Site icon Vistara News

Actor Gopichand: ಟಾಲಿವುಡ್‌ ನಟ ಗೋಪಿಚಂದ್ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ ಎ.ಹರ್ಷ

Actor Gopichand

ಬೆಂಗಳೂರು: ‘ಭಜರಂಗಿ’, ‘ವಜ್ರಕಾಯ’, ‘ವೇದ’ ಸೂಪರ್ ಹಿಟ್ ಸಿನಿಮಾಗಳ ಖ್ಯಾತಿಯ ಎ.ಹರ್ಷ ಇದೀಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಟಾಲಿವುಡ್ ಸ್ಟಾರ್ ನಟ ಗೋಪಿಚಂದ್ (Actor Gopichand) ಅವರ 31 ಚಿತ್ರಕ್ಕೆ ನಿರ್ದೇಶಕ ಎ.ಹರ್ಷ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಗೋಪಿಚಂದ್ ಹಾಗೂ ಹರ್ಷ ಕಾಂಬಿನೇಶನ್ ಸಿನಿಮಾ ಅದ್ಧೂರಿಯಾಗಿ ಸೆಟ್ಟೇರಿದ್ದು, ಕೆ.ಕೆ.ರಾಧಾ ಮೋಹನ್ ಶ್ರೀ ಸತ್ಯ ಸಾಯಿ ಆರ್ಟ್ಸ್ ಪ್ರೊಡಕ್ಷನ್‌ನಡಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಶ್ರೀ ಸತ್ಯ ಸಾಯಿ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ 14ನೇ ಸಿನಿಮಾ ಇದಾಗಿದ್ದು, .ಕೆ.ರಾಧಾಮೋಹನ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ನಿರ್ಮಾಪಕ ಕೆ.ಕೆ.ರಾಧಾಮೋಹನ್ ಮಾತನಾಡಿ ʻʻಗೋಪಿಚಂದ್ ಹಾಗೂ ಎ.ಹರ್ಷ ಜತೆ ಸೇರಿ ಸಿನಿಮಾ ಮಾಡುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಇದು ನಮ್ಮ ನಿರ್ಮಾಣ ಸಂಸ್ಥೆಯ 14ನೇ ಸಿನಿಮಾ. ನಿರ್ದೇಶಕರು ಪವರ್ ಫುಲ್ ಸಬ್ಜೆಕ್ಟ್ ಇರುವ ಸ್ಕ್ರಿಪ್ಟ್ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಗೋಪಿಚಂದ್ ಹೊಸ ಅವತಾರದಲ್ಲಿ ತೆರೆ ಮೇಲೆ ಕಾಣಸಿಗಲಿದ್ದಾರೆ. ಇದೇ ತಿಂಗಳಿನಿಂದ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆʼʼ ಎಂದು ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Rashmi Gautam: ಸಂಕಷ್ಟದಲ್ಲಿ ಟಾಲಿವುಡ್‌ ನಿರೂಪಕಿ, ನಟಿ ರಶ್ಮಿ ಗೌತಮ್!

ಸ್ವಾಮಿ.ಜೆ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ ನಿರ್ದೇಶನ ಈ ಚಿತ್ರಕ್ಕಿದ್ದು, ಸದ್ಯದಲ್ಲೇ ಸಿನಿಮಾದ ತಾರಾಬಳಗ ಹಾಗೂ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಹಂಚಿಕೊಳ್ಳಲಿದೆ.

Exit mobile version