ʻದಿ ಕಾಶ್ಮೀರಿ ಫೈಲ್ಸ್ʼ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಕೇಂದ್ರ ಸರ್ಕಾರ Y ಶ್ರೇಣಿಯ ಭದ್ರತೆ ನೀಡಿದೆ.
ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ Y ಶ್ರೇಣಿಯ ಭದ್ರತೆ ಕಲ್ಪಿಸಲಾಗಿದ್ದು, ಇಡೀ ದೇಶದಲ್ಲಿ ಎಲ್ಲಿಗೆ ಹೋದರೂ ವಿವೇಕ್ ಅಗ್ನಿಹೋತ್ರಿ ಅವರ ಭದ್ರತೆಗೆ ಐವರು ಸಿಆರ್‌ಪಿಎಫ್ ಯೋಧರನ್ನು ನಿಯೋಜಿಸಲಾಗಿದೆ.
ʻದಿ ಕಾಶ್ಮೀರಿ ಫೈಲ್ಸ್ʼ ಚಿತ್ರ ಬಿಡುಗಡೆಯಾದ ಬಳಿಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಬೆದರಿಕೆಗಳು ಬರುತ್ತಿವೆ. ಹೀಗಾಗಿ ಮೋದಿ ಸರ್ಕಾರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ Y ಶ್ರೇಣಿಯ ಭದ್ರತೆ ನೀಡಿದೆ.
ʻದಿ ಕಾಶ್ಮೀರಿ ಫೈಲ್ಸ್ʼ ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿ ಕ್ಲಬ್ ಸೇರಿದೆ. ಚಿತ್ರದಲ್ಲಿ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ.