Site icon Vistara News

Actor Aditya | ನಟ ಆದಿತ್ಯ ಅಭಿನಯದ ʻಟೆರರ್‌ʼ ಫಸ್ಟ್‌ ಲುಕ್‌, ಕ್ಯಾರೆಕ್ಟರ್ ಟೀಸರ್ ಔಟ್‌!

Actor Aditya

ಬೆಂಗಳೂರು ಸ್ಯಾಂಡಲ್‌ವುಡ್‌ ನಟ ಆದಿತ್ಯ (Actor Aditya ) ನಾಯಕನಾಗಿ ನಟಿಸುತ್ತಿರುವ ‘ಟೆರರ್‌’ ಫಸ್ಟ್‌ ಲುಕ್‌ ಬಿಡುಗಡೆಗೊಂಡಿದೆ. ಜತೆಗೆ ಕ್ಯಾರೆಕ್ಟರ್ ಟೀಸರ್ ಲಹರಿ ಮ್ಯೂಸಿಕ್ ಯೂಟ್ಯೂಬ್‌ನಲ್ಲಿ ರಿಲೀಸ್‌ ಆಗಿದೆ. ಜನವರಿಯಲ್ಲಿ ಚಿತ್ರಕ್ಕೆ ಮುಹೂರ್ತ ನಡೆಯಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ರಂಜನ್‌ ಶಿವರಾಮ ಗೌಡ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದು, ಆದಿತ್ಯ ಅವರ ರಗಡ್‌ ಲುಕ್‌ಗೆ ಅವರ ಅಭಿಮಾನಿಗಳು ಸೋಷಿಯಲ್‌ ಮೀಡಿಯಾದಲ್ಲಿ ಕಮೆಂಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉಪೇಂದ್ರ ಅಭಿನಯದ ʻAʼ ಚಿತ್ರ ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಸಿಲ್ಕ್ ಮಂಜು ಈ ಚಿತ್ರವನ್ನು‌ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ | Actor Prabhas | ಪ್ರಭಾಸ್‌ ನಟನೆಯ ಆದಿಪುರುಷ್‌ ಟೀಸರ್‌ ಲಾಂಚ್‌ ಮಾಡಲಿದ್ದಾರಾ ಯೋಗಿ ಆದಿತ್ಯನಾಥ್‌?

ಈ ಸಿನಿಮಾ ಮೂಲಕ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿ ಹೊರಹೊಮ್ಮಲಿದ್ದಾರೆ ಆದಿತ್ಯ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಅದ್ಧೂರಿಯಾಗಿ ನಿರ್ಮಾಣವಾಗುತ್ತಿದೆ. ದಕ್ಷಿಣ ಭಾರತದ ಸುಪ್ರಸಿದ್ಧ ನಟರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡುವುದಾಗಿ ನಿರ್ದೇಶಕ ರಂಜನ್ ಶಿವರಾಮ ಗೌಡ ತಿಳಿಸಿದ್ದಾರೆ. 

ಚಿತ್ರಕ್ಕೆ ಹರ್ಷವರ್ಧನ್ ರಾಜ್ ಸಂಗೀತ ನೀಡಲಿದ್ದಾರೆ. ಕಾರ್ತಿಕ್ ಶರ್ಮ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ಕನಲ್ ಕಣ್ಣನ್ ಅವರ ಸಾಹಸ ನಿರ್ದೇಶನ ʻಟೆರರ್ʼ ಚಿತ್ರಕ್ಕಿರಲಿದೆ.

ಇದನ್ನೂ ಓದಿ | Kannada New Movie | ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗುತ್ತಿದ್ದಾರೆ ʻತೂತು ಮಡಿಕೆʼ ಖ್ಯಾತಿಯ ಚಂದ್ರ ಕೀರ್ತಿ

Exit mobile version