Milana Nagaraj | ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರಕ್ಕೆ ಮಿಲನಾ ನಾಗರಾಜ್ ನಾಯಕಿ - Vistara News

ಸಿನಿಮಾ

Milana Nagaraj | ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರಕ್ಕೆ ಮಿಲನಾ ನಾಗರಾಜ್ ನಾಯಕಿ

`ಲವ್ ಮಾಕ್ಟೇಲ್’ ಸಿನಿಮಾ ನಂತರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಮಿಲನಾ ನಾಗರಾಜ್ (Milana Nagaraj) ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

VISTARANEWS.COM


on

Milana Nagaraj
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ‘ನಮ್ ಗಣಿ ಬಿಕಾಂ ಪಾಸ್’, ‘ಗಜಾನನ ಆ್ಯಂಡ್ ಗ್ಯಾಂಗ್’ ಸಿನಿಮಾ ಖ್ಯಾತಿಯ ನಿರ್ದೇಶಕ ಅಭಿಷೇಕ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾ ‘ಆರಾಮ್ ಅರವಿಂದ್ ಸ್ವಾಮಿ. ಈ ಸಿನಿಮಾ ರೊಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡಿದ್ದು, ಈ ಚಿತ್ರದ ನಾಯಕ ಹಾಗೂ ನಾಯಕಿ ಯಾರೆಂಬುದನ್ನು ಚಿತ್ರತಂಡ ರಿವೀಲ್ ಮಾಡಿದೆ. ಲವ್ ಮಾಕ್ಟೇಲ್ ಸಿನಿಮಾ ನಂತರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಮಿಲನಾ ನಾಗರಾಜ್ (Milana Nagaraj) ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಇದೇ ಮೊದಲ ಬಾರಿಗೆ ನಾಯಕ ಅನೀಶ್ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಮಿಲನಾ ನಾಗರಾಜ್ ಬಹಳ ವಿಭಿನ್ನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಚಿತ್ರದಲ್ಲಿ ಎರಡು ಶೇಡ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಲಯಾಳಿ ಹುಡುಗಿ ಹಾಗೂ ಟೀಚರ್ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಈಗಾಗಲೇ ಮಿಲನಾ ನಾಗರಾಜ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು ಸದ್ಯದಲ್ಲೇ ನಾಯಕ ಹಾಗೂ ನಾಯಕಿಯ ಪೋಸ್ಟರ್ ಬಿಡುವುದಾಗಿ ನಿರ್ದೇಶಕ ಅಭಿಷೇಕ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ | Milana Nagaraj | ಚಂದನ್‌ ಶೆಟ್ಟಿ ಹಾಡಿಗೆ ಸಖತ್‌ ಸ್ಟೆಪ್ಸ್‌ ಹಾಕಿದ ಪೃಥ್ವಿ ಅಂಬಾರ್‌: `Don’t Worry Bro’ ವಿಡಿಯೊ ಸಾಂಗ್‌ ಔಟ್‌!

‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರಕ್ಕೆ ಅಭಿಷೇಕ್ ಶೆಟ್ಟಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಶ್ರೀಕಾಂತ್ ಪ್ರಸನ್ನ, ʻಗುಳ್ಟುʼ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮೊದಲ ಹಂತದ ಚಿತ್ರೀಕರಣವನ್ನು ಚಿತ್ರತಂಡ ಮುಗಿಸಿದ್ದು, ಶೀಘ್ರದಲ್ಲೇ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ.

ಇದನ್ನೂ ಓದಿ | Milana Nagaraj | ಇಲ್ಲಿದೆ ಮಿಲನಾ ನಾಗರಾಜ್ ಜೀವನ ಚಿತ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Amala Paul: ಮದುವೆಯಾದ 8 ತಿಂಗಳಿಗೇ ಗಂಡು ಮಗುವಿಗೆ ಜನ್ಮ ನೀಡಿದ ಸುದೀಪ್‌ ಚಿತ್ರದ ನಾಯಕಿ

Amala Paul: ದಕ್ಷಿಣ ಭಾರತದ ಖ್ಯಾತ ನಟಿ, ಬಹುಭಾಷಾ ಕಲಾವಿದೆ, ʼಹೆಬ್ಬುಲಿʼ ಚಿತ್ರದಲ್ಲಿ ಕಿಚ್ಚ ಸುದೀಪ್‌ ಜತೆ ಹೆಜ್ಜೆ ಹಾಕಿ ಸ್ಯಾಂಡಲ್‌ವುಡ್‌ಗೆ ಪ್ರವೇಶಿಸಿದ್ದ ಅಮಲಾ ಪೌಲ್‌ ಜೂನ್‌ 11ರಂದು ಗಂಡು ಮುವಿಗೆ ಜನ್ಮ ನೀಡಿದ್ದಾರೆ. ಅಮಲಾ ಪೌಲ್‌-ಜಗತ್‌ ದೇಸಾಯಿ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಈ ಗುಡ್‌ನ್ಯೂಸ್‌ ಹಂಚಿಕೊಂಡಿದ್ದಾರೆ. ಅಮಲಾ ಪೌಲ್‌ ಪುಟ್ಟ ಮಗುವನ್ನು ಎತ್ತಿಕೊಂಡು ಆಸ್ಪತ್ರಯಿಂದ ಮನೆಗೆ ಮರಳುತ್ತಿರುವ ವಿಡಿಯೊ ಪೋಸ್ಟ್‌ ಮಾಡಿದ್ದು, ಫ್ಯಾನ್ಸ್‌ ಶುಭಾಶಯ ತಿಳಿಸಿದ್ದಾರೆ.

VISTARANEWS.COM


on

Amala Paul
Koo

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ, ಬಹುಭಾಷಾ ಕಲಾವಿದೆ, ʼಹೆಬ್ಬುಲಿʼ ಚಿತ್ರದಲ್ಲಿ ಕಿಚ್ಚ ಸುದೀಪ್‌ ಜತೆ ಹೆಜ್ಜೆ ಹಾಕಿ ಸ್ಯಾಂಡಲ್‌ವುಡ್‌ಗೆ ಪ್ರವೇಶಿಸಿದ್ದ ಅಮಲಾ ಪೌಲ್‌ (Amala Paul) ಜೂನ್‌ 11ರಂದು ಗಂಡು ಮುವಿಗೆ ಜನ್ಮ ನೀಡಿದ್ದಾರೆ. ಅಮಲಾ ಪೌಲ್‌ ಮತ್ತು ಜಗತ್‌ ದೇಸಾಯಿ ಕಳೆದ ನವೆಂಬರ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಅಮಲಾ ಪೌಲ್‌-ಜಗತ್‌ ದೇಸಾಯಿ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಈ ಗುಡ್‌ನ್ಯೂಸ್‌ ಹಂಚಿಕೊಂಡಿದ್ದಾರೆ. ಅಮಲಾ ಪೌಲ್‌ ಪುಟ್ಟ ಮಗುವನ್ನು ಎತ್ತಿಕೊಂಡು ಆಸ್ಪತ್ರಯಿಂದ ಮನೆಗೆ ಮರಳುತ್ತಿರುವ ವಿಡಿಯೊ ಪೋಸ್ಟ್‌ ಮಾಡಿದ್ದು, ಫ್ಯಾನ್ಸ್‌ ಶುಭಾಶಯ ತಿಳಿಸಿದ್ದಾರೆ. ಅಮಲಾ ಪೌಲ್‌ ಮತ್ತು ಜಗನ್‌ ದೇಸಾಯಿ ದಂಪತಿ ಜೂನ್‌ 11ರಂದು ಮಗು ಜನಿಸಿರುವುದಾಗಿ ಹೇಳಿದ್ದಾರೆ. ಜತೆಗೆ ಮಗುವಿಗೆ ಇಳಯ್‌ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ. ಇಳಯ್‌ ಎಂದರೆ ʼʼಸಂತೋಷದ ನಗುವಿನೊಂದಿಗೆ ಬೆಳಗುವ ಉತ್ಸಾಹಭರಿತ ಆತ್ಮʼʼ, ʼʼಶ್ರೇಷ್ಠ” ಮತ್ತು “ದೇವರಂತಹ” ಎಂಬ ಅರ್ಥವಿದೆ.

ʼʼನಮ್ಮ ಮಗ ಇಳಯ್‌ ಜೂನ್‌ 11ರಂದು ಜನಿಸಿದʼʼ ಎಂಬ ಕ್ಯಾಪ್ಶನ್‌ ನೀಡಿ ದಂಪತಿ ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಸದ್ಯ ಸೆಲೆಬ್ರಿಟಿಗಳು, ಅಭಿಮಾನಿಗಳು ಇವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಮಲಾ ಪೌಲ್‌ ಮತ್ತು ಉದ್ಯಮಿ ಜಗತ್ ದೇಸಾಯಿ 2023ರ ನವೆಂಬರ್ 5ರಂದು ಕೇರಳದ ಕೊಚ್ಚಿಯಲ್ಲಿ ವಿವಾಹವಾಗಿದ್ದರು. ಅದಾಗಿ ಎರಡನೇ ತಿಂಗಳಿಗೆ ಅಮಲಾ ಪೌಲ್ ತಾನು ಗರ್ಭಿಣಿ ಎನ್ನುವ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದರು.

ಅಂದಹಾಗೆ ಇದು ಅಮಲಾ ಪೌಲ್‌ ಅವರಿಗೆ ಎರಡನೇ ವಿವಾಹ. ಇದಕ್ಕೂ ಮೊದಲು ನಿರ್ದೇಶಕ ಎ.ಎಲ್.ವಿಜಯ್ ಅವರೊಂದಿಗೆ ಅಮಲಾ ಪೌಲ್‌ ವಿವಾಹ 2014ರಲ್ಲಿ ಚೆನ್ನೈನಲ್ಲಿ ನೆರವೇರಿತ್ತು. ಆದರೆ ಈ ದಾಂಪತ್ಯ ಹೆಚ್ಚು ಕಾಲ ಉಳಿಯಲಿಲ್ಲ. 2017ರಲ್ಲಿ ಅಮಲಾ ಮತ್ತು ವಿಜಯ್ ವಿಚ್ಛೇದನ ಪಡೆದುಕೊಂಡಿದ್ದರು.

ಬಹುಭಾಷಾ ನಟಿ

ಮಲಯಾಳಂ ಮೂಲದ ಅಮಲಾ ಪೌಲ್‌ ದಕ್ಷಿಣ ಭಾರತದ ಎಲ್ಲ ಚಿತ್ರರಂಗದಲ್ಲಿ ಅಭಿನಯಿಸಿ ಬಹುಭಾಷಾ ನಟಿ ಎನಿಸಿಕೊಂಡೊದ್ದಾರೆ. ಅದರಲ್ಲಿಯೂ ಅವರು ಒಂದು ಕಾಲದಲ್ಲಿ ತಮಿಳು ಚಿತ್ರರಂಗದ ಟಾಪ್‌ ನಾಯಕಿಯಾಗಿ ಗುರುತಿಸಿಕೊಂಡಿದ್ದರು. ಸೂರ್ಯ, ಮಾಧವನ್‌, ಆರ್ಯ, ಧನುಷ್‌ ಮುಂತಾದ ಸೂಪರ್‌ ಸ್ಟಾರ್‌ಗಳೊಂದಿಗೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು.

ಅಮಲಾ ಅಭಿನಯಿಸಿದ ಮೊದಲ ಚಿತ್ರ ಮಲೆಯಾಳಂನ ʼನೀಲ ತಾಮರʼ. ಇದು 2009ರಲ್ಲಿ ತೆರೆಕಂಡಿತ್ತು. ಬಳಿಕ ಕಾಲಿವುಡ್‌ಗೆ ಕಾಲಿಟ್ಟ ಅವರು 2010ರಲ್ಲಿ ಮೂರು ತಮಿಳು ಚಿತ್ರಗಳಲ್ಲಿ ಕಾಣಿಸಿಕೊಂಡರು. ಅದರಲ್ಲಿಯೂ ʼಮೈನಾʼ ಅವರಿಗೆ ಬಹು ಜನಪ್ರಿಯತೆ ತಂದುಕೊಟ್ಟಿತು. ಈ ಚಿತ್ರದಲ್ಲಿನ ನಟನೆಗಾಗಿ ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡರು. 2012ರಲ್ಲಿ ʼಲವ್‌ ಫೈಲೂರ್‌ʼ ಸಿನಿಮಾ ಮೂಲಕ ತೆಲುಗಿಗೆ ಕಾಲಿಟ್ಟರು. 2017ರಲ್ಲಿ ಕಿಚ್ಚ ಸುದೀಪ್‌ ಅಭಿನಯದ ʼಹೆಬ್ಬುಲಿʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೂ ಪ್ರವೇಶಿಸಿದರು. ಕಳೆದ ವರ್ಷ ತೆರೆಕಂಡ ಹಿಂದಿಯ ʼಭೋಲಾʼ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: Amala Paul: ಎರಡನೇ ಮದುವೆಯಾದ ‘ಹೆಬ್ಬುಲಿ’ ನಟಿ ಅಮಲಾ ಪೌಲ್!

ಇತ್ತೀಚೆಗೆ ತೆರೆಕಂಡ ಪ್ಯಾನ್‌ ಇಂಡಿಯಾ ಸಿನಿಮಾ ʼಆಡು ಜೀವಿತಂʼನಲ್ಲಿ ಅಮಲಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್‌ ಸುಕುಮಾರನ್‌ ನಾಯಕನಾಗಿದ್ದ ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಸದ್ದು ಮಾಡಿದೆ.

Continue Reading

ಸಿನಿಮಾ

Sidhartha Mallya: ಹಸೆಮಣೆಗೇರಲು ಸಜ್ಜಾದ ದೀಪಿಕಾ ಪಡುಕೋಣೆ ಮಾಜಿ ಪ್ರೇಮಿ ಸಿದ್ಧಾರ್ಥ್‌ ಮಲ್ಯ

Sidhartha Mallya: ಇಂಗ್ಲೆಂಡ್‌ನಲ್ಲಿ ತಲೆ ಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್‌ ಮಲ್ಯ ಪುತ್ರ, ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮಾಜಿ ಪ್ರೇಮಿ ಸಿದ್ಧಾರ್ಥ್‌ ಮಲ್ಯ ಶೀಘ್ರದಲ್ಲಿಯೇ ಹಸೆಮಣೆಗೇರಲಿದ್ದಾರೆ. ತಮ್ಮ ಬಹುಕಾಲದ ಗೆಳತಿ ಜಾಸ್ಮಿನ್ ಜತೆಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಅವರು ಸಜ್ಜಾಗಿದ್ದು, ಈ ವಾರ ಮದುವೆ ನೆರವೇರಲಿದೆ. ಲಂಡನ್‌ನಲ್ಲಿ ಆಪ್ತರ ಸಮ್ಮುಖದಲ್ಲಿ ವಿವಾಹ ಆಯೋಜಿಸಲಾಗಿದ್ದು, ಈಗಾಗಲೇ ಸಿದ್ಧತೆ ಆರಂಭವಾಗಿದೆ.

VISTARANEWS.COM


on

Sidhartha Mallya
Koo

ಲಂಡನ್‌: ಇಂಗ್ಲೆಂಡ್‌ನಲ್ಲಿ ತಲೆ ಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್‌ ಮಲ್ಯ ಪುತ್ರ ಸಿದ್ಧಾರ್ಥ್‌ ಮಲ್ಯ (Sidhartha Mallya) ಶೀಘ್ರದಲ್ಲಿಯೇ ಹಸೆಮಣೆಗೇರಲಿದ್ದಾರೆ. ತಮ್ಮ ಬಹುಕಾಲದ ಗೆಳತಿ ಜಾಸ್ಮಿನ್ ಜತೆಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಅವರು ಸಜ್ಜಾಗಿದ್ದು, ಈ ವಾರ ಮದುವೆ ನೆರವೇರಲಿದೆ. ಲಂಡನ್‌ನಲ್ಲಿ ಆಪ್ತರ ಸಮ್ಮುಖದಲ್ಲಿ ವಿವಾಹ ಆಯೋಜಿಸಲಾಗಿದ್ದು, ಈಗಾಗಲೇ ಸಿದ್ಧತೆ ಆರಂಭವಾಗಿದೆ. ಸಿದ್ಧಾರ್ಥ್‌ ಮಲ್ಯ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಜಾಸ್ಮಿನ್ ಜತೆಗಿರುವ ಫೋಟೊ ಪೋಸ್ಟ್‌ ಮಾಡಿದ್ದಾರೆ.

ʼʼಮದುವೆಯ ಖುಷಿಯ ಕ್ಷಣ ಆರಂಭವಾಯಿತುʼʼ ಎಂದು ಬರೆದುಕೊಂಡು ಫೋಟೊ ಹಂಚಿಕೊಂಡಿದ್ದಾರೆ. ಸಿದ್ಧಾರ್ಥ್‌ ಬಿಳಿ ಟಕ್ಸೆಡೋ ಮತ್ತು ಗುಲಾಬಿ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡರೆ, ಜಾಸ್ಮಿನ್ ತಿಳಿ ಹಸಿರು ಬಣ್ಣದ ಉಡುಪು ಧರಿಸಿ ನಗುತ್ತಾ ಪೋಸ್‌ ನೀಡಿದ್ದಾರೆ. ಸದ್ಯ ಈ ಜೋಡಿಗೆ ಸೋಷಿಯಲ್‌ ಮೀಡಿಯಾದಲ್ಲಿ ಶುಭಾಶಯಗಳ ಸುರಿಮಳೆಯೇ ಆಗುತ್ತಿದ್ದು, ಸೆಲೆಬ್ರಿಟಿಗಳು, ಅಭಿಮಾನಿಗಳು ಹಾರೈಸಿದ್ದಾರೆ.

ವರ್ಷದ ಹಿಂದೆಯೇ ಪ್ರಪೋಸ್‌

ಬಹುಕಾಲದ ಗೆಳತಿ ಜಾಸ್ಮಿನ್‌ಗೆ 2023ರ ಆರಂಭದಲ್ಲಿ ಸಿದ್ಧಾರ್ಥ್ ಪ್ರಪೋಸ್ ಮಾಡಿದ್ದರು. ಕ್ಯಾಲಿಫೋರ್ನಿಯಾದಲ್ಲಿನ ಹ್ಯಾಲೋವಿನ್ ಪಾರ್ಟಿಯಲ್ಲಿ ಸಿದ್ದಾರ್ಥ್ ಹಾಗೂ ಜಾಸ್ಮಿನ್ ಇಬ್ಬರು ಜತೆಯಾಗಿ ಪಾಲ್ಗೊಂಡಿದ್ದರು. ಈ ವೇಳೆ ಸಿದ್ದಾರ್ಥ್ ತಮ್ಮ ಪ್ರೀತಿಯನ್ನು ಹೇಳಿಕೊಂಡಿದ್ದರು. ಇದಕ್ಕೆ ಜಾಸ್ಮಿನ್ ಗ್ರೀನ್ ಸಿಗ್ನಲ್ ನೀಡಿದ್ದರು. ಬಳಿಕ ಈ ಜೋಡಿ ಕಳೆದ ವರ್ಷವೇ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಮದುವೆ ದಿನಾಂಕ ಶೀಘ್ರ ಬಹಿರಂಗಪಡಿಸುವುದಾಗಿ ಸಿದ್ಧಾರ್ಥ್‌ ತಿಳಿಸಿದ್ದರು.

ದೀಪಿಕಾ ಜತೆ ಪ್ರೀತಿಯಲ್ಲಿ ಬಿದ್ದಿದ್ದ ಸಿದ್ಧಾರ್ಥ್‌

ಕೆಲವು ವರ್ಷಗಳ ಹಿಂದೆ ಬಾಲಿವುಡ್‌ ಬೆಡಗಿ, ಕನ್ನಡತಿ ದೀಪಿಕಾ ಪಡುಕೋಣೆ ಮತ್ತು ಸಿದ್ಧಾರ್ಥ್‌ ಮಲ್ಯ ಡೇಟಿಂಗ್‌ ನಡೆಸುತ್ತಿದ್ದರು. ಇವರು ಐಪಿಎಲ್‌ ಪಂದ್ಯಗಳಿಗೆ ಜತೆಯಾಗಿ ತೆರಳುತ್ತಿದ್ದರು. ಒಂದೊಮ್ಮೆ ಇಬ್ಬರು ಪಂದ್ಯ ವೀಕ್ಷಿಸುತ್ತಿರುವಾಗಲೇ ಪರಸ್ಪರ ಚುಂಬಿಸಿ ಸದ್ದು ಮಾಡಿದ್ದರು. ಆರಂಭದಲ್ಲಿ ದೀಪಿಕಾ ಕಿಂಗ್‌ ಫಿಷರ್‌ ಕ್ಯಾಲಂಡರ್‌ಗೆ ಮಾಡೆಲ್‌ ಆಗಿದ್ದರು. ಆ ವೇಳೆ ಸಿದ್ಧಾರ್ಥ್‌ನ ಪರಿಚಯವಾಗಿತ್ತು. ಬಳಿಕ ಇಬ್ಬರು ಜತೆಗೆ ಹಲವು ಕಡೆ ಸುತ್ತಾಡುತ್ತಾ ಗಾಸಿಪ್‌ಗೆ ಆಹಾರವಾಗಿದ್ದರು. ಅದಾಗ್ಯೂ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಬಾಯ್ಬಿಟ್ಟಿರಲಿಲ್ಲ.

ಬಳಿಕ ಕಾರಣಾಂತರಗಳಿಂದ ಈ ಜೋಡಿ ಬೇರ್ಪಟ್ಟಿತ್ತು. ದೀಪಿಕಾ ಬಾಲಿವುಡ್‌ನಲ್ಲಿ ಗಟ್ಟಿಯಾಗಿ ನೆಲೆಯೂರಿದ್ದರು. ಬಳಿಕ ರಣವೀರ್‌ ಸಿಂಗ್‌ ಜತೆ ಸಪ್ತಪದಿ ತುಳಿದರು. ಇತ್ತ ಸಿದ್ಧಾರ್ಥ್‌ ತಂದೆ ಜತೆಗೆ ಲಂಡನ್‌ಗೆ ಹಾರಿ ಅಲ್ಲೇ ನೆಲೆಸಿದರು. ಬ್ರೇಕಪ್‌ ಆದ ಆರಂಭದಲ್ಲಿ ಸಿದ್ಧಾರ್ಥ್‌ ಸನ್ಯಾಸತ್ವ ಸ್ವೀಕರಿಸುತ್ತಾರೆ ಎಂಬೆಲ್ಲ ಸುದ್ದಿ ಹರಡಿದ್ದವು. ಲಂಡನ್‌ಗೆ ಪರಾರಿಯಾದ ಬಳಿಕ ಸಿದ್ದಾರ್ಥ್ ಮತ್ತು ಜಾಸ್ಮಿನ್ ಆತ್ಮೀಯರಾಗಿದ್ದರು.

ಇದನ್ನೂ ಓದಿ: Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ಜನಿಸಿದ ಸಿದ್ಧಾರ್ಥ್‌ ಮಲ್ಯ ಲಂಡನ್‌ನಲ್ಲಿ ಶಿಕ್ಷಣ ಪೂರೈಸಿದರು. ಪದವಿ ಪಡೆದ ನಂತರ ಅವರು ಮಾಡೆಲ್‌ ಮತ್ತು ನಟನಾಗಿ ವೃತ್ತಿ ಜೀವನ ಆರಂಭಿಸಿದರು. ಬ್ರಾಹ್ಮಣ ನಮನ್ (Brahman Naman), ಬೆಸ್ಟ್‌ ಫೇಕ್‌ ಫ್ರೆಂಡ್ಸ್‌ (Best Fake Friends) ಮುಂತಾದ ಚಿತ್ರಗಳಲ್ಲಿ ನಟಿಸಿದರು. ಬಳಿಕ ಅಭಿನಯದಿಂದ ದೂರ ಸರಿದಿದ್ದರು.

Continue Reading

ಬಾಲಿವುಡ್

Sonakshi Sinha: ಮುಸ್ಲಿಂ ಹುಡುಗನ ಜತೆ ಮಗಳು ಸೋನಾಕ್ಷಿ ಮದುವೆ; ಶತ್ರುಘ್ನ ಸಿನ್ಹಾ ಮುನಿಸು?

Sonakshi Sinha: ಶತ್ರುಘ್ನ ತಮ್ಮ ಮಗಳೊಂದಿಗೆ ಅಸಮಾಧಾನ ಹೊಂದಿದ್ದಾರೆ. ಆದರೆ ಈ ಮುನಿಸು ಹೆಚ್ಚು ಕಾಲ ಉಳಿಯುವುದಿಲ್ಲ. ಶತ್ರುಘ್ನ ಕೂಡ ಮದುವೆ (Sonakshi Sinha’s Wedding) ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸೋನಾಕ್ಷಿ ಅವರ ಮಾವ ಪಹ್ಲಾಜ್ ನಿಹಲಾನಿ ತಿಳಿಸಿದ್ದಾರೆ.

VISTARANEWS.COM


on

By

Sonakshi Sinha
Koo

ಮುಂಬಯಿ: ಬಾಲಿವುಡ್ ನಟಿ (bollywood actress) ಸೋನಾಕ್ಷಿ ಸಿನ್ಹಾ (Sonakshi Sinha) ಮುಸ್ಲಿಂ ಹುಡುಗನ ಜತೆ ಮದುವೆ ಆಗುತ್ತಿರುವ ಬಗ್ಗೆ (Sonakshi Sinha’s Wedding) ಮತ್ತು ತಮ್ಮ ಮದುವೆ ಬಗ್ಗೆ ಮೊದಲೇ ತಿಳಿಸದಿದ್ದಕ್ಕಾಗಿ ತಂದೆ ಶತ್ರುಘ್ನ ಸಿನ್ಹಾ (Shatrughan Sinha) ಅವರು ಅಸಮಾಧಾನಗೊಂಡಿದ್ದಾರೆ ಎಂದು ಸೋನಾಕ್ಷಿ ಅವರ ಮಾವ ಪಹ್ಲಾಜ್ ನಿಹಲಾನಿ (Pahlaj Nihalani) ಖಚಿತಪಡಿಸಿದ್ದಾರೆ.

ಕಳೆದ ವಾರವಷ್ಟೇ ಸೋನಾಕ್ಷಿ ಅವರು ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರನ್ನು ವರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಬಳಿಕ ಇದನ್ನು ಮದುವೆಯ ಆಮಂತ್ರಣವು ದೃಢಪಡಿಸಿತು. ಸೋನಾಕ್ಷಿ ಏಳು ವರ್ಷಗಳಿಂದ ಜಹೀರ್ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ. ಮದುವೆಯ ವದಂತಿಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಶತ್ರುಘ್ನ ಅವರು ಮದುವೆಯ ಬಗ್ಗೆ ತಿಳಿದಿರಲಿಲ್ಲ ಎಂದು ಒಪ್ಪಿಕೊಂಡರು. ಮಾತ್ರವಲ್ಲದೇ ಅವರು ಇದರಿಂದ ಅಸಮಾಧಾನಗೊಂಡಿರುವುದು ಅವರ ಹೇಳಿಕೆಯಿಂದ ತಿಳಿದು ಬಂದಿತ್ತು.

ಈ ಬಗ್ಗೆ ಪಹ್ಲಾಜ್ ನಿಹಲಾನಿ ಅವರು ಪ್ರತಿಕ್ರಿಯೆ ನೀಡಿದ್ದು, ಶತ್ರುಘ್ನ ತಮ್ಮ ಮಗಳೊಂದಿಗೆ ಅಸಮಾಧಾನ ಹೊಂದಿದ್ದಾರೆ. ಆದರೆ ಅದು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಅವರು ಖಚಿತಪಡಿಸಿದರು. ಶತ್ರುಘ್ನ ಕೂಡ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.


ಸೋನಾಕ್ಷಿ ಅವರ ಮುದ್ದಿನ ಮಗಳು. ಅವರು ಮದುವೆಗೆ ಬಾರದೇ ಇರಲು ಸಾಧ್ಯವೇ ಇಲ್ಲ. ಶತ್ರುಜಿ ಅವರು “”ಈಗಿನ ಮಕ್ಕಳು ಪೋಷಕರ ಅನುಮತಿ ಪಡೆಯದೇ ಮದುವೆಯಾಗುತ್ತಾರೆ. ಸೋನಾಕ್ಷಿ ತನ್ನ ಇಷ್ಟದ ಹುಡುಗನನ್ನು ಮದುವೆಯಾಗುವುದಾದರೆ ನಾನೇಕೆ ಅಸಮಾಧಾನಗೊಳ್ಳಬೇಕುʼʼ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ನಲವತ್ತು ವರ್ಷಗಳ ಹಿಂದೆ ತಮಗೆ ಇಷ್ಟವಾದ ಹುಡುಗಿಯನ್ನು ಮದುವೆಯಾಗಿದ್ದಾರೆ. ನಾನು ನನ್ನ ಹೆಂಡತಿಯನ್ನು ಮದುವೆಯಾದಾಗ ನಾನು ನನ್ನ ಜೀವನ ಸಂಗಾತಿಯನ್ನು ಆರಿಸಿಕೊಂಡೆ. ಒಬ್ಬನು ತನ್ನ ಮಕ್ಕಳಿಂದ ಅವಾಸ್ತವಿಕ ನಿರೀಕ್ಷೆಗಳನ್ನು ಹೊಂದಿರಬಾರದು ಎಂದು ಶತ್ರುಘ್ನ ಸಿನ್ಹಾ ಇತ್ತೀಚೆಗೆ ಹೇಳಿದ್ದರು.

ಶತ್ರುಘ್ನ ಅವರ ಆರಂಭಿಕ ಪ್ರತಿಕ್ರಿಯೆಯನ್ನು ಸಮರ್ಥಿಸಿಕೊಂಡ ಪಹ್ಲಾಜ್, ಚುನಾವಣೆಯಿಂದಾಗಿ ಅವರು ಸುಮಾರು ಮೂರು ತಿಂಗಳ ಕಾಲ ಮುಂಬಯಿನಿಂದ ಹೊರಗಿದ್ದರು. ಶತ್ರುಘ್ನ ಅವರ ಪತ್ನಿಗೆ ಈ ವಿಷಯ ಗೊತ್ತಿರಬೇಕು. ಶತ್ರುಘ್ನ ಅವರು ಹಿಂದಿರುಗಿದ ಅನಂತರ ಅವರಿಗೆ ಈ ಬಗ್ಗೆ ಹೇಳಲು ನಿರ್ಧರಿಸಿರಬೇಕು. ಈಗ ಅವರು ಮುಂಬಯಿಗೆ ಮರಳಿದ್ದಾರೆ ಮತ್ತು ಸೋನಾಕ್ಷಿ ಮತ್ತು ಅವರ ಕುಟುಂಬದ ನಡುವೆ ಎಲ್ಲವೂ ಚೆನ್ನಾಗಿದೆ ಎಂದು ತಿಳಿಸಿದರು.


ಶತ್ರುಘ್ನ ಹೇಳಿದ್ದೇನು?

ಸೋನಾಕ್ಷಿ ವಿವಾಹದ ಕುರಿತು ಮಾತನಾಡಿದ್ದ ಶತ್ರುಘ್ನ ಅವರು, ನನಗೆ ಸೋನಾಕ್ಷಿ ಮದುವೆ ಬಗ್ಗೆ ಯಾಕೆ ತಿಳಿದಿಲ್ಲ ಎಂದು ನನ್ನ ಹತ್ತಿರದ ಜನರು ನನ್ನನ್ನು ಕೇಳುತ್ತಿದ್ದಾರೆ. ನಾನು ಹೇಳುವುದು ಇಷ್ಟೇ, ಅವರು ಇವತ್ತಿನ ಮಕ್ಕಳು ತಂದೆ ತಾಯಿಯ ಅನುಮತಿ ಕೇಳುವುದಿಲ್ಲ. ಕೇವಲ ಮಾಹಿತಿ ನೀಡುತ್ತಾರೆ. ನಾವು ಆ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದಿದ್ದರು.

ಅವರ ಈ ಹೇಳಿಕೆ ಬಳಿಕ ಮದುವೆಯ ವದಂತಿಗಳನ್ನು ಅವರು ದೃಢೀಕರಿಸದೇ ಇದ್ದರೂ, ಸೋನಾಕ್ಷಿಗೆ ತಮ್ಮ ಜೀವನದ ಮಹತ್ವದ ದಿನಕ್ಕಾಗಿ ಎಲ್ಲಾ ಆಶೀರ್ವಾದಗಳನ್ನು ನೀಡುತ್ತಿದ್ದೇನೆ ಎಂದು ಹೇಳಿದ್ದರು.

ನನ್ನ ಮಗಳು ಮದುವೆಯಾದರೆ ನಾನು ಅವಳಿಗೆ ನನ್ನ ಆಶೀರ್ವಾದವನ್ನು ನೀಡುತ್ತೇನೆ. ಅವಳ ನಿರ್ಧಾರ ಮತ್ತು ಆಯ್ಕೆಯನ್ನು ಬೆಂಬಲಿಸುತ್ತೇನೆ. ಸೋನಾಕ್ಷಿಗೆ ತನ್ನ ಒಡನಾಡಿಯನ್ನು ಆಯ್ಕೆ ಮಾಡುವ ಹಕ್ಕಿದೆ ಮತ್ತು ಅವಳ ಮದುವೆಯ ದಿನದಂದು ನಾನು ಅತ್ಯಂತ ಸಂತೋಷದ ತಂದೆಯಾಗುತ್ತೇನೆ. ನಾನು ಯಾವಾಗಲೂ ಅವಳಿಗೆ ಶುಭ ಹಾರೈಸುತ್ತೇನೆ ಎಂದು ಶತ್ರುಘ್ನ ಹೇಳಿದರು. ಮುಂಬಯಿನಲ್ಲಿ ಆತ್ಮೀಯರ ಸಮ್ಮುಖದಲ್ಲಿ ಜೂನ್ 23ರಂದು ಸೋನಾಕ್ಷಿ ಮತ್ತು ಜಹೀರ್ ವಿವಾಹವಾಗಲಿದ್ದಾರೆ.

Continue Reading

ಕರ್ನಾಟಕ

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Actor Chikkanna: Actor Chikkanna: ರೇಣುಕಾಸ್ವಾಮಿ ಕೊಲೆಯಾದ ದಿನವೇ ಅಂದರೆ, ಜೂನ್‌ 8ರಂದು ನಟ ದರ್ಶನ್‌ ಜತೆ ಪಾರ್ಟಿ ಮಾಡಿರುವುದು ನಿಜ ಎಂಬುದಾಗಿ ನಟ ಚಿಕ್ಕಣ್ಣ ಒಪ್ಪಿಕೊಂಡಿದ್ದಾರೆ. ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಮಹಜರು ಮಾಡುವ ವೇಳೆ ಪಬ್‌ಗೆ ತೆರಳಿದ ಚಿಕ್ಕಣ್ಣ, ಪಾರ್ಟಿಯ ಕುರಿತು ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೂ ತೆರಳಿ, ಸುಮಾರು ಮೂರು ತಾಸು ವಿಚಾರಣೆ ಎದುರಿಸಿದ್ದಾರೆ.

VISTARANEWS.COM


on

actor darshan Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ನಟ ಚಿಕ್ಕಣ್ಣ (Actor Chikkanna) ಅವರನ್ನೂ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ದಿನವಾದ ಜೂನ್‌ 8ರಂದೇ ಕೊಲೆ ಆರೋಪಿ ನಟ ದರ್ಶನ್‌ (Actor Darshan) ಜತೆಗೆ ಚಿಕ್ಕಣ್ಣ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದು, ಅದರಂತೆ ಚಿಕ್ಕಣ್ಣ ಅವರು ವಿಚಾರಣೆಗೆ ಹಾಜರಾದರು. ಸುಮಾರು ಮೂರು ತಾಸಿನ ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚಿಕ್ಕಣ್ಣ, “ದರ್ಶನ್‌ ಅವರು ಜೂನ್‌ 8ರಂದು ಊಟಕ್ಕೆ ಕರೆದಿದ್ರು, ಹೋಗಿದ್ದೆ” ಎಂದಷ್ಟೇ ತಿಳಿಸಿದ್ದಾರೆ.

“ಸಾಮಾನ್ಯವಾಗಿ ದರ್ಶನ್‌ ಅವರು ನನ್ನನ್ನು ಊಟಕ್ಕೆ ಕರೆಯುತ್ತಾರೆ. ಅದರಂತೆ, ಜೂನ್‌ 8ರಂದು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಊಟಕ್ಕೆ ಹೋಗಿದ್ದೆ. ಊಟ ಮುಗಿಸಿಕೊಂಡು ನಾನು ಅಲ್ಲಿಂದ ತೆರಳಿದೆ. ಅದಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆದಿದ್ದರು” ಎಂಬುದಾಗಿ ಚಿಕ್ಕಣ್ಣ ಮೊದಲ ಪ್ರತಿಕ್ರಿಯೆ ನೀಡಿದರು. “ದರ್ಶನ್‌ ಜತೆ ಊಟಕ್ಕೆ ಹೋದಾಗ ಯಾರ‍್ಯಾರು ಇದ್ದರು” ಎಂದು ಮಾಧ್ಯಮದವರು ಕೇಳಿದ್ದಕ್ಕೆ, “ಪ್ರಕರಣವು ವಿಚಾರಣೆ ಹಂತದಲ್ಲಿದೆ. ನಾನು ಇದುವರೆಗೆ ವಿಚಾರಣೆಗೆ ಸಹಕರಿಸಿದ್ದೇನೆ. ಇದಕ್ಕಿಂತ ಹೆಚ್ಚೇನೂ ಹೇಳಲು ಆಗುವುದಿಲ್ಲ” ಎಂಬುದಾಗಿ ಪ್ರತಿಕ್ರಿಯಿಸಿದರು.

ರೇಣುಕಾಸ್ವಾಮಿ ಕೊಲೆಗೀಡಾದ ದಿನವೇ ಸ್ಟೋನಿ ಬ್ರೂಕ್‌ನಲ್ಲಿ ದರ್ಶನ್‌ ಸೇರಿ ಹಲವರು ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಣ್ಣ ಅವರೂ ಸ್ಥಳ ಮಹಜರಿನ ವೇಳೆ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿಯೇ, ದರ್ಶನ್‌ ಜತೆ ಪಾರ್ಟಿ ಮಾಡಿರುವುದನ್ನು ಚಿಕ್ಕಣ್ಣ ಪೊಲೀಸರ ಎದುರು ಒಪ್ಪಿಕೊಂಡಿದ್ದಾರೆ.

“ಜೂನ್‌ 8ರಂದು ಆರ್‌ ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ಗೆ ಹೋಗಿದ್ದೆ. ಮಧ್ಯಾಹ್ನ 1.30ರ ಸುಮಾರಿಗೆ ಪಬ್‌ಗೆ ಹೋಗಿದ್ದೆ. ದರ್ಶನ್‌ ಹಾಗೂ ನಾನು ಒಂದೇ ಟೇಬಲ್‌ನಲ್ಲಿ ಪಾರ್ಟಿ ಮಾಡಿದ್ವಿ. ಸಂಜೆ 4.30ರ ಸುಮಾರಿಗೆ ದರ್ಶನ್‌ ಅವರು ಪಬ್‌ನಿಂದ ಹೊರಟರು. ಅವರ ಜತೆ ನಾನೂ ಅಲ್ಲಿಂದ ಹೊರಟೆ. ನಾನು ನಮ್ಮ ಮನೆಗೆ ಹೋದೆ, ದರ್ಶನ್‌ ಅವರು ಎಲ್ಲಿಗೆ ಹೋದರೋ ಗೊತ್ತಿಲ್ಲ. ನಾವು ಸಿನಿಮಾ ವಿಚಾರಕ್ಕಾಗಿ ಭೇಟಿ ಮಾಡಿದ್ವಿ. ಅದಷ್ಟೇ ಮಾತನಾಡಿ ನಾವು ಹೊರಟು ಹೋದೆವು” ಎಂಬುದಾಗಿ ಪೊಲೀಸರಿಗೆ ಚಿಕ್ಕಣ್ಣ ಮಾಹಿತಿ ನೀಡಿದ್ದಾರೆ.

ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡ ಹೋದ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಇದಾದ ನಂತರ ಚಿಕ್ಕಣ್ಣ ಅವರು ಕೂಡ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೆ ಹೋದ ವಿಡಿಯೊ ಕೂಡ ಲಭ್ಯವಾಗಿದೆ. ಪಾರ್ಟಿ ಹಿನ್ನೆಲೆಯಲ್ಲಿ ನಟ ಚಿಕ್ಕಣ್ಣ ಅವರಿಗೆ ಇದಕ್ಕೂ ಮೊದಲು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದರು. ಇದು ಚಿಕ್ಕಣ್ಣ ಅವರಿಗೂ ಆತಂಕ ತಂದಿತ್ತು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Continue Reading
Advertisement
Job News
Latest27 seconds ago

Job News: ಕೇಂದ್ರ ಸರ್ಕಾರದಿಂದ ‘ಎಲೆಕ್ಟ್ರಾನಿಕ್’ ಯೋಜನೆ;‌ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿ!

Amala Paul
ಸಿನಿಮಾ23 mins ago

Amala Paul: ಮದುವೆಯಾದ 8 ತಿಂಗಳಿಗೇ ಗಂಡು ಮಗುವಿಗೆ ಜನ್ಮ ನೀಡಿದ ಸುದೀಪ್‌ ಚಿತ್ರದ ನಾಯಕಿ

Prajwal Revanna case
ಕ್ರೈಂ26 mins ago

Prajwal Revanna Case: ಪ್ರಜ್ವಲ್ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ;‌ ʼಎಸ್‌ಐಟಿ ಅಧಿಕಾರಿಗಳು ಸರಿಯಾಗಿ ನೋಡ್ಕೋತಿಲ್ಲʼ ಎಂದು ದೂರು

Udupi Gang War
ಉಡುಪಿ34 mins ago

Udupi Gang War : ಉಡುಪಿಯಲ್ಲಿ ನಿಲ್ಲದ ಗ್ಯಾಂಗ್ ವಾರ್; ಇಬ್ಬರು ಪುಂಡರು ಅಂದರ್‌

Actor Darshan
ಕರ್ನಾಟಕ51 mins ago

Actor Darshan: 2021ರಲ್ಲಿ ದರ್ಶನ್ ನನ್ನ ಮಾತು ಕೇಳಿದ್ದಿದ್ರೆ ಹೀಗಾಗುತ್ತಿರಲಿಲ್ಲ: ಇಂದ್ರಜಿತ್ ಲಂಕೇಶ್

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಖರೀದಿಸುವವರಿಗೆ ಗುಡ್‌ನ್ಯೂಸ್‌; ಮತ್ತೆ ಇಳಿದ ಚಿನ್ನದ ದರ

Austria vs France
ಕ್ರೀಡೆ1 hour ago

Austria vs France: ಗಂಭೀರ ಗಾಯಗೊಂಡ ಎಂಬಾಪೆ; ಮುಂದಿನ ಪಂದ್ಯಕ್ಕೆ ಅನುಮಾನ

Murder case
ಹಾಸನ1 hour ago

Murder Case : ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದು ನೇಣಿಗೆ ಶರಣಾದ ಪತಿ

murder Case
ಶಿವಮೊಗ್ಗ2 hours ago

Murder Case : ಸ್ಮಶಾನಕ್ಕೆ ಕರೆದೊಯ್ದು ಸ್ನೇಹಿತನನ್ನೇ ಕೊಂದು ಹಾಕಿದ ಮಿತ್ರದ್ರೋಹಿ

NEET UG 2024
ದೇಶ2 hours ago

NEET UG 2024: ನೀಟ್ ಯುಜಿ ವಿವಾದ; ಶೇ. 0.001ರಷ್ಟು ನಿರ್ಲಕ್ಷ್ಯವೂ ಸಹಿಸಲು ಸಾಧ್ಯವಿಲ್ಲ ಎಂದು ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌