Site icon Vistara News

Varthur Santhosh: ‘ಯಾವನೋ ಕಿತ್ತೋದ್‌ ನನ್ಮಗ’ ಹೇಳಿಕೆ; ಕ್ಷಮೆ ಕೇಳಿದ್ರೆ ಸರಿ ಎಂದು ಜಗ್ಗೇಶ್​ಗೆ ಎಚ್ಚರಿಕೆ!

Vahnikula Kshatriya Community Leader Narayan Swamy Warns Jaggesh about Varthur Santhosh

ಬೆಂಗಳೂರು: ರಾಜ್ಯದಲ್ಲಿ ಹುಲಿ ಉಗುರಿನ (Tiger Nail) ಲಾಕೆಟ್ ಇರುವ ಸರ ಧರಿಸಿರುವವರ ವಿರುದ್ಧ ಅರಣ್ಯ ಇಲಾಖೆ ಪರಿಶೀಲನೆ ನಡೆಸಿತ್ತು. ಬಿಗ್‌ ಬಾಸ್‌ ಸ್ಪರ್ಧಿ ವರ್ತೂರ್‌ ಸಂತೋಷ್‌ (Varthur Santhosh) ಅವರ ಹುಲಿ ಉಗರು ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಕೆಲವು ದಿನಗಳ ಹಿಂದೆಯಷ್ಟೇ ಜಗ್ಗೇಶ್‌ ಅವರು ‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ʻಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡʼ ಎಂದು ಹೇಳಿದ್ದರು. ಈ ಮಾತಿಗೆ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ವರ್ತೂರ್‌ ಕೂಡ ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿ ʻನಾನು ಏನು ಹೇಳ್ತೀನಿ ಅಂದ್ರೆ, ಕಾಲಾಯ ತಸ್ಮೈ ನಮಃ ಅಷ್ಟೆʼಎಂದು ಹೇಳಿದ್ದರು. ಇದೀಗ ವಹ್ನಿಕುಲ ಕ್ಷತ್ರಿಯ ಸಮುದಾಯದ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದು, ಕೂಡಲೇ ಅವರು ಕ್ಷಮೆ ಕೇಳದಿದ್ದರೆ ಪ್ರತಿಭಟನೆ ನಡೆಸುವುದಾಗಿಯೂ, ಮನೆಗೆ ಮುತ್ತಿಗೆ ಹಾಕುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

ಹೆಬ್ಬಗೋಡಿ ಮಾಜಿ ನಗರಸಭೆ ಸದಸ್ಯ ನಾರಾಯಣ ಸ್ವಾಮಿ ಈ ಬಗ್ಗೆ ವಿಡಿಯೋ ಮಾಡಿ ಜಗ್ಗೇಶ್ ಕ್ಷಮೆಗೆ ಆಗ್ರಹಿಸಿದ್ದಾರೆ. ನಟ ಜಗ್ಗೇಶ್ ಕ್ಷಮೆ ಕೇಳಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: Varthur Santhosh: ‘ಯಾವನೋ ಕಿತ್ತೋದ್‌ ನನ್ಮಗ”ಎಂದ ಜಗ್ಗೇಶ್‌ಗೆ ವರ್ತೂರ್‌ ಹೇಳಿದ್ದೇನು?

ಮಾಧ್ಯಮದ ಮುಂದೆ ಬಂದು ಕ್ಷಮೆಯಾಚಿಸಬೇಕು.

“ಬಿಗ್‌ಬಾಸ್ ಖ್ಯಾತಿಯ ಹಳ್ಳಿಕಾರ್ ಒಡೆಯ ವರ್ತೂರ್ ಸಂತೋಷ್ ಒಳ್ಳೆಯ ಮನುಷ್ಯ. ಸಣ್ಣ ಹುಡುಗನನ್ನು ಕೂಡ ಅಣ್ಣ ಎಂದು ಕರೆಯುವ ಒಳ್ಳೆ ಹೃದಯ, ಸ್ನೇಹಜೀವಿ. ಅಂತಹವರ ಬಗ್ಗೆ ಕೆಟ್ಟ ಪದಗಳನ್ನು ಬಳಸಲಾಗಿದೆ. ಇದರಲ್ಲೇ ನೀನು ಎಲ್ಲರಿಗೂ ಯಾವ ರೀತಿ ಮರ್ಯಾದೆ ಕೊಡುತ್ತೀಯ ಎನ್ನುವುದು ಗೊತ್ತಾಗುತ್ತಿದೆ. ಕೂಡಲೇ ಮಾಧ್ಯಮದ ಮುಂದೆ ಬಂದು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ಮುತ್ತಿಗೆ ಹಾಕಿ ಧರಣಿ ಕೂರುತ್ತೇವೆ” ಎಂದಿದ್ದಾರೆ.

ನೀನು ಯಾಕೆ ಕೋರ್ಟ್‌ ಮೊರೆ ಹೋದೆ ಹೇಳು

ʻʻಸಂತೋಷ್, ಕ್ಷತ್ರಿಯ ವಂಶದಲ್ಲಿ ಹುಟ್ಟಿದ್ದಾನೆ. ವಹ್ನಿಕುಲದಲ್ಲಿ ಹುಟ್ಟಿ ಬೆಳವಣಿಗೆ ಆಗುತ್ತಿದ್ದಾನೆ. ಅಂತಹ ಹುಡುಗನ ಬಗ್ಗೆ ಕೀಳುಮಟ್ಟದ ಭಾಷೆ ಬಳಸಿದ್ದೀಯ. ವಹ್ನಿಕುಲ ಕ್ಷತ್ರಿಯರ ಹುಡುಗ ಆತ. ಈಗ ಅವನು ಬೆಳವಣಿಗೆ ಆಗುತ್ತಿದ್ದಾನೆ ಎಂದು ಹೊಟ್ಟೆ ಕಿಚ್ಚಿನಿಂದ ಈ ರೀತಿಯ ಪದಗಳನ್ನು ಬಳಸುತ್ತಿದ್ದೀಯಾ? ಕ್ಷಮೆ ಕೇಳದಿದ್ದರೆ ವರ್ತೂರು ಸಂತೋಷ್ ಅಭಿಮಾನಿಗಳು ನಿನಗೆ ತಕ್ಕ ಶಾಸ್ತಿ ಮಾಡಬೇಕಾಗುತ್ತದೆ. ಆ ಪ್ರಕರಣ ನಡೆದಾಗ ನೀನು ಯಾಕೆ ಕೋರ್ಟ್‌ ಮೊರೆ ಹೋದೆ ಹೇಳು ಎಂದು ಏಕವಚನದಲ್ಲಿಯೇ ಪ್ರಶ್ನೆ ಮಾಡಿದ್ದಾರೆ.ʼʼಎಂದು ಏಕವಚನದಲ್ಲಿಯೇ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Varthur Santhosh: ವರ್ತೂರ್‌ ಸಂತೋಷ್‌ಗೆ ಸನ್ಮಾನ ಮಾಡಿದ ಪಿ ಎಸ್ ಐ ರಾತ್ರೋರಾತ್ರಿ ವರ್ಗಾವಣೆ!

ಯಾವನೋ ಕಿತ್ತೋದ್‌ ನನ್ಮಗ

ಕೆಲವು ದಿನಗಳ ಹಿಂದೆಯಷ್ಟೇ ಜಗ್ಗೇಶ್‌ ಅವರು ‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡಿ ʻʻನಾನು ಹುಲಿ ತರ ಬದುಕಬೇಕು ಎಂದು ನನ್ನ ತಾಯಿ ಹುಲಿ ಉಗುರನ್ನು ಕೊಟ್ಟಳು. ಆದರೆ ಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡು, ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ ಬಳಿಕ ದೊಡ್ಡ ಸುದ್ದಿ ಆಯಿತು”ಎಂದು ಹೇಳಿದ್ದರು. ಈ ಮಾತಿಗೆ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ತೂಕಕ್ಕೆ ತೂಕ ಸರಿ ಇರಬೇಕು

ಈ ಬಗ್ಗೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಮಾತನಾಡಿʻʻಅವರು ದೊಡ್ಡವರು. ನಾನು ಏನು ಹೇಳುತ್ತೇನೆ ಅಂದರೆ ಕಾಲೈ ತಸ್ಮೈ ನಮಃ ಅಷ್ಟೆ. ಕೆಲವೊಂದಕ್ಕೆ ಉತ್ತರ ಕೊಟ್ಟರೆ, ಇನ್ನು ಕೆಲವೊಂದಕ್ಕೆ ಸುಮ್ಮನಿರಬೇಕು. ಸುದೀಪಣ್ಣ ಅವರು ಹೇಳಿದಾಗೆ, ಕೆಲವೊಂದು ಜಾಗದಲ್ಲಿ ಮಾತನಾಡಬೇಕು. ಕೆಲವೊಮ್ಮೆ ಮಾತನಾಡದೇ ಸುಮ್ಮನಿದ್ದರೆ ಆ ಸೈಲೆಂಟ್ ಉತ್ತರ ಕೊಡುತ್ತೆ ಎಂದು. ತೂಕದ ಜತೆ ತೂಕವನ್ನು ಅಳೆಯಬೇಕಾದರೆ ತೂಕಕ್ಕೆ ತೂಕ ಸರಿ ಇರಬೇಕುʼʼಎಂದಿದ್ದರು

Exit mobile version