Site icon Vistara News

Pushpa 2: ಬಿಡುಗಡೆಗೂ ಮುನ್ನವೇ 1000 ಕೋಟಿ ರೂ. ಬಿಸಿನೆಸ್ ಮಾಡಿ ಹೊಸ ಇತಿಹಾಸ ಸೃಷ್ಟಿಸಿದ್ಯಾ ಪುಷ್ಪ-2?

1000 crores before release. Has Pushpa-2 created a new history by doing business

ಬೆಂಗಳೂರು: ನಟಿ ಸಾಯಿ ಪಲ್ಲವಿ ಕೊನೆಯದಾಗಿ ʻಗಾರ್ಗಿʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಐಕಾನಿಕ್‌ ಸ್ಟಾರ್‌ ಅಲ್ಲು ಅರ್ಜುನ್‌ ಅಭಿನಯದ ಪುಷ್ಪ-2 (Pushpa 2) ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ವರದಿಯಾಗಿದೆ. ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪ್ಯಾನ್-ಇಂಡಿಯನ್ ಹಿಟ್ ಸಿನಿಮಾ ಪುಷ್ಪಾ ಸೀಕ್ವೆಲ್‌ನಲ್ಲಿ ನಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಶೀಘ್ರದಲ್ಲೇ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚಿನ ಸುದ್ದಿ ಪ್ರಕಾರ, ಚಿತ್ರವು ಈಗಾಗಲೇ ಎಲ್ಲಾ ಭಾಷೆಗಳ ಥಿಯೇಟ್ರಿಕಲ್ ರೈಟ್ಸ್‌ನಿಂದ 1000 ಕೋಟಿ ರೂ ಗಳಿಸಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.

ಬುಡಕಟ್ಟು ಜನಾಂಗದ ಹುಡುಗಿಯಾಗಿ ಸಾಯಿ ಪಲ್ಲವಿ

ಏಪ್ರಿಲ್ 8ರಂದು ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಪುಷ್ಪ-2 ಸಿನಿಮಾ ಟೀಸರ್ ಲಾಂಚ್ ಆಗಲಿದೆ ಎಂಬ ಸುದ್ದಿಯೂ ಇದೆ. ಅಭಿಮಾನಿಗಳು ಈ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ. ಮೂಲಗಳ ಪ್ರಕಾರ ಸಾಯಿ ಪಲ್ಲವಿ ಈಗಾಗಲೇ 10 ದಿನಗಳ ಕಾಲ ಶೂಟಿಂಗ್‌ಗಾಗಿ ಮೀಸಲಟ್ಟಿದ್ದು, ಚಿತ್ರದಲ್ಲಿ ಬುಡಕಟ್ಟು ಜನಾಂಗದ ಹುಡುಗಿಯಾಗಿ ನಟಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; Rashmika Mandanna | ‘ಪುಷ್ಪ 2’ನಲ್ಲಿ ರಶ್ಮಿಕಾ ಬದಲು ಸಾಯಿ ಪಲ್ಲವಿ? ಏನಂತಾರೆ ರಶ್ಮಿಕಾ ಮಂದಣ್ಣ?

ಪುಷ್ಪ: ದಿ ರೂಲ್ (Pushpa 2: The Rule)

ಪುಷ್ಪ: ದಿ ರೂಲ್ (Pushpa 2: The Rule) ಎಂಬ ಉಪ ಶೀರ್ಷಿಕೆಯಡಿ, ಪುಷ್ಟ-2 ಸೆಟ್ಟೇರಿದೆ. ಸಿನಿ ರಸಿಕರಲ್ಲಿ ಎರಡನೇ ಪಾರ್ಟ್‌ ಹೇಗಿರಲಿದೆ ಎಂಬ ಕೂತೂಹಲ ಹೆಚ್ಚಾಗಿದ್ದು, ಸಾಕಷ್ಟು ತಯಾರಿ ಮೂಲಕ ನಿರ್ದೇಶಕ ಸುಕುಮಾರ್‌ ಶೂಟಿಂಗ್‌ ಆರಂಭಿಸಿದ್ದಾರೆ. 2021ರಲ್ಲಿ ಚಿತ್ರ ಬಿಡುಗಡೆಗೊಂಡು ಬಾಕ್ಸ್‌ ಆಫೀಸ್‌ನಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಮೊದಲ ಪಾರ್ಟ್‌ನಲ್ಲಿ ಮಲಯಾಳಂ ಚಿತ್ರರಂಗದ ಫಹಾದ್‌ ಫಾಸಿಲ್‌ ಮತ್ತು ಕನ್ನಡ ಚಿತ್ರರಂಗದ ಡಾಲಿ ಧನಂಜಯ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪುಷ್ಪಾ: ದಿ ರೈಸ್‌ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿತ್ತು. ಇಲ್ಲಿಯವರೆಗೆ ಪ್ರೇಕ್ಷಕರು ನೋಡಿರುವುದು ಅರ್ಧ ಕಥೆ ಮಾತ್ರ. ಕಥಾ ನಾಯಕನ ಬದುಕಿನಲ್ಲಿ ಮುಂದೇನಾಯಿತು ಎಂಬುದನ್ನು ತಿಳಿಯುವ ಕುತೂಹಲ ಪ್ರೇಕ್ಷಕರಿಗೆ ಇದೆ.

Exit mobile version