ಸಿನಿಮಾ
ಪ್ರೇಮ ಕತೆಯ ಸುಳಿವು ನೀಡಿದೆ ʼಸಪ್ತ ಸಾಗರದಾಚೆ ಎಲ್ಲೋʼ ಟೀಸರ್
ಹೇಮಂತ್ ನಿರ್ದೇಶನದ ʼಸಪ್ತ ಸಾಗರದಾಚೆ ಎಲ್ಲೋʼ ಚಿತ್ರದ ಟೀಸರ್ ಕುತೂಹಲ ಮೂಡಿಸುತ್ತದೆ. ಈ ಚಿತ್ರಕ್ಕಾಗಿ ರಕ್ಷಿತ್ ಶೆಟ್ಟಿ ತಮ್ಮ ತೂಕದಲ್ಲಿ 20 ಕೆ.ಜಿಯಷ್ಟು ಇಳಿಸಿಕೊಂಡಿದ್ದರು.
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ʼಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ ಟೀಸರ್ ರಿಲೀಸ್ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ʼ777 ಚಾರ್ಲಿʼ ಕೂಡ ಬಿಡುಗಡೆ ಆಗುತ್ತಿದೆ. ʼಸಪ್ತ ಸಾಗರದಾಚೆ ಎಲ್ಲೋʼನಲ್ಲಿ ರಕ್ಷಿತ್ ಶೆಟ್ಟಿ ಅವರು ಡಿಫರೆಂಟ್ ಲುಕ್ ಮೂಲಕ ಮೆಚ್ಚುಗೆ ಗಳಿಸಿದ್ದಾರೆ. ಮನು–ಪ್ರಿಯಾ ಹೆಸರಿನ ನಾಯಕ ಮತ್ತು ನಾಯಕಿಯ ಪಾತ್ರಗಳು ಗಮನ ಸೆಳೆಯುತ್ತವೆ.
ನಾಯಕಿ ಟೇಪ್ ರೆಕಾರ್ಡರ್ ಗೆ ಕ್ಯಾಸೆಟ್ ಹಾಕುವ ಮೂಲಕ ಟೀಸರ್ ಆರಂಭವಾಗುತ್ತದೆ. ಚಿತ್ರದ ಕಥೆಯು ಇದು ಇಬ್ಬರ ಪ್ರೀತಿಯ ಜರ್ನಿ ಎಂಬ ಸುಳಿವು ಕೊಡುತ್ತದೆ. ಕಣ್ಣೀರಿನ ಕಥೆಯೊಂದಿಗೆ ಶುರುವಾಗುವ ಟೀಸರ್ ರಕ್ತದ ದೃಶ್ಯವನ್ನೂ ಹಾದು ಹೋಗುತ್ತದೆ. ಹಾಗಾಗಿ ಇದರಲ್ಲಿ ಸಸ್ಪೆನ್ಸ್ ಕಥಾ ಹಂದರ ಹೊಂದಿರುವ ಲಕ್ಷಣವೂ ಕಾಣುತ್ತದೆ.
ಇದನ್ನೂ ಓದಿ | ಸಪ್ತ ಸಾಗರದಾಚೆ ಎಲ್ಲೋ: ಸಿಂಪಲ್ ಸ್ಟಾರ್ Heavy Look ರಿವೀಲ್
ರುಕ್ಮಿಣಿ ವಸಂತ್ ಕೂಡ ಡಿಫರೆಂಟ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಈ ಸಿನಿಮಾಗಾಗಿ 20 ಕೆ. ಜಿ ತೂಕವನ್ನು ಹೆಚ್ಚಿಸಿಕೊಂಡಿದ್ದರು. ರಕ್ಷಿತ್ ಶೆಟ್ಟಿ ಮೂಲಕ ಎರಡು ಕೋನಗಳಲ್ಲಿ ಈ ಸಿನಿಮಾದ ಕತೆ ಬಿಚ್ಚಿಕೊಳ್ಳಲಿದೆಯಾ ಎಂಬ ಪ್ರಶ್ನೆ ಟೀಸರ್ ವೀಕ್ಷಕರಲ್ಲಿ ಮೂಡುತ್ತದೆ. ರಕ್ಷಿತ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಈ ಟೀಸರ್ ಅನ್ನು ಶೇರ್ ಮಾಡಿ ಖುಷಿ ವ್ಯಕ್ತಪಡಿಸಿದ್ದಾರೆ.
ಹೇಮಂತ್ ರಾವ್ ಈ ಚಿತ್ರದ ನಿರ್ದೇಶಕರು. ಇವರ ʼಕವಲುದಾರಿʼ ಮತ್ತು ʼಗೋಧಿ ಬಣ್ಣ ಸಾಧಾರಣ ಮೈಕಟ್ಟುʼ ಚಿತ್ರಗಳು ಸೂಪರ್ ಹಿಟ್ ಆಗಿದ್ದವು. ರಕ್ಷಿತ್ ಅಭಿಮಾನಿಗಳು ಈ ಚಿತ್ರದ ಬಗ್ಗೆ ಭಾರಿ ನಿರೀಕ್ಷೆ ಇರಿಸಿದ್ದಾರೆ.
ರುಕ್ಮಿಣಿ ವಸಂತ್ ʼಬಾನ ದಾರಿಯಲ್ಲಿʼ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿ ಇದ್ದು, ರಕ್ಷಿತ್ ʼ777 ಚಾರ್ಲಿʼ ಸಿನಿಮಾ ಪ್ರಮೋಷನ್‌ನಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ |Banadariyalli : ರುಕ್ಮಿಣಿ ವಸಂತ್ ಫಸ್ಟ್ ಲುಕ್ ರಿಲೀಸ್
ಬಾಲಿವುಡ್
Aahana Kumra: ಐಫಾ ಕಾರ್ಯಕ್ರಮದಲ್ಲಿ ಡ್ರೆಸ್ ಜಾರದಂತೆ ಹಿಡಿದುಕೊಂಡ ನಟಿ ಅಹಾನಾ ಕುಮ್ರಾ; ವಿಡಿಯೊ ವೈರಲ್
ನಟಿ ಅಹಾನಾ ಕುಮ್ರಾ (Aahana Kumra) ಅವರು ದುಬೈನಲ್ಲಿ ಐಫಾ ಕಾರ್ಯಕ್ರಮದ ಗ್ರೀನ್ ಕಾರ್ಪೆಟ್‌ನಲ್ಲಿ ಭಾಗವಹಿಸಿದ್ದು, ಅಲ್ಲಿ ಅವರು ತೊಟ್ಟ ಉಡುಗೆಯಿಂದ ಇರಿಸುಮುರಿಸಾಗಿದ್ದಾರೆ. ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ದುಬೈ: ಬಾಲಿವುಡ್‌ನ ಹಲವು ಗಣ್ಯರು ಸದ್ಯ ಅರಬ್ ಸಂಯುಕ್ತ ಸಂಸ್ಥಾನದ ದುಬೈನಲ್ಲಿ ನಡೆಯುತ್ತಿರುವ ಐಫಾ 2023 (IIFA awards 2023) ಕಾರ್ಯಕ್ರಮದಲ್ಲಿದ್ದಾರೆ. ಅದರಂತೆ ನಟಿ ಅಹಾನಾ ಕುಮ್ರಾ (Aahana Kumra) ಕೂಡ ಇದೇ ಕಾರ್ಯಕ್ರಮದಲ್ಲಿದ್ದಾರೆ. ಈ ವೇಳೆ ನಟಿ ತೊಟ್ಟ ಉಡುಗೆ ಅವರಿಗೆ ಸರಿಯಾಗದೆ ಜಾರುತ್ತಿದ್ದು, ನಟಿ ಅದನ್ನು ಜಾರದಂತೆ ಹಲವು ಬಾರಿ ಹಿಡಿದುಕೊಂಡಿದ್ದು ಕಂಡುಬಂದಿದೆ.
ಹೌದು. ಐಫಾ ಕಾರ್ಯಕ್ರಮದ ಗ್ರೀನ್ ಕಾರ್ಪೆಟ್ ಕಾರ್ಯಕ್ರಮದಲ್ಲಿ ಅಹಾನಾ ಭಾಗಿಯಾಗಿದ್ದರು. ಅದರಲ್ಲಿ ಅವರು ಆಫ್ ಶೋಲ್ಡರ್ ಇರುವ ಕಪ್ಪು ಬಣ್ಣದ ಗೌನ್ ಅನ್ನು ತೊಟ್ಟಿದ್ದರು. ಅವರು ಮಾಧ್ಯಮದವರೆದುರು ಕ್ಯಾಮರಾಗಳಿಗೆ ಫೋಸ್ ಕೊಡುವಾಗ ಹಲವು ಬಾರಿ ಡ್ರೆಸ್ ಜಾರಿದೆ. ಹಾಗಾಗಿ ನಟಿ ಅದನ್ನು ಎಳೆದುಕೊಂಡು ಸರಿ ಮಾಡಿಕೊಂಡು ಫೋಸ್ ಕೊಟ್ಟಿದ್ದಾರೆ. ಈ ದೃಶ್ಯಗಳಿರುವ ವಿಡಿಯೊಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದನ್ನೂ ಓದಿ: Aahana s Kumra | ಸ್ಟೈಲಿಶ್ ಪರ್ಪಲ್ ಡ್ರೆಸ್‌ನಲ್ಲಿ ಮಿಂಚಿದ ಅಹಾನಾ ಕುಮ್ರಾ
ಅಂದ ಹಾಗೆ ನಟಿ ಕಳೆದ ವಾರ ಕಾರ್ಯಕ್ರಮದವೊಂದರಲ್ಲಿ ಭಾಗಿಯಾಗಿದ್ದಾ ಅಭಿಮಾನಿಯೊಬ್ಬರಿಗೆ ಸಿಟ್ಟಿನಿಂದ ಬೈದಿದ್ದರು. ನಟಿ ಜತೆ ಫೋಟೋ ತೆಗೆಸಿಕೊಳ್ಳಲೆಂದು ಬಂದ ಅಭಿಮಾನಿಯೊಬ್ಬರು ಆಕೆಯ ಸೊಂಟಕ್ಕೆ ಕೈ ಹಾಕಿದ್ದರು. ಇದರಿಂದ ಸಿಟ್ಟಿಗೆದ್ದ ನಟಿ, “ನನ್ನನ್ನು ಮುಟ್ಟಬೇಡಿ” ಎಂದು ಜೋರಾಗಿಯೇ ಹೇಳಿದ್ದರು. ಆ ವಿಡಿಯೊ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ವೈರಲ್ ಆಗಿತ್ತು.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಆಕೆ, “ನಾವು ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಓಪನ್ ಆಗಿ ಇರುತ್ತೇವೆ ಎನ್ನುವ ಕಾರಣಕ್ಕೆ ನಮ್ಮೊಂದಿಗೆ ಏನು ಬೇಕಾದರೂ ಮಾಡಬಹುದು ಎಂದು ಕೆಲವರು ಅಂದುಕೊಂಡುಬಿಡುತ್ತಾರೆ. ಆದರೆ ಎಲ್ಲದಕ್ಕೂ ಗಡಿ ಇದ್ದೇ ಇರುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ನಮ್ಮ ಸುರಕ್ಷತೆ ಬಹುಮುಖ್ಯ. ಅದಕ್ಕಾಗಿ ಬೌನ್ಸರ್‌ಗಳನ್ನು ನೇಮಿಸಬೇಕು” ಎಂದು ಹೇಳಿದ್ದರು.
South Cinema
Keerthy Suresh: ಹೊಂಬಾಳೆ ಫಿಲ್ಮ್ಸ್ ಮೊದಲ ತಮಿಳು ಚಿತ್ರದ ಶೂಟಿಂಗ್ ಮುಕ್ತಾಯ!
Keerthy Suresh: ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಕೊನೆ ದಿನ ಸೆಟ್‌ನಲ್ಲಿ ಕೇಕ್ ಕತ್ತರಿಸಿ ಚಿತ್ರತಂಡ ಖುಷಿಪಟ್ಟಿದೆ. ಆ ಫೋಟೊಗಳನ್ನು ಹೊಂಬಾಳೆ ಸಂಸ್ಥೆ ಹಂಚಿಕೊಂಡಿದೆ.
ಬೆಂಗಳೂರು: ನವರಸ ನಾಯಕ ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟೋರ್ಸ್ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ನಿರ್ಮಾಣದ ಮೊದಲ ತಮಿಳು ಚಿತ್ರ ‘ರಘುತಾತʼ ಚಿತ್ರೀಕರಣ ಪೂರ್ಣಗೊಂಡಿದೆ. ಕೀರ್ತಿ ಸುರೇಶ್ (Keerthy Suresh) ಈ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಕೊನೆಯ ದಿನ ಸೆಟ್‌ನಲ್ಲಿ ಕೇಕ್ ಕತ್ತರಿಸಿ ಚಿತ್ರತಂಡ ಖುಷಿಪಟ್ಟಿದೆ. ಆ ಫೋಟೊಗಳನ್ನು ಹೊಂಬಾಳೆ ಸಂಸ್ಥೆ ಹಂಚಿಕೊಂಡಿದೆ.
ಈ ಹಿಂದೆ, ‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸಿರೀಶ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಈ ಸಿನಿಮಾಗಿದೆ. ‘ರಘುತಾತʼ’ ಒಂದು ಮಹಿಳಾಪ್ರಧಾನ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಗುರುತನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ರಿಸಲಾಗಿದೆʼʼಎಂದು ಚಿತ್ರತಂಡ ಹೇಳಿಕೊಂಡಿದೆ.
ಇದೊಂದು ಕಾಮಿಡಿ ಡ್ರಾಮಾ ಚಿತ್ರವಾಗಿದೆ ಎಂದು ಹೇಳಲಾಗುತ್ತಿದೆ. ಈ ಚಿತ್ರದಲ್ಲಿ ಕೀರ್ತಿ ಸುರೇಶ್ ಜತೆಗೆ ಎಂ.ಎಸ್. ಭಾಸ್ಕರ್, ದೇವದರ್ಶಿನಿ, ರವೀಂದ್ರ ವಿಜಯ್, ಆನಂದ್ಸಾಮಿ, ರಾಜೇಶ್ ಬಾಲಕೃಷ್ಣನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಯಾಮಿನಿ ಯಜ್ನಮೂರ್ತಿ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದು, ಜೈ ಭೀಮ್ ಖ್ಯಾತಿಯ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ.
ಇದನ್ನೂ ಓದಿ: Keerthy Suresh: ಮಲ್ಟಿ ಕಲರ್ ಉಡುಗೆಯಲ್ಲಿ ಕೀರ್ತಿ ಸುರೇಶ್ ಹೊಸ ಫೋಟೊಶೂಟ್!
ಹೊಂಬಾಳೆ ಫಿಲ್ಮ್ಸ್ ಟ್ವೀಟ್
🎬 That’s a wrap, folks! 🎉🎥 Raghuthatha, where the revolution finds its home, has completed its fiery shoot! Stay tuned for a revolution that’ll make your heart race! #Raghuthatha@KeerthyOfficial @hombalefilms #VijayKiragandur @sumank #MSBhaskar @yaminiyag @RSeanRoldan… pic.twitter.com/rk4oSw7FyO
— Hombale Films (@hombalefilms) May 26, 2023
ಸಾಲು ಸಾಲು ಸಿನಿಮಾಗಳನ್ನು ಮಾಡುತ್ತಿದೆ ಹೊಂಬಾಳೆ
ಮುಂದಿನ 5 ವರ್ಷಗಳಲ್ಲಿ 3 ಸಾವಿರ ಕೋಟಿ ರೂ. ಮನರಂಜನಾ ಕ್ಷೇತ್ರದಲ್ಲಿ ತೊಡಗಿಸುವುದಾಗಿ ನಿರ್ಮಾಪಕ ವಿಜಯ್ ಕಿರಗಂದೂರ್ ಹೇಳಿದ್ದರು. ದಕ್ಷಿಣ ಭಾರತದ ಎಲ್ಲ ಭಾಷೆಗಳಲ್ಲಿ ಇದೀಗ ಹೊಂಬಾಳೆ ಸಂಸ್ಥೆ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ.
ತೆಲುಗಿನಲ್ಲಿ ‘ಸಲಾರ್’, ಮಲಯಾಳಂನಲ್ಲಿ ‘ಟೈಸನ್’ ಸೇರಿದಂತೆ ದೊಡ್ಡ ದೊಡ್ಡ ಸಿನಿಮಾಗಳನ್ನು ಹೊಂಬಾಳೆ ಸಂಸ್ಥೆ ಕೈಗೆತ್ತಿಕೊಂಡಿದೆ. ಕನ್ನಡದಲ್ಲಿ ‘ಕಾಂತಾರ’- 2, ‘ರಿಚರ್ಡ್ ಆಂಟನಿ’, ‘ಯುವ’, ‘ಧೂಮಂ’, ‘ಬಘೀರ’ ಸಿನಿಮಾಗಳು ಶುರುವಾಗಿದ್ದರೆ ಮತ್ತೊಂದಷ್ಟು ಸಿನಿಮಾಗಳು ಮಾತುಕತೆ ಹಂತದಲ್ಲಿದೆ. ಮುಂದೆ ಕಿಚ್ಚ ಸುದೀಪ್, ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ಕಾಂಬಿನೇಷನ್‌ನಲ್ಲೂ ಸಿನಿಮಾಗಳು ಮೂಡಿ ಬರಲಿವೆ ಎನ್ನಲಾಗಿದೆ.
ಇತ್ತೀಚೆಗಷ್ಟೆ ‘ಧೂಮಂ’ ಸಿನಿಮಾ ಚಿತ್ರೀಕರಣ ಮುಕ್ತಾಯವಾಗಿತ್ತು. ಲೂಸಿಯಾ ಪವನ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಮಲಯಾಳಂ ನಟ ಫಹಾದ್ ಫಾಸಿಲ್ ನಟಿಸಿದ್ದಾರೆ. ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಪ್ರಭಾಸ್ ನಟನೆಯ ‘ಸಲಾರ್’ ಚಿತ್ರೀಕರಣ ಭರದಿಂದ ಸಾಗುತ್ತಿದೆ.
South Cinema
Ram Charan: ರಾಮ್ ಚರಣ್ ಜತೆ ಕೈ ಜೋಡಿಸಿದ ʻದಿ ಕಾಶ್ಮೀರ್ ಫೈಲ್ಸ್ʼ ನಿರ್ಮಾಪಕ
Ram Charan: ವಿ ಮೆಗಾ ಪಿಕ್ಚರ್ಸ್ ಮೂಲಕ ನಿರ್ಮಾಣಕ್ಕಿಳಿದಿರುವ ರಾಮ್ ಚರಣ್ ಸ್ನೇಹಿತ ಯುವಿ ಕ್ರಿಯೇಷನ್‌ನ ವಿಕ್ರನ್ ರೆಡ್ಡಿ ಸಾಥ್ ಕೊಟ್ಟಿದ್ದಾರೆ.
ಬೆಂಗಳೂರು: ಟಾಲಿವುಡ್ ನಟ ರಾಮ್‌ಚರಣ್ (Ram Charan) ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ವಿ ಮೆಗಾ ಪಿಕ್ಚರ್ಸ್’ (V Mega Pictures) ನಿರ್ಮಾಣ ಸಂಸ್ಥೆಯ ಜತೆ ಕೈ ಜೋಡಿಸಿದ್ದಾರೆ. ವಿ ಮೆಗಾ ಪಿಕ್ಚರ್ಸ್ ಮೂಲಕ ನಿರ್ಮಾಣಕ್ಕಿಳಿದಿರುವ ರಾಮ್ ಚರಣ್ ಸ್ನೇಹಿತ ಯುವಿ ಕ್ರಿಯೇಷನ್‌ನ ವಿಕ್ರನ್ ರೆಡ್ಡಿ ಸಾಥ್ ಕೊಟ್ಟಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಹಾಗೂ ಕಾರ್ತಿಕೇಯ-2 ನಂತಹ ಬ್ಲಾಕ್ ಬಸ್ಟರ್ ಸಿನಿಮಾ ನೀಡಿರುವ ಅಭಿಷೇಕ್ ಅಗರ್ವಾಲ್ ಆರ್ಟ್ ಬ್ಯಾನರ್ ಹಾಗೂ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ನಿರ್ಮಾಣಕ್ಕಿಳಿದಿದ್ದಾರೆ.
ಈ ಎರಡು ಸಂಸ್ಥೆಗಳ ಮೂಲಕ ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣ ತಯಾರಿ ನಡೆಯುತ್ತಿದೆ. ಅಭಿಷೇಕ್ ಅಗರ್ವಾಲ್ ಆರ್ಟ್ ಬ್ಯಾನರ್ ಹಾಗೂ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ಮೂಡಿ ಬರುತ್ತಿರುವ ಚೊಚ್ಚಲ ಸಿನಿಮಾಗೆ ಯುವ ನಾಯಕ ಹಾಗೂ ಹೊಸ ನಿರ್ದೇಶಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಶೀಘ್ರದಲ್ಲಿ ಈ ಪ್ರಾಜೆಕ್ಟ್ ಅನೌನ್ಸ್ ಆಗಲಿದೆ. ವಿಭಿನ್ನ ಕಂಟೆಂಟ್ ಪ್ರೇಕ್ಷಕರಿಗೆ ಅರ್ಪಿಸಲು ಈ ಎರಡು ಸಂಸ್ಥೆಗಳು ಕೈ ಜೋಡಿಸಿವೆ. ಚಿತ್ರರಂಗದಲ್ಲಿ ಹೊಸಬರಿಗೆ ಅವಕಾಶ ನೀಡವುದರಿಂದ ರಾಮ್ ಚರಣ್ ಅವರ ಅಭಿಮಾನಿಗಳಿಂದ ಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ.
ಗೇಮ್ ಚೇಂಜರ್ ಸಿನಿಮಾದಲ್ಲಿ ಬ್ಯುಸಿಯಾದ ರಾಮ್‌ಚರಣ್
ರಾಮ್‌ಚರಣ್ ಸದ್ಯ ಗೇಮ್ ಚೇಂಜರ್ ಸಿನಿಮಾ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. 2019ರಲ್ಲಿ ಬಿಡುಗಡೆಯಾದ ವಿನಯ ವಿಧೇಯ ರಾಮ ಚಿತ್ರದ ನಂತರ ರಾಮ್ ಚರಣ್ ಮತ್ತು ಕಿಯಾರಾ ಆಡ್ವಾಣಿ ಈ ಸಿನಿಮಾದಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಜಯರಾಮ್, ಅಂಜಲಿ ಸುನೀಲ್, ಶ್ರೀಕಾಂತ್, ನವೀನ್ ಚಂದ್ರ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: Ram Charan : ಹಾಲಿವುಡ್ ಎಂಟ್ರಿ ಬಗ್ಗೆ ನಟ ರಾಮ್ ಚರಣ್ ಹೇಳಿದ್ದೇನು? ವಿಡಿಯೊ ವೈರಲ್
ಎಸ್ ಥಮನ್ ಚಿತ್ರದ ಹಾಡುಗಳು ಮತ್ತು ಹಿನ್ನೆಲೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ತಿರು ಮತ್ತು ಆರ್.ರತ್ನವೇಲು ಛಾಯಾಗ್ರಹಣ, ಶಮೀರ್ ಮಹಮ್ಮದ್ ಸಂಕಲನ ಚಿತ್ರಕ್ಕಿದೆ.ಈ ಪ್ರಾಜೆಕ್ಟ್ ಅನ್ನು ಪ್ಯಾನ್-ಇಂಡಿಯಾ ಬಿಡುಗಡೆಗಾಗಿ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಶಿರೀಶ್ ಗಾರು ಜಂಟಿಯಾಗಿ ನಿರ್ಮಿಸಿದ್ದಾರೆ. ಗೇಮ್ ಚೇಂಜರ್ ತೆಲುಗು, ತಮಿಳು ಮತ್ತು ಹಿಂದಿ ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
South Cinema
Ashish Vidyarthi: ಯಾವುದೇ ವಯಸ್ಸಲ್ಲಾದರೂ ಸಂತೋಷವಾಗಿರಬಹುದು; ಮದುವೆ ಬಗ್ಗೆ ಆಶಿಶ್ ವಿದ್ಯಾರ್ಥಿ ಹೇಳಿದ್ದೇನು?
Ashish Vidyarthi: ʻʻಪ್ರತಿಯೊಬ್ಬರು ಯಾವುದೇ ವಯಸ್ಸಿನಲ್ಲಾದರೂ ಸಂತೋಷವಾಗಿರಬಹುದು. ವಯಸ್ಸು ಮುಖ್ಯವಲ್ಲ. ಪ್ರತಿಯೊಬ್ಬರ ಜೀವನದ ಆಯ್ಕೆಗಳನ್ನು ನಾವು ಗೌರವಿಸಬೇಕುʼʼ ಎಂದರು.
ಮುಂಬೈ: ಹಿಂದಿ ಚಿತ್ರರಂಗದಲ್ಲಿ ಖಳನಾಯಕನ ಪಾತ್ರಗಳನ್ನು ನಿರ್ವಹಿಸಿದ ಜನಪ್ರಿಯ ನಟ ಆಶಿಶ್ ವಿದ್ಯಾರ್ಥಿ (Ashish Vidyarthi) ಅವರು ತಮ್ಮ 60 ನೇ ವಯಸ್ಸಿನಲ್ಲಿ ಅಸ್ಸಾಂನ ರೂಪಾಲಿ ಬರುವಾ (Rupali Barua) ಅವರನ್ನು ಮೇ 25ರಂದು ವಿವಾಹವಾದರು. ಇದೀಗ ತಮ್ಮ ಮದುವೆಯ ಬಗ್ಗೆ ನಟ ವಿಡಿಯೊ ಮೂಲಕ ಮನಬಿಚ್ಚಿ ಮಾತನಾಡಿದ್ದಾರೆ. ʻʻಪ್ರತಿಯೊಬ್ಬರು ಯಾವುದೇ ವಯಸ್ಸಿನಲ್ಲಾದರೂ ಸಂತೋಷವಾಗಿರಬಹುದು. ವಯಸ್ಸು ಮುಖ್ಯವಲ್ಲ. ಪ್ರತಿಯೊಬ್ಬರ ಜೀವನ ಆಯ್ಕೆಗಳನ್ನು ನಾವು ಗೌರವಿಸಬೇಕುʼʼ ಎಂದರು.
“ನಮ್ಮ ಪ್ರತಿಯೊಬ್ಬರ ಜೀವನವು ವಿಭಿನ್ನವಾಗಿದೆ. ನಮ್ಮಲ್ಲಿ ಪ್ರತಿಯೊಬ್ಬರಿಗೂ ವಿಭಿನ್ನ ಸವಾಲುಗಳು, ಹಿನ್ನೆಲೆಗಳು, ಶಿಕ್ಷಣ ಮತ್ತು ನಾವು ಯೋಚಿಸುವ ರೀತಿ ಇದೆ. ನಮ್ಮಲ್ಲಿ ಎಲ್ಲರಿಗೂ ಅವರದ್ದೇ ಆದ ವೃತ್ತಿಗಳಿವೆ. ನಾವೆಲ್ಲರೂ ವಿವಿಧ ದೇಶಗಳು, ಧರ್ಮಗಳು ಮತ್ತು ನಂಬಿಕೆಗಳಿಂದ ಬಂದವರು, ಆದರೆ ಒಂದು ಸಾಮಾನ್ಯ ವಿಷಯವೆಂದರೆ ನಾವೆಲ್ಲರೂ ಸಂತೋಷವಾಗಿರಲು ಬಯಸುತ್ತೇವೆʼʼಎಂದರು.
22 ವರ್ಷಗಳ ತಮ್ಮ ಹಾಗೂ ಮೊದಲ ಪತ್ನಿಯ (ರಾಜೋಶಿ ಬರುವಾ ) ದಾಂಪತ್ಯ ಜೀವನ ಕಳೆದ ಎರಡು ವರ್ಷಗಳಿಂದ ಸರಿ ಇರಲಿಲ್ಲ ಎಂದು ಹೇಳಿಕೊಂಡರು. “22 ವರ್ಷಗಳ ಹಿಂದೆ ಪಿಲೂ (ರಾಜೋಶಿ ಬರುವಾ) ಮತ್ತು ನಾನು ಭೇಟಿಯಾದೆವು. ಬಳಿಕ ಮದುವೆಯಾದೆವು. ಅಲ್ಲದೆ, ಜೀವನ ಚೆನ್ನಾಗಿಯೇ ಇತ್ತು. ಎರಡು ವರ್ಷಗಳಿಂದ ಸರಿ ಇರಲಿಲ್ಲʼʼಎಂದರು.
ʻʻಪಿಲೂ ಮತ್ತು ನಾನು ಸೌಹಾರ್ದಯುತವಾಗಿ ಒಟ್ಟಿಗೆ ನಡೆಯಲು ಸಾಧ್ಯವಾಗದಿದ್ದರೆ, ಪ್ರತ್ಯೇಕವಾಗಿ ನಡೆಯೋಣ ಎಂದು ನಿರ್ಧರಿಸಿದೆವುʼʼ ಎಂದು ಆಶಿಶ್ ಹೇಳಿದರು. “ನಾನು ಯಾರೊಂದಿಗಾದರೂ ಇರಲು ಬಯಸುತ್ತೇನೆಯೋ ಅವರೊಂದಿಗೆ ಮದುವೆಯಾಗಲು ಬಯಸುತ್ತೇನೆ ಎಂದು ನನಗೆ ದೃಢವಾದ ನಂಬಿಕೆ ಇತ್ತು. ನಾನು ರೂಪಾಲಿ ಬರುವಾ ಅವರನ್ನು ಭೇಟಿಯಾದೆ. ನಾವು ಒಂದು ವರ್ಷದ ಹಿಂದೆ ಭೇಟಿಯಾದೆವು. ಪರಸ್ಪರ ಮಾತನಾಡಿದೆವು. ಗಂಡ ಮತ್ತು ಹೆಂಡತಿಯಾಗಿ ಒಟ್ಟಿಗೆ ಬದುಕಬೇಕೆಂದು ನಿರ್ಧರಿಸಿ ರೂಪಾಲಿ ಮತ್ತು ನಾನು ಮದುವೆಯಾದೆವು. ಅವಳ ವಯಸ್ಸು 50 ಮತ್ತು ನನಗೆ 57 ವರ್ಷ, 60 ಅಲ್ಲ, ಆದರೆ ವಯಸ್ಸು ಮುಖ್ಯವಲ್ಲ. ನಮ್ಮಲ್ಲಿ ಪ್ರತಿಯೊಬ್ಬರೂ ಯಾವುದೇ ವಯಸ್ಸಿನಲ್ಲಾದರೂ ಸಂತೋಷವಾಗಿರಬಹುದು ”ಎಂದು ನಟ ಹೇಳಿಕೊಂಡರು. ಪ್ರತಿಯೊಬ್ಬರ ಜೀವನ ಆಯ್ಕೆಗಳನ್ನು ನಾವು ಗೌರವಿಸಬೇಕು ಎಂದು ಹೇಳುವ ಮೂಲಕ ಆಶಿಶ್ ವಿದ್ಯಾರ್ಥಿ ಮಾತಿಗೆ ಪೂರ್ಣ ವಿರಾಮ ಇಟ್ಟರು.
ಇದನ್ನೂ ಓದಿ: Ashish Vidyarthi Marriage: ಆಶಿಶ್ ವಿದ್ಯಾರ್ಥಿ ಮರು ಮದುವೆ ಬಳಿಕ ಮೊದಲ ಪತ್ನಿಯ ಪೋಸ್ಟ್ ವೈರಲ್!
ಆಶಿಶ್ ವಿದ್ಯಾರ್ಥಿ ಪೋಸ್ಟ್
ಆಶಿಶ್ ವಿದ್ಯಾರ್ಥಿ ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ಕೋರ್ಟ್ ಮ್ಯಾರೇಜ್ ಆಗಿದ್ದಾರೆ. ಮದುವೆಯಲ್ಲಿ ಕೇರಳ ಮತ್ತು ಅಸ್ಸಾಂ ಸಂಪ್ರದಾಯಗಳನ್ನು ಅನುಸರಿಸಿದ್ದಾರೆ. ʻ ರಾಜೋಶಿ ಬರುವಾ ವೃತ್ತಿಯಲ್ಲಿ ನಟಿ. ಶಕುಂತಲಾ ಬರುವಾ ಅವರ ಮಗಳು. ಆಶಿಶ್ ಮತ್ತು ರಾಜೋಶಿ ಮದುವೆಯಾಗಿ 23 ವರ್ಷಗಳಾಗಿದ್ದು, ಅವರಿಗೆ ಅರ್ಥ ವಿದ್ಯಾರ್ಥಿ ಎಂಬ ಮಗನಿದ್ದಾನೆ. ಆಶಿಶ್ ವಿದ್ಯಾರ್ಥಿ ಅವರ ತಂದೆ ಮಲಯಾಳಿಯಾಗಿದ್ದು ಕೇರಳದ ಕಣ್ಣೂರಿನವರಾಗಿದ್ದರು. ಅವರ ತಾಯಿ ಬೆಂಗಾಲಿಯವರಾಗಿದ್ದು ರಾಜಸ್ಥಾನ ಮೂಲದವರು.
ಆಶಿಶ್ ಇದುವರೆಗೆ 11 ವಿವಿಧ ಭಾಷೆಗಳಲ್ಲಿ ಸುಮಾರು 300 ಚಿತ್ರಗಳಲ್ಲಿ ಅಭಿನಯಿಸಿದ್ದರು. ಸರ್ದಾರ್ ವಲ್ಲಭಭಭಾಯಿ ಪಟೇಲ್ ಅವರ ಜೀವನವನ್ನು ಆಧರಿಸಿದ ಸರ್ದಾರ್‌ನಲ್ಲಿ ಆಶಿಶ್ ವಿದ್ಯಾರ್ಥಿ ವಿ ಪಿ ಮೆನನ್ ಪಾತ್ರವನ್ನು ನಿರ್ವಹಿಸಿದ್ದಾರೆ.
-
ಸುವಚನ14 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ5 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ20 hours ago
ರಾಜ್ಯ ಸಚಿವ ಸಂಪುಟ ವಿಸ್ತರಣೆ: ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ 24 ಶಾಸಕರಿಗೆ ಸಚಿವ ಸ್ಥಾನ, ಮತ್ತೆ ಸಿದ್ದು ಮೇಲುಗೈ
-
Live News8 hours ago
Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್
-
ಕರ್ನಾಟಕ20 hours ago
RP Ashok: ಇನ್ಸ್ಪೆಕ್ಟರ್ ಆರ್.ಪಿ.ಅಶೋಕ್ಗೆ ಆರ್ಯಭಟ ಪ್ರಶಸ್ತಿ ಪ್ರದಾನ
-
ಕ್ರಿಕೆಟ್21 hours ago
IPL 2023: ಗಿಲ್ ಶತಕದ ಕಮಾಲ್; ಮುಂಬೈಗೆ ಬೃಹತ್ ಮೊತ್ತದ ಗುರಿ
-
ಉತ್ತರ ಕನ್ನಡ19 hours ago
Honnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ
-
ಪ್ರಮುಖ ಸುದ್ದಿ19 hours ago
ವಿಸ್ತಾರ ಸಂಪಾದಕೀಯ: ರಾಜ್ಯಾದ್ಯಂತ ಗ್ಯಾರಂಟಿ ಭರವಸೆಯ ಗದ್ದಲ, ಹೊಸ ಸರ್ಕಾರ ಗೊಂದಲ ನಿವಾರಿಸಲಿ