಥ್ (45), ಜೈಕರನ್ (50), ನಾರಾಯಣ್ (50) ಮತ್ತು ರವಿನಾಥ್ (45) ಎಂದು ಗುರುತಿಸಲಾಗಿತ್ತು.
ವಿದೇಶಿ ಪ್ರಜೆಗಳಿಗೂ ಆತಿಥ್ಯ ನೀಡಿದ ರೇವ್ ಪಾರ್ಟಿಗಳಲ್ಲಿ ಭಾಗವಹಿಸಿದ್ದ ಕೆಲವರು ಹಾವಿನ ವಿಷವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪಿಯಿಂದ ಐದು ನಾಗರಹಾವು ಸೇರಿದಂತೆ ಒಂಬತ್ತು ಹಾವುಗಳು ಹಾಗೂ ಹಾವಿನ ವಿಷವನ್ನು ವಶಪಡಿಸಿಕೊಳ್ಳಲಾಗಿದ್ದು, ಹಾವುಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಆದರೆ ಅಂದು ಎಲ್ವಿಶ್ ಯಾದವ್ ಅವರನ್ನು ಬಂಧಿಸಿರಲಿಲ್ಲ.
ವಿವಿಧ ಸ್ಥಳಗಳಿಂದ ಹಾವುಗಳನ್ನು ಹಿಡಿದು ಅವುಗಳ ವಿಷವನ್ನು ಹೊರತೆಗೆಯುತ್ತಿದ್ದರು, ಎಲ್ವಿಶ್ ಯಾದವ್ ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದರು.. ಪಾರ್ಟಿಗಳಲ್ಲಿ ವಿಷವನ್ನು ಪೂರೈಸಲು ಅವರು ಭಾರಿ ಮೊತ್ತದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಈ ಮುಂಚೆ ಹೇಳಿಕೆ ನೀಡಿದ್ದರು.
ಇದನ್ನೂ ಓದಿ: Elvish Yadav: ಯೂಟ್ಯೂಬರ್ ಮೇಲೆ ಹಲ್ಲೆ ನಡೆಸಿದ ʻಬಿಗ್ ಬಾಸ್ ಹಿಂದಿ ಒಟಿಟಿ 2ʼ ವಿನ್ನರ್!
Noida Police arrests YouTuber and Bigg Boss OTT 2 winner Elvish Yadav. He will be presented in the Court today: DCP Noida Vidya Sagar Mishra
— ANI (@ANI) March 17, 2024
Further details awaited.
(file pic) pic.twitter.com/ZVxh7rM5rK
ಯೂಟ್ಯೂಬರ್ ಮೇಲೆ ಹಲ್ಲೆ ನಡೆಸಿದ್ದ ಎಲ್ವಿಶ್
ಎಲ್ವಿಶ್ ಯಾದವ್ ವಿವಾದಗಳು ಹೊಸದೇನಲ್ಲ. ಕೆಲವು ದಿನಗಳ ಹಿಂದೆಯಷ್ಟೇ ‘ಬಿಗ್ ಬಾಸ್ ಹಿಂದಿ ಒಟಿಟಿ 2’ (Bigg Boss OTT) ಮೂಲಕ ಖ್ಯಾತಿ ಪಡೆದಿದ್ದ ಎಲ್ವಿಶ್ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.