ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮಿದೇವಮ್ಮ ಶನಿವಾರ (ಜು.23) ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಲಕ್ಷ್ಮಿದೇವಮ್ಮ ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಅವರನ್ನು ಕಳೆದ 22 ದಿನಗಳಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮೀದೇವಿ ಅವರು ನಿಧನರಾಗಿದ್ದಾರೆ.
ಲಕ್ಷ್ಮೀದೇವಿ ಮತ್ತು ಶಕ್ತಿ ಪ್ರಸಾದ್ ದಂಪತಿಗೆ ಅರ್ಜುನ್ ಸರ್ಜಾ ಮತ್ತು ಕಿಶೋರ್ ಸರ್ಜಾ ಸಹಿತ ಮೂವರು ಮಕ್ಕಳಿದ್ದರು. ಕಿಶೋರ್ ಸರ್ಜಾ 2009ರಲ್ಲಿಯೇ ಇಹಲೋಕ ತ್ಯಜಿಸಿದ್ದರು.
ಲಕ್ಷ್ಮಿದೇವಮ್ಮ ಅವರು ರಾಜಕೀಯ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದರು. ೧೯೮೭ರಲ್ಲಿಯೇ ಕಾಂಗ್ರೆಸ್ ಮೂಲಕ ಜಿಲ್ಲಾ ಪಂಚಾಯಿತಿಗೆ ಸ್ಪರ್ಧೆ ಮಾಡಿದ್ದರು. ಬಳಿಕ ನಟ ಶಕ್ತಿ ಪ್ರಸಾದ್ ಅವರನ್ನು ವಿವಾಹವಾಗಿ ರಾಜಕೀಯದಿಂದ ದೂರವೇ ಇದ್ದರು. ಪುನಃ ೨೦೧೦ರಲ್ಲಿ ತುಮಕೂರಿನ ಮಧುಗಿರಿ ತಾಲೂಕಿನ ದೊಡ್ಡೇರಿ ಜಿಲ್ಲಾ ಪಂಚಾಯಿತಿಗೆ ಸ್ಪರ್ಧೆ ಮಾಡಿದ್ದರು.
ಇದನ್ನೂ ಓದಿ | ಡಾ. ರಾಜ್, ರಂಜನಿಕಾಂತ್, ಅನಂತ್‌ನಾಗ್ ಮತ್ತಿತರ ಹಿರಿಯ ನಟರಿಗೆ ಮೇಕಪ್ ಮಾಡಿದ್ದ ಕೇಶವಣ್ಣ ನಿಧನ