ನವದೆಹಲಿ: ಇತ್ತೀಚೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್(Salman Khan) ನಿವಾಸದ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿಯೊಬ್ಬ ಪೊಲೀಸ್ ಕಸ್ಟಡಿ(Police custody)ಯಲ್ಲೇ ಆತ್ಮಹತ್ಯೆ(Suicide)ಗೆ ಶರಣಾಗಿದ್ದಾನೆ. ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿರುವ ಅನೂಜ್ ತಾಪನ್ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದಾನೆ.
ಘಟನೆ ಬಗ್ಗೆ ಕರ್ತವ್ಯದಲ್ಲಿದ್ದ ಪೊಲೀಸರನ್ನು ಸಿಐಡಿ ತನಿಖೆಗೆ ಹಾಜರು ಪಡಿಸಲಾಗಿದೆ. ಸಾಮಾನ್ಯವಾಗಿ ಲಾಕ್ ಅಪ್‌ನಲ್ಲಿ ಇಂತಹ ಘಟನೆಗಳು ನಡೆಯದಂತೆ ಪೊಲೀಸರು ತೀವ್ರ ನಿಗಾವಹಿಸುತ್ತಾರೆ. ಹಾಗಿದ್ದರೂ ಕೆಲವು ಆರೋಪಿಗಳು ತಾವು ಧರಿಸಿರುವ ಪೈಜಾಮಾದಿಂದ ಗಂಟು ಹಾಕಿ ಅದರ ಸಹಾಯದಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ಆಗಾಗ ನಡೆಯುತ್ತಿರುತ್ತವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ನಡೆದಿತ್ತು. ಸಾಗರ್ ಪಾಲ್ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳು ಈ ದಾಳಿ ನಡೆಸಿದ್ದರು. ಇವರನ್ನು ಬಳಿಕ ಅರೆಸ್ಟ್ ಮಾಡಲಾಗಿತ್ತು. ಆ ಆರೋಪಿಗಳಿಗೆ ಮಾರ್ಚ್ 15 ರಂದು ಸುಭಾಷ್ ಚಂದರ್ (37) ಮತ್ತು ಅನುಜ್ ಥಾಪನ್ (32) ಪಿಸ್ತೂಲ್ ಮತ್ತು ಕಾಟ್ರಿಜ್ಗಳನ್ನು ನೀಡಿದ್ದರು. ಈ ಇಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಲಾಗಿದ್ದು,. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಪೊಲೀಸರು ಘೋಷಿಸಿದ್ದರು.
2018 ರಲ್ಲಿ, ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಅವರಿಗೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್ನ ಬಿಷ್ಣೋಯ್ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆ ಎಂದು ಹೇಳಿದ್ದ.
ಇದನ್ನೂ ಓದಿ:Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್, ರೇವಣ್ಣ ಅರೆಸ್ಟ್?
ಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ, ಈ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ, ಗಾಯಕ ಮೂಸೆವಾಲಾ ಕೂಡ ಹಾಗೇ ಇದ್ದ. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ. ಸಲ್ಮಾನ್ ಖಾನ್ ಬಗ್ಗೆ ನಮ್ಮ ಸಮಾಜದಲ್ಲಿ ಕೋಪವಿದೆ. ಅವರು ನನ್ನ ಸಮಾಜವನ್ನು ಅವಮಾನಿಸಿದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರು ಕ್ಷಮೆ ಕೇಳಲಿಲ್ಲ ಎಂದು ಹೇಳಿದ್ದ.