Actor Darshan: ಪವಿತ್ರಾ ಬಗ್ಗೆ ಗೊತ್ತಿಲ್ಲ ಆದರೆ ʻದರ್ಶನ್‌ʼ ದಾಂಪತ್ಯದಲ್ಲಿ ಹುಳಿ ಹಿಂಡಿದ್ದೇ ನಿಖಿತಾ ಎಂದ ಓಂ ಪ್ರಕಾಶ್! - Vistara News

ಸಿನಿಮಾ

Actor Darshan: ಪವಿತ್ರಾ ಬಗ್ಗೆ ಗೊತ್ತಿಲ್ಲ ಆದರೆ ʻದರ್ಶನ್‌ʼ ದಾಂಪತ್ಯದಲ್ಲಿ ಹುಳಿ ಹಿಂಡಿದ್ದೇ ನಿಖಿತಾ ಎಂದ ಓಂ ಪ್ರಕಾಶ್!

Actor Darshan: ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ದರ್ಶನ್ 28 ದಿನಗಳ ಕಾಲ ಜೈಲು ಸೇರುವಂತಾಗಿತ್ತು. ಮುಂಚೆ ದರ್ಶನ್‌ಗೆ ಓಂ ಪ್ರಕಾಶ್ ಬಹಳ ಆಪ್ತರಾಗಿದ್ದರು. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಹಿಟ್ ಸಿನಿಮಾಗಳು ಬಂದಿತ್ತು. ನಾವಿಬ್ಬರು ದೂರಾಗಲೂ ನಿಖಿತಾ ಕಾರಣ ಎಂದಿದ್ದಾರೆ. ಮಾತ್ರವಲ್ಲ ದರ್ಶನ್‌ ಕುಟುಂಬಕ್ಕೂ ನಿಖಿತಾ ಅವರು ಹುಳಿ ಹಿಂಡಿದ್ದರು ಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Actor Darshan case om prakash say darshan life villion Nikhita
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ದರ್ಶನ್‌ (Actor Darshan) ಅವರು ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ನ್ಯಾಯಾಂಗ ಬಂಧನಲ್ಲಿ ಇರುವುದು ಗೊತ್ತೇ ಇದೆ. ದರ್ಶನ್ (Darshan) ಜೊತೆ ಹಲವಾರು ಹಿಟ್ ಸಿನಿಮಾಗಳನ್ನು ಕೊಟ್ಟ ನಟ, ನಿರ್ದೇಶಕ, ನಿರ್ಮಾಪಕ ಓಂ ಪ್ರಕಾಶ್ ರಾವ್ (Om Prakash Rao) ಅವರು 10 ವರ್ಷಗಳಿಂದ ದರ್ಶನ್ ಅವರನ್ನು ಮಾತನಾಡಿಸಿಲ್ಲ. ಈಗ ಮಾಧ್ಯಮದ ಮುಂದೆ ದರ್ಶನ್‌ ಕುರಿತಾಗಿ ಹಲವು ವಿಚಾರಗಳನ್ನು ಶೇರ್‌ ಮಾಡಿಕೊಳ್ಳುತ್ತಿದ್ದಾರೆ. ದರ್ಶನ್‌ ದಾಂಪತ್ಯದಲ್ಲಿ ನಟಿ ನಿಖಿತಾ ತುಕ್ರಾಲ್ ಹುಳಿ ಹಿಂಡಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಇದೀಗ ನಿರ್ದೇಶಕ ಓಂ ಪ್ರಕಾಶ್ ರಾವ್ ಮಾತನಾಡಿದ್ದಾರೆ.

ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ದರ್ಶನ್ 28 ದಿನಗಳ ಕಾಲ ಜೈಲು ಸೇರುವಂತಾಗಿತ್ತು.ಒಂದ್ಕಾಲದಲ್ಲಿ ದರ್ಶನ್‌ಗೆ ಓಂ ಪ್ರಕಾಶ್ ಬಹಳ ಆಪ್ತರಾಗಿದ್ದರು. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಹಿಟ್ ಸಿನಿಮಾಗಳು ಬಂದಿತ್ತು. ನಾವಿಬ್ಬರು ದೂರಾಗಲೂ ನಿಖಿತಾ ಕಾರಣ ಎಂದಿದ್ದಾರೆ. ಮಾತ್ರವಲ್ಲ ದರ್ಶನ್‌ ಕುಟುಂಬಕ್ಕೂ ನಿಖಿತಾ ಅವರು ಹುಳಿ ಹಿಂಡಿದ್ದರು ಎಂದು ಹೇಳಿಕೊಂಡಿದ್ದಾರೆ.

ಓಂ ಪ್ರಕಾಶ್ ರಾವ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿ ʻʻದರ್ಶನ್‌ ತುಂಬ ಒಳ್ಳೆಯ ವ್ಯಕ್ತಿ. ವಿಜಯಲಕ್ಷ್ಮಿ ಕೂಡ ಅಪ್ಪಟ ಚಿನ್ನ. ಇವರಿಬ್ಬರ ಸಂಸಾರದಲ್ಲಿ ಹುಳಿ ಹಿಂಡಬೇಡ , ಹೋಗಬೇಡಿ ಎಂದು ನಿಖಿತಾಗೆ ನಾನು ಹೇಳಿದ್ದೆ. ನೀವು ಜಾಸ್ತಿ ಮುನ್ನುಗ್ಗುತ್ತಿದ್ದೀರ ಹೋಗ್ಬೇಡಿ ಎಂದಿದ್ದೆ. ಇದೇ ತಪ್ಪಾಯ್ತು. ಇವತ್ತಿನ ಪರಿಸ್ಥಿತಿಯಲ್ಲಿ ವಿಜಯಲಕ್ಷ್ಮಿ ಮೇಡಂ, ಅವರ ಮಗ ವಿನೀಶ್ ಇದನ್ನೆಲ್ಲಾ ಹೇಗೆ ಫೇಸ್ ಮಾಡ್ತಿದ್ದಾರೆ ಅನ್ನೋದು ಗೊತ್ತಿಲ್ಲ. ಆದರೆ ಅವರ ಸಂಸಾರ ಚೆನ್ನಾಗಿ ಆಗಬೇಕುʼʼಎಂದರು. ʻʻನನಗೆ ಪವಿತ್ರಾ ಬಗ್ಗೆ ಗೊತ್ತಿಲ್ಲ. ದರ್ಶನ್‌ ಜೀವನದಲ್ಲಿ ಬಂದಿರೋದು ಗೊತ್ತಿಲ್ಲ. ಗೊತ್ತಿಲ್ಲದೇ ವಿಚಾರವನ್ನು ಮಾತನಾಡುವುದು ತಪ್ಪುʼʼಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Actor Darshan: ಇನ್ಮುಂದೆ ದರ್ಶನ್‌ ಕೈದಿ ನಂಬರ್‌ ನನ್ನ ಗಾಡಿ ಮೇಲೆ ಇರತ್ತೆ ಎಂದು ಗಳಗಳನೇ ಅತ್ತ ಅಭಿಮಾನಿ!

ಹೇಳಿದ್ದನ್ನ ತಿರುಚಿ ನನ್ನ, ದರ್ಶನ್ ಮಧ್ಯೆ ನಿಖಿತಾ ಮನಸ್ತಾಪ ತಂದ್ರು!

ʻʻಮುಂಚೆ ದರ್ಶನ್‌ ಹಾಗೂ ನನ್ನ ಸ್ನೇಹ ಚೆನ್ನಾಗಿಯೇ ಇತ್ತು. ನಮಗೆ ಒಂದು ಜ್ಞಾನ ಇರುತ್ತೆ. ಸಡನ್‌ ಆಗಿ ಯಾರೋ ಹೇಳಿದ್ದು ಕೇಳೋದು ತಪ್ಪು. ಆದರೆ ದರ್ಶನ್‌ ಯಾರೋ ಹೇಳಿದ್ದನ್ನು ಬೇಗ ಕೇಳುತ್ತಿದ್ದ. ನನ್ನ ದರ್ಶನ್‌ ಮಧ್ಯೆ ಮನಸ್ತಾಪ ತಂದಿಟ್ಟಿದ್ದು ನಿಖಿತಾ ಎಂಬ ಕಲಾವಿದೆ. ಯಾವುದೋ ಒಂದು ವಿಷಯವನ್ನು ತಿರುಚಿ ಹೇಳಿದ್ದಾರೋ ಗೊತ್ತಿಲ್ಲ. ಎಲ್ಲರೂ ಅವರ ಅವರ ಸೇಫ್ಟಿ ನೋಡ್ಕೋತ್ತಾರೆ ಅನ್ಸತ್ತೆ. ಹಾಗೇ ನನ್ನ ದರ್ಶನ್‌ ಜತೆ ವೈಮನಸ್ಸು ಆಯ್ತು. ಆ ಬಗ್ಗೆ ತುಂಬ ಸಲ ಬೇಜಾರು ಮಾಡಿಕೊಂಡಿದ್ದು ಇದೆʼʼಎಂದರು.

ಇಂದು ಜಾಮೀನು ಅರ್ಜಿ ಸಲ್ಲಿಕೆ

ದರ್ಶನ್‌ ಸೇರಿದತೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳು ಜಾಮೀನು‌ ಕೋರಿ ಇಂದು ಎಸಿಎಂಎಂ ಕೋರ್ಟ್ ಮುಂದೆ ಅರ್ಜಿ ಸಲ್ಲಿಸಲಿದ್ದಾರೆ. ಜಾಮೀನು ಅರ್ಜಿ ಸಲ್ಲಿಕೆ ಮಾಡಿದರೆ ದರ್ಶನ್ ಪರ ವಾದ ಮಂಡನೆಯನ್ನು ಹಿರಿಯ ವಕೀಲ ಸಿ.ವಿ ನಾಗೇಶ್ ಮಾಡಲಿದ್ದಾರೆ.

ದರ್ಶನ್‌ನನ್ನು ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಅವಕಾಶ ಕೊಡುವಂತೆ ಎಸ್‌ಪಿಪಿ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದೆ. ಒಂದು ವೇಳೆ ನ್ಯಾಯಾಲಯ ಅರ್ಜಿ ಪುರಸ್ಕರಿಸಿದರೆ ತುಮಕೂರು ಜೈಲಿಗೆ ಕಳಿಸಲಾಗುತ್ತದೆ. ಇಲ್ಲವಾದರೆ ಪರಪ್ಪನ ಅಗ್ರಹಾರದ ಭದ್ರತಾ ಸಿಬ್ಬಂದಿ ಕೊಠಡಿಯಲ್ಲೇ ನಟ ಕಾಲ ಕಳೆಯಬೇಕಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನ 17ನೇ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಸೇರಿ ಒಟ್ಟು 17 ಮಂದಿ ಜೈಲು ಸೇರಿದ್ದಾರೆ. ಈ ಪೈಕಿ ಪ್ರಕರಣದ 17ನೇ ಆರೋಪಿ ನಿಖಿಲ್‌ ನಾಯಕ್‌ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

By

Renukaswamy murder case 17th accused files bail plea
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy Murder) ನಟ ದರ್ಶನ್‌ (Actor Darshan) ಗ್ಯಾಂಗ್‌ನಿಂದ ಬರ್ಬರ ಕೊಲೆಯಾದ ಬಳಿಕ ಪ್ರಕರಣದ ಆರೋಪಿಯೊಬ್ಬ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ 17ನೇ ಆರೋಪಿ ನಿಖಿಲ್ ನಾಯಕ್ ಶರಣಾಗಿದ್ದ.

ಒಟ್ಟಾರೆ 17 ಆರೋಪಿಗಳ ಪೈಕಿ ನಿಖಿಲ್‌ ನಾಯಕ್‌ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್‌ನ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಬನ್ನೇರುಘಟ್ಟ ರಸ್ತೆ ಕೆಂಬತ್ತಹಳ್ಳಿ ನಿವಾಸಿ ನಿಖಿಲ್ ನಾಯಕ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ರೇಣುಕಾಸ್ವಾಮಿ ಕೊಲೆ ಬಳಿಕ ಪಟ್ಟಣಗೆರೆ ಶೆಡ್‌ನಿಂದ ಮೃತದೇಹವನ್ನು ಸಾಗಿಸಿದ್ದ ಆರೋಪವಿದೆ.

ಇದನ್ನೂ ಓದಿ: Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!

Renukaswamy murder case 17th accused files bail plea
ಕೊಲೆಯಾದ ರೇಣುಕಾಸ್ವಾಮಿ ಹಾಗೂ ಕೊಲೆ ಕೇಸ್‌ನಲ್ಲಿ ಬಂಧಿತನಾಗಿರುವ ನಿಖಿಲ್‌ ನಾಯಕ್

ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ್ದ ನಿಖಿಲ್‌ ನಾಯಕ್‌

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು. ಅದರಲ್ಲಿ ನಿಖಿಲ್‌ ನಾಯಕ್‌ ಸೇರಿ ರವಿಶಂಕರ್, ಕಾರ್ತಿಕ್, ಕೇಶವ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದರು.

ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು. ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿತ್ತು.

ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ ದರ್ಶನ್‌. ದರ್ಶನ್ ಪರ ಒಲವು ತೋರಿದವರ (Actor Darshan) ಸಂಖ್ಯೆ ತೀರಾ ಕಡಿಮೆ. ಇದೀಗ ಹಲವು ನಟ ನಟಿಯರು ದರ್ಶನ್‌ ಪರ ಧ್ವನಿ ಎತ್ತುತ್ತಿದ್ದಾರೆ. ಇದೀಗ ಈ ಸಾಲಿಗೆ ಗಾಯಕಿ ಡಾ.ಶಮಿತಾ ಮಲ್ನಾಡ್ (dr shamitha malnad) ಸೇರ್ಪಡೆಯಾಗಿದ್ದಾರೆ. ʻʻಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು. ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾʼʼಎಂದು ಬರೆದುಕೊಂಡಿದ್ದಾರೆ. ಇದೀಗ ಅವರ ಪೋಸ್ಟ್‌ ವೈರಲ್‌ ಆಗುತ್ತಿದೆ.

ʻʻಮನಸೇ ಮನಸೇ,,, ಸೋಲೋ ಗೆಲುವೋ, ನೋವೋ ನಲಿವೋ, ಏಳೋ ಬೀಳೋ,,ಕಲ್ಲೋ ಮುಳ್ಳೋ ಜೀವನದ ಹಾದಿ ಸುಲಭವಲ್ಲ.. ಯಶಸ್ಸಿನ ಹಾದಿ ಸುಗಮವಲ್ಲ… ಹಸಿವು, ಅವಮಾನ, ನೋವುಂಡು ಯಶಸ್ಸು ಗಳಿಸಿದ ಹೆಸರು
ದರ್ಶನ್ ತೂಗುದೀಪ.. ಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು,, ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾ…. ಅವರ ಅಭಿನಯ, ಭೇದವಿಲ್ಲದ ಪ್ರೀತಿ, ಸರಳತೆ, ಸ್ನೇಹ ಅಭಿಮಾನದ ಸಿಹಿ ಉಂಡವರು ನಾವು, ಅಭಿಮಾನಿಯಾಗಿ ಸಿನಿಮಾ ಅಭಿನಯ ನೋಡಿ ಅತ್ತು, ನಕ್ಕು, ಚಪ್ಪಾಳೆ ಶಿಳ್ಳೆ ಹೊಡೆದು ಸಂಭ್ರಮಿಸಿದವರು ನಾವು,, ಆರಡಿ ದೇಹವ ಮೂರಡಿ ಬಗ್ಗಿಸಿ ತಗ್ಗಿ ನಮ್ಮೊಂದಿಗೆ ವಿನಯದಿ ಮಾತಾಡುವಾಗ ಹೆಮ್ಮೆ ಪಟ್ಟವರು ನಾವು,,, ತಪ್ಪಾಗಿದೆಯೋ ಇಲ್ಲವೋ ಏನಾಗಿದೆ ಎಂದು ಅರಿಯದವರು ನಾವು.. ಹಣಕ್ಕೆ ಬಗ್ಗದೆ ಪ್ರೀತಿಗೆ ಬಗ್ಗಿದವರು ಅವರು,,, ತಪ್ಪಾಗಿದ್ದರೆ ನ್ಯಾಯಾಂಗವಿದೆ, ಕಾನೂನಿದೆ,,,
ಶಿಕ್ಷೆ ಇದೇʼʼಎಂದು ಬರೆದುಕೊಂಡಿದ್ದಾರೆ.

ʻʻ ಅಕಾಲ ನಿಧನರಾದ ಶ್ರೀ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ,,, ಅವರ ಕುಟುಂಬ ಹಾಗೂ ಹಲವು ನೊಂದ ಕುಟುಂಬಗಳಿಗೆ ನಮ್ಮೆಲ್ಲರ ಸಾಂತ್ವನ ,, ನೆರವು, ಆಸರೆ, ನ್ಯಾಯ ಬೇಕಿದೆ,, ಹಾಗೆ ಸೋಶಿಯಲ್ ಮೀಡಿಯಾವನ್ನು ದಯವಿಟ್ಟು ಒಳಿತಿಗೆ ಉಪಯೋಗಿಸಿ,, ಎಲ್ಲರ ಮೇಲೆ ಗೌರವವಿರಲಿ,, ಕಾಮೆಂಟ್ಸ್, ಪೋಸ್ಟ್, ಮೇಲೆ ಹಿಡಿತವಿರಲಿ,,
ದರ್ಶನ್ ಅಣ್ಣಾ,, ಕನ್ನಡದ ಕುಟುಂಬ,, ಚಲನಚಿತ್ರದ ಕುಟುಂಬ ನಮ್ಮ ಕುಟುಂಬ,, ಕಲಾವಿದರ ಕುಟುಂಬ,, ಏನೇ ಆದರೂ ನಮ್ಮ ಮನೆಯವರ ಜೊತೆ ನಾವು ಯಾವಾಗ್ಲೂ ಜೊತೆ ಇರುತ್ತೇವೆ,, ಅಲ್ಲವೇ??? ಹಾಗೆ ಪ್ರೀತಿ ಅಭಿಮಾನ ಬದಲಾಗದು,, ತಪ್ಪು ಯಾರು ಮಾಡಿದ್ದರೂ ಶಿಕ್ಷೆ ಆಗಬೇಕು .. ನ್ಯಾಯ ಎಲ್ಲರಿಗೂ ಒಂದೇ,,, ದರ್ಶನ್ ಅವರನ್ನು ಪ್ರೀತಿಸುವ ಎಲ್ಲರಿಗೂ ನೋವಾಗಿದೆ,,ಸಂಕಟವಾಗಿದೆ,, ಇದು ಸಂಯಮ, ತಾಳ್ಮೆ, ಪ್ರಾರ್ಥನೆಯ ಸಮಯ,,
ಸಿಟ್ಟು, ಕೋಪ, ಅಸಹನೆ, ಹತಾಶೆ ದರ್ಶನ್ ಹಾಗೂ ಅವರ ಕುಟುಂಬಕ್ಕೆ ಇನ್ನಷ್ಟು ತೊಂದರೆ ಒಡ್ಡಬಹುದು,,
ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯ ಬೇಕು,,, ಕಾಯೋಣ ,, ಸಮಾಧಾನದಿಂದ..ದರ್ಶನ್ ಅಣ್ಣಾ ಅವರಿಗಾಗಿ ಪ್ರಾರ್ಥಿಸೋಣ, ಹಾರೈಸೋಣ…ʼʼಎಂದು ಬರೆದುಕೊಂಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ನಟ ದರ್ಶನ್‌ (Actor Darshan) ಹಾಗೂ ಸಹಚರರು ಜೈಲುವಾಸದಲ್ಲಿದ್ದಾರೆ. ಇತ್ತ ನಿತ್ಯವೂ ಅಭಿಮಾನಿಗಳು ದರ್ಶನ್‌ (Darshan Fans) ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸುತ್ತಿದ್ದು, ಪೊಲೀಸರಿಗೆ ತಲೆ ಬಿಸಿಯಾಗಿದೆ. 

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Hina Khan: ಬಿಗ್ ಬಾಸ್ ಸ್ಪರ್ಧಿ, ʻಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈʼ ಧಾರಾವಾಹಿ ಖ್ಯಾತಿಯ ನಟಿಗೆ ಸ್ತನ ಕ್ಯಾನ್ಸರ್!

Hina Khan: ಕುಟುಂಬದೊಂದಿಗೆ ಈ ಸವಾಲನ್ನು ಜಯಿಸುವುದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದರು. ಜತೆಗೆ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಹಿನಾ ಖಾನ್ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಜನಪ್ರಿಯ TV ಧಾರಾವಾಹಿ, ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ನಲ್ಲಿ ಅಕ್ಷರ ಪಾತ್ರಕ್ಕಾಗಿ ಅವರು ಖ್ಯಾತಿ ಪಡೆದರು. ಹಿನಾ ‘ಬಿಗ್ ಬಾಸ್’ ಮತ್ತು ‘ಖತ್ರೋನ್ ಕೆ ಖಿಲಾಡಿ’ ಯಂತಹ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ.

VISTARANEWS.COM


on

Hina Khan diagnosed with breast cancer
Koo

ಬೆಂಗಳೂರು: ಬಾಲಿವುಡ್‌ ಹಾಗೂ ಕಿರುತೆರೆ ನಟಿ ಹಿನಾ ಖಾನ್ (Hina Khan) ಅವರಿಗೆ ಸ್ತನ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ನನಗೆ ಸ್ತನ ಕ್ಯಾನ್ಸರ್ (‘Yeh Rishta Kya Kehlata Hai’.) 3ನೇ ಹಂತದಲ್ಲಿದೆ ಎಂದು ಸ್ವತಃ ನಟಿಯೇ ಪೋಸ್ಟ್‌ ಮುಖಾಂತರ ಹೇಳಿಕೊಂಡಿದ್ದಾರೆ. ಕುಟುಂಬದೊಂದಿಗೆ ಈ ಸವಾಲನ್ನು ಜಯಿಸುವುದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದರು. ಜತೆಗೆ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ನಟಿ ಪೋಸ್ಟ್‌ನಲ್ಲಿ ʻʻಎಲ್ಲರಿಗೂ ನಮಸ್ಕಾರ, ನನ್ನನ್ನು ಪ್ರೀತಿಸುವ ಮತ್ತು ಕಾಳಜಿ ವಹಿಸುವ ಪ್ರತಿಯೊಬ್ಬರೊಂದಿಗೆ ಕೆಲವು ಪ್ರಮುಖ ಸುದ್ದಿಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ. ನನಗೆ ಮೂರನೇ ಹಂತದಲ್ಲಿ ಸ್ತನ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಇದರಿಂದ ಆದಷ್ಟು ಬೇಗ ಗುಣಮುಖಳಾಗಿ ಬರುತ್ತೇನೆ ಎಂದು ಭರವಸೆ ನೀಡುತ್ತೇನೆ. ನನ್ನ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ ಮತ್ತು ಇದರಿಂದ ಇನ್ನಷ್ಟು ಬಲವಾಗಿ ಹೊರಹೊಮ್ಮಲು ಅಗತ್ಯವಿರುವ ಎಲ್ಲವನ್ನೂ ಮಾಡಲು ನಾನು ಸಿದ್ಧನಿದ್ದೇನೆ. ನಿಮ್ಮ ಪ್ರೀತಿ, ಶಕ್ತಿ ಮತ್ತು ಆಶೀರ್ವಾದ ನನ್ನ ಮೇಲೆ ಇರಲಿ. ನಾನು, ನನ್ನ ಕುಟುಂಬ ಮತ್ತು ಪ್ರೀತಿಪಾತ್ರರ ಜತೆಗೆ ಗಟಿಯಾದ ನಿರ್ಧಾರದ ಜತೆಗೆ ಪಾಸಿಟಿವ್‌ ಆಗಿರಲು ಬಯಸುತ್ತೇನೆ.
ಪರಮಾತ್ಮನ ಅನುಗ್ರಹದಿಂದ, ನಾನು ಈ ಸವಾಲನ್ನು ಜಯಿಸುತ್ತೇನೆ ಮತ್ತು ಸಂಪೂರ್ಣವಾಗಿ ಆರೋಗ್ಯವಾಗಿ ಮತ್ತೆ ನಿಮ್ಮ ಮುಂದೆ ಬರುತ್ತೇಬೆ. ದಯವಿಟ್ಟು ನಿಮ್ಮ ಪ್ರಾರ್ಥನೆ, ಆಶೀರ್ವಾದ ಮತ್ತು ಪ್ರೀತಿ ನನ್ನ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Shivangi Joshi: ರಿಶ್ತಾ ಕ್ಯಾ ಕೆಹ್ಲಾತಾ ಹೈ ಧಾರಾವಾಹಿ ಖ್ಯಾತಿಯ ಶಿವಾಂಗಿ ಜೋಶಿಗೆ ಕಿಡ್ನಿ ಸಮಸ್ಯೆ, ಆಸ್ಪತ್ರೆಗೆ ದಾಖಲು



ಪೋಸ್ಟ್ ಅನ್ನು ಹಂಚಿಕೊಂಡ ಕೂಡಲೇ, ಅಭಿಮಾನಿಗಳು ಮತ್ತು ಸ್ನೇಹಿತರು ನಟಿಗೆ ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಸಿದ್ದಾರೆ. “ನೀವು ಯಾವಾಗಲೂ ತುಂಬಾ ಬಲಶಾಲಿಯಾಗಿದ್ದೀರಿʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಅಂಕಿತಾ ಲೋಖಂಡೆ ಕೂಡ”ಹೀನಾ ನೀನು ಇದಕ್ಕಿಂತ ಬಲಶಾಲಿ ಆದ ಹುಡುಗಿ!!! ದೇವರು ನಿಮ್ಮನ್ನು ಆಶೀರ್ವದಿಸಲಿ. ಎಂದು ಕಮೆಂಟ್‌ ಮಾಡಿದ್ದಾರೆ.

ಹಿನಾ ಖಾನ್ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಜನಪ್ರಿಯ TV ಧಾರಾವಾಹಿ, ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ನಲ್ಲಿ ಅಕ್ಷರ ಪಾತ್ರಕ್ಕಾಗಿ ಅವರು ಖ್ಯಾತಿ ಪಡೆದರು. ಹಿನಾ ‘ಬಿಗ್ ಬಾಸ್’ ಮತ್ತು ‘ಖತ್ರೋನ್ ಕೆ ಖಿಲಾಡಿ’ ಯಂತಹ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ. ‘ಹ್ಯಾಕ್ಡ್’ ಮತ್ತು ‘ಡ್ಯಾಮೇಜ್ಡ್ 2’ ನಂತಹ ಸಿನಿಮಾಗಳಲ್ಲಿಯೂ ನಟಿಸಿದ್ದರು.

Continue Reading

ಕಾಲಿವುಡ್

Kanguva Release Date: ʻಕಂಗುವ’ ರಿಲೀಸ್‌ ಡೇಟ್‌ ಅನೌನ್ಸ್‌; ಧ್ರುವ ಸರ್ಜಾ ಸಿನಿಮಾ ಜತೆ ಕ್ಲ್ಯಾಶ್‌!

Kanguva Release Date: ನಟ ಸೂರ್ಯ ಅವರ ಬಹು ನಿರೀಕ್ಷಿತ ಫ್ಯಾಂಟಸಿ ಚಿತ್ರ ಕಂಗುವ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ. ತಮಿಳಿನ ಜತೆಗೆ ಕನ್ನಡ, ತೆಲುಗು, ಹಿಂದಿ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗುತ್ತಿದೆ. ಹೀಗಾಗಿ, ಕನ್ನಡದ ‘ಮಾರ್ಟಿನ್’ ಜೊತೆ ಈ ಚಿತ್ರ ಕ್ಲ್ಯಾಶ್ ಆಗಲಿದೆ.

VISTARANEWS.COM


on

Kanguva Release Date announce and clshes with dhruva sarja Martin
Koo

ಬೆಂಗಳೂರು: ಕಾಲಿವುಡ್‌ ನಟ ಸೂರ್ಯ (Actor Suriya) ನಟನೆಯ ʻಕಂಗುವʼ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ. ಅಕ್ಟೋಬರ್ 10ರಂದು ವಿಶ್ವಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಇದೇ ಸಂದರ್ಭದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಮಾರ್ಟಿನ್’ ಸಿನಿಮಾ (Kanguva Release Date) ಬಿಡುಗಡೆ ಆಗುತ್ತಿದೆ. ತಮಿಳಿನ ಜತೆಗೆ ಕನ್ನಡ, ತೆಲುಗು, ಹಿಂದಿ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗುತ್ತಿದೆ. ಹೀಗಾಗಿ, ಕನ್ನಡದ ‘ಮಾರ್ಟಿನ್’ ಜೊತೆ ಈ ಚಿತ್ರ ಕ್ಲ್ಯಾಶ್ ಆಗಲಿದೆ.

ನಟ ಸೂರ್ಯ ಅವರ ಬಹು ನಿರೀಕ್ಷಿತ ಫ್ಯಾಂಟಸಿ ಚಿತ್ರ ಕಂಗುವ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ.

ಮೂಲಗಳ ಪ್ರಕಾರ ಅಮೆಜಾನ್‌ ಪ್ರೈಂ ಸಂಸ್ಥೆ ಬರೋಬ್ಬರಿ 80 ಕೋಟಿ ರೂ. ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಚಿತ್ರವನ್ನು ಸಿರುತೈ ಶಿವ ನಿರ್ದೇಶಿಸಿದ್ದಾರೆ. ರಜನಿಕಾಂತ್ ನಾಯಕತ್ವದ ಆ್ಯಕ್ಷನ್ ಡ್ರಾಮಾ ʻಅಣ್ಣಾತ್ತೆʼ ಸಿನಿಮಾ ಬಳಿಕ ಈ ಸಿನಿಮಾ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸಿನಿಮಾವನ್ನು 2ಡಿ ಮತ್ತು 3ಡಿಯಲ್ಲಿ ಚಿತ್ರೀಕರಿಸಲಾಗುತ್ತಿದೆ. ಸೂರ್ಯ 42 ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರವನ್ನು ಕೆ.ಇ.ಜ್ಞಾನವೇಲ್ ರಾಜಾ ಅವರ ಸ್ಟುಡಿಯೋ ಗ್ರೀನ್, ಯುವಿ ಕ್ರಿಯೇಷನ್ಸ್ ಸಹಯೋಗದಲ್ಲಿ ನಿರ್ಮಿಸಲಾಗಿದೆ.

ಅಕ್ಟೋಬರ್‌ 11 ಕ್ಕೆ ಮಾರ್ಟಿನ್‌ ಸಿನಿಮಾ ಬಿಡುಗಡೆ

ಅಕ್ಟೋಬರ್‌ 11 ಕ್ಕೆ ಮಾರ್ಟಿನ್‌ ಸಿನಿಮಾ ಬಿಡುಗಡೆ ಆಗಲಿದೆ . ಧ್ರುವ ಸರ್ಜಾ ಅಭಿನಯದ 5ನೇ ಚಿತ್ರ ಮಾರ್ಟಿನ್. ಎ.ಪಿ.ಅರ್ಜುನ್ ನಿರ್ದೇಶನದ ಮಾರ್ಟಿನ್ 5 ಭಾಷೆಯಲ್ಲಿ ರಿಲೀಸ್ ಆಗಲಿದೆ. ಆ ಮೂಲಕ 2024 ರ ಹೈವೋಲ್ಟೇಜ್ ಸಿನಿಮಾ ಇದಾಗಲಿದೆ. ಪೊಗರು ಸಿನಿಮಾ ಬಳಿಕ 3 ವರ್ಷಗಳ ನಂತರ ಬೆಳ್ಳಿತೆರೆ ಮೇಲೆ ಧ್ರುವ ಸರ್ಜಾ ಅವರ ಮತ್ತೊಂದು ಸಿನಿಮಾ ಬಿಡುಗಡೆಯಾಗಲಿದೆ. ಮಾರ್ಟಿನ್ ಚಿತ್ರಕ್ಕೆ ಖ್ಯಾತ ಬಹುಭಾಷಾ ನಟ ಅರ್ಜುನ್‌ ಸರ್ಜಾ ಕಥೆ ಬರೆದಿದ್ದು, ವಾಸವಿ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ. ಮೆಹ್ತಾ ಈ ಚಿತ್ರ ನಿರ್ಮಿಸಿದ್ದಾರೆ.

ಸತ್ಯ ಹೆಗಡೆ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಿತ್ರದ ತಾರಾಬಳಗದಲ್ಲಿ ಅನ್ವೇಶಿ ಜೈನ್, ಜಾರ್ಜಿಯ ಆಂಡ್ರಿಯಾನಿ, ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಪಾಠಕ್ ಮುಂತಾದವರಿದ್ದಾರೆ.

Continue Reading

ಸಿನಿಮಾ

Priyanka Chopra: ಬೆಳ್ಳುಳ್ಳಿ ಎಸಳು ಪಾದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ? ನಟಿ ಪ್ರಿಯಾಂಕಾ ಚೋಪ್ರಾ ಹೇಳಿದ್ದೇನು?

ದಿ ಬ್ಲಫ್ ಇನ್ ಆಸ್ಟ್ರೇಲಿಯಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಪತಿ ನಿಕ್ ಜೋನಾಸ್, ಮಗಳು ಮಾಲತಿ ಮೇರಿ ಮತ್ತು ತಾಯಿ ಮಧು ಚೋಪ್ರಾ ಅವರೊಂದಿಗೆ ಕೆಲವು ಅಮೂಲ್ಯ ಕ್ಷಣಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದರಲ್ಲಿ ಬೆಳ್ಳುಳ್ಳಿ ಎಸಳು ಪದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ ಎಂಬುದರ ಕುರಿತು ಅವರು ಹೇಳಿರುವುದು ವೈರಲ್ ಆಗಿದೆ.

VISTARANEWS.COM


on

By

Priyanka Chopra
Koo

ಬಾಲಿವುಡ್ ನಟಿ (Bollywood actress) ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ತಮ್ಮ ಪಾದಗಳಿಗೆ ಬೆಳ್ಳುಳ್ಳಿಯ (Garlic) ಎಸಳುಗಳನ್ನು ಉಜ್ಜಿಕೊಳ್ಳುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ (social media) ಹಂಚಿಕೊಂಡಿದ್ದು, ಹಲವಾರು ಬಳಕೆದಾರರು ಅವರ ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದಾರೆ. ಸಾಕಷ್ಟು ಮಂದಿ ಬೆಳ್ಳುಳ್ಳಿಯನ್ನು ಉಜ್ಜಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಪ್ರಿಯಾಂಕಾ ಚೋಪ್ರಾ ಪ್ರಸ್ತುತ ದಿ ಬ್ಲಫ್ ಇನ್ ಆಸ್ಟ್ರೇಲಿಯಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪತಿ ನಿಕ್ ಜೋನಾಸ್, ಮಗಳು ಮಾಲತಿ ಮೇರಿ ಮತ್ತು ತಾಯಿ ಮಧು ಚೋಪ್ರಾ ಅವರೊಂದಿಗೆ ಕೆಲವು ಅಮೂಲ್ಯ ಕ್ಷಣಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಅವರ ಪೋಸ್ಟ್ ನೊಂದಿಗೆ ಇದ್ದ ವಿಡಿಯೋವೊಂದು ಎಲ್ಲರ ಗಮನ ಸೆಳೆದಿದೆ. ಚಿತ್ರದ ಸೆಟ್‌ಗಳಲ್ಲಿ ಪ್ರಿಯಾಂಕಾಗೆ ಉಂಟಾದ ಗಮನಾರ್ಹ ಗಾಯಗಳನ್ನು ಇದು ಬಹಿರಂಗಪಡಿಸಿದೆ. ನಟಿ ಕೆಲವು ಎಸಳು ಬೆಳ್ಳುಳ್ಳಿ ಮತ್ತು ಲವಂಗವನ್ನು ಬಲವಾಗಿ ಅವಳ ಪಾದಗಳಿಗೆ ಉಜ್ಜುತ್ತಿರುವ ವಿಡಿಯೋ ಇದರಲ್ಲಿದೆ. ಇದು ವಾಸ್ತವವಾಗಿ ಕೆಲವು ಖಾಯಿಲೆಗಳನ್ನು ಎದುರಿಸಲು ಅನೇಕರು ಬಳಸುವ ಸಾಂಪ್ರದಾಯಿಕ ಔಷಧವಾಗಿದೆ.

ಬೆಳ್ಳುಳ್ಳಿಯನ್ನು ಪಾದಗಳಿಗೆ ಉಜ್ಜುವುದು ಏಕೆ?

ನಟಿ ಪ್ರಿಯಾಂಕಾ ಹಂಚಿಕೊಂಡ್ಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಇದು ವೈಜ್ಞಾನಿಕ ಅಂಶಗಳ ಬಗ್ಗೆಯೂ ಚರ್ಚೆಯನ್ನು ಹುಟ್ಟು ಹಾಕಿತ್ತು.

ಟಿಸರ್ ಮತ್ತು ಇನ್‌ಸ್ಟಿಟ್ಯೂಟ್ ವರದಿಯ ಪ್ರಕಾರ ಈ ಪ್ರಕ್ರಿಯೆಯ ಸಾಕಷ್ಟು ಪರಿಣಾಮಕಾರಿಯಾಗಿದೆ. ಬೆಳ್ಳುಳ್ಳಿ ಮತ್ತು ಲವಂಗವನ್ನು ಕತ್ತರಿಸಿ ಪುಡಿ ಮಾಡಿದಾಗ ಇದು ಅಲಿನ್ ಅನ್ನು ಅಲಿನೇಸ್ ಕಿಣ್ವದೊಂದಿಗೆ ಸೇರುವಂತೆ ಮಾಡುತ್ತದೆ. ಇದು ಅಲಿಸಿನ್ ಎಂಬ ಹೊಸ ಸಂಯುಕ್ತವನ್ನು ಸೃಷ್ಟಿಸುತ್ತದೆ. ಬೆಳ್ಳುಳ್ಳಿ ಮತ್ತು ಪುಡಿ ಮಾಡಿದ ಲವಂಗವನ್ನು ಪಾದಗಳ ಮೇಲೆ ಉಜ್ಜಿದಾಗ ಅದು ದೇಹದಲ್ಲಿ ರಕ್ತಪ್ರವಾಹ ಚೆನ್ನಾಗಿ ನಡೆಯಲು ಸಹಾಯ ಮಾಡುತ್ತದೆ.

ವೆರಿವೆಲ್ ಹೆಲ್ತ್ ವರದಿಯ ಪ್ರಕಾರ, ಇದು ಕೆಲವು ರೀತಿಯ ಕ್ಯಾನ್ಸರ್‌ಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಮಧುಮೇಹ, ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ವ್ಯಾಯಾಮದ ಅನಂತರ ಸ್ನಾಯುವಿನ ಚೇತರಿಕೆಗೆ ಸಹಾಯ ಮಾಡುತ್ತದೆ ಮತ್ತು ಸೋಂಕುಗಳಿಂದ ರಕ್ಷಿಸುತ್ತದೆ.


ಪ್ರಯೋಜನಗಳೇನು?

ಕ್ಲೀವ್ ಲ್ಯಾಂಡ್ ಕ್ಲಿನಿಕ್ ವರದಿಯ ಪ್ರಕಾರ, ಬೆಳ್ಳುಳ್ಳಿಯು ಉರಿಯೂತದ ಗುಣಲಕ್ಷಣಗಳ ಜೊತೆಗೆ ಅಪಾರವಾದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ.

ಕೀಲು ಮತ್ತು ಸ್ನಾಯುಗಳಲ್ಲಿನ ನೋವನ್ನು ನಿವಾರಿಸಲು ಇದು ಸೂಕ್ತವಾಗಿದೆ. ಬೆಳ್ಳುಳ್ಳಿ ಲವಂಗವನ್ನು ಮೊಡವೆಗಳ ಮೇಲೆ ಉಜ್ಜುವುದರಿಂದ ಮೊಡವೆಗಳನ್ನು ದೂರಮಾಡಬಹುದು. ಆದರೂ ಅದು ನಿಮ್ಮ ಚರ್ಮಕ್ಕೆ ಸೂಕ್ತವೇ ಎಂಬುದನ್ನು ತಿಳಿದುಕೊಳ್ಳಲು ಚರ್ಮಶಾಸ್ತ್ರಜ್ಞರನ್ನು ಸಂಪರ್ಕಿಸಬೇಕು.

ಕೆಂಪು ರಕ್ತ ಕಣಗಳು ಬೆಳ್ಳುಳ್ಳಿಯಲ್ಲಿರುವ ಸಲ್ಫರ್ ಅನ್ನು ಹೈಡ್ರೋಜನ್ ಸಲ್ಫೈಡ್ ಅನಿಲವಾಗಿ ಪರಿವರ್ತಿಸುತ್ತವೆ. ಇದು ರಕ್ತನಾಳಗಳನ್ನು ವಿಸ್ತರಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಅಂತಿಮವಾಗಿ ಬೆಳ್ಳುಳ್ಳಿ ಕ್ರೀಡಾಪಟುವಿನ ಪಾದಕ್ಕೆ ಚಿಕಿತ್ಸೆ ನೀಡಲು ಉತ್ತಮ ಪ್ರತಿವಿಷವಾಗಿದೆ. ಇದು ಶಿಲೀಂಧ್ರದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಬೆಳ್ಳುಳ್ಳಿಯನ್ನು ಸತತವಾಗಿ ಆಹಾರದಲ್ಲಿ ಸೇರಿಸುವುದು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನವನ್ನು ಕೊಡುತ್ತದೆ. ಬೆಳ್ಳುಳ್ಳಿಯ ಎಣ್ಣೆ ನೋವು ನಿವಾರಕವಾಗಿಯೂ ಕೆಲಸ ಮಾಡುತ್ತದೆ.

ಇದನ್ನೂ ಓದಿ: Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

ಹೆಲ್ತ್‌ಲೈನ್ ವರದಿಯ ಪ್ರಕಾರ ಪ್ರತಿ ಊಟದಲ್ಲಿ 1 ಎಸಳಿಗಿಂತ ಹೆಚ್ಚು ಬೆಳ್ಳುಳ್ಳಿಯನ್ನು ಸೇವಿಸಲು ಪ್ರಯತ್ನಿಸುವುದು ಆರೋಗ್ಯಕ್ಕೆ ಒಳ್ಳೆಯದು.

ಪ್ರಿಯಾಂಕಾ ಬಳಸುತ್ತಿರುವುದು ಏಕೆ?

ಬಳಕೆದಾರರ ಕಾಮೆಂಟ್ ಗಳಿಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಚೋಪ್ರಾ ಅವರು, ಇದು ಉರಿಯೂತ ಮತ್ತು ದೇಹದ ತಾಪವನ್ನು ಇಳಿಸಲು ಕಡಿಮೆ ಮಾಡುತ್ತದೆ ಎಂದು ಹೇಳಿದ್ದಾರೆ.

Continue Reading
Advertisement
Haveri Accident
ಕರ್ನಾಟಕ4 mins ago

Haveri Accident: ಭಾರತ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್ ಆಗಿದ್ದ ಮೃತ ಮಾನಸ

cm siddaramaiah karnataka cm
ಕರ್ನಾಟಕ12 mins ago

Karnataka CM: ಒಕ್ಕಲಿಗ ಆಯ್ತು, ಈಗ ಲಿಂಗಾಯತ ಮುಖ್ಯಮಂತ್ರಿಗೆ ಪಂಚ ಪೀಠ ಶ್ರೀಗಳಿಂದ ಬೇಡಿಕೆ!

Ajinkya Rahane
ಕ್ರೀಡೆ35 mins ago

Ajinkya Rahane: ಕೌಂಟಿ ಕ್ರಿಕೆಟ್​ನತ್ತ ಮುಖ ಮಾಡಿದ ಅಜಿಂಕ್ಯ ರಹಾನೆ

BGauss RUV350
Latest47 mins ago

BGauss RUV350 : ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಆರ್‌ಯುವಿ350 ಬಿಡುಗಡೆ ಮಾಡಿದ ಬಿಗಾಸ್

Renukaswamy murder case 17th accused files bail plea
ಬೆಂಗಳೂರು50 mins ago

Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನ 17ನೇ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

Hina Khan diagnosed with breast cancer
ಸಿನಿಮಾ59 mins ago

Hina Khan: ಬಿಗ್ ಬಾಸ್ ಸ್ಪರ್ಧಿ, ʻಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈʼ ಧಾರಾವಾಹಿ ಖ್ಯಾತಿಯ ನಟಿಗೆ ಸ್ತನ ಕ್ಯಾನ್ಸರ್!

Haveri Accident
ಪ್ರಮುಖ ಸುದ್ದಿ1 hour ago

Haveri Accident: ಹಾವೇರಿ ಅಪಘಾತ ಪ್ರಕರಣ; 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Convergence Foundation
ಬೆಂಗಳೂರು1 hour ago

Convergence Foundation : ಕನ್ವರ್ಜನ್ಸ್ ಫೌಂಡೇಷನ್ ಸಹಯೋಗದೊಂದಿಗೆ ‘ವ್ಯವಸ್ಥಿತ ಪರಿಣಾಮ ಸೃಷ್ಟಿ’ ಕುರಿತು ಸಂವಾದ

Renuka swamy Murder case actor darshan
ಕ್ರೈಂ1 hour ago

Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!

IND Vs SA T20 WC Final
ಕ್ರೀಡೆ1 hour ago

IND Vs SA T20 WC Final: ಫೈನಲ್​ ಪಂದ್ಯಕ್ಕೂ ಮಳೆ ಭೀತಿ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ19 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು22 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌