ಈ ಬಾರಿ ಚುನಾವಣೆಗಾಗಿ ಬೆಳಗಾವಿ, ಮಂಡ್ಯ, ಹುಬ್ಬಳ್ಳಿಯಲ್ಲಿ ರೋಡ್ ಶೋ ನಡೆಸಿದ್ದಾರೆ. ಆದರೆ ಈ ಬಾರಿ ದಾವಣಗೆರೆಯಲ್ಲಿ ಕಾರ್ಯಕ್ರಮದ ಒಳಗೆಯೇ ರೋಡ್ ಶೋ ನಡೆಸಿದ್ದು ವಿಶೇಷವಾಗಿತ್ತು.
ಕಳೆದ ವರ್ಷದ ನವೆಂಬರ್ 18ರಂದು ಆರಂಭಗೊಂಡಿರುವ ಜೆಡಿಎಸ್ ಪಂಚರತ್ನ ರಥಯಾತ್ರೆಯ (JDS Pancharatna yatre) ಸಮಾರೋಪ ಮಾ. 26ರಂದು ಮೈಸೂರಿನಲ್ಲಿ ನಡೆಯಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ದಾವಣಗೆರೆಯು ಟೆಕ್ಸ್ಟೈಲ್ ಕೇಂದ್ರವಾಗಿದೆ. ದೇಶದಲ್ಲಿ ಏಳು ಮೆಗಾ ಟೆಕ್ಸ್ಟೈಲ್ ಹಬ್ ಮಾಡುತ್ತಿದ್ದೇವೆ. ಇದರಲ್ಲಿ ಒಂದು ಕರ್ನಾಟಕದಲ್ಲಿ ಆಗಲಿದೆ ಎಂದು ಪ್ರಧಾನಿ ( Modi in Karnataka) ಮೋದಿ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಐದು ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ (Congress ticket) ಪ್ರಕಟಿಸಲಾಗಿದೆ. ಇವರಲ್ಲಿ ಮೂವರು ಹೊಸಬರು ಮತ್ತು ಯುವಕರು. ಇನ್ನುಳಿದ ಮೂರು ಕ್ಷೇತ್ರಗಳಲ್ಲಿ ಕಗ್ಗಂಟಿದೆ.
ಅಭಿವೃದ್ಧಿ ಹೊಂದಿದ ಕರ್ನಾಟಕಕ್ಕಾಗಿ ಡಬಲ್ ಇಂಜಿನ್ ಸರ್ಕಾರಕ್ಕೆ ಕರ್ನಾಟಕದ ಜನರ ಆಶೀರ್ವಾದವಿದೆ ಎನ್ನುವುದು ಕಾರ್ಯಕ್ರಮವನ್ನು ನೋಡಿದರೆ ತಿಳಿಯುತ್ತದೆ ಎಂದು ಮೋದಿ (Modi in Karnataka) ಶ್ಲಾಘಿಸಿದರು.
ದೇಶದಲ್ಲಿ ಎಲ್ಲರಿಗೂ ಒಂದು ಕಾನೂನು, ರಾಹುಲ್ ಗಾಂಧಿಗೆ ಬೇರೊಂದು ಕಾನೂನು ಎನ್ನುವುದಿಲ್ಲ ಎಂದು ಹೇಳುವ ಮೂಲಕ ಶಿಕ್ಷೆಯನ್ನು, ಅನರ್ಹತೆಯನ್ನು ಸಮರ್ಥಿಸಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai).
ರಾಜ್ಯದಲ್ಲಿ ಮುಸ್ಲಿಮರಿಗೆ ಇದ್ದ ಮೀಸಲಾತಿಯನ್ನು (Reservation) ರದ್ದುಪಡಿಸಿದ್ದು ಅವೈಜ್ಞಾನಿಕ ನಡೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಇದನ್ನು ಯಾರಾದರೂ ಕೋರ್ಟ್ನಲ್ಲಿ ಪ್ರಶ್ನಿಸಬಹುದು ಎಂದಿದ್ದಾರೆ.