Site icon Vistara News

Manso Re Director | ಮಂಸೋರೆ ನಿರ್ದೇಶನದ 19.20.21 ಸಿನಿಮಾ ಬಿಡುಗಡೆಗೆ ಸಜ್ಜು!

Manso Re Director

ಬೆಂಗಳೂರು : ‘ಹರಿವು’, ‘ನಾತಿಚರಾಮಿ’, ‘ಆ್ಯಕ್ಟ್ 1978’ ಹೀಗೆ ತಮ್ಮ ವಿಭಿನ್ನ ಸಿನಿಮಾಗಳ ಮೂಲಕ ಕನ್ನಡ ಸಿನಿ ಪ್ರೇಕ್ಷಕರಿಗೆ ಮನರಂಜನೆ ನೀಡುತ್ತ ಬಂದಿರುವ ರಾಷ್ಟ್ರಪಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ (Manso Re Director) ಚಿತ್ರ ‘19.20.21’ ತೆರೆಗೆ ಬರಲು ಸಜ್ಜಾಗುತ್ತಿದೆ. ಶೀರ್ಷಿಕೆ ಮೂಲಕ ಸಾಕಷ್ಟು ಸದ್ದು ಮಾಡಿತ್ತು ಈ ಸಿನಿಮಾ. ಚಿತ್ರತಂಡ ಈಗಾಗಲೇ ಚಿತ್ರದ ಪೋಸ್ಟರ್‌ಗಳನ್ನು ಹಂಚಿಕೊಂಡಿದೆ.

ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಹೆಣೆದ ಕಥೆ ಚಿತ್ರದಲ್ಲಿದ್ದು, ಸೋಷಿಯಲ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ ಎಂದು ತಂಡ ಹೇಳಿಕೊಂಡಿದೆ. ಚಿತ್ರೀಕರಣ ಮುಗಿಸಿ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಸಿನಿಮಾ ಬಿಡುಗಡೆಗೂ ತಯಾರಿ ನಡೆಸುತ್ತಿದ್ದು ಶೀಘ್ರದಲ್ಲೇ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ರಂಗಭೂಮಿ ಕಲಾವಿದರರಾದ ಶೃಂಗ ಬಿ ವಿ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ, ಮಹದೇವ್ ಹಡಪತ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಚಿತ್ರದಲ್ಲಿದೆ. ಯಲ್ಲಾಪುರ, ಧಾರವಾಡ, ಮಂಗಳೂರು, ಕುಂದಾಪುರ ಸೇರಿದಂತೆ ಹಲವು ಕಡೆ ಚಿತ್ರವನ್ನು ಸೆರೆ ಹಿಡಿಯಲಾಗಿದೆ.

ಇದನ್ನೂ ಓದಿ | Manso Re | ಕುತೂಹಲ ಮೂಡಿಸಿದ ಮಂಸೋರೆ ನಿರ್ದೇಶನದ 19.20.21 ಸಿನಿಮಾ ಪೋಸ್ಟರ್‌

ಶಿವು ಬಿ ಕೆ ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಬಿಂದು ಮಾಲಿನಿ ಸಂಗೀತ ನಿರ್ದೇಶನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕತೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ.

ಇದನ್ನೂ ಓದಿ | Kantara Movie | ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿಗೆ ಕಲ್ಲಿಕೋಟೆ ಕೋರ್ಟ್‌ನಿಂದ ತಡೆ

Exit mobile version