ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.
ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.
ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!
ಕಾರ್ತಿಕ್ ಮಹೇಶ್ ಈ ಬಗ್ಗೆ ಇನ್‌ಸ್ಟಾ ಪೋಸ್ಟ್ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್ ಮಾಡಿಕೊಂಡಿದ್ದಾರೆ.
ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್ ಸಿನಿಮಾದಲ್ಲಿ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.