ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಜತೆ ʻಸೂರ್ಯವಂಶʼ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ಮುಂಬೈ ನಟಿ ಇಶಾ ಕೊಪ್ಪಿಕರ್ (Isha Koppikar) ಚಿತ್ರರಂಗದಲ್ಲಿ ಅತ್ಯಂತ ಜನಪ್ರಿಯ ಹೆಸರುಗಳಲ್ಲಿ ಒಬ್ಬರು. ನಟಿ ಹಿಂದಿ ಚಿತ್ರರಂಗದಲ್ಲೂ ಹೆಸರು ಗಳಿಸಿದ್ದಾರೆ. ಹಿಂದಿಯ ಬಿಗ್ಬಾಸ್ಗೆ ಮೊದಲ ಎಂಟ್ರಿಯಾಗಿ ಇಶಾ ಕೊಪ್ಪಿಕರ್ ಹೆಸರು ಕನ್ಫರ್ಮ್ ಆಗಿದೆ. ಈ ಕುರಿತು ಖುದ್ದು ನಟಿ ಹೇಳಿದ್ದಾರೆ ಎನ್ನಲಾಗಿದೆ.
ಇಶಾ ಕೊಪ್ಪಿಕರ್ ಹಿಂದಿ ಜತೆ ಕನ್ನಡ, ತಮಿಳು, ತೆಲುಗು ಹಾಗೂ ಮರಾಠಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದರಲ್ಲೂ ಬಾಲಿವುಡ್‌ನ ‘ಕಂಪನಿ’, ‘ಕಾಂಠೆ’, ‘ಡಾನ್’ ಅಂತಹ ಯಶಸ್ವಿ ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದ್ದರು. ಕನ್ನಡದಲ್ಲೂ ಐದು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಸೂರ್ಯವಂಶ’,’ಹೂ ಅಂತಿಯಾ ಹೂಂ ಅಂತಿಯಾ’, ‘ಓ ನನ್ನ ನಲ್ಲೆ’, ‘ಲೂಟಿ’ ಹಾಗೂ ನಾಲ್ಕು ವರ್ಷಗಳ ಹಿಂದಷ್ಟೇ ತೆರೆಕಂಡಿರೋ ‘ಕವಚ’ ಸಿನಿಮಾದಲ್ಲಿ ನಟಿಸಿದ್ದರು. ಇದೀಗ ಅವರು ಹಿಂದಿಯ ಬಿಗ್ಬಾಸ್ಗೆ ಮೊದಲ ಸ್ಪರ್ಧಿಯಾಗಿ ಎಂಟ್ರಿ ಕೊಡಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: Isha Koppikar: ಖ್ಯಾತ ನಟ ನನಗೆ ಏಕಾಂತದಲ್ಲಿ ಭೇಟಿಯಾಗುವಂತೆ ಹೇಳಿದ್ದ ಎಂದ ʻಸೂರ್ಯವಂಶʼ ನಟಿ!
ಇತ್ತೇಚೆಗೆ ನಟಿ ಕಾಸ್ಟಿಂಗ್ ಕೌಚ್ ಅನುಭವವನ್ನು ಹಂಚಿಕೊಂಡಿದ್ದರು. ಸಿದ್ಧಾರ್ಥ್ ಕಣ್ಣನ್ ಅವರೊಂದಿಗಿನ ಸಂದರ್ಶನದಲ್ಲಿ, ಇಶಾ ಮಾತನಾಡಿ ʻʻಆಗೆಲ್ಲ ಮಿ ಟೂ ಭಿಯಾನ ಇರಲಿಲ್ಲ. ನನ್ನ ಕಾಲದಲ್ಲಿ ಅನೇಕ ನಟಿಯರು ಇಂಡಸ್ಟ್ರಿ ತೊರೆದರು. ಕೆಲವೇ ಕೆಲವರು ಇಂಡಸ್ಟ್ರಿಯಲ್ಲಿ ಇದ್ದರು. ಅದರಲ್ಲಿ ನಾನೂ ಒಬ್ಬಳು. ನಾನು 18 ವರ್ಷವನಿದ್ದಾಗ ನಟ ಕಾಸ್ಟಿಂಗ್ ಕೌಚ್‌ಗಾಗಿ ಸಂಪರ್ಕಿಸಿದರು. ಕೆಲಸ ಸಿಗಬೇಕಾದರೆ ನಟರ ಜೊತೆ ‘ಫ್ರೆಂಡ್ಲಿ’ ಆಗಬೇಕು ಅಂತ ಹೇಳಿದ್ರು. ನೀವು ಯಾವ ಅರ್ಥದಲ್ಲಿ ‘ಫ್ರೆಂಡ್ಲಿ’ ಆಗಿರಬೇಕು ಎಂದು ಹೇಳುತ್ತಿದ್ದೀರಿ ಅಂತ ಅವರಿಗೆ ಮರು ಪ್ರಶ್ನೆ ಮಾಡಿದ್ದೆ ಎಂದಿದ್ದಾರೆ. ಇನ್ನೂ.. ಇದೊಂದೇ ಅಲ್ಲ. ಮತ್ತೊಮ್ಮೆ.. ಮತ್ತೊಬ್ಬ ಸ್ಟಾರ್ ನನಗೆ ಸಿಂಗಲ್ ಆಗಿ ಏಕಾಂತದಲ್ಲಿ ಭೇಟಿಯಾಗುವಂತೆ ಹೇಳಿದ್ದ ಎಂದಿದ್ದಾರೆ. ಡ್ರೈವರ್ ಅಥವಾ ಬೇರೆ ಯಾರನ್ನೂ ಜತೆಗೆ ಕರೆದುಕೊಂಡು ಬರಬಾರದು ಎಂಬ ಷರತ್ತನ್ನೂ ಹಾಕಿದ್ದ ಎಂದಿರುವ ಇಶಾ ಕೊಪ್ಪಿಕರ್, ಆ ಕಾಲಕ್ಕೆ ಆತ ಹಿಂದಿ ಚಿತ್ರರಂಗದ ‘ಎ’ ದರ್ಜೆಯ ನಾಯಕನಾಗಿದ್ದ ಎಂದು ಕೂಡ ಹೇಳಿದ್ದಾರೆ. ನನ್ನ ಜೊತೆ ಚಿತ್ರರಂಗದ ಬಂದ ಹಲವಾರು ನಾಯಕಿಯರು ಈ ಕಾಸ್ಟಿಂಗ್ ಕೌಚ್ ಕಾರಣಕ್ಕೆ ಚಿತ್ರರಂಗದಿಂದ ದೂರ ಸರೆದರು ಎಂದು ಹೇಳಿಕೊಂಡಿದ್ದರು.
ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ಬಾಸ್ ಷೋ 18ನೇ ಸೀಸನ್ ಬರುವ ಅಕ್ಟೋಬರ್ 5ರಿಂದ ಶುರುವಾಗಲಿದೆ.