BBK SEASON 10: ವಿನಯ್ v/s ಕಾರ್ತಿಕ್; ʻಏಯ್ ತಗಡುʼ ,ಹೆಣ್ಮಕ್ಕಳನ್ನ ಬಿಟ್ಟು ಆಡಿಸ್ತಿದ್ದಾನೆ ಅಂದ್ರೆ ಏನರ್ಥ? - Vistara News

ಬಿಗ್ ಬಾಸ್

BBK SEASON 10: ವಿನಯ್ v/s ಕಾರ್ತಿಕ್; ʻಏಯ್ ತಗಡುʼ ,ಹೆಣ್ಮಕ್ಕಳನ್ನ ಬಿಟ್ಟು ಆಡಿಸ್ತಿದ್ದಾನೆ ಅಂದ್ರೆ ಏನರ್ಥ?

BBK SEASON 10: ಕಾರ್ತಿಕ್‌ ಕೂಡ ಪದೇ ಪದೆ ತಮ್ಮ ಮೇಲೆ ಗಂಭೀರ ಆರೋಪ ಮಾಡುತ್ತಿರುವ ವಿನಯ್‌ ವಿರುದ್ಧ ಕಣ್ಣೀರು ಸುರಿಸಿದರು. ‘’ನಾನು ಅಂತಹ ಮಾತನ್ನ ಆಡಿದ್ದರೆ ಹೊರಗೆ ಹೋಗುತ್ತೇನೆ’’ ಎಂದು ಕಾರ್ತಿಕ್‌ ಮನೆಯಲ್ಲಿ ಹೇಳಿಕೊಂಡಿದ್ದಾರೆ. ಕಣ್ಣೀರಿಟ್ಟಿದ್ದಾರೆ ಕೂಡ.

VISTARANEWS.COM


on

Fight Between Karthik And Vinay Used Unparliamentary Language
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ (BBK SEASON 10) ಈ ವಾರ ರಾಕ್ಷಸರು ಹಾಗೂ ಗಂಧರ್ವ ಲೋಕ ಆಗಿದೆ. ಮನೆಯ ಸದಸ್ಯರೆಲ್ಲ ರಿವೆಂಜ್‌ ತೆಗೆದುಕೊಳ್ಳಲು ನಿಂತಿದ್ದಾರೆ. ಅದರಲ್ಲಿಯೂ ವಿನಯ್‌ ಹಾಗೂ ಕಾರ್ತಿಕ್‌ ಮಾತಿನ ಚಕಮಕಿ ತಾರರಕ್ಕೇರಿದೆ. ವಿನಯ್‌ ಕೂಡ ಕಾರ್ತಿಕ್‌ ಅವರಿಗೆ ʻತಗಡುʼ ಎಂದಿದ್ದಾರೆ. ಹೆಣ್ಣು ಮಕ್ಕಳ ಮೇಲೆ ಕೆಟ್ಟದ್ದಾಗಿ ಕಾರ್ತಿಕ್‌ ಮಾತನಾಡಿದ್ದಾರೆ ಎಂದು ವಿನಯ್‌ ಅವರು ಗಂಭೀರವಾಗಿ ಆರೋಪ ಮಾಡಿದರು. ಕಾರ್ತಿಕ್‌ ಕೂಡ ಪದೇ ಪದೆ ತಮ್ಮ ಮೇಲೆ ಗಂಭೀರ ಆರೋಪ ಮಾಡುತ್ತಿರುವ ವಿನಯ್‌ ವಿರುದ್ಧ ಕಣ್ಣೀರು ಸುರಿಸಿದರು. ‘’ನಾನು ಅಂತಹ ಮಾತನ್ನು ಆಡಿದ್ದರೆ ಹೊರಗೆ ಹೋಗುತ್ತೇನೆ’’ ಎಂದು ಕಾರ್ತಿಕ್‌ ಮನೆಯಲ್ಲಿ ಹೇಳಿಕೊಂಡಿದ್ದಾರೆ. ಕಣ್ಣೀರಿಟ್ಟಿದ್ದಾರೆ ಕೂಡ.

ಜಗಳ ಆರಂಭವಾಗಿದ್ದು ಯಾವಾಗ?

‘ಚೇರ್ ಆಫ್‌ ಥಾರ್ನ್ಸ್‌’ ಎಂಬ ಚಟುವಟಿಕೆಯನ್ನು ‘ಬಿಗ್ ಬಾಸ್‌’ ನೀಡಿದರು. ಇದರಲ್ಲಿ ಕೂತಿರುವ ಗಂಧರ್ವರ ಪೈಕಿ ಇಬ್ಬರನ್ನು ರಾಕ್ಷಸರು ಎಬ್ಬಿಸಬೇಕಿತ್ತು. ಈ ಟಾಸ್ಕ್‌ನಲ್ಲಿ ಸಂಗೀತಾ ಹಾಗೂ ಕಾರ್ತಿಕ್‌ ಅವರು ವರ್ತೂರ್‌ ಮತ್ತು ಪವಿ ಅವರನ್ನು ಟಾರ್ಗೆಟ್‌ ಮಾಡಿದರು. ಈ ವೇಳೆ ಕಾರ್ತಿಕ್‌ ಮತ್ತು ವಿನಯ್‌ ನಡುವೆ ಮಾತಿನ ಜಕಮಕಿ ನಡೆದಿದೆ. ಸಂಗೀತಾ ಅವರು ಪವಿ ಮುಖಕ್ಕೆ ನೀರು ಎರಚುವ ಫೋರ್ಸ್‌ಗೆ ವಿನಯ್‌ ಅವರು  ‘’ಕರೆಕ್ಟ್ ಆಗಿದೆ ಜೋಡಿ’’ (ಕಾರ್ತಿಕ್‌-ಸಂಗೀತಾ) ಎಂದು ವಿನಯ್ ಟಾಂಟ್‌ ಕೊಡುತ್ತಿದ್ದರು.

ವಿನಯ್‌ ಅವರು ಅಲ್ಲಿಂದಲೇ ಕೊಂಕು ಮಾತನಾಡಲು ಶುರು ಮಾಡಿದರು. ʻʻಅಯ್ಯೋ ಜೀವನ ಹೆಂಗೆ ಹಾಳು ಮಾಡಿಕೊಳ್ತಾವ್ರೆ ಅಂದ್ರೆ, ಜಾಸ್ತಿ ದಿನ ಇಲ್ಲ.. ತಡಿಯಮ್ಮಾ ʼʼ ಎಂದು ವಿನಯ್‌ ಅಂದರೆ ಕಾರ್ತಿಕ್‌ ಅವರು ʻʻನೋಡಿದ್ದೀನಿ ಬದನೆಕಾಯಿʼʼ ಎಂದಿದ್ದಾರೆ. ಆಗ ವಿನಯ್‌ ಅವರು ಕಾರ್ತಿಕ್‌ಗೆ ʼತಗಡುʼ ಎಂದರು, ಕಾರ್ತಿಕ್‌ ಕೂಡ ಅಲ್ಲಿಂದ ಜೋರಾಗಿಯೇ ಕೂಗಲಾರಂಭಿಸಿದರು.

ಇದನ್ನೂ ಓದಿ: BBK SEASON 10: ʻನಾನು ಲೂಸರ್‌ʼ ಎಂದ ಸಂಗೀತಾ, ಗುಲಾಮನಾದ ಕಾರ್ತಿಕ್;‌ ʻಆನೆʼಯ ರಿವೆಂಜ್‌!

ಹುಡುಗಿಯನ್ನ ಕಳುಹಿಸಿಬಿಟ್ಟು ಅಲ್ಲಿ ಗಂಡಸು ಅಂತ ಚಪ್ಪಾಳೆ ತಟ್ಟಿಕೊಂಡು ಕೂತವ್ನೆ

ಅಲ್ಲಿಂದ ಹೆಣ್ಣು ಮಕ್ಕಳ ವಿಚಾರ ಬಂತು. ಪವಿ ಪೂವಪ್ಪ ಅವರಿಗೆ ಚೆನ್ನಾಗಿ ನೀರು ಎರಚುತ್ತಲೇ ಇದ್ದರು ಸಂಗೀತಾ. ಆಗ ವಿನಯ್‌ ಅವರು ʻʻಅಲ್ಲಿ ತುಕಾಲಿ ಸಂತು, ಮೈಕಲ್ ಕೂತಿದ್ದಾರೆ. ಅವರದ್ದೇನೂ ಮಾಡೋಕೆ ಆಗಲ್ಲ ಅಂತ ಅವಳಿಗೆ ಟಾರ್ಚರ್‌ ಕೊಡುತ್ತಿದ್ದೀರಾʼʼ ಎಂದರು. ಕಾರ್ತಿಕ್‌ ಕೂಡ ʻʻಹುಡುಗಿಯನ್ನ ಕಳುಹಿಸಿಬಿಟ್ಟು ಅಲ್ಲಿ ಗಂಡಸು ಅಂತ ಚಪ್ಪಾಳೆ ತಟ್ಟಿಕೊಂಡು ಕೂತವ್ನೆ ವಿನಯ್ – ಏಯ್ ತಗಡುʼʼ ಎಂದರು. ಆಗ ವಿನಯ್‌ ಕೂಡ ʻʻನಿಮ್ಮ ತರಹ ವುಮನ್ ಕಾರ್ಡ್ ಪ್ಲೇ ಮಾಡಲ್ಲ ನಾವುʼʼ ಎಂದಿದ್ದಾರೆ. ಹಾಗೇ ಸಂಗೀತಾ ಅವರನ್ನು ಇಟ್ಟುಕೊಂಡು ವಿನಯ್‌ ಮಾತನಾಡಿ ʻʻಯಾಕೆ? ಈಕ್ವಲ್ ರೈಟ್ಸ್ ಎಂದು ಬರ್ತಾಳೆ (ಸಂಗೀತಾ). ಹೆಣ್ಮಕ್ಕಳನ್ನ ಅಡೋಕೆ ಬಿಟ್ಟಿದ್ದೀಯಾ ಏನರ್ಥ?ʼʼ ಎಂದಿದ್ದಾರೆ. ʼʼಕೈಯಲ್ಲಾಗದೇ ಇರೋನು.. ತಗಡು ಅಂತ ಅರ್ಥʼʼ ಎಂದು ಕಾರ್ತಿಕ್‌ ಕೂಡ ಟಾಂಗ್‌ ಕೊಟ್ಟರು.

ಇತ್ತ ಸಂಗೀತಾ ಕೂಡ ಕಾರ್ತಿಕ್‌ ಅವರಿಗೆ ಹೆಣ್ಮಕ್ಕಳ ಕೈಯಲ್ಲಿ ಆಡೋಕೆ ಆಗಲ್ವಾ?ಎಂದು ಕೇಳಿದ್ದಾರೆ. ಕಾರ್ತಿಕ್‌ ಅವರು ನಾನು ಹೇಳಿಲ್ಲ ಎಂದರೂ, ನಮ್ರತಾ ಅವರು ʻಹೇಳಿದ್ರಿ ನೀವುʼ ಎಂದು ವಾದಿಸಿದರು.

ಚೇರ್ ಆಫ್ ಥಾರ್ನ್ಸ್ ಆಟದಲ್ಲಿ ಕಡೆಯವರೆಗೂ ಮೈಕಲ್, ತುಕಾಲಿ ಸಂತು, ಪವಿ ಪೂವಪ್ಪ ಕೂತಿದ್ದರು. ಹೀಗಾಗಿ, ಗಂಧರ್ವರು ಟಾಸ್ಕ್ ಗೆದ್ದರು. ಆಗ ‘’ನೋಡೋ ಹೆಣ್ಮಕ್ಕಳ ಪವರ್ ಇದು’’ ಎಂದು ಕಾರ್ತಿಕ್‌ ಅವರಿಗೆ ವಿನಯ್‌ ಹೇಳಿದರು. ʻಮೈಮ್‌ ಮಾಡಿಕೊಂಡು ಅಸಭ್ಯ ಬೈಗುಳ ಬಳಸಿದರೆ ಸುಮ್ಮನೆ ಇರಬೇಕಾ? ಅವನು ಕಿತ್ತೋದ್‌ ನನ್ಮಗ. ಅಮ್ಮ, ತಂಗಿ ಇದ್ದಾರೆ. ಅವನ ಯೋಗ್ಯತೆಗೆ ಹೆಣ್ಮಕ್ಕಳನ್ನ ಬಿಟ್ಟು ಮುಂದೆ ಆಡಿಸ್ತೀಯಾ ಎಂದು ಕೇಳ್ತಾನೆʼ ಎಂದು ವಿನಯ್‌ ಕೂಗಾಡಿದರು. ಇತ್ತ ಕಾರ್ತಿಕ್‌ ಕೂಡ ನಾನು ಆ ರೀತಿ ಮಾಡಿಲ್ಲ ಎಂದು ಭಾವುಕರಾದರು.

ಇದನ್ನೂ ಓದಿ: BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

ನಾನೇನಾದರೂ ಅಂದಿದ್ದರೆ ಈ ಕ್ಷಣವೇ ಹೊರಗೆ ಹೋಗೋಕೆ ರೆಡಿ. ತಂಗಿಗೆ ಇನ್ನೂ ಹೆರಿಗೆ ಆಗಿದ್ಯಾ ಅಂತ ಗೊತ್ತಿಲ್ಲ. ಇಂತಹ ಮಾತುಗಳನ್ನ ಕೇಳಿಸಿಕೊಂಡು ಹೇಗಿರಲಿ? ಪ್ರತಿ ಸಲಿ ಇದೇ ಆಯ್ತು ಎಂದು ಕಾರ್ತಿಕ್‌ ಅವರು ಕಣ್ಣೀರಿಟ್ಟರು. ಆದರೆ ವಿನಯ್, ತುಕಾಲಿ, ನಮ್ರತಾ ಇನ್ನಿತರರ ಮುಂದೆ ಕಾರ್ತಿಕ್ ಬಗ್ಗೆ ಬೋಡ ಇನ್ನಿತರೆ ಮಾತುಗಳನ್ನು ಬೈಯ್ಯುತ್ತಲೇ ಇದ್ದರು. ನಿಜವಾಗಿಯೂ ಕಾರ್ತಿಕ್, ವಿನಯ್​ಗೆ ಕೆಟ್ಟ ಪದಗಳನ್ನು ಬಳಸಿದರೇ ಅಥವಾ ಇಲ್ಲವೇ ಎಂಬುದು ಪ್ರೇಕ್ಷಕರಿಗೆ ತಿಳಿಯಲಿಲ್ಲ. ವಾರಾಂತ್ಯದಲ್ಲಿ ಸುದೀಪ್ ಅವರು ಬಂದಾಗ ಈ ಈ ವಿಚಾರ ಮುನ್ನಲೆಗೆ ಬರಬಹುದು. ವಿನಯ್‌ ಬೇಕು ಎಂತಲೇ ಅಂದರೇ, ಇಲ್ಲವೇ ಎಂಬುದು ವೀಕೆಂಡ್‌ನಲ್ಲಿ ಗೊತ್ತಾಗಲಿದೆ.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಂಡ್ಯ

Varthur Santhosh: ಮತ್ತೆ ಹಳ್ಳಿಕಾರ್‌ ಒಡೆಯ ವಿವಾದ; ವರ್ತೂರ್‌ ಸಂತೋಷ್ ವಿರುದ್ಧ ಕಾನೂನು ಸಮರ

Varthur Santhosh : ಹಳ್ಳಿಕಾರ್ ಒಡೆಯ ವಿವಾದ ಮತ್ತೆ ತಾರಕಕ್ಕೇರಿದೆ. ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ ಹಳ್ಳಿಕಾರ್ ಸಂರಕ್ಷಕರು ತಿರುಗಿ ಬಿದ್ದಿದ್ದು, ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

VISTARANEWS.COM


on

By

Varthur Santhosh
Koo

ಮಂಡ್ಯ: ಬಿಗ್‌ ಬಾಸ್‌ ಸೀಸನ್‌ 10ರ (BBK Season 10) ಸ್ಪರ್ಧಿಯಾಗಿ ಗಮನ ಸೆಳೆದಿದ್ದ ವರ್ತೂರಿನ ಕೃಷಿಕ ವರ್ತೂರು ಸಂತೋಷ್‌ ವಿರುದ್ಧ ಹಳ್ಳಿಕಾರ್‌ ಸಂರಕ್ಷಕರು ಸಿಡಿದೆದ್ದಿದ್ದಾರೆ. ವರ್ತೂರ್‌ ಸಂತೋಷ್‌‌ (Varthur Santhosh) ಬಿಗ್ ಬಾಸ್ ಮನೆಯಲ್ಲಿದ್ದಾಗ ಹಳ್ಳಿಕಾರ್ ಒಡೆಯ‌ ಬಿರುದು ವಿವಾದಕ್ಕೆ ಸೃಷ್ಟಿಯಾಗಿತ್ತು.

ಈ ಹಿಂದೆ ಹಳ್ಳಿಕಾರ್ ತಳಿ ಸಂರಕ್ಷಕರು ವರ್ತೂರು ಬೆಂಬಲಿಗರಿಗೆ ತಿಳುವಳಿಕೆ ಹೇಳಲು ಚರ್ಚಾಗೋಷ್ಠಿ ಏರ್ಪಡಿಸಿದ್ದರು. ಅಂದು ವರ್ತೂರು ಸಂತೋಷ್ ಬೆಂಬಲಿಗರು ಹಾಗೂ ತಲಾತಲಾಂತರಿಂದ ಹಳ್ಳಿಕಾರ್ ತಳಿ ಸಂರಕ್ಷಕರ ನಡುವೆ ಜಟಾಪಟಿ ಶುರುವಾಗಿತ್ತು. ಈ ವಾಗ್ವಾದದಿಂದಾಗಿ ಕಾರ್ಯಕ್ರಮದ ಅರ್ಧದಲ್ಲೆ ಸಂತೋಷ್ ಬೆಂಬಲಿಗರನ್ನು ಪೊಲೀಸರು ಕಳುಹಿಸಿದ್ದರು. ನಂತರ ಬಿಗ್ ಬಾಸ್ ಮನೆಯಿಂದ ಹೊರ ಬಂದ ವರ್ತೂರ್‌ ಸಂತೋಷ್‌ ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದರು. ಹಿರಿಯ ಹಳ್ಳಿಕಾರ್ ಸಂರಕ್ಷಕರ ವಿರುದ್ಧ ಸಂತೋಷ್‌ ಏಕವಚನದಲ್ಲಿ ಹರಿಹಾಯ್ದಿದ್ದರು.

ಇದನ್ನೂ ಓದಿ: Actor Darshan: ದೇಹ ಅಷ್ಟೇ ಅಲ್ಲ, ಮಾತೂ ತೂಕ ಇರ್ಬೇಕು; ದರ್ಶನ್‌ಗೆ ಉಮಾಪತಿ ತಿರುಗೇಟು!

ವರ್ತೂರ್ ಸಂತೋಷ್‌ ಮಾತಿಗೆ ಹಳ್ಳಿಕಾರ್ ಸಂರಕ್ಷಕರು ಮತ್ತೆ ಸಿಡಿದೆದ್ದಿದ್ದಾರೆ. ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ಳುವುದು, ಬಿಂಬಿಸಿಕೊಳ್ಳುತ್ತಿರುವುದು ಸರಿಯಲ್ಲ. ಇದು ಹಳ್ಳಿಕಾರ್ ಜನಾಂಗಕ್ಕೆ ಅಪಮಾನವಾಗಿದೆ. ತಲಾತಲಾಂತರಿಂದ ಹಳ್ಳಿಕಾರ್ ಸಂರಕ್ಷಣೆ ಮಾಡುತ್ತಿರುವ ರೈತರಿಗೂ ಹಾಗು ಅವರ ಭಾವನೆಗೂ ಧಕ್ಕೆಯಾಗಿದೆ ಎಂದು ಹಳ್ಳಿಕಾರ್‌ ಸಂರಕ್ಷಕರು ಕಿರಿಕಾರಿದ್ದಾರೆ.

ಗೂಗಲ್‌ನಲ್ಲಿಯೂ ಛೇರ್ ಮೇನ್ ಆಫ್ ಆಲ್ ಇಂಡಿಯಾ ಹಳ್ಳಿಕಾರ್ ಕನ್ಜರ್ವೇಷನ್ ಎಂದು ರಾಂಗ್ ಮೆಸೇಜ್ ನೀಡಿದ್ದಾರೆ. ಇದರಿಂದ ಮುಂದಿನ ಪೀಳಿಗೆಗೆ ತಪ್ಪು ಸಂದೇಶ ಹೋಗುತ್ತೆ. ವರ್ತೂರ್ ಸಂತೋಷನಿಂದಲೇ ಹಳ್ಳಿಕಾರ್ ತಳಿ ಹುಟ್ಟಿತು ಎಂದು ಬಿಂಬಿತವಾಗಬಹುದು. ಆದ್ದರಿಂದ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ಎಲ್ಲಾ ದಾಖಲಾತಿಗಳನ್ನು ಸಂಗ್ರಹಿಸಲಾಗುತ್ತಿದ್ದು, ಶೀಘ್ರ ಕಾನೂನು ಸಮರ ಸಾರುತ್ತೇವೆ. ಗೂಗಲ್ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಹಳ್ಳಿಕಾರ್ ಸಂರಕ್ಷಕ ರವಿಪಟೇಲ್ ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಿರುತೆರೆ

Drone Prathap: ಬಿಗ್‌ಬಾಸ್‌ ವೇದಿಕೆಯಲ್ಲಿ ನುಡಿದಂತೆ ನಡೆದ ಡ್ರೋನ್‌ ಪ್ರತಾಪ್‌; ಅಭಿಮಾನಿಗಳಿಂದ ಮೆಚ್ಚುಗೆ

Drone Prathap: ಬಿಗ್‌ಬಾಸ್‌ ಕನ್ನಡ ಸೀಸನ್‌ 10ರ ರನ್ನರ್‌ ಅಪ್‌ ಡ್ರೋನ್‌ ಪ್ರತಾಪ್‌ ತಮಗೆ ಬಹುಮಾನವಾಗಿ ಬಂದ ಎಲೆಕ್ಟ್ರಿಕ್‌ ಸ್ಕೂಟರ್‌ ಅನ್ನು ದಾನ ಮಾಡಿದ್ದಾರೆ. ಆ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

VISTARANEWS.COM


on

prathap
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದಾರೆ. ಸದ್ಯ ಅವರು ಅಭಿಮಾನಿಗಳ ಭೇಟಿ, ರಿಯಾಲಿಟಿ ಶೋ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಬಿಡುವಿಲ್ಲದ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಇಷ್ಟೆಲ್ಲ ಬ್ಯುಸಿಯ ಮಧ್ಯೆಯೂ ತಾವು ಕೊಟ್ಟ ಮಾತನ್ನು ಉಳಿಸಿಕೊಟ್ಟು ಅಭಿಮಾನಿಗಳಿಂದ ಮೆಚ್ಚುಗೆ ಗಳಿಸಿದ್ದಾರೆ. ಅದೇನು ಎನ್ನುವ ವಿವರ ಇಲ್ಲಿದೆ.

ಎಲೆಕ್ಟ್ರಿಕ್ ಸ್ಕೂಟರ್‌ ದಾನ ಮಾಡಿದ ಪ್ರತಾಪ್‌

ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಇದೀಗ ಈ ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದಾರೆ. ಈ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ʼʼಬಿಗ್‌ಬಾಸ್‌ನಲ್ಲಿ ಬಹುಮಾನವಾಗಿ ಬಂದ ಬೈಕ್ ಅನ್ನು ಹೇಳಿದ ಹಾಗೆ ಯಾರಿಗೆ ನೀಡಿದೆ ಅನ್ನುವುದಕ್ಕೆ ಉತ್ತರ ಇಲ್ಲಿದೆ… ಇವರು ರಾಜು ಅಂತ ಮಧ್ಯಾಹ್ನದಿಂದ ಸಂಜೆವರೆಗೂ ಹೋಟಲ್‌ನಲ್ಲಿ ಕೆಲಸ ಮಾಡಿ‌ ಹಾಗೂ ಸಂಜೆಯ ಮೇಲೆ ಫುಡ್‌ ಡೆಲಿವರಿ ಕೆಲಸ ಮಾಡುತ್ತಾರೆ ಮತ್ತು ಇವರು ತಮ್ಮ ಸ್ನೇಹಿತರ ಹೆಸರಲ್ಲಿ ಗಾಡಿಯನ್ನು ತೆಗೆದುಕೊಂಡು ಅದಕ್ಕೆ ತಿಂಗಳು ತಿಂಗಳು ಕಂತು ಕಟ್ಟುತ್ತಿದ್ದರು. ಆದರೆ ಸ್ನೇಹಿತ ಮಾಡಿದ ಮೋಸದಿಂದ ಅವರ ಬೈಕನ್ನು ಬ್ಯಾಂಕ್ ನವರು ಸೀಜ್‌ ಮಾಡಿದ್ದರು. ಹಾಗಾಗಿ ನನಗೆ ಬಹುಮಾನವಾಗಿ ಬಂದ ಎಲೆಕ್ಟ್ರಿಕ್ ಗಾಡಿಯನ್ನು ಇವರಿಗೆ ನೀಡುತ್ತಿದ್ದೇನೆ. ಇದು ನನಗೆ ತುಂಬಾ ಖುಷಿ ತಂದಿದೆʼʼ ಎಂದು ಪ್ರತಾಪ್‌ ಬರೆದುಕೊಂಡಿದ್ದಾರೆ. ಜತೆಗೆ ಫೋಟೊವನ್ನೂ ಅಪ್‌ಲೋಡ್‌ ಮಾಡಿದ್ದಾರೆ. ತನಗೆ ಬಹುಮಾನವಾಗಿ ಬಂದ 10 ಲಕ್ಷ ರೂ. ಹಣವನ್ನು ಸಹ ತಾವು ಬಡವರಿಗೆ ದಾನ ನೀಡುವುದಾಗಿ ಡ್ರೋನ್ ಪ್ರತಾಪ್ ಘೋಷಣೆ ಮಾಡಿದ್ದರು. ಆದರೆ ಆ ಹಣವನ್ನು ಯಾರಿಗೆ ನೀಡಿದ್ದಾರೆಂಬ ಮಾಹಿತಿ ಲಭ್ಯವಾಗಿಲ್ಲ.

ಮೆಚ್ಚುಗೆ ಸೂಚಿಸಿದ ಅಭಿಮಾನಿಗಳು

ಡ್ರೋನ್‌ ಪ್ರತಾಪ್‌ ಅವರ ಈ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಹಲವರು ಮೆಚ್ಚುಗೆ ಸೂಚಿಸಿದ್ದಾರೆ. ʼʼತುಂಬಾ ಒಳ್ಳೆಯ ಕಾರ್ಯ, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೀರಿ, ನಿಮಗೆ ವೋಟ್‌ ಹಾಕಿದ್ದಕ್ಕೆ ಸಾರ್ಥಕವಾಯ್ತು, ಉತ್ತಮ ಕೆಲಸʼʼ ಎಂದೆಲ್ಲ ಕಮೆಂಟ್‌ ಮಾಡಿ ಬೆನ್ನು ತಟ್ಟಿದ್ದಾರೆ. ಬಿಗ್‌ಬಾಸ್‌ ಮನೆ ಒಳಗೆ ಉತ್ತಮ ಆಟ ಆಡುವ ಮೂಲಕ ಅಭಿಮಾನಿಗಳ ಮನಗೆದ್ದ ಅವರು ಇದೀಗ ಮನೆ ಹೊರಗೂ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: Gicchi Gili Gili season 3: ಡ್ರೋನ್‌ ಪ್ರತಾಪ್‌ ಮೇಕಪ್ ನೋಡಿ ಬೆಚ್ಚಿಬಿದ್ದ ತುಕಾಲಿ; ಗಂಡನನ್ನು ಚಚ್ಚಿ ಕೆಡವಿದ ಮಾನಸಾ! 

ಡ್ರೋನ್‌ ಪ್ರತಾಪ್‌ ಇತ್ತೀಚೆಗೆ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ʻಗಿಚ್ಚಿ ಗಿಲಿಗಿಲಿʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೊಡ್ಮನೆಯಲ್ಲಿ ಸಿಂಪಲ್​ ಆಗಿ ಇರುತ್ತಿದ್ದ ಪ್ರತಾಪ್​ ಅವರು ಈಗ ಮೇಕಪ್​ ಹಚ್ಚಿಕೊಂಡು ಮಿಂಚಿದ್ದರು. ಶೋ ಆರಂಭದ ಸಂಚಿಕೆಯಲ್ಲಿ ಡ್ರೋನ್‌ ಪ್ರತಾಪ್‌ ಭರ್ಜರಿ ಸ್ಟೆಪ್‌ ಹಾಕಿ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಿಗ್ ಬಾಸ್

Varthur Santhosh: ಹೇಳಿಕೆ ತಿರುಚಿ ತೇಜೋವಧೆ ಎಂದು ಕಿಡಿಗೇಡಿಗಳ ವಿರುದ್ಧ ನಟ ಜಗ್ಗೇಶ್ FIR!

Varthur Santhosh: ಕಿಡಿಗೇಡಿಗಳ ವಿರುದ್ಧ ನಟ ಜಗ್ಗೇಶ್ ಎಫ್‌ಐಆರ್‌ ದಾಖಲಿಸಿದ್ದಾರೆ. ವಿಚಾರ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಮಾತನಾಡುತ್ತಿರುವವರ ಮೇಲೆ ಜಗ್ಗೇಶ್ ಕ್ರಮಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ.

VISTARANEWS.COM


on

Actor Jaggesh FIR against Tiger Claw Statement Issue
Koo

ಬೆಂಗಳೂರು: ಕೆಲವು ದಿನಗಳ ಹಿಂದೆಯಷ್ಟೇ ಜಗ್ಗೇಶ್‌ ಅವರು ‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ʻಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡʼ ಎಂದು ಹೇಳಿದ್ದರು. ಈ ಮಾತಿಗೆ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ವರ್ತೂರ್‌ (Varthur Santhosh) ಕೂಡ ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ಇದಾದ ಬಳಿಕ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿ ಜಗ್ಗೇಶ್‌ ಕೂಡಲೇ ಕ್ಷಮೆ ಕೇಳಬೇಕು ಎಂದು ಎಚ್ಚರಿಕೆ ನೀಡಿದ್ದರು. ಆದರೀಗ ಆ ಕಿಡಿಗೇಡಿಗಳ ವಿರುದ್ಧ ನಟ ಜಗ್ಗೇಶ್ ಎಫ್‌ಐಆರ್‌ ದಾಖಲಿಸಿದ್ದಾರೆ. ವಿಚಾರ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಮಾತನಾಡುತ್ತಿರುವವರ ಮೇಲೆ ಜಗ್ಗೇಶ್ ಕ್ರಮಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ.

ಉತ್ತರ ವಿಭಾಗದ ಡಿಸಿಪಿಗೆ ಲಿಖಿತ ರೂಪದಲ್ಲಿ ನಟ ಜಗ್ಗೇಶ್ ದೂರು ನೀಡಿದ್ದು ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಜಗ್ಗೇಶ್‌ ದೂರಿನಲ್ಲಿ ʻʻರಂಗನಾಯಕ ಸಿನಿಮಾ ಕಾರ್ಯಕ್ರಮ ಇತ್ತು. ಹಿಂದೆ ಹುಲಿ ಉರುರಿನ ಬಗ್ಗೆ ಆದ ಘಟನೆಯನ್ನು ಮಾಧ್ಯಮದಲ್ಲಿ ತೋರಿಸಿದ್ದ ಬಗ್ಗೆ ಹಾಗೂ ಯಾರೊ ಒಬ್ಬ ಕಿತ್ತೋದವನು (ಗ್ರಾಮೀಣ ಭಾಷೆ) ಸಿಕ್ಕಿದ ಕಾರಣ ಅಂದರೆ ಈ ಹುಲಿ ಉಗುರಿನ ಘಟನೆಯಲ್ಲಿ ನೂರಾರು ಮಂದಿ ಸಮಸ್ಯೆ ಅನುಭವಿಸಿದ್ದಾರೆ ಎನ್ನುವ ಅರ್ಥದಲ್ಲಿ ಹಾಸ್ಯವಾಗಿ ಮಾಧ್ಯಮ ಮಿತ್ರರ ಜತೆ ಮಾತನಾಡಿದ್ದೆ. ಆದರೆ ಕೆಟ್ಟ ಪ್ರಚಾರದ ಉದ್ದೇಶದಿಂದ ನನ್ನ ಸಂಪೂರ್ಣ ವಿಚಾರ ತಿರುಚಿ ಜಾತಿ ನಿಂದನೆ, ವ್ಯಕ್ತಿ ನಿಂದನೆ ಎಂದು ಪ್ರಚಾರ ಪಡೆದು ನನ್ನ ತೇಜೋವಧೆಗೆ ಕೆಲ ಕಿಡಿಗೇಡಿಗಳು ಯತ್ನಿಸಿದ್ದಾರೆ” ಎಂದು ಜಗ್ಗೇಶ್ ದೂರಿನಲ್ಲಿ ತಿಳಿಸಿದ್ದಾರೆ. ಜತೆಗೆ ʻʻಇತ್ತೀಚಿನ ದಿನಗಳಲ್ಲಿ ಹಲವರು ಪ್ರಚಾರಕ್ಕೆಂದು ಕಾಯುತ್ತಿರುತ್ತಾರೆ. ನಾನು ಯಾರ ಬಗ್ಗೆ ಆಗಲಿ, ಜಾತಿ ಬಗ್ಗೆ ಆಗಿ ಮಾತನಾಡಿಲ್ಲ. ನನ್ನ ವೈಯಕ್ತಿಕ ಅನುಭವವನ್ನು ಮಾಧ್ಯಮದ ಮುಂದೆ ಹೇಳಿದ್ದೇನೆ. ಜಾತಿ ಗಲಭೆ, ತಪ್ಪು ಸಂದೇಶ, ಹಲ್ಲೆಯ ಬೆದರಿಕೆ ಮಾಡಿರುವ ಹೆಬ್ಬಗೋಡಿ ನಾರಾಯಣ ಸ್ವಾಮಿ ಹಾಗೂ ಆತನ ಮಾತು ಅನುಸರಿಸಿ ವಿಡಿಯೋ ಮಾಡಿದ ಮತ್ತೊಬ್ಬರ ಮೇಲೆ ಕ್ರಮ ಕಾನೂನು ಕ್ರಮಕ್ಕೆ ಒತ್ತಾಯ” ಎಂದು ಜಗ್ಗೇಶ್ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Varthur Santhosh: ‘ಯಾವನೋ ಕಿತ್ತೋದ್‌ ನನ್ಮಗ’ ಹೇಳಿಕೆ; ಕ್ಷಮೆ ಕೇಳಿದ್ರೆ ಸರಿ ಎಂದು ಜಗ್ಗೇಶ್​ಗೆ ಎಚ್ಚರಿಕೆ!

ಆಗಿದ್ದೇನು ?


ಕೆಲವು ದಿನಗಳ ಹಿಂದೆಯಷ್ಟೇ ಜಗ್ಗೇಶ್‌ ಅವರು ‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡಿ ʻʻನಾನು ಹುಲಿ ತರ ಬದುಕಬೇಕು ಎಂದು ನನ್ನ ತಾಯಿ ಹುಲಿ ಉಗುರನ್ನು ಕೊಟ್ಟಳು. ಆದರೆ ಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡು, ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ ಬಳಿಕ ದೊಡ್ಡ ಸುದ್ದಿ ಆಯಿತು”ಎಂದು ಹೇಳಿದ್ದರು. ಈ ಮಾತಿಗೆ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ತೂಕಕ್ಕೆ ತೂಕ ಸರಿ ಇರಬೇಕು

ಈ ಬಗ್ಗೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಮಾತನಾಡಿʻʻಅವರು ದೊಡ್ಡವರು. ನಾನು ಏನು ಹೇಳುತ್ತೇನೆ ಅಂದರೆ ಕಾಲೈ ತಸ್ಮೈ ನಮಃ ಅಷ್ಟೆ. ಕೆಲವೊಂದಕ್ಕೆ ಉತ್ತರ ಕೊಟ್ಟರೆ, ಇನ್ನು ಕೆಲವೊಂದಕ್ಕೆ ಸುಮ್ಮನಿರಬೇಕು. ಸುದೀಪಣ್ಣ ಅವರು ಹೇಳಿದಾಗೆ, ಕೆಲವೊಂದು ಜಾಗದಲ್ಲಿ ಮಾತನಾಡಬೇಕು. ಕೆಲವೊಮ್ಮೆ ಮಾತನಾಡದೇ ಸುಮ್ಮನಿದ್ದರೆ ಆ ಸೈಲೆಂಟ್ ಉತ್ತರ ಕೊಡುತ್ತೆ ಎಂದು. ತೂಕದ ಜತೆ ತೂಕವನ್ನು ಅಳೆಯಬೇಕಾದರೆ ತೂಕಕ್ಕೆ ತೂಕ ಸರಿ ಇರಬೇಕುʼʼಎಂದಿದ್ದರು.

Continue Reading

ಬಿಗ್ ಬಾಸ್

Varthur Santhosh: ‘ಯಾವನೋ ಕಿತ್ತೋದ್‌ ನನ್ಮಗ’ ಹೇಳಿಕೆ; ಕ್ಷಮೆ ಕೇಳಿದ್ರೆ ಸರಿ ಎಂದು ಜಗ್ಗೇಶ್​ಗೆ ಎಚ್ಚರಿಕೆ!

Varthur Santhosh: ವಹ್ನಿಕುಲ ಕ್ಷತ್ರಿಯ ಸಮುದಾಯದ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದು, ಕೂಡಲೇ ಅವರು ಕ್ಷಮೆ ಕೇಳದಿದ್ದರೆ ಪ್ರತಿಭಟನೆ ನಡೆಸುವುದಾಗಿಯೂ, ಮನೆಗೆ ಮುತ್ತಿಗೆ ಹಾಕುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Vahnikula Kshatriya Community Leader Narayan Swamy Warns Jaggesh about Varthur Santhosh
Koo

ಬೆಂಗಳೂರು: ರಾಜ್ಯದಲ್ಲಿ ಹುಲಿ ಉಗುರಿನ (Tiger Nail) ಲಾಕೆಟ್ ಇರುವ ಸರ ಧರಿಸಿರುವವರ ವಿರುದ್ಧ ಅರಣ್ಯ ಇಲಾಖೆ ಪರಿಶೀಲನೆ ನಡೆಸಿತ್ತು. ಬಿಗ್‌ ಬಾಸ್‌ ಸ್ಪರ್ಧಿ ವರ್ತೂರ್‌ ಸಂತೋಷ್‌ (Varthur Santhosh) ಅವರ ಹುಲಿ ಉಗರು ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಕೆಲವು ದಿನಗಳ ಹಿಂದೆಯಷ್ಟೇ ಜಗ್ಗೇಶ್‌ ಅವರು ‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ʻಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡʼ ಎಂದು ಹೇಳಿದ್ದರು. ಈ ಮಾತಿಗೆ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ವರ್ತೂರ್‌ ಕೂಡ ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿ ʻನಾನು ಏನು ಹೇಳ್ತೀನಿ ಅಂದ್ರೆ, ಕಾಲಾಯ ತಸ್ಮೈ ನಮಃ ಅಷ್ಟೆʼಎಂದು ಹೇಳಿದ್ದರು. ಇದೀಗ ವಹ್ನಿಕುಲ ಕ್ಷತ್ರಿಯ ಸಮುದಾಯದ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದು, ಕೂಡಲೇ ಅವರು ಕ್ಷಮೆ ಕೇಳದಿದ್ದರೆ ಪ್ರತಿಭಟನೆ ನಡೆಸುವುದಾಗಿಯೂ, ಮನೆಗೆ ಮುತ್ತಿಗೆ ಹಾಕುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

ಹೆಬ್ಬಗೋಡಿ ಮಾಜಿ ನಗರಸಭೆ ಸದಸ್ಯ ನಾರಾಯಣ ಸ್ವಾಮಿ ಈ ಬಗ್ಗೆ ವಿಡಿಯೋ ಮಾಡಿ ಜಗ್ಗೇಶ್ ಕ್ಷಮೆಗೆ ಆಗ್ರಹಿಸಿದ್ದಾರೆ. ನಟ ಜಗ್ಗೇಶ್ ಕ್ಷಮೆ ಕೇಳಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: Varthur Santhosh: ‘ಯಾವನೋ ಕಿತ್ತೋದ್‌ ನನ್ಮಗ”ಎಂದ ಜಗ್ಗೇಶ್‌ಗೆ ವರ್ತೂರ್‌ ಹೇಳಿದ್ದೇನು?

ಮಾಧ್ಯಮದ ಮುಂದೆ ಬಂದು ಕ್ಷಮೆಯಾಚಿಸಬೇಕು.

“ಬಿಗ್‌ಬಾಸ್ ಖ್ಯಾತಿಯ ಹಳ್ಳಿಕಾರ್ ಒಡೆಯ ವರ್ತೂರ್ ಸಂತೋಷ್ ಒಳ್ಳೆಯ ಮನುಷ್ಯ. ಸಣ್ಣ ಹುಡುಗನನ್ನು ಕೂಡ ಅಣ್ಣ ಎಂದು ಕರೆಯುವ ಒಳ್ಳೆ ಹೃದಯ, ಸ್ನೇಹಜೀವಿ. ಅಂತಹವರ ಬಗ್ಗೆ ಕೆಟ್ಟ ಪದಗಳನ್ನು ಬಳಸಲಾಗಿದೆ. ಇದರಲ್ಲೇ ನೀನು ಎಲ್ಲರಿಗೂ ಯಾವ ರೀತಿ ಮರ್ಯಾದೆ ಕೊಡುತ್ತೀಯ ಎನ್ನುವುದು ಗೊತ್ತಾಗುತ್ತಿದೆ. ಕೂಡಲೇ ಮಾಧ್ಯಮದ ಮುಂದೆ ಬಂದು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ಮುತ್ತಿಗೆ ಹಾಕಿ ಧರಣಿ ಕೂರುತ್ತೇವೆ” ಎಂದಿದ್ದಾರೆ.

ನೀನು ಯಾಕೆ ಕೋರ್ಟ್‌ ಮೊರೆ ಹೋದೆ ಹೇಳು

ʻʻಸಂತೋಷ್, ಕ್ಷತ್ರಿಯ ವಂಶದಲ್ಲಿ ಹುಟ್ಟಿದ್ದಾನೆ. ವಹ್ನಿಕುಲದಲ್ಲಿ ಹುಟ್ಟಿ ಬೆಳವಣಿಗೆ ಆಗುತ್ತಿದ್ದಾನೆ. ಅಂತಹ ಹುಡುಗನ ಬಗ್ಗೆ ಕೀಳುಮಟ್ಟದ ಭಾಷೆ ಬಳಸಿದ್ದೀಯ. ವಹ್ನಿಕುಲ ಕ್ಷತ್ರಿಯರ ಹುಡುಗ ಆತ. ಈಗ ಅವನು ಬೆಳವಣಿಗೆ ಆಗುತ್ತಿದ್ದಾನೆ ಎಂದು ಹೊಟ್ಟೆ ಕಿಚ್ಚಿನಿಂದ ಈ ರೀತಿಯ ಪದಗಳನ್ನು ಬಳಸುತ್ತಿದ್ದೀಯಾ? ಕ್ಷಮೆ ಕೇಳದಿದ್ದರೆ ವರ್ತೂರು ಸಂತೋಷ್ ಅಭಿಮಾನಿಗಳು ನಿನಗೆ ತಕ್ಕ ಶಾಸ್ತಿ ಮಾಡಬೇಕಾಗುತ್ತದೆ. ಆ ಪ್ರಕರಣ ನಡೆದಾಗ ನೀನು ಯಾಕೆ ಕೋರ್ಟ್‌ ಮೊರೆ ಹೋದೆ ಹೇಳು ಎಂದು ಏಕವಚನದಲ್ಲಿಯೇ ಪ್ರಶ್ನೆ ಮಾಡಿದ್ದಾರೆ.ʼʼಎಂದು ಏಕವಚನದಲ್ಲಿಯೇ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Varthur Santhosh: ವರ್ತೂರ್‌ ಸಂತೋಷ್‌ಗೆ ಸನ್ಮಾನ ಮಾಡಿದ ಪಿ ಎಸ್ ಐ ರಾತ್ರೋರಾತ್ರಿ ವರ್ಗಾವಣೆ!

ಯಾವನೋ ಕಿತ್ತೋದ್‌ ನನ್ಮಗ

ಕೆಲವು ದಿನಗಳ ಹಿಂದೆಯಷ್ಟೇ ಜಗ್ಗೇಶ್‌ ಅವರು ‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡಿ ʻʻನಾನು ಹುಲಿ ತರ ಬದುಕಬೇಕು ಎಂದು ನನ್ನ ತಾಯಿ ಹುಲಿ ಉಗುರನ್ನು ಕೊಟ್ಟಳು. ಆದರೆ ಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡು, ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ ಬಳಿಕ ದೊಡ್ಡ ಸುದ್ದಿ ಆಯಿತು”ಎಂದು ಹೇಳಿದ್ದರು. ಈ ಮಾತಿಗೆ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ತೂಕಕ್ಕೆ ತೂಕ ಸರಿ ಇರಬೇಕು

ಈ ಬಗ್ಗೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಮಾತನಾಡಿʻʻಅವರು ದೊಡ್ಡವರು. ನಾನು ಏನು ಹೇಳುತ್ತೇನೆ ಅಂದರೆ ಕಾಲೈ ತಸ್ಮೈ ನಮಃ ಅಷ್ಟೆ. ಕೆಲವೊಂದಕ್ಕೆ ಉತ್ತರ ಕೊಟ್ಟರೆ, ಇನ್ನು ಕೆಲವೊಂದಕ್ಕೆ ಸುಮ್ಮನಿರಬೇಕು. ಸುದೀಪಣ್ಣ ಅವರು ಹೇಳಿದಾಗೆ, ಕೆಲವೊಂದು ಜಾಗದಲ್ಲಿ ಮಾತನಾಡಬೇಕು. ಕೆಲವೊಮ್ಮೆ ಮಾತನಾಡದೇ ಸುಮ್ಮನಿದ್ದರೆ ಆ ಸೈಲೆಂಟ್ ಉತ್ತರ ಕೊಡುತ್ತೆ ಎಂದು. ತೂಕದ ಜತೆ ತೂಕವನ್ನು ಅಳೆಯಬೇಕಾದರೆ ತೂಕಕ್ಕೆ ತೂಕ ಸರಿ ಇರಬೇಕುʼʼಎಂದಿದ್ದರು

Continue Reading
Advertisement
Modi GDP
ಪ್ರಮುಖ ಸುದ್ದಿ21 mins ago

GDP Growth : ಜಿಡಿಪಿಯ ಭರ್ಜರಿ ಏರಿಕೆಗೆ ಮೋದಿ ಸಂತಸ; ಏನಂದ್ರು ಅವರು?

2nd PU Exam from tomorrow what are the conditions
ಶಿಕ್ಷಣ21 mins ago

2nd PU Exam: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ; ವಿದ್ಯಾರ್ಥಿಗಳಿಗೆ ಇಲ್ಲಿದೆ ಕಂಡಿಷನ್!

insurance
ಮನಿ-ಗೈಡ್23 mins ago

Money Guide: ಸಾಮಾನ್ಯ ವಿಮೆ v/s ಜೀವ ವಿಮೆ; ಯಾವುದು ಉತ್ತಮ? ನಿಮಗೆ ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ

Budget session Siddaramaiah
ವಿಧಾನಮಂಡಲ ಅಧಿವೇಶನ34 mins ago

Budget Session : ಬಿಜೆಪಿಯ ಜೈ ಶ್ರೀರಾಮ್‌ VS ಸಿದ್ದರಾಮಯ್ಯರ ಜೈ ಸೀತಾರಾಮ್‌!

Nitasha Kaul
ದೇಶ51 mins ago

Nitasha Kaul : ಬ್ರಿಟನ್​ ಲೇಖಕಿಯನ್ನು ಏರ್​ಪೋರ್ಟ್​​ನಿಂದಲೇ ವಾಪಸ್​ ಕಳಿಸಿದ್ದಕ್ಕೆ ಕಾರಣ ಕೊಟ್ಟ ಕೇಂದ್ರ ಸರ್ಕಾರ

Siddaramaiah plan behind accepting Caste Census Report Sunil Kumar reveals reason
ರಾಜಕೀಯ1 hour ago

‌Caste Census Report: ಜಾತಿ ಗಣತಿ ಸ್ವೀಕಾರದ ಹಿಂದೆ ಸಿದ್ದರಾಮಯ್ಯ ಪ್ಲ್ಯಾನ್‌ ಏನು? ಕಾರಣ ಬಿಚ್ಚಿಟ್ಟಿದ್ದಾರೆ ಸುನಿಲ್‌ ಕುಮಾರ್!

Rowdy sheeter kidnaps cricket bookie
ಕ್ರಿಕೆಟ್1 hour ago

WPL 2024 : ಮಹಿಳಾ ಐಪಿಎಲ್‌ನಲ್ಲಿ ಬೆಟ್ಟಿಂಗ್ ಕಟ್ಟಿದ ಬುಕ್ಕಿಯೇ ಕಿಡ್ನ್ಯಾಪ್‌!

GDP Growth
ಪ್ರಮುಖ ಸುದ್ದಿ1 hour ago

GDP Growth : ನಿರೀಕ್ಷೆಗೂ ಮೀರಿ ಭಾರತದ ಜಿಡಿಪಿ ಬೆಳವಣಿಗೆ; ಕಳೆದ ತ್ರೈಮಾಸಿಕದಲ್ಲಿ ಭರ್ಜರಿ ಪ್ರಗತಿ

film festival
ಸಿನಿಮಾ2 hours ago

Bengaluru Film Festival: 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

BJP protest demanding action against those who shouted pro Pak slogan
ಉತ್ತರ ಕನ್ನಡ2 hours ago

Uttara Kannada News: ಪಾಕ್‌ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯಲ್ಲಾಪುರದಲ್ಲಿ ಬಿಜೆಪಿ ಪ್ರತಿಭಟನೆ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for February 28 2024
ಭವಿಷ್ಯ15 hours ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ2 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ2 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ2 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

read your daily horoscope predictions for february 27 2024
ಭವಿಷ್ಯ3 days ago

Dina Bhavishya : ಇಂದು ಆಪ್ತರಿಂದಲೇ ಈ ರಾಶಿಯವರಿಗೆ ಕಂಟಕ!

Crowd mistakes Arabic words as Quran Verses on the kurta and Pak Women mobbed
ವಿದೇಶ3 days ago

Pak Woman: ಕುರ್ತಾ ಮೇಲಿನ ಅರೇಬಿಕ್ ಪದಗಳನ್ನು ತಪ್ಪಾಗಿ ತಿಳಿದು ಮಹಿಳೆ ಮೇಲೆ ಹಲ್ಲೆಗೆ ಯತ್ನ

read your daily horoscope predictions for february 26 2024
ಭವಿಷ್ಯ4 days ago

Dina Bhavishya : ಈ ಮೂರು ರಾಶಿಯವರು ಇಂದು ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯವರು ಆಪ್ತರೊಂದಿಗೆ ಗೌಪ್ಯ ವಿಷಯವನ್ನು ಹೇಳುವಾಗ ಎಚ್ಚರ!

Video Viral Student falls under school bus He escaped with minor injuries
ವೈರಲ್ ನ್ಯೂಸ್5 days ago

Video Viral: ಸ್ಕೂಲ್ ಬಸ್‌ನಡಿ ಬಿದ್ದ ವಿದ್ಯಾರ್ಥಿ; ಪಾರಾಗಿದ್ದೇ ಪವಾಡ!

ಟ್ರೆಂಡಿಂಗ್‌