ಬೆಂಗಳೂರು : ಮಲಯಾಳಂ ನಟ ಎನ್.ಡಿ ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್. ಡಿ ಪ್ರಸಾದ್ (43) ಶನಿವಾರ (ಜೂನ್ 25) ರಂದು ಸಂಜೆ 6.30ರ ಸುಮಾರಿಗೆ ಕೊಚ್ಚಿ ಬಳಿಯ ಕಲಮಸ್ಸೆರಿಯಲ್ಲಿರುವ ಅವರ ಮನೆಯ ಮುಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದ ಅವರು ಕೆಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಪತ್ನಿಯಿಂದಲೂ ಕೆಲವು ದಿನಗಳ ಹಿಂದಿನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಶನಿವಾರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ | Acid Attack | ಆ್ಯಸಿಡ್ ನಾಗೇಶ್ ಸ್ವ-ಇಚ್ಛಾ ಹೇಳಿಕೆಯಲ್ಲಿ ಏನಿದೆ? ಇಲ್ಲಿದೆ ಫುಲ್ ಡಿಟೇಲ್ಸ್
2016ರಲ್ಲಿ ಬಿಡುಗಡೆಯಾಗಿದ್ದ, ನಿವಿನ್ ಪೌಲಿ ಅಭೀನಯದ, ʼಆ್ಯಕ್ಷನ್ ಹೀರೊ ಬಿಜುʼ ಸಿನಿಮಾದಲ್ಲಿ ಖಳನ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು. ಡ್ರಗ್ಸ್ ಪ್ರಕರಣ ಸೇರಿದಂತೆ ಅವರ ಮೇಲೆ ಹಲವು ಪೊಲೀಸ್ ಪ್ರಕರಣಗಳು ದಾಖಲಾಗಿದ್ದವು. ಪ್ರಸಾದ್ ಅವರು ʼಇಬಾʼ ಮತ್ತು ಕರ್ಮಣಿ ಚಿತ್ರಗಳಲ್ಲಿಯೂ ನಟಿಸಿದ್ದಾರೆ.
ಇದನ್ನೂ ಓದಿ | ʼಆರಂಭʼ ಖ್ಯಾತಿಯ ನಟ ಉದಯ್ ಹುತ್ತಿನಗದ್ದೆ ಇನ್ನಿಲ್ಲ