Budget 2024: ವಿನಾಶಕಾರಿ ಭಾರತ ಬಜೆಟ್‌; 190 ಲಕ್ಷ ಕೋಟಿ ರೂ. ಸಾಲ ಮಾಡಿದ ಮೋದಿ: ಸಿಎಂ ಸಿದ್ದರಾಮಯ್ಯ - Vistara News

ಬಜೆಟ್ 2024

Budget 2024: ವಿನಾಶಕಾರಿ ಭಾರತ ಬಜೆಟ್‌; 190 ಲಕ್ಷ ಕೋಟಿ ರೂ. ಸಾಲ ಮಾಡಿದ ಮೋದಿ: ಸಿಎಂ ಸಿದ್ದರಾಮಯ್ಯ

Budget 2024: ಈ ಬಾರಿ ಬಜೆಟ್ ಗಾತ್ರ 47,65,758 ಕೋಟಿ ರೂಪಾಯಿ ಆಗಿದೆ. ಕಳೆದ ವರ್ಷದ ಬಜೆಟ್ 45,3097 ಕೋಟಿ ರೂಪಾಯಿ ಆಗಿತ್ತು. ಕಳೆದ ಬಾರಿಗಿಂತ ಶೇ. 5 – 8ರಷ್ಟು ಬಜೆಟ್ ಹೆಚ್ಚಾಗಿದೆ. ಈ ಬಜೆಟ್‌ಗೆ ಅಂತ 16, 85,494 ರೂಪಾಯಿ ಸಾಲ ಮಾಡಿದ್ದಾರೆ. ಒಟ್ಟು ಕೇಂದ್ರ ಸರ್ಕಾರದ ಸಾಲ 190 ಲಕ್ಷ ಕೋಟಿ ರೂಪಾಯಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

CM siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಮಂಡಿಸಿರುವ ಮಧ್ಯಂತರ ಬಜೆಟ್‌ಗೆ (Budget 2024) ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಚುನಾವಣಾ ಬಜೆಟ್ ಆಗಿದೆ. ಒಟ್ಟಾರೆ ಕೇಂದ್ರ ಸರ್ಕಾರ 190 ಲಕ್ಷ ಕೋಟಿ ರೂಪಾಯಿ ಸಾಲದಲ್ಲಿದೆ. 11,91,000 ಕೋಟಿ ರೂಪಾಯಿ ಸಾಲದ ಬಡ್ಡಿಗೆ ಹೋಗುತ್ತದೆ ಎಂದು ಕಿಡಿಕಾರಿದ್ದಾರೆ.

ಕೇಂದ್ರದ ಬಜೆಟ್‌ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಬಾರಿ ಬಜೆಟ್ ಗಾತ್ರ 47,65,758 ಕೋಟಿ ರೂಪಾಯಿ ಆಗಿದೆ. ಕಳೆದ ವರ್ಷದ ಬಜೆಟ್ 45,3097 ಕೋಟಿ ರೂಪಾಯಿ ಆಗಿತ್ತು. ಕಳೆದ ಬಾರಿಗಿಂತ ಶೇ. 5 – 8ರಷ್ಟು ಬಜೆಟ್ ಹೆಚ್ಚಾಗಿದೆ. ಈ ಬಜೆಟ್‌ಗೆ ಅಂತ 16, 85,494 ರೂಪಾಯಿ ಸಾಲ ಮಾಡಿದ್ದಾರೆ. ಒಟ್ಟು ಕೇಂದ್ರ ಸರ್ಕಾರದ ಸಾಲ 190 ಲಕ್ಷ ಕೋಟಿ ರೂಪಾಯಿ ಇದೆ. ಒಟ್ಟಾರೆ ಆಗಿ ಇದು ನಿರಾಶಾದಾಯಕ ಬಜೆಟ್ ಎಂದು ಬಣ್ಣಿಸಿದರು.

ಜನರ ಮುಂದೆ ಮುಚ್ಚಿಟ್ಟಿರುವುದೇ ಹೆಚ್ಚು. ದೇಶದ ಆರ್ಥಿಕ ಪರಿಸ್ಥಿತಿಯನ್ನು ಬಿಚ್ಚಿಟ್ಟಿಲ್ಲ. ನಿರುದ್ಯೋಗ, ಬೆಲೆಯೇರಿಕೆ, ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪವೇ ಇಲ್ಲ. ವಿಕಸಿತ ಭಾರತ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರದಲ್ಲಿ ಹೇಳುತ್ತಾರೆ. ಈ ಬಜೆಟ್ ವಿಕಸಿತ ಬಜೆಟ್ ಎನ್ನುತ್ತಾರೆ. ಇದು ನಿಜವಾದ ಅರ್ಥದಲ್ಲಿ ವಿನಾಶಕಾರಿ ಭಾರತ ಮಾಡುವ ಬಜೆಟ್ ಆಗಿದೆ. ಬಡವರು, ಯುವಕರು, ರೈತರು, ಮಹಿಳೆಯರಿಗಾಗಿ ವಿಕಸಿತ ಭಾರತ ಎನ್ನುತ್ತಾರೆ. ಆದರೆ, ಈ ಸಮುದಾಯಗಳ ಪ್ರಗತಿಗೆ ಕಾರ್ಯಕ್ರಮಗಳೇ ಇಲ್ಲ. ನಾವು ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ, ಕೃಷಿಭಾಗ್ಯ ಕಾರ್ಯಕ್ರಮ ಈ ವರ್ಗದ ಜನರಿಗೆ ಕೊಟ್ಟೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಳೆ ಪರಿಹಾರವನ್ನು ಬಜೆಟ್‌ನಲ್ಲಿ ಹೇಳಿಲ್ಲ

ಬೆಳೆ ಪರಿಹಾರವನ್ನು ಬಜೆಟ್‌ನಲ್ಲಿ ಹೇಳಿಲ್ಲ. ಎಂ.ಎಸ್.ಪಿಗೆ ಕೆಲವು ಬೆಳೆಗಳನ್ನು ಮಾತ್ರ ಸೇರಿಸಿದ್ದಾರೆ. ರೈತರ ಎಲ್ಲ ಬೆಳೆಗಳು ಎಂ.ಎಸ್.ಪಿ ಅಡಿ ಬರಬೇಕು. ಇದರ ಬಗ್ಗೆ ಏನನ್ನೂ ಬಜೆಟ್‌ನಲ್ಲಿ ಹೇಳಿಲ್ಲ. ನಿರ್ಮಲಾ ಸೀತಾರಾಮನ್ ಅವರ 6ನೇ ಬಜೆಟ್ ಇದು. ತೆರಿಗೆಯನ್ನು ಕಾರ್ಪೊರೇಟ್‌ಗಳ ಮೇಲಿನ ಪ್ರಮಾಣ ಶೇ.30ಕ್ಕೆ ಇಳಿಸಿ ಉಳಿದ ಭಾರವನ್ನು ಬಡವರು, ಮಧ್ಯಮ ವರ್ಗದವರ ಮೇಲೆ ಹೇರಿದ್ದಾರೆ ಮತ್ತು ಹೆಚ್ಚಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

2004 -14 ರವರೆಗೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಆಗ ಬೆಳವಣಿಗೆ ದರ 13.79 % ಇತ್ತು. ಈಗ ಬಜೆಟ್ ಬೆಳವಣಿಗೆ ಶೇ. 9.6ಕ್ಕೆ ಕುಸಿತ ಕಂಡಿದೆ. ವಿಕಸಿತ ಎಂದು ಹೇಳಿಕೊಂಡು ಶೇಕಡಾ 9.6ಕ್ಕೆ ತಂದಿದ್ದಾರೆ. ಅಂದರೆ, ಶೇ. 4.19ರಷ್ಟು ಕಡಿಮೆಯಾಗಿದೆ. ಜಿ.ಡಿ.ಪಿ ಬೆಳವಣಿಗೆ ಯುಪಿಎ ಸರ್ಕಾರದಲ್ಲಿ ಶೇ. 11.14 % ಇತ್ತು ಎನ್.ಡಿ.ಎ ಕಾಲದಲ್ಲಿ ಶೇ. 6.4ಕ್ಕೆ ಕುಸಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಖ್ಯಾನಿಸಿದರು.

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ ಅನುದಾನ ಬಂದಿಲ್ಲ. 15ನೇ ಹಣಕಾಸು ಆಯೋಗ, ಫೆರಿಫೆರಲ್ ರಿಂಗ್ ರೋಡಿಗೆ ಹಣ ಬಂದಿಲ್ಲ. ಭದ್ರ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿ ಬಂದಿಲ್ಲ. ಬರಗಾಲದ ಪರಿಹಾರಕ್ಕೂ ಒಂದು ಪೈಸೆ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯಗಳ ಪಾಲನ್ನು ಚಾಚೂ ತಪ್ಪದೆ ಕೊಡಬೇಕು

ದೇಶದ ಸಾರ್ವಭೌಮತೆ ಇರಬೇಕು. ಆದರೆ ರಾಜ್ಯಗಳಿಗೆ ಅವರ ಪಾಲು ಕೊಡಬೇಕು. ಕೇಂದ್ರ ರಾಜ್ಯಗಳ ಪಾಲನ್ನು ಕೊಡುತ್ತಿಲ್ಲ. ನಮ್ಮಿಂದ 4 ಲಕ್ಷ ಕೋಟಿ ರೂಪಾಯಿ ತೆರಿಗೆ ವಸೂಲಿ ಮಾಡುವ ಕೇಂದ್ರ ಸರ್ಕಾರ ನಮಗೆ, ನಮ್ಮ ನಾಡಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ರಾಯಚೂರು ಜಿಲ್ಲೆಗೆ ಏಮ್ಸ್ ಸ್ಥಾಪನೆಗೆ ಒತ್ತಾಯಿಸಿದ್ದೆವು. ಪ್ರಯೋಜನ ಆಗಿಲ್ಲ. ಅಖಂಡ ಭಾರತ, ಅಖಂಡ ಕರ್ನಾಟಕ ಉಳಿಯಬೇಕು‌. ಇದಕ್ಕಾಗಿ ರಾಜ್ಯಗಳ ಪಾಲನ್ನು ಚಾಚೂ ತಪ್ಪದೆ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಮ್ಮ ಸಂಸದರಿಗೆ ಮೋದಿ ಮತ್ತು ಅಮಿತ್ ಶಾ ಕಂಡರೆ ಭಯ

ಸಿದ್ದರಾಮಯ್ಯ ಅವರ ಅವಧಿಯಲ್ಲಿ 15 ನೇ ಹಣಕಾಸು ಆಯೋಗದ ಮುಂದೆ ಪರಿಣಾಮಕಾರಿಯಾಗಿ ಮಂಡಿಸಿಲ್ಲ ಎಂದು ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಸರ್ಕಾರಕ್ಕೆ ಅನ್ಯಾಯವಾಗಿದ್ದರೆ ಅದು ಬಿಜೆಪಿ ಸರ್ಕಾರದಿಂದ. ಬರಗಾಲವಿದೆ ಎಂದು 26 ಸಂಸದರು ಕೇಂದ್ರದ ಮುಂದೆ ಹೇಳಿದ್ದಾರೆಯೇ? ಈ ಎಲ್ಲ ಸಂಸದರೂ ರಾಜ್ಯದ ಪರವಾಗಿ ಇವತ್ತಿನವರೆಗೂ ಬಾಯಿಯನ್ನೇ ಬಿಟ್ಟಿಲ್ಲ. ನಾವು ಕೇಳುತ್ತಿರುವುದು ಕರ್ನಾಟಕದ ಜನರಿಗಾಗಿ. ನಮಗೆ ಅನ್ಯಾಯ ಮಾಡಬೇಡಿ ಎಂದು ಸಂಸದರು ಹೇಳುತ್ತಲೇ ಇಲ್ಲ. ನಮ್ಮ ಸಂಸದರಿಗೆ ಮೋದಿ ಮತ್ತು ಅಮಿತ್ ಶಾ ಅವರನ್ನು ಕಂಡರೆ ಭಯ. ಅದಕ್ಕೆ ಅವರು ಕೇಳುವುದಿಲ್ಲ ಎಂದು ಹೇಳಿದರು.

ನಾವು ಭೇಟಿ ಮಾಡಿದಾಗ ಸಭೆ ನಡೆಸಿ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ ಅಮಿತ್ ಶಾ ಅವರು ಸಭೆಯನ್ನೇ ಕರೆದಿಲ್ಲ. ಕರ್ನಾಟಕದ ಬಗ್ಗೆ ಇವರಿಗೆ ಮಲತಾಯಿ ಧೋರಣೆಯಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ಇದನ್ನೂ ಓದಿ: Budget 2024: ಭಾರತ ವಿಭಜನೆ; ಡಿ.ಕೆ. ಸುರೇಶ್‌ ಹೇಳಿಕೆಯನ್ನು ಸಮರ್ಥಿಸಿಕೊಂಡ ಡಿಕೆಶಿ!

ಕರ್ನಾಟಕದ ಆರ್ಥಿಕತೆ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಆಯವ್ಯಯವೇ ಶ್ವೇತ ಪತ್ರ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ವಿಸ್ತಾರ ಸಂಪಾದಕೀಯ: ಸಾಲದ ಹೊರೆಯ ನಡುವೆ ಸರ್ವ ವಲಯಗಳಿಗೂ ಸಮಾನ ಹಂಚಿಕೆಯ ಬಜೆಟ್

Vistara Editorial: ಸಿಎಂ ಸಿದ್ದರಾಮಯ್ಯ ಅವರು ಸಾಲ ಮಾಡಿ ತುಪ್ಪ ತಂದರೂ ರಾಜ್ಯದ ಎಲ್ಲ ವಲಯಗಳ ಜನತೆಗೂ ಹದವಾಗಿ ಹಂಚಿದ್ದಾರೆ. ಅವರ ಘೋಷಣೆಗಳು ಹಾಗೂ ಭರವಸೆಗಳು ಸಕಾಲದಲ್ಲಿ ಕಾರ್ಯರೂಪದಲ್ಲಿ ಬರುವಂತಾಗಲಿ.

VISTARANEWS.COM


on

Vistara Editorial, Karnataka budget touches all sectors amid debt burden
Koo

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು 2024-25ರ ಬಜೆಟ್‌ ಅನ್ನು ಮಂಡಿಸಿದ್ದಾರೆ. ಈ ಸಾಲಿನ ಕರ್ನಾಟಕ ರಾಜ್ಯ ‌ ಆಯವ್ಯಯದ (Karnataka Budget 2024) ಒಟ್ಟು ಗಾತ್ರ 3,71,383 ಕೋಟಿ ರೂ. ಇದು 2023-24ನೇ ಸಾಲಿಗಿಂತ 44 ಸಾವಿರ ಕೋಟಿ ರೂ. ಹೆಚ್ಚು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇನ್ನಷ್ಟು ಆಕರ್ಷಕ ಯೋಜನೆಗಳನ್ನು ಪ್ರಕಟಿಸಿ ಮತದಾರರನ್ನು ಸೆಳೆಯಬಹುದು ಎಂದು ಹೇಳಲಾಗಿತ್ತಾದರೂ, ಸಿಎಂ ಹಾಗೇನೂ ಮಾಡಲು ಮುಂದಾಗಿಲ್ಲ. ಖಜಾನೆಯ ಸ್ಥಿತಿಗತಿ ಗಮನಿಸಿಕೊಂಡು, ಏರಿಸಬೇಕಾದಲ್ಲಿ ತೆರಿಗೆ ಏರಿಸಿ, ಸಾಲ ಮಾಡಬೇಕಾದಲ್ಲಿ ಸಾಲ ಮಾಡಿ, ಗ್ಯಾರಂಟಿ ಯೋಜನೆಗಳಿಗೂ ಹಣಕಾಸು ಹೊಂದಿಸಿಕೊಂಡು, ವಿತ್ತೀಯ ಶಿಸ್ತನ್ನು ಉಳಿಸಿಕೊಳ್ಳಲು ಸಾಕಷ್ಟು ಕಸರತ್ತು ಮಾಡಿ ಬಜೆಟನ್ನು ಸಿಎಂ ಮಂಡಿಸಿದ್ದಾರೆ. ಎಲ್ಲ ವಲಯಗಳನ್ನೂ ಈ ಬಜೆಟ್‌ ಸ್ಪರ್ಶಿಸಿದೆ(Vistara Editorial).

ಜನಪ್ರಿಯ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅಡಚಣೆ ಆಗದಂತೆ ತಾಳಮೇಳ ಕಾಯ್ದುಕೊಂಡಿದ್ದಾರೆ. ಒಟ್ಟಾರೆಯಾಗಿ ಐದೂ ಗ್ಯಾರಂಟಿಗಳಿಗೆ ಸೇರಿ 52,009 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಐದೂ ಗ್ಯಾರಂಟಿ ಯೋಜನೆಯಲ್ಲಿ ಸಿಂಹಪಾಲು ಗೃಹ ಲಕ್ಷ್ಮಿ ಯೋಜನೆಗೆ (28,608 ಕೋಟಿ ರೂ) ಖರ್ಚಾಗುತ್ತಿದ್ದರೆ, ಅತಿ ಕಡಿಮೆ ಅನುದಾನ (650 ಕೋಟಿ ರೂ.) ಯುವ ನಿಧಿಗೆ ಮೀಸಲಿಡಲಾಗಿದೆ. ಇಲಾಖೆಗಳಲ್ಲಿ ಶಿಕ್ಷಣ 44422 ಕೋಟಿ ರೂ., ಮಹಿಳಾ ಮತ್ತು ಮಕ್ಕಳ ಕಲ್ಯಾಣ 34406 ಕೋಟಿ ರೂ., ಇಂಧನ 23159 ಕೋಟಿ ರೂ., ಗ್ರಾಮೀಣಾಭಿವೃದ್ಧಿ 21160 ಕೋಟಿ ರೂ. ಹೆಚ್ಚಿನ ಅನುದಾನ ಪಡೆದಿವೆ.

ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂ.ಗಳಷ್ಟು ದಾಖಲೆಯ ಬೆಳೆ ಸಾಲ ವಿತರಣೆ ಗುರಿ, ಸರ್ಕಾರದ ಹಿಂದಿನ ಅವಧಿಯ ಬೆಳೆಸಾಲ ಮನ್ನಾ ಬಾಬ್ತು ಬಾಕಿ ಇರುವ 132 ಕೋಟಿ ರೂ. ಮೊತ್ತ ಡಿಸಿಸಿ ಬ್ಯಾಂಕುಗಳಿಗೆ ಬಿಡುಗಡೆ, ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ ಇವೆಲ್ಲವೂ ಕೃಷಿ ಕ್ಷೇತ್ರವನ್ನು ಬಲಿಷ್ಠಗೊಳಿಸುವ ಘೋಷಣೆಗಳಾಗಿವೆ. ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಒಂದು ಪ್ರತ್ಯೇಕ ಯೋಜನಾ ವಿಭಾಗ ಹಾಗೂ 2 ಉಪವಿಭಾಗಗಳ ಸ್ಥಾಪನೆ, ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ದೊಡ್ಡನಗರದ ಬಳಿಯ ವಿತರಣಾ ತೊಟ್ಟಿಯವರೆಗೆ ಪೂರ್ವ ಪರೀಕ್ಷಾರ್ಥ ಚಾಲನೆ, ಲಿಫ್ಟ್‌ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರುತ್ವ ಕಾಲುವೆಗೆ ನೀರು ಹರಿಸಲು ಕ್ರಮ, ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಯೋಜನೆಯಡಿಯ ಉಪಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ, ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಗುರಿ ಹೊಂದಿರುವುದು ನೀರಾವರಿಯ ಬೋನಸ್.

2024-25 ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಿರುವುದು ವಸತಿ ಹೊಂದುವ ಕನಸು ಹೊಂದಿದವರಿಗೆ ಭರವಸೆ. 2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ ಮಾಡುತ್ತಿರುವುದು ಶಿಕ್ಷಣ ಕ್ಷೇತ್ರದಲ್ಲಿ ಕುತೂಹಲಕಾರಿಯಾದ, ಕನ್ನಡ ಭಾಷೆಯ ಮೇಲೆ ದೂರಗಾಮಿ ಪರಿಣಾಮ ಬೀರಬಲ್ಲ ಹೆಜ್ಜೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್‌ ಘೋನ್‌ ಒದಗಿಸಲು ಕ್ರಮ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿ೦ದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ. ಅನುದಾನ, ಪರಿಶಿಷ್ಟ ಜಾತಿಯ 5,000 ಯುವಕ/ಯುವತಿಯರಿಗೆ ಡ್ರೋನ್‌ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ, ಹಿಂದುಳಿದ ವರ್ಗಗಳ 150 ಮೆಟ್ರಿಕ್‌ ನಂತರದ ಹೊಸ ವಸತಿನಿಲಯಗಳ ಪ್ರಾರಂಭ ಇವುಗಳು ದುರ್ಬಲ ವರ್ಗಗಳ ಸಬಲೀಕರಣಕ್ಕೆ ಹೆಚ್ಚಿನ ಮೌಲ್ಯ ಕಲ್ಪಿಸಬಲ್ಲ ಕ್ರಮಗಳಾಗಿವೆ. ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸು ಜಾರ ಸೇರಿದಂತೆ ಹಲವು ಭರವಸೆಗಳನ್ನು ನೀಡಲಾಗಿದೆ.

ಆದರೆ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಸಾಲ ಮಾಡಿರುವುದು ಕಂಡುಬರುತ್ತಿದೆ. 2024-25ರಲ್ಲಿ ರಾಜಸ್ವ ಕೊರತೆ 27,354 ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದೆ. ವಿತ್ತೀಯ ಕೊರತೆ 82,981 ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದ್ದು, ರಾಜ್ಯದ ಜಿ.ಎಸ್.ಡಿ.ಪಿಯ ಶೇ.2.95ರಷ್ಟಿದೆ. ರಾಜ್ಯದ ಒಟ್ಟು ಹೊಣೆಗಾರಿಕೆಯು 2024-25ರ ಅಂತ್ಯಕ್ಕೆ 6,65,095 ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದೆ. ಅಂದರೆ ಈಗ ರಾಜ್ಯ ಸರ್ಕಾರದ ಮೇಲೆ 6.65 ಲಕ್ಷ ಕೋಟಿ ರೂ. ಸಾಲ ಇದೆ. ಅಂದರೆ, ರಾಜ್ಯದಲ್ಲಿ 6.5 ಕೋಟಿ ಜನಸಂಖ್ಯೆ ಇದೆ ಎಂದು ಇಟ್ಟುಕೊಂಡರೆ ಪ್ರತಿಯೊಬ್ಬರ ಮೇಲೆ ಒಂದೊಂದು ಲಕ್ಷ ರೂ. ಸಾಲ ಇರುವಂತಾಗಿದೆ. ಇಷ್ಟು ದೊಡ್ಡ ಗಾತ್ರದ ಬಜೆಟ್‌ ಮಂಡನೆಗಾಗಿ ಸಿದ್ದರಾಮಯ್ಯ ಅವರು 1,05,246 ಕೋಟಿ ರೂ. ಸಾಲ ಮಾಡಬೇಕಾಗಿದೆ. ಆದರೆ ಇದು ವಿತ್ತೀಯ ಶಿಸ್ತನ್ನು ದಾಟಿ ಹೋಗಿಲ್ಲ. ಹೀಗಾಗಿ ರಾಜ್ಯಕ್ಕೆ ಆರ್ಥಿಕ ಅಪಾಯವೇನೂ ಎದುರಾಗುವ ಸ್ಥಿತಿಯಲ್ಲಿ ಇಲ್ಲ ಎಂಬ ವಾದ ಮುಖ್ಯಮಂತ್ರಿಯದು. ಸಾಲ ಮಾಡಿ ತುಪ್ಪ ತಂದರೂ ರಾಜ್ಯದ ಎಲ್ಲ ವಲಯಗಳ ಜನತೆಗೂ ಹದವಾಗಿ ಹಂಚಿದ್ದಾರೆ. ಈ ಮೇಲಿನ ಘೋಷಣೆಗಳು ಹಾಗೂ ಭರವಸೆಗಳು ಸಕಾಲದಲ್ಲಿ ಕಾರ್ಯರೂಪದಲ್ಲಿ ಬಂದಾಗ ಮಾತ್ರ ಅರ್ಥಪೂರ್ಣವಾಗಲಿವೆ.

ಈ ಸುದ್ದಿಯನ್ನೂ ಓದಿ: ವಿಸ್ತಾರ ಸಂಪಾದಕೀಯ: ಚುನಾವಣೆ ಬಾಂಡ್; ಪಾರದರ್ಶಕತೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

Continue Reading

ಬಜೆಟ್ 2024

Karnataka Budget 2024 : ಪರಿಶಿಷ್ಟ ಪಂಗಡದ 5 ಸಾವಿರ ಯುವಕರಿಗೆ ಡ್ರೋನ್ ಟ್ರೈನಿಂಗ್​​

Karnataka Budget 2024 : ಡ್ರೋನ್ ತರಬೇತಿ ನೀಡುವ ಮೂಲಕ ಪರಿಶಿಷ್ಟ ಪಂಗಡದ ಯುವಕರಿಗೆ ಔದ್ಯೋಗಿಕ ಅವಕಾಶಗಳನ್ನು ಸೃಷ್ಟಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

VISTARANEWS.COM


on

Drone Training
Koo

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಡಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಯುವಕರಿಗೆ ಅನೇಕ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ (Karnataka Budget 2024) ಪ್ರಕಟಿಸಿದ್ದಾರೆ. ಪ್ರಮುಖವಾಗಿ ಉದ್ಯೋಗಕ್ಕೆ ನೆರವಾಗುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಸಿದ್ದರಾಮಯ್ಯ ಅವರು ಪ್ರಕಟಿಸಿದ್ದಾರೆ. ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ 5,000 ಯುವಕ/ಯುವತಿಯರಿಗೆ ಡ್ರೋನ್ ತರಬೇತಿಯನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ 27,674 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗೆ 11,44೭ ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 39,12೧ ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಹೇಳಿದರು.

ವೈಜ್ಞಾನಿಕವಾಗಿ ಹಾಗೂ ಸಂವಿಧಾನಬದ್ಧವಾಗಿ ಪರಿಶಿಷ್ಟ ಜಾತಿಯ ಮೀಸಲು ವರ್ಗೀಕರಣ ಮಾಡುವುದು ಸರ್ಕಾರದ ಧ್ಯೇಯವಾಗಿದೆ. ಈ ಕುರಿತು ಭಾರತದ ಸಂವಿಧಾನದ ಅನುಚ್ಛೇದ 341ಕ್ಕೆ ಅಗತ್ಯ ತಿದ್ದುಪಡಿ ತಂದು, ಹೊಸದಾಗಿ ಕ್ಲಾಸ್​ -3 ಅನ್ನು ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂಬುದಾಗಿ ಬಜೆಟ್ ಭಾಷಣದಲ್ಲಿ ಸಿಎಂ ಹೇಳಿದರು.

ಇದನ್ನೂ ಓದಿ : Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಕ್ರೈಸ್‌ ಯೋಜನೆಯಡಿ 23 ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸೇರಿದ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಕಾಮಗಾರಿಗಳನ್ನು 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು| ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್‌ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದು ಎಂದು ನುಡಿದರು.

2023-24ನೇ ಸಾಲಿನಲ್ಲಿ 23 ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳನ್ನು 2024-25ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಮುಖಾಂತರ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಹೇಳಿದರು.

ಇದನ್ನೂ ಓದಿ : Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಸತಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಮಂಜೂರು ಮಾಡಲಾಗುವುದು. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ 100 ರೂ. ನಂತೆ ಹೆಚ್ಚಿಸಲಾಗುವುದು ಎಂದು ಹೇಳಿದರು.

35 ಕೋಟಿ ಕಾರ್ಪಸ್​ ಫಂಡ್​

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 35 ಕೋಟಿ ರೂ.ಗಳ ಕಾರ್ಪಸ್​​ ಫಂಡ್​ ಸ್ಥಾಪಿಸಲಾಗುವುದು. ಈ ನಿಧಿಯ ಬಡ್ಡಿ ಆಕರಣೆಯನ್ನು ರೋಗಿಗಳ ಚಿಕಿತ್ಸೆಯ ಅಗತ್ಯಕ್ಕನುಗುಣವಾಗಿ ನೀಡಲಾಗುವುದು ಎಂದು ಹೇಳಿದರು.

ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,750 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.

ಪರಿಶಿಷ್ಟ ಪಂಗಡಗಳ ಕಲ್ಯಾಣ

  1. ಪರಿಶಿಷ್ಟ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. ಈ ಸಚಿವಾಲಯಕ್ಕೆ ಅಗತ್ಯ ಹುದ್ದೆಗಳನ್ನು ಸೃಜಿಸಿ 2023-24ನೇ ಸಾಲಿನಿಂದ ಕಾರ್ಯಾರಂಭ ಮಾಡಲಾಗಿದೆ ಎಂದು ಬಜೆಟ್​ನಲ್ಲಿ ಘೋಷಿಸಿದರು.
  2. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳ ಹೆಸರನ್ನು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು ಎಂದು ಮರು ನಾಮಕರಣ ಮಾಡಲಾಗುವುದು. ಈ ಶಾಲೆಗಳ ಉನ್ನತೀಕರಣಕ್ಕೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
  3. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್‌ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್‌ ಪಡೆಯದಿದ್ದಲ್ಲಿ ಮಾಸಿಕ 25,000 ರೂ.ಗಳಂತೆ ಶಿಷ್ಯವೇತನ ನೀಡಲಾಗುವುದು ಎಂದು ಸಿಎಂ ಬಜೆಟ್ ವೇಳೆ ಘೋಷಿಸಿದ್ದಾರೆ.
Continue Reading

ಪ್ರಮುಖ ಸುದ್ದಿ

Karnataka Budget 2024 : ಮೆಟ್ರೊ 3ನೆ ಹಂತ ಸೇರಿದಂತೆ ಬೆಂಗಳೂರು ನಗರ ಸಂಚಾರ ವ್ಯವಸ್ಥೆಗೆ ಬಜೆಟ್​ನಲ್ಲಿ ಒತ್ತು

Karnataka Budget 2024 : ಮೆಟ್ರೊ, ಉಪನಗರ ರೈಲು ಹಾಗೂ ಬಿಎಂಟಿಗೆ ಉತ್ತೇಜನ ನೀಡುವ ಭರವಸೆಯನ್ನು ಬಜೆಟ್​ನಲ್ಲಿ ವ್ಯಕ್ತಪಡಿಸಲಾಗಿದೆ.

VISTARANEWS.COM


on

Namma Metro
Koo

ಬೆಂಗಳೂರು: ಬೆಂಗಳೂರು ನಗರದೊಳಗಿನ ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಅವರು ತಾವು ಮಂಡಿಸಿರುವ 15ನೇ ಬಜೆಟ್​ನಲ್ಲಿ (Karnataka Budget 2024) ಒತ್ತು ನೀಡಿದ್ದಾರೆ. ಪ್ರಮುಖವಾಗಿ ಸರ್ಜಾಪುರದಿಂದ ಹೆಬ್ಬಾಳದವರೆಗಿನ ನಮ್ಮ ಮೆಟ್ರೋ ಹಂತ 3 ಕರಡು ಸಿದ್ಧಪಡಿಸುವುದು, ಉಪನಗರ ರೈಲು ಯೋಜನೆಗೆ ಚುರುಕು, ಬಿಎಂಟಿಸಿ ಸಾರಿಗೆ ಉನ್ನತೀಕರಣಕ್ಕೆ ಆದ್ಯತೆ ನೀಡಲಾಗಿದೆ.

ನಮ್ಮ ಮೆಟ್ರೋ ರೈಲಿನ ಮೂಲಕ 8 ಲಕ್ಷಕ್ಕೂ ಹೆಚ್ಚಿನ ಜನರು ಪ್ರತಿನಿತ್ಯ ಪ್ರಯಾಣಿಸುತ್ತಿದ್ದಾರೆ. ಪ್ರಸ್ತುತ ಕಾರ್ಯಾಚರಣೆಯಲ್ಲಿರುವ 74 ಕಿ.ಮೀ. ಮಾರ್ಗದೊಂದಿಗೆ 2025ರ ಮಾರ್ಚ್‌ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ. ಮಾರ್ಗ ಸೇರ್ಪಡೆಯಾಗಲಿದೆ. ಮೆಟ್ರೋ ಯೋಜನೆ ಹಂತ-2 ಮತ್ತು 2ಎ ಯೋಜನೆಯಡಿ ಹೊರವರ್ತುಲ ರಸ್ತೆ- ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್‌ ವೇಳೆಗೆ ಸಿದ್ದವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತನ್ನ ಬಜೆಟ್‌ ಭಾಷಣದಲ್ಲಿ ಘೋಷಿಸಿದ್ದಾರೆ.

ಇದನ್ನೂ ಓದಿ :Karnataka Budget 2024 : ಸಿದ್ದರಾಮಯ್ಯ ಬಜೆಟ್​ ಎಕ್ಸ್​ ಟ್ರೆಂಡಿಂಗ್​ನಲ್ಲಿ ನಂಬರ್​ 1

ಮೆಟ್ರೊ ಹಂತ-3ರ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ಕೊಟ್ಟಿದೆ. ನಮ್ಮ ಮೆಟ್ರೋ ಹಂತ-3ಎ ರಡಿಯಲ್ಲಿ ಸರ್ಜಾಪುರದಿಂದ ಅಗರ, ಕೋರಮಂಗಲ ಡೈರಿ ವೃತ್ತ, ಮೇಖ್ರಿ ವೃತ್ತ ಮೂಲಕ ಹೆಬ್ಬಾಳವನ್ನು ಸಂಪರ್ಕಿಸಲಿದೆ.

ಉಪನಗರ ರೈಲು

ಬೆಂಗಳೂರು ಉಪನಗರ ರೈಲು ಯೋಜನೆಯಡಿ ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ವರೆಗಿನ ಕಾರಿಡಾರ್‌-2ರ ಸಿವಿಲ್‌ ಕಾಮಗಾರಿಗಳನ್ನು ವೇಗವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಕಾರಿಡಾರ್‌-4 ರ ಹೀಲಲಿಗೆಯಿಂದ ರಾಜಾನುಕುಂಟೆ ವರೆಗಿನ 46.2 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. ಐರೋಪ್ಯ ಹೂಡಿಕೆ ಬ್ಯಾಂಕ್‌ ಮತ್ತು ಜರ್ಮನಿಯ KFW ಬ್ಯಾಂಕುಗಳ ಜೊತೆಗೆ ಆರ್ಥಿಕ ನೆರವಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬಿಎಂಟಿಸಿಗೆ ಹೊಸ ಬಸ್‌ಗಳು

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರತಿದಿನ ಸರಾಸರಿ 42 ಲಕ್ಷ ಜನರಿಗೆ ಸೇವೆಯನ್ನು ಒದಗಿಸುತ್ತಿದ್ದು, ದೇಶದಲ್ಲಿಯೇ ಅತ್ಯುತ್ತಮ ನಗರ ಸಾರಿಗೆ ವ್ಯವಸ್ಥೆಗಳಲ್ಲಿ ಒಂದಾಗಿದೆ. ಮುಂದಿನ ದಿನಗಳಲ್ಲಿ 1,334 ಹೊಸ ಎಲೆಕ್ಟ್ರಿಕ್‌ ಬಸ್‌ಗಳು ಮತ್ತು 820 ಬಿಎಸ್-6 ಡೀಸೆಲ್‌ ಬಸ್ಸುಗಳನ್ನು ಬಿ.ಎಂ.ಟಿ.ಸಿ.ಗೆ ಸೇರ್ಪಡೆಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್​ ಬಾಷಣದಲ್ಲಿ ಹೇಳಿದ್ದಾರೆ.

ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಆ್ಯಪ್​

ಬಿಎಂಟಿಸಿಯಲ್ಲಿ ಮಹಿಳಾ ಸುರಕ್ಷತೆಯನ್ನು ಒಳಗೊಂಡ ವೆಹಿಕಲ್‌ ಟ್ರ್ಯಾಕಿಂಗ್‌ ಹೊಂದಿರುವ ಮೊಬೈಲ್‌ ಆಪ್‌ ಅನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜಪಾನ್‌ ಸರ್ಕಾರದ ಸಹಯೋಗದೊಂದಿಗೆ ಬೆಂಗಳೂರು ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಏರಿಯಾ ಟ್ರಾಫಿಕ್‌ ಸಿಗ್ನಲ್‌ ಸಿಸ್ಟಮ್‌ ಅನ್ನು ನಗರದ ಪ್ರಮುಖ 28 ಜಂಕ್ಷನ್‌ಗಳಲ್ಲಿ ಅಳವಡಿಸುವ ಮೂಲಕ ಟ್ರಾಫಿಕ್‌ ಸಿಗ್ನಲ್‌ ನಲ್ಲಿ ವಾಹನಗಳ ಸಂದಣಿಯನ್ನು ಶೇ.30ರಷ್ಟು ಹಾಗೂ ಸರಾಸರಿ ವಿಳಂಬವನ್ನು ಶೇ.13ರಷ್ಟು ಕಡಿಮೆಗೊಳಿಸಲಾಗುವುದು ಎಂದರು.

Continue Reading

ಕರ್ನಾಟಕ

Karnataka Budget 2024: ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಇಲ್ಲದ ಅಡ್ಡ ಕಸುಬಿ ಬಜೆಟ್‌ ಎಂದ ಆರ್.ಅಶೋಕ್‌

Karnataka Budget 2024: ಈ ಬಜೆಟ್ ಅತ್ಯಂತ ನೀರಸ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್. ಬಜೆಟ್ ಬಗೆಗಿನ ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಇದು‌ ‌’ಸಾಲರಾಮಯ್ಯನ ಸೋಗಲಾಡಿ’ ಬಜೆಟ್ ಆಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಟೀಕಿಸಿದ್ದಾರೆ.

VISTARANEWS.COM


on

R Ashoka
Koo

ಬೆಂಗಳೂರು: ಆರ್ಥಿಕ ತಜ್ಞ ಎಂದು ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ‘ಅಡ್ಡ ಕಸುಬಿ ಬಜೆಟ್‌ʼ (Karnataka Budget 2024) ಮಂಡಿಸಿದ್ದು, ಇದರಲ್ಲಿ ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಯಾವುದೂ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಕಟುವಾಗಿ ಟೀಕಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಅವರು, ಬಜೆಟ್ ತಯಾರಿಕೆ ಎನ್ನುವುದು ಗಂಭೀರ ಹಾಗೂ ಪವಿತ್ರವಾದ ಸಾಂವಿಧಾನಿಕ ಕರ್ತವ್ಯ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ನೋಡಿದರೆ ಇದೊಂದು ‘ಅಡ್ಡ ಕಸುಬಿʼ ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಇಲ್ಲ ಎಂದು ಹೇಳಿದ್ದಾರೆ.

ಸಾಧನೆಯ ಬಲದಿಂದಾಗಲೀ, ಅಭಿವೃದ್ಧಿ ಕೆಲಸಗಳಿಂದಾಗಲೀ, ಲೋಕಸಭೆ ಚುನಾವಣೆ ಎದುರಿಸುವುದು ಅಸಾಧ್ಯವೆಂದು ತಿಳಿದಿರುವ ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡನೆಯ ಪವಿತ್ರ ಸಾಂವಿಧಾನಿಕ ಕರ್ತವ್ಯವನ್ನು ಚುನಾವಣಾ ಭಾಷಣವಾಗಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಸಂವಿಧಾನಕ್ಕೆ ಮತ್ತು ಮತ ನೀಡಿ ಅಧಿಕಾರ ಕೊಟ್ಟ ಕನ್ನಡಿಗರಿಗೆ ಅಪಮಾನ ಎಸಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Karnataka Budget Session 2024: ಬೆಂಗಳೂರಲ್ಲಿ 6,000 ಕೋಟಿ ರೂ. ತೆರಿಗೆ ಸಂಗ್ರಹ ಟಾರ್ಗೆಟ್‌! ನಗರಾಭಿವೃದ್ಧಿಗೆ ಏನ್‌ ಮಾಡ್ತಾರೆ?

ತಲಾ 44,000 ರೂ. ಸಾಲಭಾಗ್ಯ

ತಮ್ಮ ಮೊದಲ ಅವಧಿಯಲ್ಲಿ 1 ಲಕ್ಷ ಕೋಟಿ ರೂ.ಗೂ ಹೆಚ್ಚು ಸಾಲ ಮಾಡಿ ಪ್ರತಿ ಪ್ರಜೆಯ ತಲೆಯ ಮೇಲೆ 44,000 ರೂ. ಗೂ ಅಧಿಕ ಸಾಲದ ಹೊರೆ ಹೇರಿದ್ದು ಮುಖ್ಯಮಂತ್ರಿ ಸಿದ್ದರಾಮ್ಯಯನವರ ದೊಡ್ಡ ಸಾಧನೆ. ಆ ಭಾಗ್ಯ, ಈ ಭಾಗ್ಯ ಎಂದು ರಾಜ್ಯದ ಜನತೆಯ ಮೇಲೆ ʼಸಾಲ ಭಾಗ್ಯʼ ಹೊರಿಸಿ, ಹಳಿ ತಪ್ಪಿದ್ದ ವಿತ್ತೀಯ ಶಿಸ್ತನ್ನು ನಂತರ ಬಂದ ಬಿಜೆಪಿ ಸರ್ಕಾರ ಕೋವಿಡ್ ಸಂಕಷ್ಟದ ಹೊರತಾಗಿಯೂ ಸರಿ ದಾರಿಗೆ ತಂದಿತ್ತು. ಆದರೆ ಈಗ ಎರಡನೇ ಅವಧಿಯಲ್ಲೂ ಸಿಎಂ ಸಿದ್ದರಾಮಯ್ಯನವರು ಕರ್ನಾಟಕವನ್ನು ದೊಡ್ಡ ಸಾಲದ ಸುಳಿಯಲ್ಲಿ ಸಿಲುಕಿಸಲು ಹೊರಟಿದ್ದಾರೆ. “ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು” ಎಂಬುದು ಈ ಸರ್ಕಾರದಲ್ಲಿ “ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ” ಎಂಬಂತಾಗಿದೆ ಎಂದರು.

ಕೇಂದ್ರದ ಮೇಲೆ ಆರೋಪ: ಬಜೆಟ್‌ ಪುಸ್ತಕದಲ್ಲಿ ಸುಳ್ಳುಗಳು

ಮೋದಿ ಸರ್ಕಾರದ ವಿರುದ್ಧ ದ್ವೇಷ ಭಾಷಣವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಸಂಪತ್ತಿನ ಶೇಖರಣೆ, ಅಸಮಾನತೆ ಎಂಬ ಹಳೆಯ ವಾದವನ್ನೇ ಜನರ ಮುಂದಿಟ್ಟಿದ್ದಾರೆ. ಹೀಗೆ ಹೇಳುತ್ತಲೇ ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂ. ಅನ್ನು ಬೇರೆ ಯೋಜನೆಗಳಿಗೆ ಬಳಸಿದ್ದಾರೆ. ಬೊಕ್ಕಸದಲ್ಲಿ ಹಣವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಪರೋಕ್ಷವಾಗಿ ಹೇಳಿದ್ದು, ಹಾಗೇನೂ ಇಲ್ಲ ಎಂದು ಬಜೆಟ್‌ನಲ್ಲಿ ಸಮರ್ಥಿಸಿಕೊಂಡಿದ್ದಾರೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

15ನೇ ಹಣಕಾಸು ಯೋಜನೆಯಡಿ ವಿಶೇಷ ಅನುದಾನ ಎಂಬ ಹಸಿ ಸುಳ್ಳನ್ನು ಬಜೆಟ್‌ ಪುಸ್ತಕದಲ್ಲಿ ಸೇರಿಸಿದ್ದಾರೆ. ಈ ರೀತಿಯ ಶಿಫಾರಸನ್ನು ಮಾಡಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅಲ್ಲದೆ ರಾಜ್ಯಕ್ಕೆ ಎಷ್ಟು ನಷ್ಟವಾಗಿದೆ ಎಂಬ ಹೊಸ ತಲೆ ಬುಡವಿಲ್ಲದ ಲೆಕ್ಕವನ್ನು ನೀಡಿದ್ದಾರೆ. 2004-2014 ರ ಅವಧಿಯಲ್ಲಿ ಯುಪಿಎ ನೀಡಿದ್ದು, 81,795 ಕೋಟಿ ರೂ. 2014-2024 ರ ಅವಧಿಯಲ್ಲಿ ಮೋದಿ ಸರ್ಕಾರ ನೀಡಿರುವುದು 2,82,791 ಕೋಟಿ ರೂ. ಅಂದರೆ ಈ ಪ್ರಮಾಣ 242% ಕ್ಕೂ ಅಧಿಕ ಎಂದು ಆರ್.ಅಶೋಕ ಸತ್ಯಾಂಶವನ್ನು ವಿವರಿಸಿದ್ದಾರೆ.

ಗ್ಯಾರಂಟಿ ಯೋಜನೆಯಿಂದ ಜನರ ಆದಾಯ ಹೆಚ್ಚಿದೆ ಎಂದಿದ್ದಾರೆ. ಒಂದು ಕಡೆ ವಿದ್ಯುತ್‌ ದರ ಏರಿಕೆ, ರೈತರ ಪಂಪ್‌ಸೆಟ್‌ಗೆ ವಿದ್ಯುತ್‌ ಕಡಿತ, ಕಿಸಾನ್‌ ಸಮ್ಮಾನ್‌ ನಿಧಿ ಸ್ಥಗಿತ, ವಿದ್ಯಾನಿಧಿ ಸ್ಥಗಿತ, ಹೈನುಗಾರರಿಗೆ ಹಾಲಿನ ಪ್ರೋತ್ಸಾಹಧನ ಸ್ಥಗಿತ, ಮುದ್ರಾಂಕ ಶುಲ್ಕ ದರ ಏರಿಕೆ ಮೊದಲಾದವುಗಳ ಮೂಲಕ ಜನರಿಗೆ ದರ ಏರಿಕೆಗಳ ಬರೆ ಹಾಕಿದ್ದಾರೆ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಈ ಬಜೆಟ್ ಅತ್ಯಂತ ನೀರಸ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್. ಬಜೆಟ್ ಬಗೆಗಿನ ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಇದು‌ ‌’ಸಾಲರಾಮಯ್ಯನ ಸೋಗಲಾಡಿ’ ಬಜೆಟ್ ಆಗಿದೆ ಎಂದು ಟೀಕಿಸಿದ್ದಾರೆ.

ಪದೇ ಪದೆ ಆರೋಪ

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ, ಮುಖ್ಯಮಂತ್ರಿಗಳು ವಿಧಾನಸಭೆಯ ಒಳಗೆ ಕಾಂಗ್ರೆಸ್‌ನ ಶಾಲು ಧರಿಸಿಕೊಂಡು ಬಜೆಟ್‌ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ನಿರಂತರವಾಗಿ ಆರೋಪ ಮಾಡಿ ತೆಗಳಿದ್ದಾರೆ. 15 ನೇ ಹಣಕಾಸು ಆಯೋಗವಿದ್ದಾಗ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದರು. ಅದಕ್ಕೆ ಅವರೇ ಒಪ್ಪಿಗೆ ಕೊಟ್ಟು ಈಗ ಅನ್ಯಾಯ ಆಗಿದೆ ಎಂದರೆ ಕುಣಿಯಲಾಗದವರು ನೆಲ ಡೊಂಕು ಎಂದಂತಾಗುತ್ತದೆ. ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಬೇಕು. ಇಡೀ ದೇಶಕ್ಕೆ ಇವರೊಬ್ಬರೇ ತೆರಿಗೆ ಪಾವತಿಸುವಂತೆ ಮಾತಾಡುತ್ತಾರೆ. ಕೇಂದ್ರ ಸರ್ಕಾರದಿಂದ ಅನುದಾನ ತರುವುದು ಹೇಗೆಂದು ಯೋಚಿಸದೆ ತೆಗಳುವ ಕೆಲಸ ಮಾಡಿರುವುದರಿಂದ ನಾವು ಸಭಾತ್ಯಾಗ ಮಾಡಿದ್ದೇವೆ ಎಂದರು.

ಹಿಂದೆ ಬಿಜೆಪಿ ಬಜೆಟ್‌ ಮಂಡನೆ ವೇಳೆ ಕಾಂಗ್ರೆಸ್‌ನವರು ಕಿವಿ ಮೇಲೆ ಹೂ ಇಟ್ಟುಕೊಂಡಿದ್ದರು. ಆದರೆ ಈಗ ನಾವು ಪ್ರತಿಭಟಿಸಿದ್ದನ್ನು ಸ್ಪೀಕರ್‌ ಮಾಧ್ಯಮಕ್ಕೆ ತಿಳಿಯದಂತೆ ಮಾಡಿದ್ದಾರೆ. ರಾಜ್ಯಕ್ಕೆ 14,000 ಕೋಟಿ ರೂ. ಆದಾಯ ಕಡಿಮೆಯಾದರೆ, ಕೇಂದ್ರದಿಂದ ಬರುವ ಅನುದಾನ 3,000 ಕೋಟಿ ರೂ. ಹೆಚ್ಚಿದೆ. ಸಿಎಂ ಸಿದ್ದರಾಮಯ್ಯನವರು 7 ಕೋಟಿ ಕನ್ನಡಿಗರ ಮೇಲೆ ತೆರಿಗೆಯ ಜೊತೆಗೆ ಸಾಲದ ಹೊರೆ ಹಾಕಿದ್ದಾರೆ. ಒಟ್ಟು ಸಾಲ 1 ಲಕ್ಷ ಕೋಟಿ ರೂ. ದಾಟಿದೆ. ಸಾಲವನ್ನು ಈ ಮಟ್ಟಕ್ಕೆ ದಾಟಿಸಿದ ಮೊದಲ ಮುಖ್ಯಮಂತ್ರಿ ಇವರೇ ಎಂದರು.

ಇದನ್ನೂ ಓದಿ | Karnataka Budget 2024: ಏಳನೇ ವೇತನ ಆಯೋಗ ಶಿಫಾರಸು ಜಾರಿ; ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ

ಲೂಟಿ ಹೊಡೆದ ಹಣವನ್ನು ಸಾಗಿಸಲು ಸುರಂಗ ಯೋಜನೆ ರೂಪಿಸಿದ್ದಾರೆ. ಬಿ.ಎಸ್‌.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಉತ್ತಮ ಅನುದಾನ ನೀಡಿದ್ದಾರೆ. ಆದರೆ ಈಗಿನ ಬಜೆಟ್‌ನಲ್ಲಿ ಬೆಂಗಳೂರಿಗೆ ಅನುದಾನವೇ ಇಲ್ಲ. ಇದು ಚುನಾವಣೆಗಾಗಿ ಮಾಡಿದ ಬೋಗಸ್‌ ಬಜೆಟ್‌ ಎಂದರು.

Continue Reading
Advertisement
Mango Juice Benefits
ಆರೋಗ್ಯ1 min ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Karnataka Weather Forecast
ಉಡುಪಿ1 min ago

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ1 hour ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

SSLC Result
ಪ್ರಮುಖ ಸುದ್ದಿ6 hours ago

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

Kangana Ranaut
ಪ್ರಮುಖ ಸುದ್ದಿ6 hours ago

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

heavy wind and rain damaged tree and electricity poles In Jholada Gudde village
ಶಿವಮೊಗ್ಗ6 hours ago

Karnataka Weather: ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೃಹತ್‌ ಮರ, ವಿದ್ಯುತ್‌ ಕಂಬ

ಪ್ರಮುಖ ಸುದ್ದಿ6 hours ago

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

IPL 2024
ಕ್ರಿಕೆಟ್6 hours ago

IPL 2024 : ಲಕ್ನೊ ವಿರುದ್ಧ 19 ರನ್ ವಿಜಯ, ಗೆಲುವಿನೊಂದಿಗೆ ಐಪಿಎಲ್​ ಅಭಿಯಾನ ಮುಗಿಸಿದ ಡೆಲ್ಲಿ

Team India
ಪ್ರಮುಖ ಸುದ್ದಿ7 hours ago

Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

Victoria Hospital
ಕರ್ನಾಟಕ7 hours ago

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 hour ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

Prajwal Revanna Case
ಕರ್ನಾಟಕ8 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ11 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202413 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202417 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ17 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು18 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌