BBK SEASON 10: ಪ್ರತಾಪ್‌ ಟೀಂ ಬಂದಿದ್ದಕ್ಕೆ ʻಕಿಚ್ಚನ ಚಪ್ಪಾಳೆʼ ಸಿಕ್ಕಿದೆ ಎಂದ ನಮ್ರತಾ! - Vistara News

ಬಿಗ್ ಬಾಸ್

BBK SEASON 10: ಪ್ರತಾಪ್‌ ಟೀಂ ಬಂದಿದ್ದಕ್ಕೆ ʻಕಿಚ್ಚನ ಚಪ್ಪಾಳೆʼ ಸಿಕ್ಕಿದೆ ಎಂದ ನಮ್ರತಾ!

BBK SEASON 10: ಈ ವಾರ ನಮ್ರತಾ ವೋಟ್‌ ವಿಚಾರವಾಗಿಯೂ ಕುಗ್ಗಿ ಹೋಗಿದ್ದರು. ಆದರೀಗ ತಮ್ನನ್ನು ತಾವು ಪ್ರೂವ್‌ ಮಾಡಿಕೊಂಡಿದ್ದಾರೆ. ʼʼಈ ಕಡೆ ಕಳಪೆನೂ, ಉತ್ತಮನೂ ಇಲ್ಲ, ಕಿಚ್ಚನ ಚಪ್ಪಾಳೆಯೂ ಇಲ್ಲ, ಕ್ಯಾಪ್ಟನ್ ಅಲ್ಲ. ನಾನ್ಯಾಕೆ ಇಲ್ಲಿದೀನಿ” ಎಂದು ನಮ್ರತಾ ಗೌಡ ಅವರು ಪದೇ ಪದೆ ಹೇಳಿಕೊಂಡು ಅತ್ತಿದ್ದರು.

VISTARANEWS.COM


on

Namratha Gowda Gets Kicchana Chappale she thanks to drone Prathap
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ಬಾಸ್‌ ಸೀಸನ್‌ 10ರ (BBK SEASON 10: ) ಎಂಟನೇ ವಾರ ನಮ್ರತಾ ಅವರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿದೆ. ಈ ವಾರ ನಮ್ರತಾ ಆಟಕ್ಕೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಇಷ್ಟು ದಿನ ವಿನಯ್‌ ಅವರ ಚಮಚ ಎಂದು ಕರೆಸಿಕೊಳ್ಳುತ್ತಿದ್ದ ನಮ್ರತಾ ಈ ಬಾರಿ ತಾವೊಬ್ಬರೇ ನಿಂತು ಆಡಿದ್ದಾರೆ. ಟಾಸ್ಕ್‌ಗಳಲ್ಲಿ ಪರ್ಫಾಮ್ ಮಾಡಲು ನಮ್ರತಾ, ಡ್ರೋನ್ ಪ್ರತಾಪ್ ತಂಡ ಸೇರಿದರು. ತನಿಷಾ ಪರವಾಗಿ ನಮ್ರತಾ ಆಡಿ ಫ್ರೆಂಡ್‌ ವಿನಯ್ ಅವರನ್ನೇ ಕ್ಯಾಪ್ಟನ್ಸಿ ರೇಸ್‌ನಿಂದ ನಮ್ರತಾ ಹೊರಗಟ್ಟಿದ್ದರು. ಈ ವಾರ ನಮ್ರತಾ ವೋಟ್‌ ವಿಚಾರವಾಗಿಯೂ ಕುಗ್ಗಿ ಹೋಗಿದ್ದರು. ಆದರೀಗ ತಮ್ನನ್ನು ತಾವು ಪ್ರೂವ್‌ ಮಾಡಿಕೊಂಡಿದ್ದಾರೆ. ʼʼಈ ಕಡೆ ಕಳಪೆನೂ, ಉತ್ತಮನೂ ಇಲ್ಲ, ಕಿಚ್ಚನ ಚಪ್ಪಾಳೆಯೂ ಇಲ್ಲ, ಕ್ಯಾಪ್ಟನ್ ಅಲ್ಲ. ನಾನ್ಯಾಕೆ ಇಲ್ಲಿದೀನಿ” ಎಂದು ನಮ್ರತಾ ಗೌಡ ಅವರು ಪದೇ ಪದೆ ಹೇಳಿಕೊಂಡು ಅತ್ತಿದ್ದರು. ಈ ವಾರ ಅವರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ. ಪ್ರತಾಪ್‌ ಅವರಿಗೆ ಕಿಚ್ಚನ ಮುಂದೆ ಧನ್ಯವಾದ ಕೂಡ ಸೂಚಿಸಿದರು.

ಈ ವಾರ ನಮ್ರತಾ ಉತ್ತಮ ಜತೆಗೆ ಕಿಚ್ಚನ ಚಪ್ಪಾಳೆ ಕೂಡ ಪಡೆದರು. ನಮ್ರತಾ ಗೌಡ ಅವರು ಡ್ರೋನ್ ಪ್ರತಾಪ್‌ಗೆ “ನಿಮ್ಮಿಂದಲೇ ನನಗೆ ಉತ್ತಮ, ಕಿಚ್ಚನ ಚಪ್ಪಾಳೆ ಸಿಕ್ಕಿದೆ. ನಿಮ್ಮ ತಂಡಕ್ಕೆ ಬಂದಿದ್ದಕ್ಕೆ ಇದೆಲ್ಲ ಸಿಕ್ಕಿದೆ” ಎಂದು ಹೇಳಿದ್ದರು. ಡ್ರೋನ್ ಪ್ರತಾಪ್ ಅವರು “ನಿಮಗೆ ಉತ್ತಮ ಕೊಡಿಸ್ತೀನಿ, ಕಿಚ್ಚನ ಚಪ್ಪಾಳೆ ಕೊಡಿಸ್ತೀನಿ” ಅಂತಲೇ ನಮ್ರತಾ ಗೌಡಗೆ ಸಾಕಷ್ಟು ಬಾರಿ ಮಾತು ಕೊಟ್ಟಿದ್ದರು. ಇದೇ ಕಾರಣಕ್ಕೆ ನಮ್ರತಾ ಅವರು ಪ್ರತಾಪ್ ತಂಡಕ್ಕೆ ಬಂದಿದ್ದರು. ಆದರೆ ಕ್ಯಾಪ್ಟನ್ಸಿ ಟಾಸ್ಕ್ ಆಟದಿಂದ ಅವರನ್ನು ಪ್ರತಾಪ್ ಹೊರಗಡೆ ಇಟ್ಟರು. ಇದಕ್ಕೆ ನಮ್ರತಾ ಸಿಕ್ಕಾಪಟ್ಟೆ ಕಣ್ಣೀರು ಹಾಕಿದ್ದರು. ಆದರೆ ತನಿಷಾ ಪರ ನಮ್ರತಾ ಆಟ ಆಡಿ ಮನೆಯವರಿಂದ ಉತ್ತಮ ಪಡೆದುಕೊಂಡು, ಕಿಚ್ಚ ಅವರಿಂದ ಚಪ್ಪಾಳೆಯನ್ನು ಪಡೆದುಕೊಂಡರು.

ಕಿಚ್ಚನ ಚಪ್ಪಾಳೆ ಕೊಡಿಸ್ತೀನಿ ಎಂದು ಪ್ರತಾಪ್ ಹೇಳಿದ್ದರ ಬಗ್ಗೆಯೂ ಸುದೀಪ್ ಪ್ರಶ್ನೆ ಮಾಡಿ “ಈ ಕಿಚ್ಚನ ಚಪ್ಪಾಳೆ ಎಲ್ಲಿ ಸಿಗತ್ತೆ?” ಅಂತ ಕಿಚ್ಚ ಸುದೀಪ್ ಪ್ರಶ್ನೆ ಮಾಡಿದಾಗ, ಪ್ರತಾಪ್ ಅವರು, “ಎಲ್ಲಿಯೂ ಸಿಗಲ್ಲ, ಚೆನ್ನಾಗಿ ಆಟ ಆಡುವಂತೆ ಮಾಡ್ತೀನಿ” ಎಂದು ಹೇಳಿದ್ದರು.

ಇದನ್ನೂ ಓದಿ: BBK SEASON 10: ಪ್ರತಾಪ್‌ಗೆ ಕಿಚ್ಚನ ಮಾಸ್‌ ಕ್ಲಾಸ್‌; ಕ್ಷಮೆ ಕೇಳಿದ ಡ್ರೋನ್‌!

ʻʻಯಾರಿಗೂ ಡಿಪೆಂಡ್‌ ಆಗಬೇಡಿ. ಈ ವಾರ ಏನು ನೀವು ಎದ್ದಿದ್ದೀರಿ, ಇದು ಮಲಗದೇ ಇರುವ ಹಾಗೇ ನೋಡಿಕೊಳ್ಳಿ. ಅವಕಾಶ ಎಲ್ಲರಿಗೂ ಇರುತ್ತೆ. ಅವಕಾಶ ಬಾಗಿಲು ತಟ್ಟುವುದು ಮಾತ್ರವಲ್ಲ. ಬಾಗಿಲು ತಟ್ಟಿದ ಮೇಲೆ ಓಪನ್‌ ಆಗಲೇ ಬೇಕುʼʼ ಎಂದು ಕಿಚ್ಚ ಅವರು ನಮ್ರತಾ ಅವರಿಗೆ ಸಲಹೆ ಕೂಡ ನೀಡಿದ್ದರು.

ನಮ್ರತಾ ಅವರು ವಿನಯ್‌ ಅವರ ಕೈ ಬಿಟ್ಟ ನಿರ್ಧಾರ ಕೂಡ ಮನೆಯವರಿಗೆ ಆಶ್ವರ್ಯ ತಂದಿತು. ವಿನಯ್‌ ಕೂಡ ನಮ್ರತಾಗೆ ರೈಟ್‌ ಡಿಸಿಷನ್‌ ಎಂದು ಮನೆಯಲ್ಲಿ ಹೇಳಿದ್ದರು. ಸಂಗೀತಾ ಕೂಡ ನಮ್ರತಾಗೆ ʻʻಈ ನಿರ್ಧಾರದಿಂದ ನೀವು ಹೀರೋ ಆದ್ರಿ. ವಿನಯ್ ಹಿಂದೆಯೇ ಇರ್ತೀರಾ.. ಇನ್‌ಫ್ಲುಯೆನ್ಸ್ ಆಗಿದ್ದೀರಾ ಅಂತೆಲ್ಲ ಮಾತುಗಳು ಬಂದಿದ್ದವು. ಅದಕ್ಕೆ ನೀವು ಇವತ್ತು ಉತ್ತರ ಕೊಟ್ಟಿದ್ದೀರಾ’’ ಎಂದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಂಡ್ಯ

Varthur Santhosh: ಮತ್ತೆ ಹಳ್ಳಿಕಾರ್‌ ಒಡೆಯ ವಿವಾದ; ವರ್ತೂರ್‌ ಸಂತೋಷ್ ವಿರುದ್ಧ ಕಾನೂನು ಸಮರ

Varthur Santhosh : ಹಳ್ಳಿಕಾರ್ ಒಡೆಯ ವಿವಾದ ಮತ್ತೆ ತಾರಕಕ್ಕೇರಿದೆ. ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ ಹಳ್ಳಿಕಾರ್ ಸಂರಕ್ಷಕರು ತಿರುಗಿ ಬಿದ್ದಿದ್ದು, ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

VISTARANEWS.COM


on

By

Varthur Santhosh
Koo

ಮಂಡ್ಯ: ಬಿಗ್‌ ಬಾಸ್‌ ಸೀಸನ್‌ 10ರ (BBK Season 10) ಸ್ಪರ್ಧಿಯಾಗಿ ಗಮನ ಸೆಳೆದಿದ್ದ ವರ್ತೂರಿನ ಕೃಷಿಕ ವರ್ತೂರು ಸಂತೋಷ್‌ ವಿರುದ್ಧ ಹಳ್ಳಿಕಾರ್‌ ಸಂರಕ್ಷಕರು ಸಿಡಿದೆದ್ದಿದ್ದಾರೆ. ವರ್ತೂರ್‌ ಸಂತೋಷ್‌‌ (Varthur Santhosh) ಬಿಗ್ ಬಾಸ್ ಮನೆಯಲ್ಲಿದ್ದಾಗ ಹಳ್ಳಿಕಾರ್ ಒಡೆಯ‌ ಬಿರುದು ವಿವಾದಕ್ಕೆ ಸೃಷ್ಟಿಯಾಗಿತ್ತು.

ಈ ಹಿಂದೆ ಹಳ್ಳಿಕಾರ್ ತಳಿ ಸಂರಕ್ಷಕರು ವರ್ತೂರು ಬೆಂಬಲಿಗರಿಗೆ ತಿಳುವಳಿಕೆ ಹೇಳಲು ಚರ್ಚಾಗೋಷ್ಠಿ ಏರ್ಪಡಿಸಿದ್ದರು. ಅಂದು ವರ್ತೂರು ಸಂತೋಷ್ ಬೆಂಬಲಿಗರು ಹಾಗೂ ತಲಾತಲಾಂತರಿಂದ ಹಳ್ಳಿಕಾರ್ ತಳಿ ಸಂರಕ್ಷಕರ ನಡುವೆ ಜಟಾಪಟಿ ಶುರುವಾಗಿತ್ತು. ಈ ವಾಗ್ವಾದದಿಂದಾಗಿ ಕಾರ್ಯಕ್ರಮದ ಅರ್ಧದಲ್ಲೆ ಸಂತೋಷ್ ಬೆಂಬಲಿಗರನ್ನು ಪೊಲೀಸರು ಕಳುಹಿಸಿದ್ದರು. ನಂತರ ಬಿಗ್ ಬಾಸ್ ಮನೆಯಿಂದ ಹೊರ ಬಂದ ವರ್ತೂರ್‌ ಸಂತೋಷ್‌ ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದರು. ಹಿರಿಯ ಹಳ್ಳಿಕಾರ್ ಸಂರಕ್ಷಕರ ವಿರುದ್ಧ ಸಂತೋಷ್‌ ಏಕವಚನದಲ್ಲಿ ಹರಿಹಾಯ್ದಿದ್ದರು.

ಇದನ್ನೂ ಓದಿ: Actor Darshan: ದೇಹ ಅಷ್ಟೇ ಅಲ್ಲ, ಮಾತೂ ತೂಕ ಇರ್ಬೇಕು; ದರ್ಶನ್‌ಗೆ ಉಮಾಪತಿ ತಿರುಗೇಟು!

ವರ್ತೂರ್ ಸಂತೋಷ್‌ ಮಾತಿಗೆ ಹಳ್ಳಿಕಾರ್ ಸಂರಕ್ಷಕರು ಮತ್ತೆ ಸಿಡಿದೆದ್ದಿದ್ದಾರೆ. ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ಳುವುದು, ಬಿಂಬಿಸಿಕೊಳ್ಳುತ್ತಿರುವುದು ಸರಿಯಲ್ಲ. ಇದು ಹಳ್ಳಿಕಾರ್ ಜನಾಂಗಕ್ಕೆ ಅಪಮಾನವಾಗಿದೆ. ತಲಾತಲಾಂತರಿಂದ ಹಳ್ಳಿಕಾರ್ ಸಂರಕ್ಷಣೆ ಮಾಡುತ್ತಿರುವ ರೈತರಿಗೂ ಹಾಗು ಅವರ ಭಾವನೆಗೂ ಧಕ್ಕೆಯಾಗಿದೆ ಎಂದು ಹಳ್ಳಿಕಾರ್‌ ಸಂರಕ್ಷಕರು ಕಿರಿಕಾರಿದ್ದಾರೆ.

ಗೂಗಲ್‌ನಲ್ಲಿಯೂ ಛೇರ್ ಮೇನ್ ಆಫ್ ಆಲ್ ಇಂಡಿಯಾ ಹಳ್ಳಿಕಾರ್ ಕನ್ಜರ್ವೇಷನ್ ಎಂದು ರಾಂಗ್ ಮೆಸೇಜ್ ನೀಡಿದ್ದಾರೆ. ಇದರಿಂದ ಮುಂದಿನ ಪೀಳಿಗೆಗೆ ತಪ್ಪು ಸಂದೇಶ ಹೋಗುತ್ತೆ. ವರ್ತೂರ್ ಸಂತೋಷನಿಂದಲೇ ಹಳ್ಳಿಕಾರ್ ತಳಿ ಹುಟ್ಟಿತು ಎಂದು ಬಿಂಬಿತವಾಗಬಹುದು. ಆದ್ದರಿಂದ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ಎಲ್ಲಾ ದಾಖಲಾತಿಗಳನ್ನು ಸಂಗ್ರಹಿಸಲಾಗುತ್ತಿದ್ದು, ಶೀಘ್ರ ಕಾನೂನು ಸಮರ ಸಾರುತ್ತೇವೆ. ಗೂಗಲ್ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಹಳ್ಳಿಕಾರ್ ಸಂರಕ್ಷಕ ರವಿಪಟೇಲ್ ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಿರುತೆರೆ

Drone Prathap: ಬಿಗ್‌ಬಾಸ್‌ ವೇದಿಕೆಯಲ್ಲಿ ನುಡಿದಂತೆ ನಡೆದ ಡ್ರೋನ್‌ ಪ್ರತಾಪ್‌; ಅಭಿಮಾನಿಗಳಿಂದ ಮೆಚ್ಚುಗೆ

Drone Prathap: ಬಿಗ್‌ಬಾಸ್‌ ಕನ್ನಡ ಸೀಸನ್‌ 10ರ ರನ್ನರ್‌ ಅಪ್‌ ಡ್ರೋನ್‌ ಪ್ರತಾಪ್‌ ತಮಗೆ ಬಹುಮಾನವಾಗಿ ಬಂದ ಎಲೆಕ್ಟ್ರಿಕ್‌ ಸ್ಕೂಟರ್‌ ಅನ್ನು ದಾನ ಮಾಡಿದ್ದಾರೆ. ಆ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

VISTARANEWS.COM


on

prathap
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದಾರೆ. ಸದ್ಯ ಅವರು ಅಭಿಮಾನಿಗಳ ಭೇಟಿ, ರಿಯಾಲಿಟಿ ಶೋ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಬಿಡುವಿಲ್ಲದ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಇಷ್ಟೆಲ್ಲ ಬ್ಯುಸಿಯ ಮಧ್ಯೆಯೂ ತಾವು ಕೊಟ್ಟ ಮಾತನ್ನು ಉಳಿಸಿಕೊಟ್ಟು ಅಭಿಮಾನಿಗಳಿಂದ ಮೆಚ್ಚುಗೆ ಗಳಿಸಿದ್ದಾರೆ. ಅದೇನು ಎನ್ನುವ ವಿವರ ಇಲ್ಲಿದೆ.

ಎಲೆಕ್ಟ್ರಿಕ್ ಸ್ಕೂಟರ್‌ ದಾನ ಮಾಡಿದ ಪ್ರತಾಪ್‌

ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಇದೀಗ ಈ ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದಾರೆ. ಈ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ʼʼಬಿಗ್‌ಬಾಸ್‌ನಲ್ಲಿ ಬಹುಮಾನವಾಗಿ ಬಂದ ಬೈಕ್ ಅನ್ನು ಹೇಳಿದ ಹಾಗೆ ಯಾರಿಗೆ ನೀಡಿದೆ ಅನ್ನುವುದಕ್ಕೆ ಉತ್ತರ ಇಲ್ಲಿದೆ… ಇವರು ರಾಜು ಅಂತ ಮಧ್ಯಾಹ್ನದಿಂದ ಸಂಜೆವರೆಗೂ ಹೋಟಲ್‌ನಲ್ಲಿ ಕೆಲಸ ಮಾಡಿ‌ ಹಾಗೂ ಸಂಜೆಯ ಮೇಲೆ ಫುಡ್‌ ಡೆಲಿವರಿ ಕೆಲಸ ಮಾಡುತ್ತಾರೆ ಮತ್ತು ಇವರು ತಮ್ಮ ಸ್ನೇಹಿತರ ಹೆಸರಲ್ಲಿ ಗಾಡಿಯನ್ನು ತೆಗೆದುಕೊಂಡು ಅದಕ್ಕೆ ತಿಂಗಳು ತಿಂಗಳು ಕಂತು ಕಟ್ಟುತ್ತಿದ್ದರು. ಆದರೆ ಸ್ನೇಹಿತ ಮಾಡಿದ ಮೋಸದಿಂದ ಅವರ ಬೈಕನ್ನು ಬ್ಯಾಂಕ್ ನವರು ಸೀಜ್‌ ಮಾಡಿದ್ದರು. ಹಾಗಾಗಿ ನನಗೆ ಬಹುಮಾನವಾಗಿ ಬಂದ ಎಲೆಕ್ಟ್ರಿಕ್ ಗಾಡಿಯನ್ನು ಇವರಿಗೆ ನೀಡುತ್ತಿದ್ದೇನೆ. ಇದು ನನಗೆ ತುಂಬಾ ಖುಷಿ ತಂದಿದೆʼʼ ಎಂದು ಪ್ರತಾಪ್‌ ಬರೆದುಕೊಂಡಿದ್ದಾರೆ. ಜತೆಗೆ ಫೋಟೊವನ್ನೂ ಅಪ್‌ಲೋಡ್‌ ಮಾಡಿದ್ದಾರೆ. ತನಗೆ ಬಹುಮಾನವಾಗಿ ಬಂದ 10 ಲಕ್ಷ ರೂ. ಹಣವನ್ನು ಸಹ ತಾವು ಬಡವರಿಗೆ ದಾನ ನೀಡುವುದಾಗಿ ಡ್ರೋನ್ ಪ್ರತಾಪ್ ಘೋಷಣೆ ಮಾಡಿದ್ದರು. ಆದರೆ ಆ ಹಣವನ್ನು ಯಾರಿಗೆ ನೀಡಿದ್ದಾರೆಂಬ ಮಾಹಿತಿ ಲಭ್ಯವಾಗಿಲ್ಲ.

ಮೆಚ್ಚುಗೆ ಸೂಚಿಸಿದ ಅಭಿಮಾನಿಗಳು

ಡ್ರೋನ್‌ ಪ್ರತಾಪ್‌ ಅವರ ಈ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಹಲವರು ಮೆಚ್ಚುಗೆ ಸೂಚಿಸಿದ್ದಾರೆ. ʼʼತುಂಬಾ ಒಳ್ಳೆಯ ಕಾರ್ಯ, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೀರಿ, ನಿಮಗೆ ವೋಟ್‌ ಹಾಕಿದ್ದಕ್ಕೆ ಸಾರ್ಥಕವಾಯ್ತು, ಉತ್ತಮ ಕೆಲಸʼʼ ಎಂದೆಲ್ಲ ಕಮೆಂಟ್‌ ಮಾಡಿ ಬೆನ್ನು ತಟ್ಟಿದ್ದಾರೆ. ಬಿಗ್‌ಬಾಸ್‌ ಮನೆ ಒಳಗೆ ಉತ್ತಮ ಆಟ ಆಡುವ ಮೂಲಕ ಅಭಿಮಾನಿಗಳ ಮನಗೆದ್ದ ಅವರು ಇದೀಗ ಮನೆ ಹೊರಗೂ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: Gicchi Gili Gili season 3: ಡ್ರೋನ್‌ ಪ್ರತಾಪ್‌ ಮೇಕಪ್ ನೋಡಿ ಬೆಚ್ಚಿಬಿದ್ದ ತುಕಾಲಿ; ಗಂಡನನ್ನು ಚಚ್ಚಿ ಕೆಡವಿದ ಮಾನಸಾ! 

ಡ್ರೋನ್‌ ಪ್ರತಾಪ್‌ ಇತ್ತೀಚೆಗೆ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ʻಗಿಚ್ಚಿ ಗಿಲಿಗಿಲಿʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೊಡ್ಮನೆಯಲ್ಲಿ ಸಿಂಪಲ್​ ಆಗಿ ಇರುತ್ತಿದ್ದ ಪ್ರತಾಪ್​ ಅವರು ಈಗ ಮೇಕಪ್​ ಹಚ್ಚಿಕೊಂಡು ಮಿಂಚಿದ್ದರು. ಶೋ ಆರಂಭದ ಸಂಚಿಕೆಯಲ್ಲಿ ಡ್ರೋನ್‌ ಪ್ರತಾಪ್‌ ಭರ್ಜರಿ ಸ್ಟೆಪ್‌ ಹಾಕಿ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಿಗ್ ಬಾಸ್

Varthur Santhosh: ಹೇಳಿಕೆ ತಿರುಚಿ ತೇಜೋವಧೆ ಎಂದು ಕಿಡಿಗೇಡಿಗಳ ವಿರುದ್ಧ ನಟ ಜಗ್ಗೇಶ್ FIR!

Varthur Santhosh: ಕಿಡಿಗೇಡಿಗಳ ವಿರುದ್ಧ ನಟ ಜಗ್ಗೇಶ್ ಎಫ್‌ಐಆರ್‌ ದಾಖಲಿಸಿದ್ದಾರೆ. ವಿಚಾರ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಮಾತನಾಡುತ್ತಿರುವವರ ಮೇಲೆ ಜಗ್ಗೇಶ್ ಕ್ರಮಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ.

VISTARANEWS.COM


on

Actor Jaggesh FIR against Tiger Claw Statement Issue
Koo

ಬೆಂಗಳೂರು: ಕೆಲವು ದಿನಗಳ ಹಿಂದೆಯಷ್ಟೇ ಜಗ್ಗೇಶ್‌ ಅವರು ‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ʻಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡʼ ಎಂದು ಹೇಳಿದ್ದರು. ಈ ಮಾತಿಗೆ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ವರ್ತೂರ್‌ (Varthur Santhosh) ಕೂಡ ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ಇದಾದ ಬಳಿಕ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿ ಜಗ್ಗೇಶ್‌ ಕೂಡಲೇ ಕ್ಷಮೆ ಕೇಳಬೇಕು ಎಂದು ಎಚ್ಚರಿಕೆ ನೀಡಿದ್ದರು. ಆದರೀಗ ಆ ಕಿಡಿಗೇಡಿಗಳ ವಿರುದ್ಧ ನಟ ಜಗ್ಗೇಶ್ ಎಫ್‌ಐಆರ್‌ ದಾಖಲಿಸಿದ್ದಾರೆ. ವಿಚಾರ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಮಾತನಾಡುತ್ತಿರುವವರ ಮೇಲೆ ಜಗ್ಗೇಶ್ ಕ್ರಮಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ.

ಉತ್ತರ ವಿಭಾಗದ ಡಿಸಿಪಿಗೆ ಲಿಖಿತ ರೂಪದಲ್ಲಿ ನಟ ಜಗ್ಗೇಶ್ ದೂರು ನೀಡಿದ್ದು ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಜಗ್ಗೇಶ್‌ ದೂರಿನಲ್ಲಿ ʻʻರಂಗನಾಯಕ ಸಿನಿಮಾ ಕಾರ್ಯಕ್ರಮ ಇತ್ತು. ಹಿಂದೆ ಹುಲಿ ಉರುರಿನ ಬಗ್ಗೆ ಆದ ಘಟನೆಯನ್ನು ಮಾಧ್ಯಮದಲ್ಲಿ ತೋರಿಸಿದ್ದ ಬಗ್ಗೆ ಹಾಗೂ ಯಾರೊ ಒಬ್ಬ ಕಿತ್ತೋದವನು (ಗ್ರಾಮೀಣ ಭಾಷೆ) ಸಿಕ್ಕಿದ ಕಾರಣ ಅಂದರೆ ಈ ಹುಲಿ ಉಗುರಿನ ಘಟನೆಯಲ್ಲಿ ನೂರಾರು ಮಂದಿ ಸಮಸ್ಯೆ ಅನುಭವಿಸಿದ್ದಾರೆ ಎನ್ನುವ ಅರ್ಥದಲ್ಲಿ ಹಾಸ್ಯವಾಗಿ ಮಾಧ್ಯಮ ಮಿತ್ರರ ಜತೆ ಮಾತನಾಡಿದ್ದೆ. ಆದರೆ ಕೆಟ್ಟ ಪ್ರಚಾರದ ಉದ್ದೇಶದಿಂದ ನನ್ನ ಸಂಪೂರ್ಣ ವಿಚಾರ ತಿರುಚಿ ಜಾತಿ ನಿಂದನೆ, ವ್ಯಕ್ತಿ ನಿಂದನೆ ಎಂದು ಪ್ರಚಾರ ಪಡೆದು ನನ್ನ ತೇಜೋವಧೆಗೆ ಕೆಲ ಕಿಡಿಗೇಡಿಗಳು ಯತ್ನಿಸಿದ್ದಾರೆ” ಎಂದು ಜಗ್ಗೇಶ್ ದೂರಿನಲ್ಲಿ ತಿಳಿಸಿದ್ದಾರೆ. ಜತೆಗೆ ʻʻಇತ್ತೀಚಿನ ದಿನಗಳಲ್ಲಿ ಹಲವರು ಪ್ರಚಾರಕ್ಕೆಂದು ಕಾಯುತ್ತಿರುತ್ತಾರೆ. ನಾನು ಯಾರ ಬಗ್ಗೆ ಆಗಲಿ, ಜಾತಿ ಬಗ್ಗೆ ಆಗಿ ಮಾತನಾಡಿಲ್ಲ. ನನ್ನ ವೈಯಕ್ತಿಕ ಅನುಭವವನ್ನು ಮಾಧ್ಯಮದ ಮುಂದೆ ಹೇಳಿದ್ದೇನೆ. ಜಾತಿ ಗಲಭೆ, ತಪ್ಪು ಸಂದೇಶ, ಹಲ್ಲೆಯ ಬೆದರಿಕೆ ಮಾಡಿರುವ ಹೆಬ್ಬಗೋಡಿ ನಾರಾಯಣ ಸ್ವಾಮಿ ಹಾಗೂ ಆತನ ಮಾತು ಅನುಸರಿಸಿ ವಿಡಿಯೋ ಮಾಡಿದ ಮತ್ತೊಬ್ಬರ ಮೇಲೆ ಕ್ರಮ ಕಾನೂನು ಕ್ರಮಕ್ಕೆ ಒತ್ತಾಯ” ಎಂದು ಜಗ್ಗೇಶ್ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Varthur Santhosh: ‘ಯಾವನೋ ಕಿತ್ತೋದ್‌ ನನ್ಮಗ’ ಹೇಳಿಕೆ; ಕ್ಷಮೆ ಕೇಳಿದ್ರೆ ಸರಿ ಎಂದು ಜಗ್ಗೇಶ್​ಗೆ ಎಚ್ಚರಿಕೆ!

ಆಗಿದ್ದೇನು ?


ಕೆಲವು ದಿನಗಳ ಹಿಂದೆಯಷ್ಟೇ ಜಗ್ಗೇಶ್‌ ಅವರು ‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡಿ ʻʻನಾನು ಹುಲಿ ತರ ಬದುಕಬೇಕು ಎಂದು ನನ್ನ ತಾಯಿ ಹುಲಿ ಉಗುರನ್ನು ಕೊಟ್ಟಳು. ಆದರೆ ಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡು, ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ ಬಳಿಕ ದೊಡ್ಡ ಸುದ್ದಿ ಆಯಿತು”ಎಂದು ಹೇಳಿದ್ದರು. ಈ ಮಾತಿಗೆ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ತೂಕಕ್ಕೆ ತೂಕ ಸರಿ ಇರಬೇಕು

ಈ ಬಗ್ಗೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಮಾತನಾಡಿʻʻಅವರು ದೊಡ್ಡವರು. ನಾನು ಏನು ಹೇಳುತ್ತೇನೆ ಅಂದರೆ ಕಾಲೈ ತಸ್ಮೈ ನಮಃ ಅಷ್ಟೆ. ಕೆಲವೊಂದಕ್ಕೆ ಉತ್ತರ ಕೊಟ್ಟರೆ, ಇನ್ನು ಕೆಲವೊಂದಕ್ಕೆ ಸುಮ್ಮನಿರಬೇಕು. ಸುದೀಪಣ್ಣ ಅವರು ಹೇಳಿದಾಗೆ, ಕೆಲವೊಂದು ಜಾಗದಲ್ಲಿ ಮಾತನಾಡಬೇಕು. ಕೆಲವೊಮ್ಮೆ ಮಾತನಾಡದೇ ಸುಮ್ಮನಿದ್ದರೆ ಆ ಸೈಲೆಂಟ್ ಉತ್ತರ ಕೊಡುತ್ತೆ ಎಂದು. ತೂಕದ ಜತೆ ತೂಕವನ್ನು ಅಳೆಯಬೇಕಾದರೆ ತೂಕಕ್ಕೆ ತೂಕ ಸರಿ ಇರಬೇಕುʼʼಎಂದಿದ್ದರು.

Continue Reading

ಬಿಗ್ ಬಾಸ್

Varthur Santhosh: ‘ಯಾವನೋ ಕಿತ್ತೋದ್‌ ನನ್ಮಗ’ ಹೇಳಿಕೆ; ಕ್ಷಮೆ ಕೇಳಿದ್ರೆ ಸರಿ ಎಂದು ಜಗ್ಗೇಶ್​ಗೆ ಎಚ್ಚರಿಕೆ!

Varthur Santhosh: ವಹ್ನಿಕುಲ ಕ್ಷತ್ರಿಯ ಸಮುದಾಯದ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದು, ಕೂಡಲೇ ಅವರು ಕ್ಷಮೆ ಕೇಳದಿದ್ದರೆ ಪ್ರತಿಭಟನೆ ನಡೆಸುವುದಾಗಿಯೂ, ಮನೆಗೆ ಮುತ್ತಿಗೆ ಹಾಕುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Vahnikula Kshatriya Community Leader Narayan Swamy Warns Jaggesh about Varthur Santhosh
Koo

ಬೆಂಗಳೂರು: ರಾಜ್ಯದಲ್ಲಿ ಹುಲಿ ಉಗುರಿನ (Tiger Nail) ಲಾಕೆಟ್ ಇರುವ ಸರ ಧರಿಸಿರುವವರ ವಿರುದ್ಧ ಅರಣ್ಯ ಇಲಾಖೆ ಪರಿಶೀಲನೆ ನಡೆಸಿತ್ತು. ಬಿಗ್‌ ಬಾಸ್‌ ಸ್ಪರ್ಧಿ ವರ್ತೂರ್‌ ಸಂತೋಷ್‌ (Varthur Santhosh) ಅವರ ಹುಲಿ ಉಗರು ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಕೆಲವು ದಿನಗಳ ಹಿಂದೆಯಷ್ಟೇ ಜಗ್ಗೇಶ್‌ ಅವರು ‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ʻಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡʼ ಎಂದು ಹೇಳಿದ್ದರು. ಈ ಮಾತಿಗೆ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ವರ್ತೂರ್‌ ಕೂಡ ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿ ʻನಾನು ಏನು ಹೇಳ್ತೀನಿ ಅಂದ್ರೆ, ಕಾಲಾಯ ತಸ್ಮೈ ನಮಃ ಅಷ್ಟೆʼಎಂದು ಹೇಳಿದ್ದರು. ಇದೀಗ ವಹ್ನಿಕುಲ ಕ್ಷತ್ರಿಯ ಸಮುದಾಯದ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದು, ಕೂಡಲೇ ಅವರು ಕ್ಷಮೆ ಕೇಳದಿದ್ದರೆ ಪ್ರತಿಭಟನೆ ನಡೆಸುವುದಾಗಿಯೂ, ಮನೆಗೆ ಮುತ್ತಿಗೆ ಹಾಕುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

ಹೆಬ್ಬಗೋಡಿ ಮಾಜಿ ನಗರಸಭೆ ಸದಸ್ಯ ನಾರಾಯಣ ಸ್ವಾಮಿ ಈ ಬಗ್ಗೆ ವಿಡಿಯೋ ಮಾಡಿ ಜಗ್ಗೇಶ್ ಕ್ಷಮೆಗೆ ಆಗ್ರಹಿಸಿದ್ದಾರೆ. ನಟ ಜಗ್ಗೇಶ್ ಕ್ಷಮೆ ಕೇಳಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: Varthur Santhosh: ‘ಯಾವನೋ ಕಿತ್ತೋದ್‌ ನನ್ಮಗ”ಎಂದ ಜಗ್ಗೇಶ್‌ಗೆ ವರ್ತೂರ್‌ ಹೇಳಿದ್ದೇನು?

ಮಾಧ್ಯಮದ ಮುಂದೆ ಬಂದು ಕ್ಷಮೆಯಾಚಿಸಬೇಕು.

“ಬಿಗ್‌ಬಾಸ್ ಖ್ಯಾತಿಯ ಹಳ್ಳಿಕಾರ್ ಒಡೆಯ ವರ್ತೂರ್ ಸಂತೋಷ್ ಒಳ್ಳೆಯ ಮನುಷ್ಯ. ಸಣ್ಣ ಹುಡುಗನನ್ನು ಕೂಡ ಅಣ್ಣ ಎಂದು ಕರೆಯುವ ಒಳ್ಳೆ ಹೃದಯ, ಸ್ನೇಹಜೀವಿ. ಅಂತಹವರ ಬಗ್ಗೆ ಕೆಟ್ಟ ಪದಗಳನ್ನು ಬಳಸಲಾಗಿದೆ. ಇದರಲ್ಲೇ ನೀನು ಎಲ್ಲರಿಗೂ ಯಾವ ರೀತಿ ಮರ್ಯಾದೆ ಕೊಡುತ್ತೀಯ ಎನ್ನುವುದು ಗೊತ್ತಾಗುತ್ತಿದೆ. ಕೂಡಲೇ ಮಾಧ್ಯಮದ ಮುಂದೆ ಬಂದು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ಮುತ್ತಿಗೆ ಹಾಕಿ ಧರಣಿ ಕೂರುತ್ತೇವೆ” ಎಂದಿದ್ದಾರೆ.

ನೀನು ಯಾಕೆ ಕೋರ್ಟ್‌ ಮೊರೆ ಹೋದೆ ಹೇಳು

ʻʻಸಂತೋಷ್, ಕ್ಷತ್ರಿಯ ವಂಶದಲ್ಲಿ ಹುಟ್ಟಿದ್ದಾನೆ. ವಹ್ನಿಕುಲದಲ್ಲಿ ಹುಟ್ಟಿ ಬೆಳವಣಿಗೆ ಆಗುತ್ತಿದ್ದಾನೆ. ಅಂತಹ ಹುಡುಗನ ಬಗ್ಗೆ ಕೀಳುಮಟ್ಟದ ಭಾಷೆ ಬಳಸಿದ್ದೀಯ. ವಹ್ನಿಕುಲ ಕ್ಷತ್ರಿಯರ ಹುಡುಗ ಆತ. ಈಗ ಅವನು ಬೆಳವಣಿಗೆ ಆಗುತ್ತಿದ್ದಾನೆ ಎಂದು ಹೊಟ್ಟೆ ಕಿಚ್ಚಿನಿಂದ ಈ ರೀತಿಯ ಪದಗಳನ್ನು ಬಳಸುತ್ತಿದ್ದೀಯಾ? ಕ್ಷಮೆ ಕೇಳದಿದ್ದರೆ ವರ್ತೂರು ಸಂತೋಷ್ ಅಭಿಮಾನಿಗಳು ನಿನಗೆ ತಕ್ಕ ಶಾಸ್ತಿ ಮಾಡಬೇಕಾಗುತ್ತದೆ. ಆ ಪ್ರಕರಣ ನಡೆದಾಗ ನೀನು ಯಾಕೆ ಕೋರ್ಟ್‌ ಮೊರೆ ಹೋದೆ ಹೇಳು ಎಂದು ಏಕವಚನದಲ್ಲಿಯೇ ಪ್ರಶ್ನೆ ಮಾಡಿದ್ದಾರೆ.ʼʼಎಂದು ಏಕವಚನದಲ್ಲಿಯೇ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Varthur Santhosh: ವರ್ತೂರ್‌ ಸಂತೋಷ್‌ಗೆ ಸನ್ಮಾನ ಮಾಡಿದ ಪಿ ಎಸ್ ಐ ರಾತ್ರೋರಾತ್ರಿ ವರ್ಗಾವಣೆ!

ಯಾವನೋ ಕಿತ್ತೋದ್‌ ನನ್ಮಗ

ಕೆಲವು ದಿನಗಳ ಹಿಂದೆಯಷ್ಟೇ ಜಗ್ಗೇಶ್‌ ಅವರು ‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡಿ ʻʻನಾನು ಹುಲಿ ತರ ಬದುಕಬೇಕು ಎಂದು ನನ್ನ ತಾಯಿ ಹುಲಿ ಉಗುರನ್ನು ಕೊಟ್ಟಳು. ಆದರೆ ಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡು, ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ ಬಳಿಕ ದೊಡ್ಡ ಸುದ್ದಿ ಆಯಿತು”ಎಂದು ಹೇಳಿದ್ದರು. ಈ ಮಾತಿಗೆ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ತೂಕಕ್ಕೆ ತೂಕ ಸರಿ ಇರಬೇಕು

ಈ ಬಗ್ಗೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಮಾತನಾಡಿʻʻಅವರು ದೊಡ್ಡವರು. ನಾನು ಏನು ಹೇಳುತ್ತೇನೆ ಅಂದರೆ ಕಾಲೈ ತಸ್ಮೈ ನಮಃ ಅಷ್ಟೆ. ಕೆಲವೊಂದಕ್ಕೆ ಉತ್ತರ ಕೊಟ್ಟರೆ, ಇನ್ನು ಕೆಲವೊಂದಕ್ಕೆ ಸುಮ್ಮನಿರಬೇಕು. ಸುದೀಪಣ್ಣ ಅವರು ಹೇಳಿದಾಗೆ, ಕೆಲವೊಂದು ಜಾಗದಲ್ಲಿ ಮಾತನಾಡಬೇಕು. ಕೆಲವೊಮ್ಮೆ ಮಾತನಾಡದೇ ಸುಮ್ಮನಿದ್ದರೆ ಆ ಸೈಲೆಂಟ್ ಉತ್ತರ ಕೊಡುತ್ತೆ ಎಂದು. ತೂಕದ ಜತೆ ತೂಕವನ್ನು ಅಳೆಯಬೇಕಾದರೆ ತೂಕಕ್ಕೆ ತೂಕ ಸರಿ ಇರಬೇಕುʼʼಎಂದಿದ್ದರು

Continue Reading
Advertisement
Actor Darshan rally police deny permission
ಸ್ಯಾಂಡಲ್ ವುಡ್5 mins ago

Actor Darshan: ನಟ ದರ್ಶನ್​ ಅಭಿಮಾನಿಗಳ ಬೈಕ್ ರ್‍ಯಾಲಿ ರದ್ದು!

Drinking water supply to be disrupted in Bengaluru tomorrow
ಬೆಂಗಳೂರು11 mins ago

Water supply : ಬೆಂಗಳೂರಲ್ಲಿ ನಾಳೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

Pune Police 60 Hours Operation; Drugs worth more than Rs 1300 crore seized
ಪ್ರಮುಖ ಸುದ್ದಿ24 mins ago

ಪುಣೆ ಪೊಲೀಸರ 60 ಗಂಟೆಗಳ ಕಾರ್ಯಾಚರಣೆ; 1300 ಕೋಟಿ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ವಶ

gold wear bride
ಚಿನ್ನದ ದರ25 mins ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಬಂಗಾರದ ಧಾರಣೆ ಗಮನಿಸಿ, ಖರೀದಿಸಿ

Elderly woman murdered in Bengaluru accused did not give any reason
ಕ್ರೈಂ33 mins ago

Murder Case : ವೃದ್ಧೆ ದೇಹ ತುಂಡು ತುಂಡಾಗಿ ಕತ್ತರಿಸಿದ್ದು ನಾನೇ! ಹಿಂದಿನ ಕಾರಣ ಬಾಯಿಬಿಡದ ಹಂತಕ

Pralhad Joshi Jaishankar Nirmala Seetaraman
ಹುಬ್ಬಳ್ಳಿ36 mins ago

Pralhad Joshi : ಜೈಶಂಕರ್, ನಿರ್ಮಲಾ ಸ್ಪರ್ಧೆ ಖಚಿತ ಎಂದ ಪ್ರಹ್ಲಾದ್‌ ಜೋಶಿ; ಯಾವ ಕ್ಷೇತ್ರ?

india poverty
ದೇಶ55 mins ago

India Poverty: ದೇಶದಲ್ಲಿ ಬಡವರ ಸಂಖ್ಯೆ 5%ಕ್ಕಿಂತ ಇಳಿಕೆ; ಆಹಾರಕ್ಕಿಂತ ಓಡಾಟ, ಮನರಂಜನೆಗೇ ಹೆಚ್ಚು ಖರ್ಚು!

Janardhana Reddy meets CM Siddaramaiah and DCM DK Shivakumar
ರಾಜಕೀಯ1 hour ago

Rajya Sabha Election: ಸಿಎಂ, ಡಿಸಿಎಂ ಭೇಟಿ ಮಾಡಿದ ಜನಾರ್ದನ ರೆಡ್ಡಿ; ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ?

Namma Metro Farmer
ಬೆಂಗಳೂರು1 hour ago

Namma Metro : ಬಟ್ಟೆ ಕ್ಲೀನ್‌ ಇಲ್ಲ ಎಂದು ರೈತನಿಗೆ ಪ್ರವೇಶ ನಿರಾಕರಿಸಿದ ಮೆಟ್ರೋ; ನೆಟ್ಟಿಗರ ಆಕ್ರೋಶ

Siddharth Bodke and Titeeksha Tawade to get married
ಸಿನಿಮಾ1 hour ago

Siddharth Bodke: ಮರಾಠಿ ನಟಿ ತಿತೀಕ್ಷಾ- ʻದೃಶ್ಯಂʼ ನಟ ಸಿದ್ಧಾರ್ಥ್ ಬೋಡ್ಕೆ ಜೋಡಿಯ ಅದ್ಧೂರಿ ಮದುವೆ ಇಂದು

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

read your daily horoscope predictions for february 26 2024
ಭವಿಷ್ಯ8 hours ago

Dina Bhavishya : ಈ ಮೂರು ರಾಶಿಯವರು ಇಂದು ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಆಪ್ತರೊಂದಿಗೆ ಗೌಪ್ಯ ವಿಷಯವನ್ನು ಹೇಳುವಾಗ ಎಚ್ಚರ!

Video Viral Student falls under school bus He escaped with minor injuries
ವೈರಲ್ ನ್ಯೂಸ್2 days ago

Video Viral: ಸ್ಕೂಲ್ ಬಸ್‌ನಡಿ ಬಿದ್ದ ವಿದ್ಯಾರ್ಥಿ; ಪಾರಾಗಿದ್ದೇ ಪವಾಡ!

Varthur Santhosh
ಮಂಡ್ಯ2 days ago

Varthur Santhosh: ಮತ್ತೆ ಹಳ್ಳಿಕಾರ್‌ ಒಡೆಯ ವಿವಾದ; ವರ್ತೂರ್‌ ಸಂತೋಷ್ ವಿರುದ್ಧ ಕಾನೂನು ಸಮರ

read your daily horoscope predictions for february 24 2024
ಭವಿಷ್ಯ2 days ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಈ ರಾಶಿಯವರಿಗೆ ಸಿಗಲಿದೆ ಸಂಗಾತಿ ಸಾಥ್‌

Staff nurses attempt to convert at health centre in Ratagal village
ಕಲಬುರಗಿ3 days ago

Forced Conversion : ಆಪರೇಶನ್‌ ಮತಾಂತರ; ನರ್ಸ್‌ಗಳಿಂದ ಹಿಂದೂಗಳ ಬ್ರೈನ್‌ ವಾಶ್‌

Fire breaks out in auto shed Burnt autos
ಬೆಂಗಳೂರು3 days ago

Fire Accident : ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ! 40-50 ಆಟೋಗಳು ಬೆಂಕಿಗಾಹುತಿ

He sent a private photo video of his girlfriend
ಬೆಳಗಾವಿ3 days ago

Belgavi News : ನವ ವಿವಾಹಿತೆಯ ಖಾಸಗಿ ವಿಡಿಯೊ ಹರಿಬಿಟ್ಟು ಹಳೇ ಪ್ರೇಮಿ ಕಿತಾಪತಿ!

read your daily horoscope predictions for february 23 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಫೀಸ್‌ನಲ್ಲಿ ಬಾಸ್‌ನ ಕಿರಿಕಿರಿಯಿಂದ ದಿನಪೂರ್ತಿ ಟೆನ್ಷನ್‌!

Catton Candy contain cancer Will there be a ban in Karnataka
ಬೆಂಗಳೂರು4 days ago

cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

ಟ್ರೆಂಡಿಂಗ್‌