Site icon Vistara News

Actor Darshan: ನಿಜ ಜೀವನದಲ್ಲಿ ನಟ ದರ್ಶನ್‌ನಂತಹ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು; ಚೇತನ್‌ ಅಹಿಂಸಾ!

Actor Darshan Murder accusations Chetan Kumar Ahimsa react

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ (Actor Darshan) ಸಮಾಜದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹಲವರು ಆರೋಪಿ ಯಾರೇ ಆಗರಲಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಹಾಗೆಯೇ ಇದೀಗ ಎಕ್ಸ್‌ ಮೂಲಕ ನಟ ಚೇತನ್‌ ಅಹಿಂಸಾ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ. ʻʻಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ನಿಜ ಜೀವನದಲ್ಲಿ ನಟ ದರ್ಶನ್‌ನಂತಹ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು,” ಎಂಬುದಾಗಿ ಬರೆದುಕೊಂಡಿದ್ದಾರೆ.

ಚೇತನ್‌ ಅಹಿಂಸಾ ಹೀಗೆ ಬರೆದುಕೊಂಡಿದ್ದಾರೆ. ʻʻನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ. ಅಲ್ಲದೆ, ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರುʼʼಎಂದು ಬರೆದುಕೊಂಡಿದ್ದಾರೆ.

ದರ್ಶನ್​ಗೆ ಮರಣದಂಡನೆ ಶಿಕ್ಷೆಯಾಗಲಿ! ನಟಿ ರಮ್ಯಾ ಟ್ವೀಟ್‌

ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್​ಗೆ (Actor Darshan) ಮರಣದಂಡನೆಯಾಗಲಿ ಎಂಬ ಆಶಯವನ್ನು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ವ್ಯಕ್ತಪಡಿಸಿದ್ದಾರೆ. ಕೊಲೆ ಪ್ರಕರಣದ ಕುರಿತು ಎಕ್ಸ್​ನಲ್ಲಿ ಪೋಸ್ಟ್​​ ಮಾಡಿರುವ ರಮ್ಯಾ ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಲೆಯಾಗಿರುವ ವ್ಯಕ್ತಿಯ ಪರವಾಗಿ ನಿಂತಿರುವ ರಮ್ಯಾ, ದರ್ಶನ್​ಗೆ ಇಂಡಿಯನ್ ಪಿನಲ್​ ಕೋಡ್​ 302ರ ಪ್ರಕಾರ ಯಾವ ಪ್ರಕಾರಣದ ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈ ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟ್‌ ಅನ್ನು ರಮ್ಯಾ ರೀಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: HD Kumaraswamy: ಎಚ್‌ಡಿಕೆ ಭೇಟಿಯಾದ ಉಕ್ಕು ಪ್ರಾಧಿಕಾರದ ಅಧ್ಯಕ್ಷ; ವಿಐಎಸ್‌ಎಲ್ ಪುನಶ್ಚೇತನದ ಬಗ್ಗೆ ಚರ್ಚೆ

ಸೆಕ್ಷನ್ 302 ರ ಅಡಿಯಲ್ಲಿ ನಟ ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಬೇಕು. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಟ್ವೀಟ್‌ ಅನ್ನು ರಮ್ಯಾ ಮರು ಪೋಸ್ಟ್‌ ಮಾಡಿದ್ದಾರೆ.

ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್​ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು.

ದರ್ಶನ್‌ ಪರ ವಹಿಸಿ ಸಿಎಂ, ಗೃಹ ಸಚಿವರಿಗೆ ಮನವಿ ಮಾಡಿದ್ರಾ ರಾಜಕೀಯ ನಾಯಕರು?

ತನ್ನದೇ ಅಭಿಮಾನಿ ರೇಣುಕಾ ಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜೈಲು ಸೇರಿದ್ದಾರೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan ). ಬುಧವಾರದಿಂದ ಆರಂಭಗೊಂಡಂತೆ ದರ್ಶನ್ ಗ್ಯಾಂಗ್​​ಗೆ ಆರು ದಿನಗಳ ಕಾಲ ಪೊಲೀಸ್ ವಿಚಾರಣೆ ನಡೆಯಲಿದೆ. ಕೊಲೆ ಕೇಸ್ ಸಂಬಂಧ ಪೊಲೀಸರು ಸಾಕ್ಷ್ಯಗಳನ್ನು ಒಟ್ಟು ಮಾಡಲಿದ್ದಾರೆ. ದರ್ಶನ್‌ ರಕ್ಷಣೆಗೆ ರಾಜಕೀಯ ನಾಯಕರು ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗಿದೆ. ಕೆಲ ನಾಯಕರು ನಿನ್ನೆಯಿಂದ (ಜೂ.11)ದರ್ಶನ್ ಮೇಲೆ ಕರುಣೆ ತೋರಿ ಎಂದು ಗೃಹ ಸಚಿವ ಪರಮೇಶ್ವರ್ ಹಾಗೂ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ದರ್ಶನ್ ಅವರನ್ನು ಬಚಾವ್ ಮಾಡಲು ಸಚಿವರು ಪ್ರಯತ್ನಿಸುತ್ತಿದ್ದಾರೆ ಎನ್ನುತ್ತಿದ್ದಂತೆ ಅವರು ಯಾರಾಗಿರಬಹುದು ಎನ್ನುವ ಚರ್ಚೆಯೂ ಜೋರಾಗಿದೆ. ಬೆಂಗಳೂರಿನ ಸಚಿವರ ಬಳಿ ಸಹಾಯ ಕೇಳಲಾಗಿದೆ ಎಂದೂ ವರದಿಯಾಗಿದೆ. ಆದರೆ ಅದು ಯಾರು ಎನ್ನುವುದು ರಿವೀಲ್ ಆಗಿಲ್ಲ. ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ದರ್ಶನ್, ಪವಿತ್ರಾ ಗೌಡ ಅವರ ಜೊತೆ ಪವನ್, ವಿನಯ್, ಪ್ರದೋಷ್, ನಂದೀಶ, ದೀಪಕ್, ಲಕ್ಷ್ಮಣ್, ನಾಗರಾಜು, ಕಾರ್ತಿಕ್, ನಿಖಿಲ್, ಕೇಶವಮೂರ್ತಿ,ರಾಘವೇಂದ್ರ ಅವರನ್ನು ಅರೆಸ್ಟ್ ಮಾಡಲಾಗಿದೆ. ಪವಿತ್ರಾ ಗೌಡ ಅವರು ಆರೋಪಿ 1, ದರ್ಶನ್ ಆರೋಪಿ 2 ಎಂದು ಹೇಳಲಾಗಿದೆ.

Exit mobile version