ನವದೆಹಲಿ: ಫೆಬ್ರವರಿ 1ರಂದು ಮಧ್ಯಂತರ ಬಜೆಟ್(interim budget) ಮಂಡಿಸುವ ಮೂಲಕ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದಾಖಲೆ ಬರೆಯಲಿದ್ದಾರೆ(Union Finance Nirmala Sitharama). ಮೊರಾರ್ಜಿ ದೇಸಾಯಿ (Morarji Desai) ಅವರ ಬಳಿಕ ಸತತ 6 ಬಜೆಟ್ ಮಂಡಿಸುತ್ತಿರುವ ಎರಡನೇ ವಿತ್ತ ಮಂತ್ರಿ ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ. ಫೆ.1ರಂದು ಮಧ್ಯಂತರ ಬಜೆಟ್ ಮಂಡನೆಯಾದರೂ, ಲೋಕಸಭೆ ಚುನಾವಣೆ(Lok Sabha Election 2024) ಬಳಿಕ ರಚನೆಯಾಗುವ ಸರ್ಕಾರವು ಮತ್ತೆ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುತ್ತದೆ(Budget 2024).
ಫೆಬ್ರವರಿ 1 ರಂದು ತಮ್ಮ ಆರನೇ ಕೇಂದ್ರ ಬಜೆಟ್ ಮಂಡನೆಗೆ ಸಿದ್ಧವಾಗಿರುವ ಸೀತಾರಾಮನ್ ಅವರು, ಇದು ಪ್ರಾಥಮಿಕವಾಗಿ ಸಾರ್ವತ್ರಿಕ ಚುನಾವಣೆಗಳಿಗೆ ಮೊದಲು ನಡೆಯುವ “ವೋಟ್ ಆನ್ ಅಕೌಂಟ್” ಎಂದು ಹೇಳಿದರು. ಈ ಬಜೆಟ್ನಲ್ಲಿ ಯಾವುದೇ ಪ್ರಮುಖ ಘೋಷಣೆಗಳಿರುವ ಬಗ್ಗೆ ಮಾಹಿತಿ ನೀಡಲಿಲ್ಲ. ಮಧ್ಯಂತರ ಬಜೆಟ್ಗಳು ವಿಶಿಷ್ಟವಾಗಿ ಮಹತ್ವದ ಘೋಷಣೆಗಳನ್ನು ಒಳಗೊಂಡಿರುವುದಿಲ್ಲ ಮತ್ತು ಲೋಕಸಭೆ ಚುನಾವಣೆ ಬಳಿಕ ಅಧಿಕಾರಕ್ಕೆ ಬರುವ ಹೊಸ ಸರ್ಕಾರವು 2024ರ ಜುಲೈನಲ್ಲಿ ಸಮಗ್ರ ಬಜೆಟ್ ಮಂಡಿಸಲಾಗುತ್ತದೆ. ಆಗ ಮಂಡಿಸಲಾಗುವ ಬಜೆಟ್ನಲ್ಲಿ ವಿಶೇಷ ಘೋಷಣೆಗಳನ್ನು ನಿರೀಕ್ಷಿಸಬಹುದು ಎಂದು ಹೇಳಿದರು.
#WATCH | Delhi | The Halwa ceremony, marking the final stage of the Budget preparation process for Interim Union Budget 2024, was held in North Block, today, in the presence of Union Finance & Corporate Affairs Minister Nirmala Sitharaman and Union Minister of State for Finance… pic.twitter.com/wjoyI5QqQ3
— ANI (@ANI) January 24, 2024
Budget 2024: ಕೇಂದ್ರ ಬಜೆಟ್ನಲ್ಲಿ ಈ 5 ಪ್ರಮುಖ ವರ್ಗಗಳಿಗೆ ಸಿಗಲಿದೆ ಆದ್ಯತೆ
ಕೇಂದ್ರ ಸರ್ಕಾರವು (Central Government) ಫೆಬ್ರವರಿ 1ರಂದು ಮಧ್ಯಂತರ ಬಜೆಟ್ (Interim budget) ಮಂಡಿಸಲಿದೆ. ಈಗಾಗಲೇ ಈ ಬಗ್ಗೆ ಸಿದ್ಧತೆ ಆರಂಭವಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Union finance minister Nirmala Sitharaman) ಮಂಡಿಸಲಿರುವ ಈ ಚುನಾವಣಾ ಪೂರ್ವ ಬಜೆಟ್ ಮಹಿಳೆಯರು, ಬಡವರು, ಯುವಜನತೆ, ರೈತರು ಮತ್ತು ಬುಡಕಟ್ಟು ಜನಾಂಗದವರು ಸೇರಿ ಸಮಾಜದ ಐದು ಪ್ರಮುಖ ವರ್ಗಗಳ ಕಲ್ಯಾಣ ಯೋಜನೆಗಳಿಗೆ ಆದ್ಯತೆ ನೀಡಲಿದೆ (Budget 2024).
ಅಲ್ಲದೆ ಈ ವರ್ಗಗಳಿಗಾಗಿ ಅಸ್ತಿತ್ವದಲ್ಲಿರುವ ಯೋಜನೆಗಳ ಅನುದಾನ ಹೆಚ್ಚಾಗುವ ಸಾಧ್ಯತೆಯಿದೆ. ಜತೆಗೆ ಇನ್ನೂ ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯೂ ಇದೆ ಎಂದು ಊಹಿಸಲಾಗಿದೆ. “ಸಮಾಜದ ಈ ವರ್ಗಗಳಿಗೆ ಮೀಸಲಾಗಿರುವ ಯೋಜನೆಗಳಿಗೆ ಬಜೆಟ್ನಲ್ಲಿ ಒತ್ತು ನೀಡಲಾಗುವುದು. ಉದಾಹರಣೆಗೆ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ. ಈ ಕ್ಷೇತ್ರದತ್ತ ವಿಶೇಷ ಗಮನ ಹರಿಸಲಾಗುವುದು. ಯುವ ಜನತೆಯ ಆಶೋತ್ತರಗಳಿಗೆ ಸ್ಪಂದಿಸಲಾಗುವುದುʼʼ ಎಂದು ಮೂಲಗಳು ತಿಳಿಸಿವೆ.
2023-24ರಲ್ಲಿ ಶಾಲಾ ಶಿಕ್ಷಣ, ಸಾಕ್ಷರತೆ ಮತ್ತು ಉನ್ನತ ಶಿಕ್ಷಣವನ್ನು ನಿರ್ವಹಿಸುವ ಎರಡು ಇಲಾಖೆಗಳಿಗೆ ಕೇಂದ್ರ ಸರ್ಕಾರ 1.12 ಲಕ್ಷ ಕೋಟಿ ರೂ. ಮೀಸಲಿಟ್ಟಿದೆ. ಮಹಿಳಾ ನೇತೃತ್ವದ ಅಭಿವೃದ್ಧಿಯ ಗುರಿ ಹೊಂದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಈ ದೃಷ್ಟಿಕೋನವನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣದ ಪ್ರಮುಖ ಆಧಾರಸ್ತಂಭವಾಗಿ ಮಹಿಳೆಯರ ಕಲ್ಯಾಣವೂ ಇರಲಿದೆ. ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ ಮತದಾರರು ನಿರ್ಣಾಯಕರಾಗಿದ್ದರು. ಹೀಗಾಗಿ ಬೆಜೆಪಿ ಮತ್ತು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತರುವ ಪ್ರಸ್ತಾವ ಇಟ್ಟಿದ್ದವು.
ಅನುದಾನ ಹೆಚ್ಚಳ
ʼʼಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಯೋಜನೆಗಳನ್ನು ಜಾರಿಗೆ ತರುವ ಬುಡಕಟ್ಟು ಅಭಿವೃದ್ಧಿ ಸಚಿವಾಲಯಕ್ಕೆ 2023-24ರ ಸಾಲಿನಲ್ಲಿ ಅನುದಾನವನ್ನು ಹೆಚ್ಚಿಸಲಾಗಿತ್ತು. ಇದು 2024-25ರಲ್ಲಿಯೂ ಮುಂದುವರಿಯಲಿದೆ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 2023-24ರ ಬಜೆಟ್ನಲ್ಲಿ, ಬುಡಕಟ್ಟು ಅಭಿವೃದ್ಧಿ ಸಚಿವಾಲಯಕ್ಕೆ ಹಂಚಿಕೆಯು ಸುಮಾರು ಶೇ. 71ರಷ್ಟು ಹೆಚ್ಚಳವಾಗಿತ್ತು. ಅದರಲ್ಲಿ ಹೆಚ್ಚಿನ ಭಾಗವನ್ನು ಪರಿಶಿಷ್ಟ ಪಂಗಡದ ಮಕ್ಕಳಿಗೆ ಆರನೇ ತರಗತಿಯಿಂದ ಉಚಿತ ಶಿಕ್ಷಣವನ್ನು ಒದಗಿಸುವ ಏಕಲವ್ಯ ಮಾದರಿ ವಸತಿ ಶಾಲೆಗಳು (EMRS) ಯೋಜನೆಗೆ ವಿನಿಯೋಗಿಸಲಾಗುತ್ತದೆ. ಅಲ್ಲದೆ ಬುಡಕಟ್ಟು ಸಮುದಾಯಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಎಲ್ಲ ಅರ್ಹರಿಗೆ ತಲುಪುತ್ತಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ವಿಕಾಸ್ ಭಾರತ್ ಸಂಕಲ್ಪ ಯಾತ್ರೆಯನ್ನು ಆರಂಭಿಸಿದೆ. ಬುಡಕಟ್ಟು ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಝಾರ್ಖಂಡ್ನ ಖುಂಟಿ ಗ್ರಾಮದಲ್ಲಿ 2023ರ ನವೆಂಬರ್ 15ರಂದು ಮೋದಿ ಈ ಅಭಿಯಾನಕ್ಕೆ ಚಾಲನೆ ನೀಡಿದ್ದರು.
ರೈತರ ಕಲ್ಯಾಣ
ಶೇ. 33ಕ್ಕೂ ಹೆಚ್ಚಿನ ರೈತರು ಪಿಎಂ-ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪ್ರಯೋಜನ ಪಡೆಯುವ ನಿರೀಕ್ಷೆಯಿದೆ. ಈ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರತಿ ವರ್ಷ 6,000 ರೂ. ಒದಗಿಸಲಾಗುತ್ತದೆ. 2023-24ರಲ್ಲಿ ಕೇಂದ್ರವು ಈ ಯೋಜನೆಗೆ 60,000 ಕೋಟಿ ರೂ.ಗಳನ್ನು ನಿಗದಿಪಡಿಸಿದೆ. ಇದು 2024-25ರಲ್ಲಿ ಹೆಚ್ಚಾಗಲಿದೆ. ವಿವಿಧ ಸಚಿವಾಲಯಗಳಿಗೆ ಅನುದಾನವನ್ನು ಸಮರ್ಪಕವಾಗಿ ಹಂಚಿಕೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ಸುದ್ದಿಯನ್ನೂ ಓದಿ: Karnataka Budget 2024: ಫೆ.16ಕ್ಕೆ ರಾಜ್ಯ ಬಜೆಟ್ ಬೇಡ: ಮುಂದಕ್ಕೆ ಹಾಕುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ