Site icon Vistara News

Union Budget 2024: ಚಿನ್ನ, ಬೆಳ್ಳಿ ಖರೀದಿದಾರರಿಗೆ ಸಿಹಿ ಸುದ್ದಿ; ಕಸ್ಟಮ್ಸ್‌ ಸುಂಕ 6% ಇಳಿಸಿದ ಕೇಂದ್ರ

Union Budget 2024

Union Budget 2024: Custom duties on gold, silver reduced to 6%

ನವದೆಹಲಿ: ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಸತತ ಏರಿಕೆಯಾಗುತ್ತಿರುವುದರಿಂದ ಗ್ರಾಹಕರಿಗೆ ಭಾರಿ ಹೊರೆಯಾಗಿತ್ತು. ಆದರೆ, ಕೇಂದ್ರ ಬಜೆಟ್‌ನಲ್ಲಿ (Union Budget 2024) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಚಿನ್ನ ಖರೀದಿದಾರರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಹೌದು, ಚಿನ್ನ ಹಾಗೂ ಬೆಳ್ಳಿಯ ಮೇಲಿನ ಕಸ್ಟಮ್ಸ್‌ ಸುಂಕವನ್ನು ಶೇ.6ರಷ್ಟು ಇಳಿಕೆ ಮಾಡಲಾಗುವುದು ಎಂಬುದಾಗಿ ನಿರ್ಮಲಾ ಸೀತಾರಾಮನ್‌ ಅವರು ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಚಿನ್ನದ ಬೆಲೆಯು ಇಳಿಕೆಯಾಗಲಿದೆ ಎಂದು ತಿಳಿದುಬಂದಿದೆ.

ಇದಲ್ಲದೆ, ಪ್ಲಾಟಿನಮ್‌ ಮೇಲಿನ ಕಸ್ಟಮ್‌ ಸುಂಕವನ್ನು ಕೂಡ ಶೇ.6.4ರಷ್ಟು ಇಳಿಕೆ ಮಾಡಲಾಗಿದೆ. ಕಸ್ಟಮ್ಸ್‌ ಸುಂಕವನ್ನು ಇದಕ್ಕೂ ಮೊದಲು ಇಳಿಸಲಾಗಿದೆ. ಇನ್ನಷ್ಟು ಕಸ್ಟಮ್ಸ್‌ ಸುಂಕವನ್ನು ಇಳಿಸಲು ಪ್ರಸ್ತಾಪ ಇದೆ. ಅದರಂತೆ, ಔಷಧ, ಮೆಡಿಕಲ್‌ ಉಪಕರಣಗಳು, ಮೂರು ಕ್ಯಾನ್ಸರ್‌ ಔಷಧಿಗಳನ್ನು ಕಸ್ಟಮ್ಸ್‌ ಸುಂಕದಿಂದ ಮುಕ್ತಗೊಳಿಸಲಾಗಿದೆ. ಒಟ್ಟಾರೆಯಾಗಿ ಕೇಂದ್ರ ಸರ್ಕಾರವು ಶೇ.15ರಷ್ಟು ಕಸ್ಟಮ್ಸ್‌ ಸುಂಕವನ್ನು ಇಳಿಸಿದೆ. ಆಮದು ಮಾಡಿಕೊಳ್ಳುವ ಮೊಬೈಲ್‌, ಮೊಬೈಲ್ ಬಿಡಿ ಭಾಗಗಳ ಮೇಲಿನ ಸುಂಕವನ್ನೂ ಕೇಂದ್ರ ಸರ್ಕಾರ ಶೇ.15ರಷ್ಟು ಇಳಿಸಿದೆ ಎಂಬುದಾಗಿ ನಿರ್ಮಲಾ ಸೀತಾರಾಮನ್‌ ತಿಳಿಸಿದರು.

ಮೊಬೈಲ್‌ಗಳ ಬೆಲೆ ಅಗ್ಗ

ಭಾರತದಲ್ಲಿ ಮೊಬೈಲ್‌ ಉತ್ಪಾದನೆಯ ಏರಿಕೆಗೆ ಕೇಂದ್ರ ಸರ್ಕಾರ ಉತ್ತೇಜನ ನೀಡುತ್ತಿದೆ. ಹಾಗಾಗಿ, ಮೊಬೈಲ್‌ ಹಾಗೂ ಎಲೆಕ್ಟ್ರಿಕಲ್‌ ವಾಹನಗಳಿಗೆ ಅತ್ಯವಶ್ಯಕವಾದ ಲೀಥಿಯಂ ಇಯಾನ್‌ ಬ್ಯಾಟರಿಗಳ ಮೇಲಿನ ತೆರಿಗೆಯನ್ನು ಕೂಡ ಇಳಿಕೆ ಮಾಡಲಾಗಿದೆ. ಇದರಿಂದ ಭಾರತದಲ್ಲಿ ಮೊಬೈಲ್‌ ಹಾಗೂ ವಿದ್ಯುಚ್ಛಾಲಿತ ವಾಹನಗಳ ಉತ್ಪಾದನೆ ಜತೆಗೆ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಇವು ಸಿಗಲು ನೆರವಾಗಲಿದೆ ಎಂದು ಸಚಿವೆಯು ಮಾಹಿತಿ ನೀಡಿದರು.

ಹೂಡಿಕೆ ಮೇಲಿನ ತೆರಿಗೆ ಹೆಚ್ಚಳದ ಶಾಕ್

ಹೂಡಿಕೆ ಮೇಲಿನ ತೆರಿಗೆಯನ್ನು ಏರಿಕೆ ಮಾಡಿರುವುದು ಹೂಡಿಕೆದಾರರಿಗೆ ನುಂಗಲಾರದ ತುತ್ತಾಗಿದೆ. ಅಲ್ಪಾವಧಿ ಹೂಡಿಕೆ ಮೇಲಿನ ತೆರಿಗೆಯನ್ನು ಶೇ.15ರಿಂದ 20ಕ್ಕೆ ಏರಿಕೆ ಮಾಡಲಾಗಿದೆ. ಇನ್ನು, ದೀರ್ಘಾವಧಿ ಹೂಡಿಕೆ ಮೇಲಿನ ತೆರಿಗೆಯನ್ನು ಶೇ.10ರಿಂದ 12ಕ್ಕೆ ಏರಿಕೆ ಮಾಡಲಾಗಿದೆ. ಇದರಿಂದಾಗಿ ಷೇರುಪೇಟೆಯಲ್ಲಿ ಕುಸಿತವಾಗಿದೆ.

ಇದನ್ನೂ ಓದಿ: Union Budget 2024: ಬಜೆಟ್‌ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್‌ಗೆ ಮೊಸರು ಸಕ್ಕರೆ ತಿನ್ನಿಸಿದ ರಾಷ್ಟ್ರಪತಿ

Exit mobile version