ಬೆಂಗಳೂರು : ʻಬ್ಯಾಂಕ್ ಆಫ್ ಭಾಗ್ಯಲಕ್ಷಿ’ ಚಿತ್ರದ ಮೂಲಕ ನಟ ಅಜಯ್ ರಾವ್ (Actor Ajay Rao) ನಾಯಕನಾಗಿ ನಟಿಸುತ್ತಿದ್ದಾರೆ. ʻಸಿಂಪಲ್ ಆಗಿ ಒಂದ್ ಲವ್ ಸ್ಟೋರಿ’, ‘ಬಹುಪರಾಕ್’ ಮತ್ತು ‘ಆಪರೇಷನ್ ಅಲಮೇಲಮ್ಮ’ ಸಿನಿಮಾಗಳಿಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವ ಹೊಂದಿರುವ ಅಭಿಷೇಕ್ ಎಂ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್‌ವುಡ್ ಅಂಗಳಕ್ಕೆ ಕಾಲಿರಿಸುತ್ತಿದ್ದಾರೆ.
ʻರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಎಚ್. ಕೆ ಪ್ರಕಾಶ್ ಈ ಬಾರಿಯ ದೀಪಾವಳಿಗೆ ನಟ ಅಜಯ್ ರಾವ್ ಜತೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಎಚ್. ಕೆ ಪ್ರಕಾಶ್ ಅವರ ಶ್ರೀದೇವಿ ಎಂಟರ್‌ಟೇನರ್ಸ್ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ಐದನೇ ಸಿನಿಮಾ ಇದಾಗಿದೆ. ಅಭಿಷೇಕ್ ಅವರು ‘ಪಿನಾಕ’ ಎಂಬ VFX ಸ್ಟುಡಿಯೋ ಕೂಡ ಹೊಂದಿದ್ದಾರೆ.
ಇದನ್ನೂ ಓದಿ | Dolly Dhananjay | ʻಹೆಡ್ ಬುಷ್ʼ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು?
ಬ್ಯಾಂಕ್‌ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಇಂಟರೆಸ್ಟಿಂಗ್ ಕಥಾಹಂದರವನ್ನು ಈ ಚಿತ್ರ ಒಳಗೊಂಡಿದೆ. ಇದಿಷ್ಟನ್ನೇ ಸದ್ಯಕ್ಕೆ ರಿವೀಲ್ ಮಾಡಿರುವ ಸಿನಿಮಾ ತಂಡ ಮುಂಬರುವ ದಿನಗಳಲ್ಲಿ ಚಿತ್ರದ ಬಗ್ಗೆ, ನಾಯಕಿ ಮತ್ತು ಕಲಾವಿದರ ಬಳಗದ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ. ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ಹೇಳಿಕೊಂಡಿದೆ.
ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಛಾಯಾಗ್ರಹಣ, ತೇಜಸ್ ಆರ್ ಸಂಕಲನ, ರಾಘು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ಇದನ್ನೂ ಓದಿ | Kantara Movie | ಕಾಂತಾರ ಮತ್ತು ಧರ್ಮ: ಸಿನಿಮಾ ಸುತ್ತ ಎದ್ದಿರುವ ವಿವಾದಕ್ಕೆ ಖಡಕ್ ಉತ್ತರ ನೀಡಿದ ನಟ ಕಿಶೋರ್