Site icon Vistara News

Abhishek Ambareesh Wedding: ಮದುಮಗಳಾಗಿ ಮಿಂಚಿದ ಅಭಿಷೇಕ್ ಅಂಬರೀಶ್‌ ʻಮನದರಸಿʼ!

Aviva Bidapa shines as the bride

ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್‌ (Abhishek Ambareesh Wedding) ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಅವಿವ ಬಿಡಪ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದೀಗ ಜೂನ್‌ 5ರಂದು ಗುರುಹಿರಿಯರ ಒಪ್ಪಿಗೆಯ ಮೇರೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಸೀರೆಯಲ್ಲಿ ಅವಿವ ಮಿಂಚಿದ್ದಾರೆ. ಅಭಿಷೇಕ್‌ ಅಂಬರೀಶ್‌ ಅವರು ಮದುವೆ ಮಂಟಪಕ್ಕೆ ಐಷಾರಾಮಿ ಕಾರಿನಲ್ಲಿ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದರು. ಮದುವೆಗೆ ಸೆಲೆಬ್ರಿಟಿಗಳ ದಂಡು ನೆರೆದಿತ್ತು. ಅಂಬಿ ಪುತ್ರನ ಮದುವೆಗೆ ಖ್ಯಾತ ನಟಿ ಸುಹಾಸಿನಿ, ಟಾಲಿವುಡ್ ನಟ ಮೋಹನ್ ಬಾಬು, ಮನೋಜ್ ಮಂಚು ಮೊದಲಾದವರು ಆಗಮಿಸಿದ್ದರು.

ಈಗಾಗಲೇ ಹಳದಿ ಶಾಸ್ತ್ರ, ಮೆಹಂದಿ ಶಾಸ್ತ್ರದಲ್ಲಿ ಹೊಸ ಜೋಡಿ ಮಿಂಚಿರುವ ಫೋಟೊ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಎಲ್ಲರೂ ನವ ದಂಪತಿಗೆ ಶುಭಾಶಯ ಕೋರುತ್ತಿದ್ದಾರೆ. ದಾಂಪತ್ಯ ಜೀವನ ಸುಖಕರವಾಗಿರಲಿ ಎಂದು ಹಾರೈಸುತ್ತಿದ್ದಾರೆ.

ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ಇದೆ.
Exit mobile version