Actor Darshan : ಮುಂದೆ ಹೀಗಾಗಲ್ಲ ಎಂದ ದರ್ಶನ್; ಘಟನೆ ಬಗ್ಗೆ ಪಿನ್‌ ಟು ಪಿನ್‌ ಮಾಹಿತಿ ಕೊಟ್ಟ ನಟ Vistara News

South Cinema

Actor Darshan : ಮುಂದೆ ಹೀಗಾಗಲ್ಲ ಎಂದ ದರ್ಶನ್; ಘಟನೆ ಬಗ್ಗೆ ಪಿನ್‌ ಟು ಪಿನ್‌ ಮಾಹಿತಿ ಕೊಟ್ಟ ನಟ

Actor Darshan : ಅಕ್ಕಪಕ್ಕದ ಮನೆಗಳ ನಿವಾಸಿಗಳಿಗೆ ತೊಂದರೆಯಾಗುತ್ತದೆ. ಯಾರೇ ಬಂದರೂ ವಿಚಾರಿಸಿ ನೋಡಿಕೊಳ್ಳುವಂತೆ ಹೇಳಿದ್ದೆ. ಈ ಹಿನ್ನೆಲೆಯಲ್ಲಿ ಕಾರ್ ಪಾರ್ಕಿಂಗ್ ವಿಚಾರವಾಗಿ ನಮ್ಮ ಹುಡುಗರು ಕೇಳಿದ್ದಾರೆ. ಆ ವೇಳೆ ಈ ಅವಘಡ ಆಗಿದೆ ಎಂದು ನಟ ದರ್ಶನ್‌ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಯಿ ಕಡಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಚ್ಚರಿಕೆ ವಹಿಸಬೇಕಿತ್ತು ಎಂದು ಹುಡುಗರಿಗೆ ಹೇಳಿದ್ದೇನೆ. ಅಲ್ಲದೆ, ನಾಯಿ ಕಡಿತಕ್ಕೆ ಒಳಗಾದ ವೈದ್ಯೆ ಅಮಿತಾ ಜಿಂದಾಲ್ ಅವರ ಆಸ್ಪತ್ರೆ ವೆಚ್ಚವನು ಭರಿಸುವಂತೆ ಹೇಳಿದ್ದೇನೆ. ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸುತ್ತೇನೆ ಎಂದು ಪೊಲೀಸರಿಗೆ ನಟ ದರ್ಶನ್‌ ಹೇಳಿಕೆ ನೀಡಿದ್ದಾರೆ. ತಮ್ಮ ಮನೆಯ ನಾಯಿಯು ವೈದ್ಯೆಯೊಬ್ಬರಿಗೆ ಕಚ್ಚಿದ (Dog Bite) ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್‌ (Actor Darshan) ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಗೆ ಹಾಜರಾಗಿ ಈ ಹೇಳಿಕೆ ನೀಡಿದ್ದಾರೆ.

ವೈದ್ಯೆಗೆ ನಮ್ಮ ಮನೆಯ ನಾಯಿ ಕಚ್ಚಿದ ದಿನದಂದು ನಾನು ಗುಜರಾತ್‌ನಲ್ಲಿ ಶೂಟಿಂಗ್‌ನಲ್ಲಿದ್ದೆ. ಹುಡುಗರಿಗೆ ಸರಿಯಾಗಿ ನೋಡಿಕೊಳ್ಳುವಂತೆ ಹೇಳಿದ್ದೆ. ಕೇರ್ ಟೇಕರ್‌ಗೆ ಸರಿಯಾಗಿ ನೋಡಿಕೊಳ್ಳುವಂತೆ ಸೂಚನೆ ಕೊಟ್ಟಿದ್ದೆ. ಸೆಲೆಬ್ರಿಟಿಗಳ ಮನೆ ಬಳಿ ಸಾಕಷ್ಟು ಜನ ಬರುತ್ತಿರುತ್ತಾರೆ. ಹೀಗಾಗಿ ಅಕ್ಕಪಕ್ಕದ ಮನೆಗಳ ನಿವಾಸಿಗಳಿಗೆ ತೊಂದರೆಯಾಗುತ್ತದೆ. ಯಾರೇ ಬಂದರೂ ವಿಚಾರಿಸಿ ನೋಡಿಕೊಳ್ಳುವಂತೆ ಹೇಳಿದ್ದೆ. ಈ ಹಿನ್ನೆಲೆಯಲ್ಲಿ ಕಾರ್ ಪಾರ್ಕಿಂಗ್ ವಿಚಾರವಾಗಿ ನಮ್ಮ ಹುಡುಗರು ಕೇಳಿದ್ದಾರೆ. ಆ ವೇಳೆ ಈ ಅವಘಡ ಆಗಿದೆ. ಇನ್ನು ಮನೆಯ ಸಿಸಿಟಿವಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಘಟನೆ ಆದ ಬಳಿಕ ಸಿಸಿಟಿವಿ ಮೈಂಟೇನ್ ಮಾಡುವಂತೆ ಹೇಳಿದ್ದೇನೆ ಎಂದು ನಟ ದರ್ಶನ್‌ ಪೊಲೀಸರಿಗೆ ವಿವರಣೆ ನೀಡಿದ್ದಾರೆ. ಸದ್ಯಕ್ಕೆ ಸಿಸಿಟಿವಿ ಫೂಟೇಜ್ ನೀಡುವಂತೆ ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ಫೂಟೇಜ್ ಪಡೆದು ಮುಂದೆ ಪೊಲೀಸರು ಚಾರ್ಜ್‌ಶೀಟ್ ಹಾಕಲಿದ್ದಾರೆ.

ದರ್ಶನ್‌ ಎ2 ಆರೋಪಿ

ಅಮಿತಾ ಜಿಂದಾಲ್​ ಎಂಬ ಮಹಿಳೆಗೆ ದರ್ಶನ್​ ಮನೆಯ ನಾಯಿ ಕಚ್ಚಿತ್ತು. ಹೀಗಾಗಿ ಅಮಿತಾ ಅವರು ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಹೀಗಾಗಿ ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಕೇಸ್​ ದಾಖಲು ಮಾಡಿಕೊಳ್ಳಲಾಗಿತ್ತು. ನಟ ದರ್ಶನ್‌ ಅವರನ್ನು ಈ ಪ್ರಕರಣದಲ್ಲಿ ಎ2 ಆರೋಪಿಯನ್ನಾಗಿ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಠಾಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ಪೊಲೀಸರು ದರ್ಶನ್‌ಗೆ ನೋಟಿಸ್​ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆಗೆ ದರ್ಶನ್‌ ಭೇಟಿ ನೀಡಿದ್ದು, ಹೇಳಿಕೆ ನೀಡಿದ್ದಾರೆ.

ಏನಿದು ಘಟನೆ?

ವೈದ್ಯೆಯಾಗಿರುವ ಅಮಿತಾ ಅವರು ಅ.28ರಂದು ಸ್ಪರ್ಶ ಆಸ್ಪತ್ರೆಗೆ ಆಗಮಿಸಿದ ವೇಳೆ ದರ್ಶನ್ ಅವರ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಕಾರು ಪಾರ್ಕಿಂಗ್‌ ಮಾಡಿದ್ದರು. ಆಸ್ಪತ್ರೆಯಿಂದ ಅವರು ವಾಪಸ್‌ ಬಂದಾಗ ಅಲ್ಲಿ ನಾಯಿಗಳು ಇದ್ದವು. ಇದರಿಂದ ಭಯಗೊಂಡ ಅಮಿತಾ ಅವರು, ಆ ನಾಯಿಗಳನ್ನು ಬೇರೆಡೆ ಕರೆದುಕೊಂಡು ಹೋಗುವಂತೆ ನಾಯಿಯನ್ನು ನೋಡಿಕೊಳ್ಳುತ್ತಿರುವ ವ್ಯಕ್ತಿಗೆ ಸೂಚಿಸಿದರೂ ಅವರು ಕೇಳಿಲಿಲ್ಲ ಎಂದು ದೂರಿನಲ್ಲಿ ಅಮಿತಾ ಉಲ್ಲೇಖಿಸಿದ್ದಾರೆ. ನಾಯಿಗಳನ್ನು ಬೇರೆಡೆ ಕರೆದೊಯ್ಯಿರಿ ಎಂದು ಹೇಳಿದರೂ ಅವುಗಳನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿ, ಇಲ್ಲಿ ಯಾಕೆ‌ ಪಾರ್ಕಿಂಗ್ ಮಾಡಿದ್ದೀರಿ ಎಂದು ನನ್ನ ಜತೆಗೆ ವಾಗ್ವಾದ ನಡೆಸಿದರು. ಈ ವೇಳೆ ಏಕಾಏಕಿ ಎರಡು ನಾಯಿಗಳು ದಾಳಿ ಮಾಡಿ ಕಚ್ಚಿವೆ ಎಂದು ವೈದ್ಯೆ ಅಮಿತಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

darshan with dogs

ಇದನ್ನೂ ಓದಿ: Nana Patekar: ಹುಡುಗನ ತಲೆಗೆ ಜೋರಾಗಿ ಥಳಿಸಿದ ನಾನಾ ಪಾಟೇಕರ್!

ಅಲ್ಲದೆ, ಬೇರೆಡೆ ಕರೆದುಕೊಂಡು ಹೋಗುವಂತೆ ಸೂಚಿಸಿದರೂ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ತಮಗೆ ನಾಯಿಗಳು ಕಚ್ಚಿವೆ. ಹೀಗಾಗಿ ಮಾಲೀಕ ದರ್ಶನ್ ಹಾಗೂ ನಾಯಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವೈದ್ಯೆ ದೂರಿನಲ್ಲಿ ಮನವಿ ಮಾಡಿದ್ದರು. ಆದರೆ, ಘಟನೆ ನಡೆದು ಎರಡು ವಾರ ಗತಿಸಿದರೂ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಗಂಭೀರ ಆರೋಪವನ್ನು ಸಹ ಮಾಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

The Nandi Awards: ನಂದಿ ಫಿಲ್ಮ್‌ ಅವಾರ್ಡ್; ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

The Nandi Awards: ಇದು ಮೊದಲ ನಂದಿ ಫಿಲಂ ಅವಾರ್ಡ್ ಆಗಿದ್ದು ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ಈ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಒರಿಯನ್ ಮಾಲ್‌ನಲ್ಲಿ ನಿನ್ನೆ ಜರುಗಿದೆ.

VISTARANEWS.COM


on

Nandi Film Award Rishabh Shetty
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮೊದಲ ಬಾರಿಗೆ ʼನಂದಿʼ ಚಲನಚಿತ್ರ ಪ್ರಶಸ್ತಿ ಪ್ರಾರಂಭವಾಗಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಒರಿಯನ್ ಮಾಲ್‌ನಲ್ಲಿ ಬುಧವಾರ ನಡೆದಿದೆ. ಕನ್ನಡದ್ದೇ ಆದ ಸ್ವಂತ ಪ್ರಶಸ್ತಿ ನೀಡುವ ವೇದಿಕೆ, ಆ ಮೂಲಕ ನಮ್ಮ ಪ್ರತಿಭೆಗಳನ್ನು ನಾವೇ ಗುರುತಿಸಿ ಬೆನ್ನು ತಟ್ಟುವ ಪ್ರಯತ್ನ ಮಾಡಬೇಕಿದೆ. ಇದನ್ನೆಲ್ಲಾ ಮನಗಂಡು, ಚರ್ಚಿಸಿ ಮಂಡಳಿ ನಂದಿ ಪ್ರಶಸ್ತಿ ನೀಡಿದೆ.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಟ ರವಿಚಂದ್ರನ್, ರಿಷಬ್ ಶೆಟ್ಟಿ, ಧ್ರುವ ಸರ್ಜಾ ಇನ್ನೂ ಹಲವು ತಾರೆಯರು ಭಾಗಿಯಾಗಿದ್ದಾರೆ. ಜತೆಗೆ ಹಿರಿಯ ನಟ ಶ್ರೀನಾಥ್, ನಟಿ ಪ್ರೇಮ, ವಿನೋದ್ ರಾಜ್, ಅನು ಪ್ರಭಾಕರ್, ಉಮಾಶ್ರೀ ಇನ್ನೂ ಹಲವು ನಟ-ನಟಿಯರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದು ಮೊದಲ ನಂದಿ ಫಿಲಂ ಅವಾರ್ಡ್ ಆಗಿದ್ದು ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ನಟ ರವಿಚಂದ್ರನ್ ಮಾತನಾಡಿ, ‘ನಂದಿ ಪ್ರಶಸ್ತಿ ನೀಡುತ್ತಿರುವುದು ಬಹಳ ಖುಷಿಯಾಗಿದೆ. ಪ್ರಶಸ್ತಿ ಬಹಳ ಭಾರವಾಗಿದೆ ಅದು ನನಗೆ ಖುಷಿ ಕೊಟ್ಟಿತು, ನನ್ನಂತಹ ಶಿವ ಭಕ್ತನಿಂದ ನಂದಿ ಪ್ರಶಸ್ತಿ ಕೊಡಿಸುತ್ತಿದ್ದೀರ. ಎಲ್ಲರ ಮನೆಗಳಿಗೂ ನಂದಿ ಸೇರುತ್ತದೆ ಎಂಬುದು ನನಗೆ ಖುಷಿ’ ಎಂದರು. ನಟ ಶ್ರೀನಾಥ್ ಅವರಿಗೆ ಜೀವನಮಾನ ಸಾಧನೆಗೆ ಲೈಫ್ ಟೈಮ್ ಅಚೀವ್‌ಮೆಂಟ್‌ ಅವಾರ್ಡ್ ನೀಡಲಾಯ್ತು.

ನೆರೆಯ ಆಂಧ್ರಪ್ರದೇಶ ಮನರಂಜನಾ ಕ್ಷೇತ್ರದ ಸಾಧಕರಿಗೆ ಕೊಡುವ ರಾಜ್ಯ ಪ್ರಶಸ್ತಿಗೂ ನಂದಿ ಅವಾರ್ಡ್ಸ್ ಎಂದೇ ಹೆಸರಿದೆ. ಆದರೆ, ಆ ಪ್ರಶಸ್ತಿಗೂ ಈ ಪ್ರಶಸ್ತಿಗೂ ಸಮಬಂಧವಿಲ್ಲ. ಎರಡು ಬೇರೆ ಬೇರೆ. ಆಂಧ್ರಪ್ರದೇಶದಂತೆ ಕನ್ನಡದ ಪ್ರಶಸ್ತಿಗೂ ನಂದಿ ಅವಾರ್ಡ್ ಎಂದೇ ಕರೆಯಲಾಗುತ್ತಿದೆ. ಇದಕ್ಕೆ ಕಾರಣವೂ ಇದೆ. ನಂದಿ ಎನ್ನುವುದು ಕನ್ನಡದ ಪಾಲಿಗೂ ಒಂದು ಪವರ್‌ಫುಲ್ ಇಮೇಜ್ ಎನಿಸುವ ಲಾಂಛನ. ಆ ಕಾರಣದಿಂದಲೇ ‘ನಂದಿ’ ಎಂಬ ಹೆಸರನ್ನೇ ಕನ್ನಡದ ಪ್ರಶಸ್ತಿಗೂ ಇಡಲಾಗಿದೆ.

Nandi Film Award Rishabh Shetty won the best actor and director award

ಇದನ್ನೂ ಓದಿ: Nandi Award: ಕನ್ನಡಕ್ಕೂ ಬಂತು ತೆಲುಗಿನ ‘ನಂದಿ ಫಿಲ್ಮಂ ಅವಾರ್ಡ್‌’; ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟ ಪೂರ್ವ ಅಧ್ಯಕ್ಷರಾದ ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ ಈ ಪ್ರಶಸ್ತಿ ಸಂಸ್ಥಾಪರಾಗಿದ್ದಾರೆ.

ಪ್ರಶಸ್ತಿ ಪಡೆದವರ ಪಟ್ಟಿ

 • ಬೆಸ್ಟ್ ಬಯೋಪಿಕ್ ಅವಾರ್ಡ್: ವಿಜಯಾನಂದ ಫಿಲ್ಮ್
 • ಲೆಜೆಂಡರಿ ಆ್ಯಕ್ಟ್ರೆಸ್ ಅವಾರ್ಡ್‌; ಲೀಲಾವತಿ.
 • ಜೀವಮಾನ ಸಾಧನೆ ಪ್ರಶಸ್ತಿ-ನಟ ಶ್ರೀನಾಥ್ ಹಾಗೂ ಭಾರತಿ ವಿಷ್ಣುವರ್ಧನ್.
 • ಅತ್ಯತ್ತಮ ಡಾಕ್ಯುಮೆಂಟ್ರಿ ಪ್ರಶಸ್ತಿ-ಗಂಧದಗುಡಿ.
 • ಬೆಸ್ಟ್ ಡೆಬ್ಯುಟ್ ಆ್ಯಕ್ಟರ್ ವಿಕ್ರಮ್ ರವಿಚಂದ್ರನ್.
 • ಬೆಸ್ಟ್ ಡೆಬ್ಯುಟ್ ಆ್ಯಕ್ಟ್ರೆಸ್ ರೀಷ್ಮಾ ನಾಣಯ್ಯ.
 • ಬೆಸ್ಟ್ ಕಾಮಿಡಿಯನ್ ರಂಗಾಯಣ ರಘು.
 • ಬೆಸ್ಟ್ ಕಾಮಿಕ್ ರೋಲ್- ಹೇಮಾದತ್.
 • ಬೆಸ್ಟ್ ಸಪೋರ್ಟಿಂಗ್ ರೋಲ್-ವೀಣಾ ಸುಂದರ್.
 • ಬೆಸ್ಟ್ ಕ್ರಿಟಿಕ್ಸ್ ಆ್ಯಕ್ಟರ್-.ಸಂಚಾರಿ ವಿಜಯ್.
 • ಅತ್ಯುತ್ತಮ ಸಂಭಾಷಣೆಕಾರ ಮಾಸ್ತಿ.
 • ಅತ್ಯುತ್ತಮ ಚಿತ್ರ: 777 ಚಾರ್ಲಿ.
 • ʼಅತ್ಯುತ್ತಮ ನಿರ್ದೇಶಕ. ರಿಷಬ್ ಶೆಟ್ಟಿ.
 • ಅತ್ಯುತ್ತಮ ನಟ. ರಿಷಬ್ ಶೆಟ್ಟಿ.
 • ಅತ್ಯುತ್ತಮ ನಟಿ-ಸಪ್ತಮಿ ಗೌಡ
 • ಅತ್ಯುತ್ತಮ ಖಳನಟ-ಡಾಲಿ ಧನಂಜಯ್
 • ಬೆಸ್ಟ್ ಆ್ಯಕ್ಟರ್ ಸಪೋರ್ಟಿಂಗ್ ರೋಲ್-ಲೂಸ್ ಮಾದ ಯೋಗಿ
 • ಬೆಸ್ಟ್ ಕ್ರಿಟಿಕ್ಸ್ ಆ್ಯಕ್ಟರ್ಸ್ಸ್-ಹರಿಪ್ರಿಯಾ-ಅನುಪ್ರಭಾಕರ್
 • ಬೆಸ್ಟ್ ಪ್ರೆಸ್ ಫೋಟೋಗ್ರಾಫರ್-ಕೆ.ಎನ್.ನಾಗೇಶ್ ಕುಮಾರ್
 • ಬೆಸ್ಟ್ ಪಿಆರ್ -ನಾಗೇಂದ್ರ
Continue Reading

South Cinema

Spandana Vijay Raghavendra: ಅತ್ತಿಗೆಯನ್ನು ನೆನೆದು ಭಾವುಕರಾದ ಶ್ರೀ ಮುರುಳಿ!

Spandana Vijay Raghavendra: ʻʻಅತ್ತಿಗೆ ನೀವು ನಮ್ಮಿಂದ ಅಗಲಿ 4 ತಿಂಗಳುಗಳಾಗಿರಬಹುದು… ಆದರೂ ಈ ಸತ್ಯವನ್ನು ಈಗಲು ನಂಬಲು ಹಾಗೂ ಒಪ್ಪಿಕೊಳ್ಳಲು ಇಷ್ಟವಿಲ್ಲʼʼ ಎಂದು ಸ್ಪಂದನಾ ಅವರ ಫೋಟೊ ಹಂಚಿಕೊಂಡು ಕ್ಯಾಪ್ಷನ್‌ ನೀಡಿದ್ದಾರೆ.

VISTARANEWS.COM


on

srii muruli post on Spandana Vijay Raghavendra
Koo

ಬೆಂಗಳೂರು: ವಿದೇಶ ಪ್ರವಾಸದಲ್ಲಿದ್ದ ಸ್ಪಂದನಾ ವಿಜಯ್‌ ರಾಘವೇಂದ್ರ (Spandana Vijay Raghavendra) ಅವರು ಆಗಸ್ಟ್ 6ರಂದು ಬ್ಯಾಂಕಾಕ್‌ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಇಂದಿನವರೆಗೂ ದಿನನಿತ್ಯ ವಿಜಯ್‌ ರಾಘವೇಂದ್ರ ಅವರು ಸ್ಪಂದನಾ ಕುರಿತು ಪೋಸ್ಟ್‌ ಹಾಕುತ್ತಲೇ ಇದ್ದಾರೆ. ಇದೀಗ ಶ್ರೀ ಮುರುಳಿ ಅವರು ಅತ್ತಿಗೆ ಸ್ಪಂದನಾ ಅವರನ್ನು ನೆನೆದು ಭಾವುಕರಾಗಿದ್ದಾರೆ.

ʻʻಅತ್ತಿಗೆ ನೀವು ನಮ್ಮಿಂದ ಅಗಲಿ 4 ತಿಂಗಳುಗಳಾಗಿರಬಹುದು… ಆದರೂ ಈ ಸತ್ಯವನ್ನು ಈಗಲೂ ನಂಬಲು ಹಾಗೂ ಒಪ್ಪಿಕೊಳ್ಳಲು ಇಷ್ಟವಿಲ್ಲʼʼ ಎಂದು ಸ್ಪಂದನಾ ಅವರ ಫೋಟೊ ಹಂಚಿಕೊಂಡು ಕ್ಯಾಪ್ಷನ್‌ ನೀಡಿದ್ದಾರೆ. ಜೊತೆಗಿರದ ಜೀವ ಎಂದಿಗೂ ಜೀವಂತ  ಎಂದು ಮುರುಳಿ ಅವರ ಫ್ಯಾನ್ಸ್‌ ಕೂಡ ಕಮೆಂಟ್‌ ಮಾಡಿದ್ದಾರೆ. ಈ ಹಿಂದೆ ಶ್ರೀ ಮುರುಳಿ ಅವರು ಸ್ಪಂದನಾ ಪುಣ್ಯಸ್ಮರಣೆಯಲ್ಲಿ ಕುಂಟುತ್ತಲೇ ಬಂದು ಸುದ್ದಿಯಾಗಿದ್ದರು. ಬೆಂಗಳೂರಿನ ರಾಕ್‌ಲೈನ್ ಸ್ಟೂಡಿಯೋದಲ್ಲಿ ʼಬಘೀರʼ ಸಿನಿಮಾದ ಫೈಟಿಂಗ್ ಸೀಕ್ವೆನ್ಸ್ ಚಿತ್ರೀಕರಿಸಲಾಗುತ್ತಿತ್ತು. ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಶ್ರೀಮುರಳಿ ಅವರ ಮೊಣಕಾಲಿಗೆ ಪೆಟ್ಟಾಗಿತ್ತು. ಅದಾದ ಬಳಿಕ ಚಿಕಿತ್ಸೆಯನ್ನು ನೀಡಲಾಗಿತ್ತು. ಬಳಿಕ ಚೇತರಿಸಿಕೊಂಡಿದ್ದರು.

ಇದನ್ನೂ ಓದಿ: Spandana Vijay Raghavendra: ʻನಾನೆಂದೂ ನಿನ್ನವ, ಕೇವಲ ನಿನ್ನವ’ ಸ್ಪಂದನಾ ಬಗ್ಗೆ ವಿಜಯ್‌ ಭಾವುಕ ಸಾಲು!

ಡಿ. 17ಕ್ಕೆ ʼಬಘೀರʼ ಸಿನಿಮಾ ಟೀಸರ್‌ ರಿಲೀಸ್‌?

ʼಕೆಜಿಎಫ್ ಚಾಪ್ಟರ್ 2ʼ ಮತ್ತು ʼಕಾಂತಾರʼ ಸಿನಿಮಾಗಳ ಮೆಗಾ ಯಶಸ್ಸಿನ ನಂತರ ಹೊಂಬಾಳೆ ಫಿಲ್ಮ್ಸ್ ʼಬಘೀರʼ ಚಿತ್ರವನ್ನು ನಿರ್ಮಿಸಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಕಥೆ ಬರೆದಿದ್ದು, ʼಲಕ್ಕಿʼ ಸಿನಿಮಾ ಖ್ಯಾತಿಯ ಡಾ. ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಇದೀಗ ಶ್ರೀ ಮುರುಳಿ ಅವರ ಜನುಮದಿನವೇ ʼಬಘೀರʼ ಸಿನಿಮಾ ಟೀಸರ್‌ ಬಿಡುಗಡೆಯಾಗುತ್ತಿದೆ ಎಂದು ವರದಿಯಾಗಿದೆ.

ಸೂರಿ ಅವರು ಯಶ್‌ ಅವರ ʼಲಕ್ಕಿ ʼ ಚಿತ್ರದ ನಂತರ ನಾಲ್ಕು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಬರುತ್ತಿದ್ದಾರೆ. ಮಫ್ತಿ, ಭರಾಟೆ, ರಥಾವರ, ಕಂಠಿ ಚಿತ್ರಗಳಲ್ಲಿ ಅಬ್ಬರಿಸಿದ ಶ್ರೀಮುರುಳಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ರಕ್ಷಿತ್‌ ಶೆಟ್ಟಿ ನಟನೆಯ ʻಸಪ್ತ ಸಾಗರದಾಚೆ ಎಲ್ಲೋʼ, ಗಣೇಶ್ ನಟನೆಯ “ಬಾನ ದಾರಿಯಲ್ಲಿʼ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸುತ್ತಿರುವ ರುಕ್ಮಿಣಿ ವಸಂತ್ ಈಗ “ಬಘೀರʼ ಚಿತ್ರಕ್ಕೂ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

Continue Reading

South Cinema

Rashmika Mandanna: ʻದಿಯಾʼ ಹೀರೊ ಜತೆ ರಶ್ಮಿಕಾ ಮಂದಣ್ಣ ರೊಮ್ಹಾನ್ಸ್‌!

Rashmika Mandanna: ರಶ್ಮಿಕಾ ಮಂದಣ್ಣ ‘ಅನಿಮಲ್’ ಸಿನಿಮಾ ಸಕ್ಸೆಸ್‌ ಅಲ್ಲಿ ತೇಲುತ್ತಿದ್ದಾರೆ. ರಶ್ಮಿಕಾ ಬೋಲ್ಡ್ ದೃಶ್ಯಗಳಲ್ಲಿ ನಟಿಸಿರುವ ಬಗ್ಗೆಯೂ ಚರ್ಚೆ ಆಗುತ್ತಿದೆ. ಇದೀಗ ರಶ್ಮಿಕಾ ‘ದಿ ಗರ್ಲ್‌ಫ್ರೆಂಡ್’ ಎನ್ನುವ ಮಹಿಳಾ ಪ್ರಧಾನ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

VISTARANEWS.COM


on

Rashmika Mandanna and Dheekshith Shetty
Koo

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ (Rashmika Mandanna) ‘ದಿ ಗರ್ಲ್‌ಫ್ರೆಂಡ್’ ಎಂಬ ರೋಮಾಂಚಕ ಪ್ರೇಮಕಥೆಯಲ್ಲಿ ನಾಯಕಿಯಾಗಿ ನಟಿಸಲು ಸಿದ್ಧರಾಗಿದ್ದಾರೆ. ಏಳು ವರ್ಷಗಳ ವೃತ್ತಿಜೀವನದಲ್ಲಿ ಇದು ನಟಿಯ 24ನೇ ಚಿತ್ರವಾಗಿದೆ. ‘ದಿ ಗರ್ಲ್‌ಫ್ರೆಂಡ್’ ರಶ್ಮಿಕಾ ಅವರ ಸೋಲೊ ಸಿನಿಮಾ ಎನ್ನಲಾಗಿದೆ. ಚಿತ್ರವನ್ನು ರಾಹುಲ್ ರವೀಂದ್ರನ್ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾಗೆ ಕನ್ನಡದ ‘ದಿಯಾ’ ಚಿತ್ರದಲ್ಲಿ ನಟಿಸಿ ಗೆದ್ದಿದ್ದ ನಟ ದೀಕ್ಷಿತ್ ಶೆಟ್ಟಿ ಚಿತ್ರದಲ್ಲಿ ಹೀರೊ ಆಗಿ ನಟಿಸಿದ್ದಾರೆ. ಇತ್ತೀಚೆಗೆ ತೆಲುಗಿನ ‘ದಸರಾ’ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ ನಟ ನಾನಿ ಸ್ನೇಹಿತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ರಶ್ಮಿಕಾ ಮಂದಣ್ಣ ‘ಅನಿಮಲ್’ ಸಿನಿಮಾ ಸಕ್ಸೆಸ್‌ ಅಲ್ಲಿ ತೇಲುತ್ತಿದ್ದಾರೆ. ರಶ್ಮಿಕಾ ಬೋಲ್ಡ್ ದೃಶ್ಯಗಳಲ್ಲಿ ನಟಿಸಿರುವ ಬಗ್ಗೆಯೂ ಚರ್ಚೆ ಆಗುತ್ತಿದೆ. ಇದೀಗ ರಶ್ಮಿಕಾ ‘ದಿ ಗರ್ಲ್‌ಫ್ರೆಂಡ್’ ಎನ್ನುವ ಮಹಿಳಾ ಪ್ರಧಾನ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಗೀತಾ ಆರ್ಟ್ಸ್ ಬ್ಯಾನರ್‌ನಲ್ಲಿ ಅಲ್ಲು ಅರವಿಂದ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ಬರಹಗಾರ ರಾಹುಲ್ ರವೀಂದ್ರನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ದೀಕ್ಷಿತ್ ಶೆಟ್ಟಿ ಅವರು ಕನ್ನಡದಲ್ಲಿ ‘ಬ್ಲಿಂಕ್’, ‘ಕೆಟಿಎಂ’, ‘ಶೀಘ್ರವೇಮ ಕಲ್ಯಾಣ ಪ್ರಾಪ್ತಿರಸ್ತು’, ‘ಸ್ಟ್ರಾಬೆರಿ’ ಹಾಗೂ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರಗಳಲ್ಲಿ ದೀಕ್ಷಿತ್ ನಟಿಸುತ್ತಿದ್ದಾರೆ. 15 ದಿನಗಳ ಹಿಂದೆಯಷ್ಟೆ ‘ದಿ ಗರ್ಲ್‌ಫ್ರೆಂಡ್’ ಸಿನಿಮಾ ಮುಹೂರ್ತ ನೆರವೇರಿತ್ತು. ಇದೀಗ ಸಿನಿಮಾ ಚಿತ್ರೀಕರಣ ಸಹ ಆರಂಭವಾಗಿದೆ. ಮೊದಲ ದಿನ ದೀಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ ಇಬ್ಬರೂ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ.

Rashmika Mandanna romance with Diya hero Dheekshith Shetty

ಇದನ್ನೂ ಓದಿ: Rashmika Mandanna: ನೀರಿನಲ್ಲಿ ಮುಳುಗಿದ ರಶ್ಮಿಕಾ; ‘ದಿ ಗರ್ಲ್‌ಫ್ರೆಂಡ್’ ಫಸ್ಟ್‌ ಲುಕ್‌ ಔಟ್‌!

ಗೀತಾ ಆರ್ಟ್ಸ್ ಅವರ 51ನೇ ಸಿನಿಮಾವಿದು. ರಶ್ಮಿಕಾ ಮಂದಣ್ಣ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಅವರು, ‘ರೇನ್ಬೋ, ‘ಡಿ 51’, ‘ಛಾವಾ’, ‘ಪುಷ್ಪ: ದಿ ರೂಲ್’, ಮತ್ತು ರವಿತೇಜಾ ಅವರೊಂದಿಗೆ ಹೆಸರಿಡದ ಚಿತ್ರದಲ್ಲಿ ಮುಂದಿನ ದಿನಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಶೀಘ್ರದಲ್ಲೇ ಚಿತ್ರಕ್ಕಾಗಿ ಮತ್ತೆ ಒಂದಾಗುತ್ತಾರೆ ಎಂದು ವದಂತಿಗಳಿವೆ.

Continue Reading

South Cinema

Actor Mohanlal: ಮೋಹನ್‌ಲಾಲ್ ಅಭಿನಯದ ʻಮಲೈಕೋಟ್ಟೈ ವಾಲಿಬನ್ʼ ಟೀಸರ್‌ ಔಟ್‌!

Actor Mohanlal: 2024ರ ಜನವರಿ 25ರಂದು ಸಿನಿಮಾ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.ಆ್ಯಕ್ಷನ್-ಥ್ರಿಲ್ಲರ್ ಸಿನಿಮಾ ಇದಾಗಿದ್ದು, ಲಿಜೋ ಜೋಸ್ ಪೆಲ್ಲಿಸ್ಸೆರಿ (Lijo Jose Pellissery) ನಿರ್ದೇಶಿಸಿಸಲಿದ್ದಾರೆ.

VISTARANEWS.COM


on

Malaikottai Vaaliban cinema
Koo

ಬೆಂಗಳೂರು: ಮೋಹನ್‌ಲಾಲ್ (Actor Mohanlal) ಅಭಿನಯದ ‘ಮಲೈಕೋಟ್ಟೈ ವಾಲಿಬನ್’ ಟೀಸರ್ ಡಿಸೆಂಬರ್ 6ರಂದು ರಿಲೀಸ್‌ ಆಗಿದೆ. ಟೀಸರ್‌ ಸಂಪೂರ್ಣವಾಗಿ ಸಸ್ಪೆನ್ಸ್‌ನಿಂದ ಕೂಡಿದೆ. 2024ರ ಜನವರಿ 25ರಂದು ಸಿನಿಮಾ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.ಆ್ಯಕ್ಷನ್-ಥ್ರಿಲ್ಲರ್ ಸಿನಿಮಾ ಇದಾಗಿದ್ದು, ಲಿಜೋ ಜೋಸ್ ಪೆಲ್ಲಿಸ್ಸೆರಿ (Lijo Jose Pellissery) ನಿರ್ದೇಶಿಸಿಸಲಿದ್ದಾರೆ.

‘ಮಲೈಕೋಟ್ಟೈ ವಾಲಿಬನ್’ 2024ರ ಬಹು ನಿರೀಕ್ಷಿತ ಚಲನಚಿತ್ರಗಳಲ್ಲಿ ಒಂದು. ಟೀಸರ್‌ನಲ್ಲಿ “ನೀವು ನೋಡಿದ್ದು ಸತ್ಯ, ನೀವು ನೋಡದಿರುವುದು ಸುಳ್ಳು, ನಾನು ಈಗ ನಿಮಗೆ ತೋರಿಸುವುದು ಸತ್ಯ” ಎಂದು ಹೇಳುವುದನ್ನು ಕೇಳಬಹುದು. ‘ಮಲೈಕೋಟ್ಟೈ ವಾಲಿಬನ್’ ಟೀಸರ್‌ನಲ್ಲಿ ನಿರ್ದೇಶಕ ಲಿಜೋ ಜೋಸ್ ಪೆಲ್ಲಿಸ್ಸೆರಿ ಕಥೆಯ ಸುಳಿವನ್ನೂ ಬಹಿರಂಗಪಡಿಸಿದ್ದಾರೆ.

ಏಪ್ರಿಲ್ 14ರಂದು, ಮಲೈಕೊಟ್ಟೈ ವಾಲಿಬನ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಚಿತ್ರತಂಡ ಅನಾವರಣಗೊಳಿಸಿತ್ತು. ಮೋಹನ್‌ಲಾಲ್‌ ತಮ್ಮ ಟ್ವೀಟ್‌ನಲ್ಲಿ ಪೋಸ್ಟರ್‌ ಹಂಚಿಕೊಂಡು ʻʻಕಾಯುವಿಕೆಗೆ ಒಂದು ಮುಖವಿದೆ! ಮಲೈಕೋಟ್ಟೈ ವಾಲಿಬನ್‌ನ ಫಸ್ಟ್ ಲುಕ್ ನಿಮಗೆ ಪ್ರಸ್ತುತಪಡಿಸುತ್ತಿದ್ದೇನೆ! ಈ ಚಲನಚಿತ್ರಕ್ಕೆ ಜೀವ ತುಂಬುವ ನಮ್ಮ ಪ್ರಯಾಣದಲ್ಲಿ ನಮ್ಮನ್ನು ಹುರಿದುಂಬಿಸುತ್ತಿರಿʼʼ ಎಂದು ಬರೆದುಕೊಂಡಿದ್ದರು. ಇದೇ ಮೊದಲ ಬಾರಿಗೆ ಮೋಹನ್‌ಲಾಲ್‌ ನಿರ್ದೇಶಕ ಲಿಜೋ ಜೋಸ್ ಪೆಲ್ಲಿಸ್ಸೆರಿ ಜತೆ ಕೈ ಜೋಡಿಸಿದ್ದಾರೆ. ಚಿತ್ರದಲ್ಲಿ ಮೋಹನ್‌ಲಾಲ್, ಸೋನಾಲಿ ಕುಲಕರ್ಣಿ, ಹರೀಶ್ ಪೆರಾಡಿ, ಡ್ಯಾನಿಶ್ ಸೇಟ್, ಮಣಿಕಂದನ್ ಆರ್ ಆಚಾರಿ ಮತ್ತು ಹರಿಪ್ರಶಾಂತ್ ವರ್ಮಾ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಜಾನ್ ಮೇರಿ ಕ್ರಿಯೇಟಿವ್ ಸೆಂಚುರಿ ಫಿಲ್ಮ್ಸ್, ಮ್ಯಾಕ್ಸ್‌ಲ್ಯಾಬ್ ಸಿನಿಮಾಸ್ ಮತ್ತು ಎಂಟರ್‌ಟೈನ್‌ಮೆಂಟ್ಸ್, ಯೂಡ್ಲೀ ಫಿಲ್ಮ್ಸ್ ಮತ್ತು ಅಮೆನ್ ಮೂವಿ ಮೊನಾಸ್ಟ್ರಿ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಮಧು ನೀಲಕಂದನ್ ಅವರ ಛಾಯಾಗ್ರಹಣವಿದೆ. ದೀಪು ಎಸ್ ಜೋಸೆಫ್ ಅವರ ಸಂಕಲನ ಮತ್ತು ಪ್ರಶಾಂತ್ ಪಿಳ್ಳೈ ಅವರ ಸಂಗೀತ ಸಂಯೋಜನೆ ಇದೆ.

ಇದನ್ನೂ ಓದಿ: Actor Mohanlal: ಮೋಹನ್ ಲಾಲ್ ಅಭಿನಯದ ‘ಬರೋಜ್’ ರಿಲೀಸ್‌ ಡೇಟ್‌ ಅನೌನ್ಸ್‌!

ಮೋಹನ್ ಲಾಲ್ ಕೊನೆಯ ಬಾರಿಗೆ ʻಅಲೋನ್ʼ ಚಿತ್ರದಲ್ಲಿ ಕಾಣಿಸಿಕೊಂಡರು. ಆದರೆ ಈ ಸಿನಿಮಾ ಅಷ್ಟಾಗಿ ಗಳಿಕೆ ಕಂಡಿಲ್ಲ. ರಜನಿಕಾಂತ್‌ ಅಭಿನಯದ ʻಜೈಲರ್‌ʼ ಸಿನಿಮಾದಲ್ಲಿ ಕಾಣಿಸಿಕೊಂಡರು. ಮೋಹನ್ ಲಾಲ್ ಅವರ ಕಿಟ್ಟಿಯಲ್ಲಿ L2, ಬರೋಜ್ ಚಿತ್ರಗಳೂ ಇವೆ.

ಮೋಹನ್‌ಲಾಲ್‌ ಜತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

ಈ ಸಿನಿಮಾದಲ್ಲಿ ನಟಿಸುವ ಚಾನ್ಸ್​ ಸಿಕ್ಕಿರುವುದಕ್ಕೆ ರಾಗಿಣಿ ದ್ವಿವೇದಿ ಸಖತ್​ ಖುಷಿ ಆಗಿದ್ದಾರೆ. ಈ ಪ್ಯಾನ್‌ ಇಂಡಿಯಾ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಎವಿಎಸ್ ಸ್ಟುಡಿಯೋಸ್ ಮತ್ತು ಕನೆಕ್ಟ್ ಮೀಡಿಯಾ 200 ಕೋಟಿ ರೂ. ಬಜೆಟ್‌ನಲ್ಲಿ ಸಿನಿಮಾ ಮಾಡಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Actor Mohanlal: ಗಣೇಶ ಚತುರ್ಥಿಯಂದು ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ಮೋಹನ್‌ಲಾಲ್‌!

ಮಾರ್ಚ್ 28ರಂದು  ʼಬರೋಜ್‌ʼ ಬಿಡುಗಡೆ

ʻಬರೋಜ್ʼ ಸಿನಿಮಾವನ್ನು ಮೋಹನ್ ಲಾಲ್‌ ಅವರೇ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ನಾಯಕರಾಗಿಯೂ ನಟಿಸಿದ್ದಾರೆ. ಬರೋಜ್ 2018ರಲ್ಲಿ ಘೋಷಿಸಲಾಯಿತು. ಅಂತಿಮವಾಗಿ ಐದು ವರ್ಷಗಳ ನಂತರ ಸೆಟ್ಟೇರಿದೆ. ʼಮೈ ಡಿಯರ್ ಕುಟ್ಟಿಚಾತನ್ʼ ಚಲನಚಿತ್ರ ನಿರ್ಮಾಪಕ ಜಿಜೋ ಪುನ್ನೂಸ್ ಆರಂಭದಲ್ಲಿ ಚಿತ್ರದ ನಿರ್ದೇಶಕ ಎಂದು ಹೇಳಲಾಗಿತ್ತು. 3ಡಿ ಫ್ಯಾಂಟಸಿ ಈ ಸಿನಿಮಾದ ಛಾಯಾಗ್ರಹಣವನ್ನು ಸಂತೋಷ್ ಶಿವನ್ ನಿರ್ವಹಿಸುತ್ತಿದ್ದರೆ, ಲಿಡಿಯನ್ ನಾದಸ್ವರನ್ ಮತ್ತು ಮಾರ್ಕ್ ಕಿಲಿಯನ್ ಸಂಗೀತ ಸಂಯೋಜಿಸಿದ್ದಾರೆ. ಇದನ್ನು ಆಶೀರ್ವಾದ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಆಂಟೋನಿ ಪೆರುಂಬವೂರ್ ನಿರ್ಮಿಸುತ್ತಿದ್ದಾರೆ. ಮುಂದಿನ ವರ್ಷ ಮಾರ್ಚ್‌ನಲ್ಲಿ ʼಬರೋಜ್ʼ ದೊಡ್ಡ ತೆರೆಗೆ ಬರಲಿದೆ.

Continue Reading
Advertisement
Krishna Byregowda Central assistance
ಕರ್ನಾಟಕ27 mins ago

Assembly Session : ಕೇಂದ್ರ ಅನುದಾನ ವರ್ಷದಿಂದ ವರ್ಷಕ್ಕೆ ಇಳಿಕೆ; ಪೈಸೆ ಪೈಸೆ ಲೆಕ್ಕ ಕೊಟ್ಟ ಕೃಷ್ಣ ಬೈರೇಗೌಡ

Karnataka Drought
ಕರ್ನಾಟಕ37 mins ago

Karnataka Drought: ಮುಂದಿನ ವಾರ ಡಿಬಿಟಿ ಮೂಲಕ ರೈತರಿಗೆ ಬರ ಪರಿಹಾರ; 2 ಸಾವಿರ ರೂ.ವರೆಗೆ ಜಮೆ

IT raids on liquor traders across Odisha and Jharkhand
ದೇಶ39 mins ago

ತೆರಿಗೆಗಳ್ಳರ ಮೇಲೆ ಐಟಿ ದಾಳಿ; ನೋಟು ಎಣಿಸಿ ಎಣಿಸಿ ಕೌಂಟಿಂಗ್ ಮೆಷಿನ್‌ಗೆ ಸುಸ್ತು!

Attendance Araga Jnanendra UT Khader Araga jnanendra
ಕರ್ನಾಟಕ1 hour ago

Belagavi Winter Session : ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

Madhu Bangarappa in Belagavi Winter Session
ಕರ್ನಾಟಕ1 hour ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Pressmeet for Demand for construction of bypass road in Yallapur
ಉತ್ತರ ಕನ್ನಡ1 hour ago

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಒತ್ತಾಯ

Israel
ಪ್ರಮುಖ ಸುದ್ದಿ1 hour ago

Israel Palestine War: ಅರ್ಧದಷ್ಟು ಹಮಾಸ್ ಕಮಾಂಡರ್‌ಗಳು ಫಿನಿಷ್! ಇಸ್ರೇಲ್ ಹೇಳಿಕೆ

bengaluru bulls kiccha sudeep
ಕ್ರೀಡೆ1 hour ago

ಬೆಂಗಳೂರು ಬುಲ್ಸ್​ಗೆ ಫುಲ್ ಚಾರ್ಜ್​ ಮಾಡಲು ಬರಲಿದ್ದಾರೆ ಕಿಚ್ಚ ಸುದೀಪ್

self harming by wadi Acc cement Depute Director
ಕರ್ನಾಟಕ2 hours ago

Self Harming : ಅದಾನಿ ಗ್ರೂಪ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ಸೂಸೈಡ್‌!

A girl shoots her classmate and herself with shotgun
ವಿದೇಶ2 hours ago

viral video: ಸಹಪಾಠಿಗೆ ಗುಂಡು ಹೊಡೆದು ತಾನೂ ಸತ್ತ 14 ವರ್ಷದ ವಿದ್ಯಾರ್ಥಿನಿ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Madhu Bangarappa in Belagavi Winter Session
ಕರ್ನಾಟಕ1 hour ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ2 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ8 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ15 hours ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ23 hours ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ1 day ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ1 day ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ1 day ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 day ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 day ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

ಟ್ರೆಂಡಿಂಗ್‌