Abhishek Ambareesh | ʻಯಂಗ್‌ ರೆಬಲ್‌ ಸ್ಟಾರ್‌ʼ ಅಭಿಷೇಕ್‌ ಅಂಬರೀಶ್‌ ನಿಶ್ಚಿತಾರ್ಥ: ವೈರಲ್‌ ಆಯ್ತು ಫೋಟೊ! - Vistara News

ಸಿನಿಮಾ

Abhishek Ambareesh | ʻಯಂಗ್‌ ರೆಬಲ್‌ ಸ್ಟಾರ್‌ʼ ಅಭಿಷೇಕ್‌ ಅಂಬರೀಶ್‌ ನಿಶ್ಚಿತಾರ್ಥ: ವೈರಲ್‌ ಆಯ್ತು ಫೋಟೊ!

ರೆಬೆಲ್‌ ಸ್ಟಾರ್‌ ಅಂಬರೀಶ್‌ ಅವರ ಪುತ್ರ ಅಭಿಷೇಕ್‌ ಅಂಬರೀಶ್‌ (Abhishek Ambareesh) ಅವರ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿದೆ.

VISTARANEWS.COM


on

Abhishek Ambareesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ರೆಬೆಲ್‌ ಸ್ಟಾರ್‌ ಅಂಬರೀಶ್‌ ಅವರ ಪುತ್ರ ಅಭಿಷೇಕ್‌ ಅಂಬರೀಶ್‌ (Abhishek Ambareesh) ಅವರ ನಿಶ್ಚಿತಾರ್ಥ ಡಿಸೆಂಬರ್‌ 11 ಭಾನುವಾರ ಖಾಸಗಿ ಹೋಟೇಲ್‌ನಲ್ಲಿ ನಡೆದಿದೆ. ಸದ್ದಿಲ್ಲದೇ ಉಂಗುರ ಪೂಜೆ ಕುಟುಂಬಸ್ಥರು ಮಾಡಿದ್ದು, ಅವೀವಾ ಬಿದ್ದಪ್ಪ ಜತೆ ಸಪ್ತಪದಿ ತುಳಿಯಲಿದ್ದಾರೆ ಅಭಿಷೇಕ್.

ಸ್ಯಾಂಡಲ್‌ವುಡ್‌ ಸ್ಟಾರ್ ನಟರು ಹಾಗೂ ರಾಜಕೀಯ ಗಣ್ಯರು ಸೇರಿದಂತೆ ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ಅಭಿಷೇಕ್ ಹಾಗೂ ಅವೀವಾ ನಿಶ್ಚಿತಾರ್ಥ ನಡೆದಿದೆ. ಬೆಳಗ್ಗೆ 9:30ರಿಂದ 10.30ರ ವೇಳೆ ಕಾರ್ಯಕ್ರಮ ನಡೆದಿದೆ.

ಇದನ್ನೂ ಓದಿ | Abhishek Ambareesh | ಖ್ಯಾತ ಫ್ಯಾಷನ್ ಡಿಸೈನರ್ ಪುತ್ರಿ ಜತೆ ಎಂಗೇಜ್‌ ಆಗ್ತಿದ್ದಾರಂತೆ ಅಭಿಷೇಕ್‌ ಅಂಬರೀಷ್!

ಬಹುಕಾಲದ ಗೆಳತಿ ಅವೀವಾ ಬಿದ್ದಪ್ಪ ಜತೆ ಅಭಿಷೇಕ್‌ ಅಂಬರೀಶ್‌ ವಿವಾಹವಾಗಲಿದ್ದು, ಸಂಕ್ರಾಂತಿ ನಂತರ ಜೋಡಿ ಸಪ್ತಪದಿ ತುಳಿಯಲಿದೆ. ಇವರು ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರು ಪುತ್ರಿಯಾಗಿದ್ದಾರೆ.

ಇದನ್ನೂ ಓದಿ | Abhishek Ambareesh | ಅವೀವಾ ಬಿದ್ದಪ್ಪ ಜತೆ ವಿವಾಹವಾಗಲಿರುವ ಅಭಿಷೇಕ್ ಅಂಬರೀಶ್‌: ನಿಶ್ಚಿತಾರ್ಥಕ್ಕೆ ಮುಹೂರ್ತ ಫಿಕ್ಸ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Mahanati Show: ಫಿನಾಲೆಗೆ ಆಯ್ಕೆಯಾಗಿಲ್ಲ ದಾವಣಗೆರೆ ಟೀಚರ್; ಕೋಪಗೊಂಡ ನೆಟ್ಟಿಗರು!

Mahanati Show: ಆರಂಭದಲ್ಲಿ ಬಿಂದು ಹೊನ್ನಾಳ್ಳಿ ಅವರ ಪ್ರತಿಭೆಗೆ ತೀರ್ಪುಗಾರರು ಮೆಚ್ಚುಗೆ ಹೊರ ಹಾಕಿದ್ದರು. ರಮೇಶ್‌ ಅರವಿಂದ್‌, ಪ್ರೇಮಾ ಹಾಗೂ ತರುಣ್‌ ಸೇರಿದಂತೆ ಬಿಂದು ಅವರ ನಟನೆಗೆ ಹಾಡಿ ಹೊಗಳುತ್ತಿದ್ದರು. ಇದೀಗ ಕೊನೆಯ ಹಂತದಲ್ಲಿ ಅವರನ್ನು ಕೈ ಬಿಡಲಾಗಿದ್ದು, ನೆಟ್ಟಿಗರು ಅಸಮಾಧಾನ ಹೊರ ಹಾಕಿದ್ದಾರೆ.

VISTARANEWS.COM


on

Mahanati Show bindu honnali not selected
Koo

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ‘ಮಹಾನಟಿ’ ರಿಯಾಲಿಟಿ ಶೋ (Mahanati Show) ಪ್ರಸಾರ ಕಾಣುತ್ತಿದೆ. ಈಗಾಗಲೇ ಸ್ಪರ್ಧಿಗಳು ಫಿನಾಲೆ ತಲುಪಿದ್ದಾರೆ. ಫಿನಾಲೆ ಹಂತದಲ್ಲಿ ಇರುವ ಈ ಮಹಾನಟಿ ಶೋಗೆ ಟಾಪ್‌ ಐದು ಮಂದಿ ಆಯ್ಕೆ ಮಾಡಲಾಗಿದೆ. ಗಗನ, ಪ್ರಿಯಾಂಕಾ, ಶ್ವೇತಾ ಭಟ್, ಆರಾಧನಾ ಭಟ್ ಹಾಗೂ ಧನ್ಯಶ್ರೀ ಫಿನಾಲೆಗೆ ಆಯ್ಕೆಯಾಗಿದ್ದಾರೆ. ಆದರೆ ಗ್ರಾಮೀಣ ಪ್ರತಿಭೆ ಸ್ಪರ್ಧಿ ಬಿಂದು ಹೊನ್ನಾಳಿ ಆಯ್ಕೆ ಆಗಿಲ್ಲ. ಈ ಬಗ್ಗೆ ನೆಟ್ಟಿಗರು ಅಸಮಾಧಾನ ಹೊರ ಹಾಕಿದ್ದಾರೆ.

ಆರಂಭದಲ್ಲಿ ಬಿಂದು ಹೊನ್ನಾಳ್ಳಿ ಅವರ ಪ್ರತಿಭೆಗೆ ತೀರ್ಪುಗಾರರು ಮೆಚ್ಚುಗೆ ಹೊರ ಹಾಕಿದ್ದರು. ರಮೇಶ್‌ ಅರವಿಂದ್‌, ಪ್ರೇಮಾ ಹಾಗೂ ತರುಣ್‌ ಸೇರಿದಂತೆ ಬಿಂದು ಅವರ ನಟನೆಗೆ ಹಾಡಿ ಹೊಗಳುತ್ತಿದ್ದರು. ಇದೀಗ ಕೊನೆಯ ಹಂತದಲ್ಲಿ ಅವರನ್ನು ಕೈ ಬಿಡಲಾಗಿದ್ದು, ನೆಟ್ಟಿಗರು ಅಸಮಾಧಾನ ಹೊರ ಹಾಕಿದ್ದಾರೆ.

ಬಿಂದು ಹೊನ್ನಾಳಿ ಅವರು ದಾವಣಗೆರೆ ಮೂಲದವರು ವೃತ್ತಿಯಲ್ಲಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದಾರೆ. ಹಾಗಂತ ಇವರು ಕೇವಲ ಶಿಕ್ಷಕಿಯಷ್ಟೇ ಅಲ್ಲ. ಇವರು ಕಲಾವಿದೆಯಾಗಿಯೂ ಗುರುತಿಸಿಕೊಂಡಿದ್ದಾರೆ. ಹಾಗೆಯೇ ಇವರು ದಾವಣಗೆರೆಯಲ್ಲಿ ಎಲ್‌ಐಸಿ ಎಜೆಂಟ್ ಕೂಡ ಆಗಿದ್ದಾರೆ. ಇದೀಗ ಅವರಿಗೆ ಓಟ್‌ ಬಿದ್ದ ಮೇಲೆಯೂ ಫಿನಾಲೆಗೆ ಸೆಲೆಕ್ಟೆ ಮಾಡಿಲ್ಲ ಎಂದು ಅಸಮಾಧಾನ ಹೊರ ಹಾಕುತ್ತಿದ್ದಾರೆ ನೆಟ್ಟಿಗರು. ಇದೀಗ ನೆಟ್ಟಿಗರು ಟಿಆರ್‌ಪಿಗೆ ಬೆಲೆ ಕೊಡುವ ಬದಲು, ಪ್ರತಿಭೆಗೆ ಬೆಲೆ ಕೊಟ್ಟರೆ ಚೆನ್ನಾಗಿರುತ್ತಿತ್ತು ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: Mahanati Show: ‘ಮಹಾನಟಿʼ ವೇದಿಕೆಯಲ್ಲಿ ನಟ ರಿಷಿ ಫೋನ್‌ ನಂಬರ್‌ ಕೇಳಿದ ಚಿತ್ರದುರ್ಗದ ಗಗನಾ!

ಮಹಾನಟಿ’ ರಿಯಾಲಿಟಿ ಶೋಗೆ ಈ ಬಾರಿ ಮೂರು ಹೊಸ ತೀರ್ಪುಗಾರರು ವೇದಿಕೆಯನ್ನ ಅಲಂಕರಿಸಿದ್ದಾರೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ, ನಟ ರಮೇಶ್‌ ಅರವಿಂದ್‌, ಖ್ಯಾತ ನಾಯಕ ನಟಿ ಪ್ರೇಮಾ, ‘ಕಾಟೇರ’ದಂತಹ ಯಶಸ್ವಿ ಚಿತ್ರಕೊಟ್ಟ ನಿರ್ದೇಶಕ ತರುಣ್‌ ಸುಧೀರ್‌ ಮತ್ತು ಯುವ ನಾಯಕ ನಟಿ ನಿಶ್ವಿಕಾ ನಾಯ್ಡು ಈ ರಿಯಾಲಿಟಿ ಶೋನ ತೀರ್ಪುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Manvita Kamath: ಪತಿ ಅರುಣ್ ಜತೆ ಬಾಲಿಯಲ್ಲಿ ಸಖತ್‌ ಎಂಜಾಯ್‌ ಮಾಡುತ್ತಿರುವ ಮಾನ್ವಿತಾ ಕಾಮತ್!

Manvita Kamath: ಅರುಣ್‌ ಕೂಡ ಮಾನ್ವಿತಾ ಅವರು ಮದುವೆ ಬಳಿಕ ಸಿನಿಮಾ ಮಾಡಿದರೂ ಯಾವುದೇ ಅಭ್ಯಂತರ ಇಲ್ಲ ಎಂದಿದ್ದರು. ಮೈಸೂರಿನಲ್ಲಿ ಅರುಣ್ ಎಂಜಿನಿಯರಿಂಗ್ ಮಾಡಿದ್ದಾರೆ. ಅವರಿಗೆ ಸಿನಿಮಾ ರಂಗದಲ್ಲಿ ಹೆಚ್ಚು ಆಸಕ್ತಿ ಇಲ್ಲವಂತೆ.ಮಾನ್ವಿತಾ ಅವರದ್ದು ಅರೇಂಜ್ಡ್ ಮ್ಯಾರೇಜ್.

VISTARANEWS.COM


on

Manvita Kamath Honeymoon in baali
Koo

ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ (Manvita Kamath) ಅವರು ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಸದ್ಯ ಹನಿಮೂನ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ಇದನ್ನೂ ಓದಿ: Manvita Kamath: ಮದುವೆ ಆದ ಒಂದು ತಿಂಗಳ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ʻಟಗರು ಪುಟ್ಟಿʼ!

ಸದ್ಯ ಬಾಲಿಗೆ ಹಾರಿದ್ದಾರೆ. ಪತಿ ಅರುಣ್ ಜೊತೆ ವಿದೇಶದಲ್ಲಿ ಸುತ್ತಾಡುತ್ತಿದ್ದಾರೆ.
ಕೇಸರಿ ಬಣ್ಣದ ಡ್ರೆಸ್ ಧರಿಸಿ ತಲೆಗೆ ಹ್ಯಾಟ್ ಹಾಕಿ ಬಾಲಿಯ (Bali) ಸುಂದರ ಜಾಗಗಳಿಗೆ ಪತಿ ಜೊತೆ ನಟಿ ಭೇಟಿ ನೀಡುತ್ತಿದ್ದಾರೆ
ಮಾನ್ವಿತಾ ಅವರದ್ದು ಅರೇಂಜ್ಡ್ ಮ್ಯಾರೇಜ್. ಮುಂದಿನ 3 ತಿಂಗಳು ಶುಭ ಮುಹೂರ್ತ ಇರಲಿಲ್ಲ. ಹೀಗಾಗಿ, ಮೇ 1ಕ್ಕೆ ಜೋಡಿ ಹಸೆಮಣೆ ಏರಿತ್ತು.
Continue Reading

ಸ್ಯಾಂಡಲ್ ವುಡ್

Kiccha Sudeep: ಇಬ್ಬರಿಗೆ ಮಾತ್ರ ʻಬಾಸ್‌ʼ ಎಂದು ಕರೆಯುವೆ ಎಂದ ಕಿಚ್ಚ; ಯಾರವರು?

Kiccha Sudeep: ಬಿಲ್ಲಾ ರಂಗ ಭಾಷಾ’ಗಾಗಿ ರೆಡಿಯಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಮೂರು ಪಾತ್ರಗಳಲ್ಲಿ ಸುದೀಪ್ ನಟಿಸಲಿದ್ದಾರೆ ಎನ್ನಲಾಗುತ್ತಿದ್ದು, ಒಂದೊಂದು ಪಾತ್ರಕ್ಕೆ ಒಂದೊಂದು ರೀತಿ ಮ್ಯಾನರಿಸಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಕಿಚ್ಚ ಅವರು ತಾವು ಬಾಸ್‌ ಎಂದು ಯಾರಿಗೆ ಕರೆಯುತ್ತೇನೆ ಎಂದು ಹೇಳಿಕೊಂಡಿರುವ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ.

VISTARANEWS.COM


on

Kiccha Sudeep Call Boss To Only Two Persons
Koo

ಬೆಂಗಳೂರು: ‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ʻಮ್ಯಾಕ್ಸ್ʼ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ಈಗಾಗಲೇ ಸಿನಿಮಾ ಚಿತ್ರೀಕರಣ ಮುಗಿಸಿದ್ದು, ಮುಂದಿನ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಬಿಲ್ಲಾ ರಂಗ ಭಾಷಾ’ಗಾಗಿ ರೆಡಿಯಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಮೂರು ಪಾತ್ರಗಳಲ್ಲಿ ಸುದೀಪ್ ನಟಿಸಲಿದ್ದಾರೆ ಎನ್ನಲಾಗುತ್ತಿದ್ದು, ಒಂದೊಂದು ಪಾತ್ರಕ್ಕೆ ಒಂದೊಂದು ರೀತಿ ಮ್ಯಾನರಿಸಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಕಿಚ್ಚ ಅವರು ತಾವು ಬಾಸ್‌ ಎಂದು ಯಾರಿಗೆ ಕರೆಯುತ್ತೇನೆ ಎಂದು ಹೇಳಿಕೊಂಡಿರುವ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ.

ʻಗೌರಿ’ ಸಿನಿಮಾ ಶೀಘ್ರವೇ ರಿಲೀಸ್ ಆಗಲಿದೆ. ಈ ಚಿತ್ರದ ಮೂಲಕ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಸಮರ್ಜಿತ್ ಲಂಕೇಶ್ ಅವರು ಕಿಚ್ಚ ಸುದೀಪ್‌ ಅವರಿಗೆ ಸಂದರ್ಶನ ಮಾಡಿದ್ದರು. ಈ ವೇಳೆ ನಿಮ್ಮ ನೆಚ್ಚಿನ ನಾಯಕ ಯಾರೆಂದು ? ಪ್ರಶ್ನೆ ಇಟ್ಟರು. ಆಗ ಸುದೀಪ್‌ ಮಾತನಾಡಿ ʻʻನನಗೆ ವಿಷ್ಣುವರ್ಧನ್‌ ಅವರು ತುಂಬ ಇಷ್ಟ. ಇದನ್ನು ಸಾಕಷ್ಟು ಬಾರಿ ಹೇಳಿದ್ದೇನೆ.  ವಿಷ್ಣು ಅವರ ಪರ್ಸನಾಲಿಟಿ ಸಖತ್ ಇಷ್ಟ. ಅವರ ಗತ್ತು, ಇರೋ ರೀತಿ ಸಖತ್ ಇಷ್ಟ. ಅವರು ಯಾವಾಗಲೂ ನನ್ನ ಫೇವರಿಟ್. ಹಾಗೇ ನನ್ನ ತಂದೆ ಕೂಡ. ಇವರಿಬ್ಬರಿಗೆ ನಾನು ಬಾಸ್‌ ಎಂದು ಕರೆಯುವುದುʼʼಎಂದಿದ್ದಾರೆ.\

ಇದನ್ನೂ ಓದಿ: Kiccha Sudeep: ಮುಂದಿನ ಸಿನಿಮಾಗಾಗಿ ಭಾರಿ ವರ್ಕೌಟ್‌ ಮಾಡ್ತಾ ಇದ್ದಾರೆ ಕಿಚ್ಚ!

ಇನ್ನು ಸುದೀಪ್‌ ಅವರು ಮುಂದಿನ ಸಿನಿಮಾದ ಒಂದು ಪಾತ್ರದಲ್ಲಿ ಭಾರಿ ಕಟ್ಟುಮಸ್ತಾದ ದೇಹವನ್ನು ಹೊಂದಿದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ . ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ‘ಬಿಲ್ಲಾ ರಂಗ ಭಾಷಾ’ ಸಿನಿಮಾಕ್ಕೆ ತಯಾರಾಗುತ್ತಿದ್ದಾರೆ. ಈ ಸಿನಿಮಾವನ್ನು ಅನುಪ್ ಭಂಡಾರಿ ನಿರ್ದೇಶನ ಮಾಡಲಿದ್ದಾರೆ. ‘ದ್ರೋಣಾಚಾರ್ಯ’ ಸಿನಿಮಾವನ್ನು ಅನುಪ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು, ಆದರೆ ಅದರ ಬದಲಿಗೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಪ್ರಾರಂಭ ಮಾಡಿದ್ದಾರೆ.

ಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading

ಟಾಲಿವುಡ್

Kalki 2898 AD: ‘ಪಿಕೆ’, ʻಗದರ್‌ʼ ಸಿನಿಮಾಗಳ ದಾಖಲೆ ಮುರಿದ ʻಕಲ್ಕಿ 2898 ಎಡಿʼ!

Kalki 2898 AD: ಪ್ರಭಾಸ್ ಅಭಿನಯದ ಈ ಚಿತ್ರವು ಈಗ ಆಮೀರ್ ಖಾನ್ ಅವರ ‘ಪಿಕೆ’ ಮತ್ತು ಸನ್ನಿ ಡಿಯೋಲ್ ಅವರ ಬ್ಲಾಕ್ಬಸ್ಟರ್, ‘ಗದರ್ 2’ ಸಿನಿಮಾ ಕಲೆಕ್ಷನ್‌ನ್ನು ಮೀರಿಸಿದೆ. 10 ನೇ ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಸಿನಿಮಾವಾಗಿ ಹೊರಹೊಮ್ಮಿದೆ.

VISTARANEWS.COM


on

Kalki 2898 AD box office thrashes 'PK' record
Koo

ಬೆಂಗಳೂರು: ʻಕಲ್ಕಿ 2898 AD‘ ತನ್ನ ಎರಡನೇ ವಾರಾಂತ್ಯದಲ್ಲಿ ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಉತ್ತಮವಾಗಿ ಕಲೆಕ್ಷನ್‌ ಮಾಡಿದೆ. ಎರಡನೇ ಶುಕ್ರವಾರ-ಭಾನುವಾರದ ನಡುವೆ ಸುಮಾರು 230 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. ‘ಕಲ್ಕಿ 2898 ಎಡಿ’ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಕೇವಲ 11 ದಿನಕ್ಕೆ ಈ ಸಿನಿಮಾ ಇಷ್ಟು ದೊಡ್ಡ ಮೊತ್ತದ ಕಲೆಕ್ಷನ್ ಮಾಡಿದೆ. ಫಿಲ್ಮ್ ಟ್ರೇಡ್ ಪೋರ್ಟಲ್ ಸ್ಯಾಕ್‌ನಿಲ್ಕ್ ಪ್ರಕಾರ, ಚಿತ್ರವು ತನ್ನ ಎರಡನೇ ಭಾನುವಾರದಂದು 500 ಕೋಟಿ ಮೈಲಿಗಲ್ಲನ್ನು ದಾಟಿದೆ.

ಪ್ರಭಾಸ್ ಅಭಿನಯದ ಈ ಚಿತ್ರವು ಈಗ ಆಮೀರ್ ಖಾನ್ ಅವರ ‘ಪಿಕೆ’ ಮತ್ತು ಸನ್ನಿ ಡಿಯೋಲ್ ಅವರ ಬ್ಲಾಕ್ಬಸ್ಟರ್, ‘ಗದರ್ 2’ ಸಿನಿಮಾ ಕಲೆಕ್ಷನ್‌ನ್ನು ಮೀರಿಸಿದೆ. 10 ನೇ ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಸಿನಿಮಾವಾಗಿ ಹೊರಹೊಮ್ಮಿದೆ.

  • ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾ ಪಟ್ಟಿ ಇದು.
  • ದಂಗಲ್ (2016): 2070.3 ಕೋಟಿ ರೂ
  • ಬಾಹುಬಲಿ 2 (2017): 1788.06 ಕೋಟಿ ರೂ
  • RRR (2022): 1230 ಕೋಟಿ ರೂ
  • ಕೆಜಿಎಫ್ 2 (2022): 1215 ಕೋಟಿ ರೂ
  • ಜವಾನ್ (2023): 1160 ಕೋಟಿ ರೂ
  • ಪಠಾಣ್ (2023): 1055 ಕೋಟಿ ರೂ
  • ಬಜರಂಗಿ ಭಾಯಿಜಾನ್ (2015): 922.03 ಕೋಟಿ ರೂ
  • ಅನಿಮಲ್‌ (2023): 915 ಕೋಟಿ ರೂ
  • ಸೀಕ್ರೆಟ್ ಸೂಪರ್‌ಸ್ಟಾರ್ (2017): 912.75 ಕೋಟಿ ರೂ
  • ಕಲ್ಕಿ 2898 AD (2024): ರೂ 832.2 ಕೋಟಿ
  • ಪಿಕೆ (2014): 792 ಕೋಟಿ ರೂ
  • 2.0 (2018): ರೂ 744.78 ಕೋಟಿ
  • ಗದರ್ 2 (2023): 686 ಕೋಟಿ ರೂ

ಕಲ್ಕಿ 2898 AD ತನ್ನ ಮೊದಲ ವಾರದಲ್ಲಿ ಒಟ್ಟು ರೂ 414.85 ಕೋಟಿ ಗಳಿಸಿತು. ಕಲ್ಕಿ ವಿಶ್ವ ಬಾಕ್ಸ್ ಆಫೀಸ್​ನಲ್ಲೂ ಮಿಂಚುತ್ತಿದೆ. ಅಮೆರಿಕ, ಆಸ್ಟ್ರೇಲಿಯಾ ಮೊದಲಾದ ಕಡೆಗಳಲ್ಲಿ ಸಿನಿಮಾ ಮೆಚ್ಚುಗೆ ಪಡೆಯುತ್ತಿದೆ. ಈ ಚಿತ್ರ ವಿಶ್ವಾದ್ಯಂತ 800 ಕೋಟಿ ರೂಪಾಯಿ ಗಳಿಸಿದೆ. ಶೀಘ್ರವೇ ಚಿತ್ರ 1000 ಕೋಟಿ ರೂಪಾಯಿ ಕ್ಲಬ್ ಸೇರುವ ಸಾಧ್ಯತೆ ಇದೆ.

ತೆಲುಗು ಪ್ರದರ್ಶನಗಳಲ್ಲಿ 242.85 ಕೋಟಿ ರೂಪಾಯಿಗಳನ್ನು ಮತ್ತು ಹಿಂದಿ ಪ್ರದರ್ಶನಗಳಲ್ಲಿ 211.9 ಕೋಟಿ ರೂಪಾಯಿಗಳನ್ನು ಗಳಿಸಿದೆ. ಚಿತ್ರದ ತಮಿಳು ಶೋಗಳು 30.1 ಕೋಟಿ, ಮಲಯಾಳಂ ಶೋ 18.2 ಕೋಟಿ ಮತ್ತು ಕನ್ನಡ ಪ್ರದರ್ಶನಗಳು ರೂ 3.95 ಕೋಟಿ ರೂ. ಆಗಿದೆ.

ಇದನ್ನೂ ಓದಿ: Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ʻಕಲ್ಕಿ 2898 ಎಡಿʼಸಿನಿಮಾ!

ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2ಡಿ ಜೊತೆಗೆ 3ಡಿಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಣದಿಂದಲೇ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡೋ ಅವಶ್ಯಕತೆ ಇತ್ತು. ಸದ್ಯ ಆಗಿರೋ ಗಳಿಕೆಯಿಂದ ನಿರ್ಮಾಪಕರಿಗೆ ಇನ್ನೂ ದೊಡ್ಡ ಲಾಭವೇನು ಆಗಿಲ್ಲ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್‌ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್‌ ಮಾಡಿದ ಸಿನಿಮಾವಾಗಿದೆ.

Continue Reading
Advertisement
Ambani Family's Jewels
ಫ್ಯಾಷನ್8 mins ago

Ambani Family’s Jewels: ನೀತಾ ಅಂಬಾನಿಯ ನೆಕ್‌ಲೆಸ್‌ ಬೆಲೆ 500 ಕೋಟಿ ರೂ! ಅಂಬಾನಿ ಮಹಿಳೆಯರ ಬಳಿ ಎಂಥೆಂಥ ಆಭರಣಗಳಿವೆ ನೋಡಿ!

Self Harming
ಪ್ರಮುಖ ಸುದ್ದಿ30 mins ago

Self Harming: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ; ಕಾರಿನಲ್ಲೇ ವಿಷ ಸೇವನೆ

Terrorists Attack
ದೇಶ43 mins ago

Terrorists Attack: ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ; ಇಬ್ಬರು ಯೋಧರಿಗೆ ಗಾಯ, ಉಗ್ರರಿಗಾಗಿ ಶೋಧ

Tamil Nadu violence
ದೇಶ43 mins ago

Tamil Nadu Violence: NDA ಮಿತ್ರಪಕ್ಷದ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌

Rain Effect
ಮಳೆ46 mins ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Chirag Shetty
ಕ್ರೀಡೆ49 mins ago

Chirag Shetty: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗುಡುಗಿದ ಶಟ್ಲರ್ ಚಿರಾಗ್ ಶೆಟ್ಟಿ; ಕಾರಣವೇನು?

Viral Video
Latest60 mins ago

Viral Video: ಹೃಷಿಕೇಶದ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿದ ವಿದೇಶಿಯರ ಮೋಜು ಮಸ್ತಿ!

Dengue Cases
ರಾಜಕೀಯ1 hour ago

Dengue Cases: ಕಲುಷಿತ ನೀರು ಪೂರೈಕೆಯಾದ್ರೆ ಅಧಿಕಾರಿಗಳೇ ಹೊಣೆ; 15 ದಿನಕ್ಕೊಮ್ಮೆ ಕ್ವಾಲಿಟಿ ಟೆಸ್ಟ್ ಮಾಡಿ ಎಂದ ಸಿಎಂ

Mahanati Show bindu honnali not selected
ಕಿರುತೆರೆ1 hour ago

Mahanati Show: ಫಿನಾಲೆಗೆ ಆಯ್ಕೆಯಾಗಿಲ್ಲ ದಾವಣಗೆರೆ ಟೀಚರ್; ಕೋಪಗೊಂಡ ನೆಟ್ಟಿಗರು!

PGET 2024 Online application for PGET can be submitted till July 10
ಶಿಕ್ಷಣ1 hour ago

PGET 2024 : ಪಿಜಿಇಟಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 10ರವರೆಗೆ ಅವಕಾಶ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ46 mins ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ3 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ5 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು7 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ22 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌