ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ (Union Budget 2024) ಯುವಕರು ಹಾಗೂ ರೈತರಿಗೆ ಭರ್ಜರಿ ಘೋಷಣೆ ಮಾಡಿರುವ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ತೆರಿಗೆ ವಿಚಾರದಲ್ಲೂ ಪ್ರಮುಖ ಘೋಷಣೆ ಮಾಡಿದ್ದಾರೆ. ಅದರಲ್ಲೂ, ತೆರಿಗೆದಾರರಿಗೆ ಸ್ಟಾಂಡರ್ಡ್ ಡಿಡಕ್ಷನ್ 50 ಸಾವಿರ ರೂ.ನಿಂದ 75 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ, ಹಳೆಯ ತೆರಿಗೆ ಪದ್ಧತಿಯನ್ನು ರದ್ದುಗೊಳಿಸಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಈ ಸುದ್ದಿಯನ್ನು ನಿರ್ಮಲಾ ಸೀತಾರಾಮನ್ ಅವರು ಅಲ್ಲಗಳೆದಿದ್ದಾರೆ.
“ಹಳೆಯ ತೆರಿಗೆ ಪದ್ಧತಿಯನ್ನು ರದ್ದುಗೊಳಿಸುವ ಕುರಿತು ಇದುವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಏಕಾಏಕಿ ಹಳೆಯ ತೆರಿಗೆ ಪದ್ಧತಿಯನ್ನು ತೆಗೆದುಹಾಕಲು ಕೂಡ ಆಗುವುದಿಲ್ಲ. ಹಳೆಯ ತೆರಿಗೆ ಪದ್ಧತಿಯನ್ನು ಇನ್ನಷ್ಟು ಸುಲಭಗೊಳಿಸುವ ದಿಸೆಯಲ್ಲಿ ಹೊಸ ತೆರಿಗೆ ಪದ್ಧತಿಯನ್ನು ಪರಿಚಯಿಸಲಾಗಿದೆ. ಆದರೆ, ಹಳೆಯ ತೆರಿಗೆ ಪದ್ಧತಿಯನ್ನು ತೆಗೆದುಹಾಕುವ ನಿರ್ಧಾರ ತೆಗೆದುಕೊಂಡಿಲ್ಲ” ಎಂದು ಬಜೆಟ್ ಮಂಡನೆ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ತೆರಿಗೆ ಉಳಿತಾಯ ಲೆಕ್ಕಾಚಾರ ಹೀಗಿದೆ…
Updated Income Tax Calculation for 2024-25
— fincalc-blog.in (@FincalcTV) July 23, 2024
– New Tax Regime Standard Deduction = 75K
– Old Tax Regime Standard Deduction = 50K
– New Tax Regime Revised Slab Rates
– No Other deductions considered for simplicity#Budget2024 #IncomeTax Disappointing pic.twitter.com/KQH4bvOyZ6
ಹೊಸ ತೆರಿಗೆ ಪದ್ಧತಿಯಲ್ಲಿ ಸ್ಟಾಂಡರ್ಡ್ ಡಿಡಕ್ಷನ್, ಹೊಸ ಸ್ಲ್ಯಾಬ್‌ಗಳ ಪರಿಚಯದಿಂದ ತೆರಿಗೆದಾರರು 17,500 ರೂ. ತೆರಿಗೆ ಉಳಿತಾಯ ಮಾಡಬಹುದಾಗಿದೆ ಎಂದು ಕೇಂದ್ರ ಸಚಿವೆ ತಿಳಿಸಿದ್ದಾರೆ. ಇನ್ನು, ಎನ್‌ಜಿಒ ಸೇರಿ ಯಾವುದೇ ರೀತಿಯ ದಾನ ಮಾಡುವವರಿಗೆ ಎರಡು ಸ್ಲ್ಯಾಬ್ ಬದಲು, ಒಂದು ಸ್ಲ್ಯಾಬ್ ಮಾಡಲಾಗಿದೆ. ಟಿಡಿಎಸ್ ನಿಯಮಗಳನ್ನೂ ಸುಲಭಗೊಳಿಸಲು ತೀರ್ಮಾನಿಸಲಾಗಿದೆ. ಟಿಡಿಎಸ್ ಮರುಪಾವತಿ ವಿಳಂಬವಾಗುವುದನ್ನೂ ತಡೆಯಲು ಕ್ರಮ ತೆಗೆದುಕೊಳ್ಳಲಾಗಿದೆ. ಇ-ಕಾಮರ್ಸ್ ಮೇಲಿನ ತೆರಿಗೆಯನ್ನೂ ಇಳಿಸಲು ತೀರ್ಮಾನಿಸಲಾಗಿದೆ. ಆದರೆ, ಮ್ಯೂಚುವಲ್ ಫಂಡ್ ಮೇಲಿನ ಹೂಡಿಕೆಗೆ ತೆರಿಗೆ ವಿನಾಯಿತಿ ಇರುವುದಿಲ್ಲ ಎಂಬುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಕಸ್ಟಮ್ಸ್ ತೆರಿಗೆ ಇಳಿಸಿದ ಕೇಂದ್ರ
ಜಿಎಸ್‌ಟಿಯು ಬಡವರ ಮೇಲಿನ ತೆರಿಗೆ ಹೊರೆಯನ್ನು ಇಳಿಸಿದೆ. ಜಿಎಸ್‌ಟಿಯನ್ನು ಇನ್ನಷ್ಟು ಸರಳಗೊಳಿಸಲು ಕೇಂದ್ರ ಸರ್ಕಾರ ತಿಳಿಸಿದೆ. ಕಸ್ಟಮ್ಸ್ ಸುಂಕವನ್ನು ಇದಕ್ಕೂ ಮೊದಲು ಇಳಿಸಲಾಗಿದೆ. ಇನ್ನಷ್ಟು ಕಸ್ಟಮ್ಸ್ ಸುಂಕವನ್ನು ಇಳಿಸಲು ಪ್ರಸ್ತಾಪ ಇದೆ. ಅದರಂತೆ, ಔಷಧ, ಮೆಡಿಕಲ್ ಉಪಕರಣಗಳು, ಮೂರು ಕ್ಯಾನ್ಸರ್ ಔಷಧಿಗಳನ್ನು ಕಸ್ಟಮ್ಸ್ ಸುಂಕದಿಂದ ಮುಕ್ತಗೊಳಿಸಲಾಗಿದೆ. ಒಟ್ಟಾರೆಯಾಗಿ ಕೇಂದ್ರ ಸರ್ಕಾರವು ಶೇ.15ರಷ್ಟು ಕಸ್ಟಮ್ಸ್ ಸುಂಕವನ್ನು ಇಳಿಸಿದೆ. ಆಮದು ಮಾಡಿಕೊಳ್ಳುವ ಮೊಬೈಲ್, ಮೊಬೈಲ್ ಭಾಗಗಳ ಮೇಲಿನ ಸುಂಕವನ್ನೂ ಕೇಂದ್ರ ಸರ್ಕಾರ ಇಳಿಸಿದೆ.
ಇದನ್ನೂ ಓದಿ: Union Budget 2024 : ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ‘ಚೊಂಬು’ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್