ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ನ (Actor Darshan) ನ್ಯಾಯಾಂಗ ಬಂಧನ ಅವಧಿ ಗುರುವಾರ ಮುಕ್ತಾಯವಾದ ಈ ಹಿನ್ನೆಲೆಯಲ್ಲಿ ಇಂದು 24ನೇ ಎಸಿಎಂಎಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ನಟ ದರ್ಶನ್ ಪರ ವಕೀಲ ಶಿವಕುಮಾರ್ ಹಾಜರಾಗಿದ್ದರು. ಈ ವೇಳೆ ಕಮಿಟಲ್ ಆದೇಶಕ್ಕೆ ಆರೋಪಿಗಳ ಪರ ವಕೀಲರ ಆಕ್ಷೇಪ ವ್ಯಕ್ತಪಡಿಸಿದರು. ಟೆಕ್ನಿಕಲ್ ಎವಿಡೆನ್ಸ್‌ಗಳನ್ನು ಆರೋಪಿಗಳಿಗೆ ಕೊಟ್ಟ ನಂತರ ಕಮಿಟಲ್ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಆರೋಪಿಗಳ ಪರ ವಕೀಲರ ಅಬ್ಜೆಕ್ಷನ್ ಹಿನ್ನೆಲೆಯಲ್ಲಿ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಒಂದು ದಿನದ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದ್ದು, ನಾಳೆ ಶುಕ್ರವಾರಕ್ಕೆ ವಿಚಾರಣೆ ಮುಂದೂಡಿಕೆ ಆಗಿದೆ. ಇದೇ ವೇಳೆ ಕೊಲೆ ಪ್ರಕರಣವನ್ನು ಸೆಷನ್ಸ್ ಕೋರ್ಟ್‌ಗೆ ವರ್ಗಾವಣೆ ಮಾಡುವುದಾಗಿ ನ್ಯಾಯಾಧೀಶರು ಹೇಳಿದರು. ಈ ವೇಳೆ ಡಿಜಿಟಲ್ ಎವಿಡೆನ್ಸ್ ನೀಡಿದ ಬಳಿಕ ಸೆಷನ್ಸ್ ಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಆರೋಪಿ ಪರ ವಕೀಲ ಮನವಿ ಮಾಡಿದರು. ಈ ವೇಳೆ ಡಿಜಿಟಲ್ ಎವಿಡೆನ್ಸ್ ನೀಡಲು ಒಂದು ವಾರ ಸಮಯ ಬೇಕಾಗುತ್ತೆ ಎಂದು ಎಸ್‌ಪಿಪಿ ವಾದಿಸಿದರು.
ವಿಚಾರಣೆ ನಾಳೆಗೆ ಮುಂದೂಡಿಕೆ ಆಗಿದೆ. ಡಾಕ್ಯುಮೆಂಟ್ಸ್, ಪೆನ್ ಡ್ರೈವ್, ಸಿಡಿ, ಡಿವಿಆರ್ ಕೊಟ್ಟಿಲ್ಲ ಅದನ್ನೂ ನಾಳೆಗೆ ಕೇಳಿದ್ದೇವೆ. ಕಮಿಟಲ್ ಆರ್ಡರ್ ಆದ ನಂತರ ಸೆಷನ್ ಕೋರ್ಟ್‌ಗೆ ಜಾಮೀನಿಗೆ ಅರ್ಜಿ ಹಾಕಲಾಗುತ್ತದೆ ಎಂದು ದರ್ಶನ್ ಪರ ವಕೀಲ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ನಟ ದರ್ಶನ್, ಪವಿತ್ರಾಗೌಡ ಸೇರಿ ವಿವಿಧ ಜೈಲಿನಿಂದ ಒಟ್ಟು 17 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಇದೀಗ ಸೆ.13ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿರುವುದರಿಂದ ದರ್ಶನ್ ಗ್ಯಾಂಗ್‌ಗೆ ಸೆರೆವಾಸ ಮುಂದುವರಿದಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ