Site icon Vistara News

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ತನಿಖೆ ಬಳಿಕವೇ ದರ್ಶನ್ ಪಾತ್ರ ಗೊತ್ತಾಗಲಿದೆ ಎಂದ ಸಚಿವ ಪರಮೇಶ್ವರ್‌

Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಇದೀಗ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಇದು ಮರ್ಡರ್ ಕೇಸ್ ಆಗಿರುವುದರಿಂದ ಸೀರಿಯಸ್‌ ಕೇಸ್ ಆಗಿದೆ. ಇದರಲ್ಲಿ ದರ್ಶನ್ (Actor Darshan) ಪಾತ್ರ ತನಿಖೆ ಬಳಿಕವೇ ಗೊತ್ತಾಗಲಿದೆ. ವೈಯುಕ್ತಿಕ ಕಾರಣಕ್ಕೆ ಕೊಲೆ ಆಗಿದೆಯೋ, ಇದರ ಹಿಂದೆ ಬೇರೆ ಯಾವ ಉದ್ದೇಶ ಇದೆ ಎಂಬುವುದು ತನಿಖೆಯಿಂದ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌ ಅವರು, ಮೈಸೂರಿನಲ್ಲಿ ನಟನನ್ನು ಅರೆಸ್ಟ್ ಮಾಡಿದ್ದಾರೆ. ಮೊದಲು ಅರೆಸ್ಟ್ ಆದ ಆರೋಪಿಗಳು ದರ್ಶನ್‌ ಹೆಸರು ಹೇಳಿದ್ದಾರೆ. ಹೀಗಾಗಿ ಅವರನ್ನ ಅರೆಸ್ಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಆರೋಪಿಗಳನ್ನ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಅಂತ ಮಾಹಿತಿ ಇದೆ. ಅದರ ಮೇಲೆ ತನಿಖೆ ಆಗುವವರೆಗೂ ಕೂಡ ಏನು ಹೇಳೋಕಾಗಲ್ಲ. ಪ್ರಕರಣದಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರೋ, ಇಲ್ಲವೋ? ತಿಳಿಯಬೇಕು. ಯಾವ ಕಾರಣಕ್ಕೂ ಮರ್ಡರ್ ಆಗಿದೆ. ಇವರ ಹೆಸರು ಯಾಕೆ ಬಂದಿದೆ ಅನ್ನೋದು ತನಿಖೆ ನಂತರ ಗೊತ್ತಾಗುತ್ತೆ. ಈ ಸಂದರ್ಭದಲ್ಲಿ ಬೇರೆ ಏನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Actor Darshan: ಕೊಲೆ ಕೇಸ್‌ಗೆ ಕ್ಷಣಕ್ಕೊಂದು ಟ್ವಿಸ್ಟ್;‌ ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷನೂ ಅರೆಸ್ಟ್!

ಏನಿದು ಪ್ರಕರಣ?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (28) ಎಂಬವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಸ್ಯಾಂಡಲ್‌ವುಟ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನಲ್ಲಿರುವ (Mysore) ದರ್ಶನ್‌ ಅವರ ತೋಟದ ಮನೆಯಲ್ಲಿ ಬೆಂಗಳೂರಿನ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ. ನಟನನ್ನು ಬಂಧಿಸಿರುವ (Actor Darshan Arrested) ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಶವವನ್ನು ಎಸೆದು ಹೋಗಿದ್ದರು. ಬೆಂಗಳೂರಿನ ಆರ್‌.ಆರ್‌.ನಗರದ ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಜೂನ್‌ 9ರಂದು ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆಗಮಿಸಿದ ವೇಳೆ ಶವದ ಮುಖ, ತಲೆ, ಕಿವಿಗೆ ರಕ್ತಗಾಯವಾಗಿರುವುದು ಕಂಡು ಬಂದಿತ್ತು. ಯಾರೋ‌ ಕೊಲೆ ಮಾಡಿ ತಂದು ಬಿಸಾಡಿರೋ ಅನುಮಾನದ ಮೇಲೆ ಪೊಲೀಸರು ದೂರು ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಇದು ರೇಣುಕಾಸ್ವಾಮಿ ಶವ ಎನ್ನುವುದು ತಿಳಿದು ಬಂದಿತ್ತು.

ಇದನ್ನೂ ಓದಿ | Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

ಈ ಪ್ರಕರಣದಲ್ಲಿ ಸೋಮವಾರ ಗಿರಿನಗರ ಮೂಲದ ಮೂವರು ಆರೋಪಿಗಳು ಸರೆಂಡರ್ ಆಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿದ್ದಾಗಿ ಹೇಳಿದ್ದರು. ಪೊಲೀಸರಿಗೆ ಅನುಮಾನ ಬಂದು ತೀವ್ರ ವಿಚಾರಣೆ ಮಾಡಿದಾಗ ದರ್ಶನ್ ಹೆಸರು ಬಾಯಿ ಬಿಟ್ಟಿದ್ದಾರೆ. ಸದ್ಯ ಈ ಪ್ರಕರಣದಲ್ಲಿ ದರ್ಶನ್‌ ಅವರ ಪಾತ್ರದ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಸಚಿವ ಜಿ.ಪರಮೇಶ್ವರ್‌ ಮಾಹಿತಿ ಕಲೆ ಹಾಕುತ್ತಿದ್ದಾರೆ.

Exit mobile version