ಬೆಂಗಳೂರು: ನಟ ಅಂಬರೀಶ್–ಸುಮಲತಾ ಪುತ್ರ, ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ವಿವಾಹ (Abhishek Ambareesh Wedding) ಮುಹೂರ್ತ ಫಿಕ್ಸ್ ಆಗಿದೆ. ಜೂನ್ 5ರಂದು ಅದ್ಧೂರಿಯಾಗಿ ಮದುವೆ ಕಾರ್ಯಕ್ರಮ ನಡೆಯಲಿದೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭ ಜರುಗಲಿದೆ. ವಿವಾಹದ ಆಮಂತ್ರಣ ಪತ್ರ ಕೂಡ ವೈರಲ್ ಆಗಿದೆ. ಈಗಾಗಲೇ ಸಮಲತಾ ಅಂಬರೀಶ್ ಅವರು ಮಗನ ವಿವಾಹೋತ್ಸವಕ್ಕೆ ಪ್ರಧಾನಿ ಮೋದಿ (Narendra Modi) ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದ್ದಾರೆ. ಅಭಿಷೇಕ್ ಅಂಬರೀಶ್ ಹಾಗೂ ಅವಿವ ಬಿಡಪ (Aviva Bidapa) ನಿಶ್ಚತಾರ್ಥವು ಕೆಲವು ತಿಂಗಳ ಹಿಂದೆ ನಡೆದಿತ್ತು.
2022ರ ಡಿಸೆಂಬರ್ 11ರಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಅಭಿಷೇಕ್ ಹಾಗೂ ಅವಿವ ಬಿಡಪ (Aviva Bidapa) ನಿಶ್ಚಿತಾರ್ಥ ನೆರವೇರಿತ್ತು. ಕುಟುಂಬದವರು, ಆಪ್ತರು ಹಾಗೂ ಗಣ್ಯರ ಸಮ್ಮುಖದಲ್ಲಿ ಈ ಶುಭ ಕಾರ್ಯ ನಡೆದಿತ್ತು. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ.
ಈ ಬಗ್ಗೆ ಸುಮಲತಾ ಅಂಬರೀಶ್ ಮಾತನಾಡಿ ʻʻಇನ್ನೇನು ಕೆಲವೇ ದಿನಗಳಲ್ಲಿ ಅಭಿಷೇಕ್ ಮದುವೆ ಇದೆ. ನಾವೆಲ್ಲರೂ ಅಂಬರೀಶ್ ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ. ಮದುವೆ ತಯಾರಿ ತುಂಬಾ ಭರದಿಂದ ಸಾಗುತ್ತಿದೆ. ಮದುವೆಗೆ ಆಹ್ವಾನ ಮಾಡಿರುವ ಎಲ್ಲಾ ವ್ಯಕ್ತಿಗಳು ನನಗೆ ವಿಶೇಷ. ಪ್ರಧಾನಿ ನರೇಂದ್ರ ಮೋದಿ ಅವರು ಮದುವೆಗೆ ಬರುತ್ತಾರೋ ಇಲ್ಲವೋ ಮಾಹಿತಿ ಇಲ್ಲ. ಅಭಿಷೇಕ್ ಹಾಗೂ ಅವಿವ ಡಾನ್ಸ್ ಮಾಡಿರುವ ಸರ್ಪ್ರೈಸ್ ವಿಡಿಯೊ ರಿಲೀಸ್ ಮಾಡುವುದಾಗಿʼʼ ಸುಮಲತಾ ಹೇಳಿದರು.
ಇದನ್ನೂ ಓದಿ: Abhishek Ambareesh: ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮದುವೆ ಎಲ್ಲಿ? ಯಾವಾಗ?
ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು. ಪರಿಚಯ ಪ್ರೀತಿಗೆ ತಿರುಗಿತು. ಕುಟುಂಬದ ಒಪ್ಪಿಗೆ ಪಡೆದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಮದುವೆ ಆಗುತ್ತಿದ್ದಾರೆ. ನಾಲ್ಕು ವರ್ಷಗಳಿಂದ ಅಭಿಷೇಕ್ ಮತ್ತು ಅವಿವ ಬಿಡಪ ಪ್ರೀತಿಸುತ್ತಿದ್ದರು. ಅವಿವ ಬಿಡಪ ಫ್ಯಾಷನ್ ಲೋಕದಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮದೇ ಸ್ವಿಮ್ ಸೂಟ್ ಬ್ರ್ಯಾಂಡ್‌ನ ಲಾಂಚ್ ಮಾಡಿದ್ದಾರೆ.