Actor Komal: ನಾಳೆಯಿಂದ ʻರೋಲೆಕ್ಸ್ ಕೋಮಲ್ʼ ಚಿತ್ರೀಕರಣ ಶುರು - Vistara News

ಸಿನಿಮಾ

Actor Komal: ನಾಳೆಯಿಂದ ʻರೋಲೆಕ್ಸ್ ಕೋಮಲ್ʼ ಚಿತ್ರೀಕರಣ ಶುರು

ಈ ಚಿತ್ರದ ಚಿತ್ರೀಕರಣ (Actor Komal) ಶನಿವಾರ ಜನವರಿ 28ರಂದು ಆರಂಭವಾಗಲಿದೆ. ರಂಗಾಯಣ ರಘು, ಶೋಭರಾಜ್, ಅಪೂರ್ವ ಸೇರಿದಂತೆ ಹಲವು ಕಲಾವಿದರು ತಾರಾಬಳಗದಲ್ಲಿದ್ದಾರೆ

VISTARANEWS.COM


on

Actor Komal Rolex Komal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಶ್ರೀನಿವಾಸ್ ಮಂಡ್ಯ ನಿರ್ದೇಶನದ ‘ರೋಲೆಕ್ಸ್ ಕೋಮಲ್’ (Actor Komal) ಚಿತ್ರತಂಡ ಮುಹೂರ್ತ ಆಚರಿಸಿಕೊಂಡಿದೆ. ಸೆನ್ಸೇಶನಲ್ ಸ್ಟಾರ್ ಕೋಮಲ್, ಸೋನಾಲ್ ಮೊಂಟೆರೋ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಶನಿವಾರ ಜನವರಿ 28ರಂದು ಆರಂಭವಾಗಲಿದೆ.

ನಿರ್ದೇಶಕ ಶ್ರೀನಿವಾಸ್ ಮಂಡ್ಯ ಮಾತನಾಡಿ “ನಾಳೆಯಿಂದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಕೋಮಲ್ ಸರ್ ಈ ಹಿಂದಿನ ತಮ್ಮ ಸಿನಿಮಾಗಳಿಗಿಂತ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಪಾತ್ರ ವಿಭಿನ್ನವಾಗಿದೆ. ವಿಭಿನ್ನವಾಗಿ ಸಿನಿಮಾವನ್ನು ಕಟ್ಟಿಕೊಡುವ ಪ್ರಯತ್ನ ಮಾಡಿದ್ದೇನೆ. ರಂಗಾಯಣ ರಘು, ಶೋಭರಾಜ್, ಅಪೂರ್ವ ಸೇರಿದಂತೆ ಹಲವು ಕಲಾವಿದರು ತಾರಾಬಳಗದಲ್ಲಿದ್ದಾರೆ” ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: National Hugging Day 2023 | ಇಲ್ಲಿವೆ ಸ್ಯಾಂಡಲ್‌ವುಡ್‌ ರಿಯಲ್‌ ಕಪಲ್ಸ್‌ ಬೆಸ್ಟ್‌ ಹಗ್ಗಿಂಗ್‌ ಫೋಟೊಗಳು

Actor Komal

ನಟ ಕೋಮಲ್ ಮಾತನಾಡಿ ʻʻರೋಲೆಕ್ಸ್ ಎನ್ನುವುದು ಒಂದು ಬ್ರ್ಯಾಂಡ್. ಆ ಬ್ರ್ಯಾಂಡ್ ಹೇಗೆ ಕ್ರಿಯೇಟ್ ಆಗುತ್ತದೆ ಎನ್ನುವುದೇ ಈ ಚಿತ್ರದ ಎಳೆ. ಸಾಕಷ್ಟು ಟ್ವಿಸ್ಟ್‌ಗಳಿವೆ. ಗರಗಸ ನಂತರ ಈ ರೀತಿಯ ಪ್ರಯೋಗ ಮಾಡುತ್ತಿದ್ದೇನೆ. ಹಾಡುಗಳು ಈಗಾಗಲೇ ರೆಕಾರ್ಡ್ ಆಗಿವೆ. ಆಲ್ಬಂ ಹಿಟ್ ಆಗುವ ಎಲಲ್ಲ ಸೂಚನೆ ಕೂಡ ಇದೆʼʼ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಸೋನಾಲ್ ಮೊಂಟೆರೋ ಮಾತನಾಡಿ ʻʻನನ್ನ ಭಾಗದ ಚಿತ್ರೀಕರಣ 25ದಿನ ನಡೆಯಲಿದೆ. ಸದ್ಯ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತದೆ. ಶುಗರ್ ಫ್ಯಾಕ್ಟರಿ ಬಿಡುಗಡೆಗೆ ರೆಡಿಯಾಗಿದೆ. ಮಿ. ನಟ್ವರ್ ಲಾಲ್, ಬುದ್ಧಿವಂತ 2, ಗರಡಿ, ಮಹಾದೇವ, ತಲ್ವರ್ ಪೇಟೆ, ಸರೋಜಿನಿ ನಾಯ್ಡುʼʼ ಸಿನಿಮಾಗಳಲ್ಲಿ ನಟಿಸುತ್ತಿದ್ದೇನೆ ಎಂದರು.

ಇದನ್ನೂ ಓದಿ:Sonal Monteiro: ನಟ ಕೋಮಲ್’ಗೆ ಜತೆಯಾದ ಕರಾವಳಿ ಬೆಡಗಿ ಸೋನಲ್ ಮೊಂತೆರೋ

ಸೆಪ್ಟೆಂಬರ್‌ನಲ್ಲಿ ಸಿನಿಮಾ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ ಚಿತ್ರತಂಡ. ರಾಕೇಶ್ ಸಿ ತಿಲಕ್ ಕ್ಯಾಮೆರಾ ವರ್ಕ್, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಅರವಿಂದ್ ರಾಜ್ ಸಂಕಲನ ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Cannes 2024: 20 ಕೆಜಿ ತೂಕದ ಗೌನ್ ಧರಿಸಿ ಬೆರಗುಗೊಳಿಸಿದ ನ್ಯಾನ್ಸಿ ತ್ಯಾಗಿ!

Cannes 2024: 1,000 ಮೀಟರ್‌ಗಿಂತಲೂ ಹೆಚ್ಚು ಫ್ಯಾಬ್ರಿಕ್‌ ಬಟ್ಟೆಯನ್ನು ಬಳಸಿ ತಯಾರಿಸಿದ ಸುಂದರವಾದ ಗುಲಾಬಿ ಬಣ್ಣದ ಗೌನ್ ಧರಿಸಿದ್ದರು. ಈ ಡ್ರೆಸ್ ಡಿಸೈನರ್ ಮಾಡಿದ್ದಲ್ಲ.. ಸ್ವತಃ ನಾನೇ ತಯಾರಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಈ ಗೌನ್‌ ತಯಾರಿಸಲು ನ್ಯಾನ್ಸಿ ತ್ಯಾಗಿ ಅವರಿಗೆ ಬರೋಬ್ಬರಿ ಒಂದು ತಿಂಗಳು ಬೇಕಾಯ್ತಂತೆ.

VISTARANEWS.COM


on

Cannes 2024 Indian influencer who stitched a 20 kg dress
Koo

ಬೆಂಗಳೂರು: ಫ್ಯಾಶನ್ ಪ್ರಭಾವಿ ನ್ಯಾನ್ಸಿ ತ್ಯಾಗಿ ( Nancy Tyagi) ಕಾನ್‌ ಫಿಲ್ಮ್‌ ಫೆಸ್ಟಿವಲ್‌ (Cannes 2024) ರೆಡ್‌ ಕಾರ್ಪೆಟ್‌ ಮೇಲೆ ಹೆಜ್ಜೆ ಹಾಕಿದ್ದಾರೆ. 1,000 ಮೀಟರ್‌ಗಿಂತಲೂ ಹೆಚ್ಚು ಫ್ಯಾಬ್ರಿಕ್‌ ಬಟ್ಟೆಯನ್ನು ಬಳಸಿ ತಯಾರಿಸಿದ ಸುಂದರವಾದ ಗುಲಾಬಿ ಬಣ್ಣದ ಗೌನ್ ಧರಿಸಿದ್ದರು. ಈ ಡ್ರೆಸ್ ಡಿಸೈನರ್ ಮಾಡಿದ್ದಲ್ಲ.. ಸ್ವತಃ ನಾನೇ ತಯಾರಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಈ ಗೌನ್‌ ತಯಾರಿಸಲು ನ್ಯಾನ್ಸಿ ತ್ಯಾಗಿ ಅವರಿಗೆ ಬರೋಬ್ಬರಿ ಒಂದು ತಿಂಗಳು ಬೇಕಾಯ್ತಂತೆ.

“77ನೇ ಕಾನ್‌ ಫಿಲ್ಮ್‌ ಫೆಸ್ಟಿವಲ್‌ನ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದು ಖುಷಿಯಾಯ್ತು. 30 ದಿನಗಳು, 1000 ಮೀಟರ್ ಬಟ್ಟೆ ಮತ್ತು 20 ಕೆಜಿಗಿಂತ ಹೆಚ್ಚು ತೂಕವಿರುವ ಈ ಗುಲಾಬಿ ಗೌನ್ ಅನ್ನು ರಚಿಸಲು ನಾನು ನನ್ನ ಹೃದಯ ಮತ್ತು ಆತ್ಮವನ್ನೇ ಅರ್ಪಿಸಿದ್ದೇನೆ. ನನ್ನ ಕನಸು ಈಗ ನನಸಾಗಿದೆ. ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದ. ನಿಮ್ಮ ಬೆಂಬಲವು ನನಗೆ ಸ್ಫೂರ್ತಿ ನೀಡಿದೆʼʼಎಂದು ಹೇಳಿಕೊಂಡಿದ್ದಾರೆ ನ್ಯಾನ್ಸಿ ತ್ಯಾಗಿ.

ಇದನ್ನೂ ಓದಿ: Cannes 2024: ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಶ್ವೇತ ವರ್ಣದ ಗೌನ್​ ಧರಿಸಿ ಮಿಂಚಿದ ಕಿಯಾರ! ಇಲ್ಲಿದೆ ವಿಡಿಯೊ

ನ್ಯಾನ್ಸಿ ತ್ಯಾಗಿ ಶೇರ್‌ ಮಾಡಿಕೊಂಡ ಬಳಿಕ ಕೇವಲ ಒಂದು ಗಂಟೆಯಲ್ಲಿ 1.8 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದುಕೊಂಡಿದೆ. ನ್ಯಾನ್ಸಿ ಫ್ಯಾನ್ಸ್‌ ಈಗ ಕಮೆಂಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ,ಮಾತ್ರವಲ್ಲ ಕಮೆಂಟ್‌ ಮೂಲಕ ʻʻನ್ಯಾನ್ಸಿ, ಇದು ವೈಯಕ್ತಿಕ ಗೆಲುವಿನಂತೆ ಭಾಸವಾಗುತ್ತಿದೆ” ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻಕಠಿಣ ಪರಿಶ್ರಮ ಮತ್ತು ಪ್ರತಿಭೆ ಇದೆ ನಿಮ್ಮಲ್ಲಿʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಮತ್ತೊಬ್ಬರು ʻʻನನಗೆ ನ್ಯಾನ್ಸಿ ತ್ಯಾಗಿ ಬಗ್ಗೆ ವೈಯಕ್ತಿಕವಾಗಿ ತಿಳಿದಿಲ್ಲ, ಆದರೆ ನಾನು ಅವರನ್ನು ರೆಡ್‌ ಕಾರ್ಪೆಟ್ ಮೇಲೆ ನೋಡಿ ಸಂತೋಷವಾಯ್ತು. ದೇವರು ನಿಮ್ಮನ್ನು ಆಶೀರ್ವದಿಸಲಿ. ನಾನು ನಿಮಗೆ ಇನ್ನೊಂದು ವಿಷಯವನ್ನು ಹೇಳುತ್ತೇನೆ. ನೀವು ಬಾಲಿವುಡ್ ಸೆಲೆಬ್ರಿಟಿಗಳಿಗಿಂತ ಉತ್ತಮವಾಗಿ ಕಾಣುತ್ತೀರಿʼʼಎಂದು ಕಮೆಂಟ್‌ ಮಾಡಿದ್ದಾರೆ.

ದೆಹಲಿ ಮೂಲದ ಫ್ಯಾಷನ್ ಬ್ಲಾಗರ್ ನ್ಯಾನ್ಸಿ ತ್ಯಾಗಿ ಮೊದಲಿನಿಂದಲೂ ತಾನು ರಚಿಸುವ ಬಟ್ಟೆಗಳ ವಿನ್ಯಾಸದ ವಿಡಿಯೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ.

Continue Reading

ಕಿರುತೆರೆ

Pavithra Jayaram: ನನ್ನ ಗಂಡನಿಗೂ ಪವಿತ್ರಾಗೂ ‘ಸಂಬಂಧ’ ಇದ್ದದ್ದು ನಿಜ ಎಂದ ಚಂದ್ರಕಾಂತ್‌ ಪತ್ನಿ!

Pavithra Jayaram: ಘಟನೆಯಿಂದ ಖಿನ್ನತೆಗೊಳಗಾಗಿ ಚಂದ್ರಕಾಂತ್‌ ಅವರು ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿತ್ತು. ಈ ಬಗ್ಗೆ ಪವಿತ್ರಾ ಮಗಳು ಅಮ್ಮ ಹಾಗೂ ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಬೇರೆ ಯಾವುದೇ ರೀತಿಯ ಸಂಬಂಧ ಇರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಚಂದ್ರಕಾಂತ್‌ ಅವರ ಪತ್ನಿ ಶಿಲ್ಪಾ ಪ್ರೇಮಾ ಇಬ್ಬರ ಮಧ್ಯೆ ಸಂಬಂಧ ಇತ್ತು ಎಂದು ಹೇಳಿಕೆ ನೀಡಿದ್ದಾರೆ.

VISTARANEWS.COM


on

Pavitra Jayaram Relationship With Chandu Shilpa Prema statement
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani Serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ (Pavithra Jayaram)‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡರು. ಇದಾದ ಬಳಿಕ ಈ ಘಟನೆಯಿಂದ ಖಿನ್ನತೆಗೊಳಗಾಗಿ ಚಂದ್ರಕಾಂತ್‌ ಅವರು ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿತ್ತು. ಈ ಬಗ್ಗೆ ಪವಿತ್ರಾ ಮಗಳು ಅಮ್ಮ ಹಾಗೂ ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಬೇರೆ ಯಾವುದೇ ರೀತಿಯ ಸಂಬಂಧ ಇರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಚಂದ್ರಕಾಂತ್‌ ಅವರ ಪತ್ನಿ ಶಿಲ್ಪಾ ಪ್ರೇಮಾ ಇಬ್ಬರ ಮಧ್ಯೆ ಸಂಬಂಧ ಇತ್ತು ಎಂದು ಹೇಳಿಕೆ ನೀಡಿದ್ದಾರೆ.

ಶಿಲ್ಪಾ ಪ್ರೇಮಾ ಈ ಬಗ್ಗೆ ಮಾತನಾಡಿ ʻʻಇಬ್ಬರ ಮಧ್ಯೆ ಸಂಬಂಧ ಇರುವುದು 5 ವರ್ಷ ಮುಂಚೆಯೇ ತಿಳಿದಿತ್ತು. ನನಗೆ ಗೊತ್ತಾದ ಮೇಲೆ ರಾತ್ರಿಯೆಲ್ಲ ಕುಡಿದು ನನಗೆ ಚಂದ್ರಕಾಂತ್‌ ಹೊಡೆಯುತ್ತಿದ್ದರು. ಒಮ್ಮೆ ಪವಿತ್ರಾ ಕೂಡ ನನಗೆ ನೇರವಾಗಿ ಕೆರೆ ಮಾಡಿ ಅವನು ನನ್ನ ಗಂಡ, ಏನು ಮಾಡಿಕೊಳ್ಳುತ್ತೀಯಾ ಮಾಡಿಕೋ ಎಂದು ಹೇಳಿದ್ದಳು. ಈ ವಿಚಾರ ಪವಿತ್ರಾ ಮಕ್ಕಳಿಗೂ ಗೊತ್ತಿತ್ತು. ಅವರ ಲೈಫ್ ಅವರದ್ದು ಅವರ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಲ್ಲ ಎಂದು ಪವಿತ್ರಾ ಮಗ ಹೇಳಿದ್ದ. ಮನೆಗೆ ಬಂದರೂ ಪವಿತ್ರಾ ಫೋಟೊವನ್ನು ಚಂದ್ರಕಾಂತ್‌ ನೋಡುತ್ತಿದ್ದರು. ಇವರೂ ನನಗೆ ಸಹಾಯ ಮಾಡದೇ ಇದ್ದರೂ ನನ್ನ ಮಕ್ಕಳನ್ನು ನಾನೇ ಸಲುಹಿದೆʼʼ ಎಂದರು.

ಮಾಧ್ಯಮವೊಂದಕ್ಕೆ ಚಂದ್ರಕಾಂತ್‌ ತಾಯಿ ಕೂಡ ಮಾತನಾಡಿ ʻʻಪವಿತ್ರಾ ನನ್ನ ಮಗನನ್ನು ಮನೆಗೆ ಬರದೇ ಇರುವ ರೀತಿ ಮಾಡಿದ್ದಾಳೆ. ನನ್ನ ಎಲ್ಲಾ ಸರ್ವಸ್ವ ಪವಿತ್ರಾ, ಅವಳೇ ನನ್ನ ಹೆಂಡತಿ ಎನ್ನುತ್ತಿದ್ದ. ಮನೆಗೆ ಕುಡಿದು ಬಂದು ಹೆಂಡತಿಯನ್ನು ಹೊಡೆಯುತ್ತಿದ್ದ. ಅವಳ ಸಹವಾಸ ಮಾಡಬೇಡ ಎಂದು ಹೇಳಿದರೂ ಕೇಳುತ್ತಿರಲಿಲ್ಲʼʼ ಎಂದರು.

ಇದನ್ನೂ ಓದಿ: Pavithra Jayaram: ಚಂದ್ರಕಾಂತ್‌ ಹಾಗೂ ನನ್ನ ಅಮ್ಮ ಜಸ್ಟ್‌ ಫ್ರೆಂಡ್ಸ್‌, ಪವಿತ್ರಾ ಮಗಳ ಸ್ಪಷ್ಟನೆ!

ಪವಿತ್ರಾ ಮಗಳ ಸ್ಪಷ್ಟನೆ ಏನು?

ಮಗಳು ಪ್ರತೀಕ್ಷಾ ಮಾತನಾಡಿ ʻ ಚಂದ್ರಕಾಂತ್‌ ಅವರ ಸಾವಿನ‌ ಸುದ್ದಿ ನಮಗೆ ಟಿವಿಯಲ್ಲಿ ನೋಡಿ ಗೊತ್ತಾಯ್ತು. ಚಂದ್ರಕಾಂತ್‌ ಮತ್ತು ನಮ್ಮಮ್ಮ‌ ಉತ್ತಮ ಸ್ನೇಹಿತರಾಗಿದ್ದರು. ಅವರ ಸಂಬಂಧದ ಬಗ್ಗೆ ಟಿವಿಯಲ್ಲಿ ಏನೇನೋ ಮಾತಾಡ್ತಿದ್ದಾರೆ. ಅಮ್ಮನ ಅಂತ್ಯಕ್ರಿಯೆ ಆಗೋವವರೆಗೂ ಚಂದ್ರಕಾಂತ್‌ ಇದ್ದು ಹೋಗಿದ್ದರು. ಚಂದ್ರಕಾಂತ್‌ ಅವರು ಹೈದರಾಬಾದ್‌ಗೆ ಹೋದ ನಂತರವೂ ನನಗೆ ಪೋನ್ ಮಾಡಿ ಮಾತನಾಡುತ್ತಿದ್ದರು. ಆರೋಗ್ಯ ಚೆನ್ನಾಗಿ ನೋಡ್ಕೊ, ಪರೀಕ್ಷೆ ಇದೆ ತಯಾರಿ ಮಾಡ್ಕೊ ಎಂದೆಲ್ಲಾ ಧೈರ್ಯ ಹೇಳ್ತಿದ್ದರು. ಆದರೆ ಈಗ ಹೀಗಾಗಿದೆ. ಅಮ್ಮ ಮತ್ತು ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಅಮ್ಮ ಹೈದರಾಬಾದ್‌ಗೆ ತೆರಳಿ ಆರು ವರ್ಷ ಆಯ್ತು. ಆಗನಿಂದಲೂ ಚಂದ್ರಕಾಂತ್‌ ಅಮ್ಮನಿಗೆ ಪರಿಚಯ. ಒಂದೇ ಸಿರೀಯಲ್ ನಲ್ಲಿ ನಟನೆ ಮಾಡುವ ಸಹ ನಟರ ಜತೆಗಿನ ಸಂಬಂಧ ಹೇಗಿರೋತ್ತೊ ಅಮ್ಮ ಮತ್ತು ಚಂದ್ರಕಾಂತ್‌ ಅವರ ಸಂಬಂಧವೂ ಹಾಗೆ ಇತ್ತುʼʼ‌ ಎಂದರು.

ಮಾತು ಮುಂದುವರಿಸಿ ʻʻನನ್ನ ಅಮ್ಮ ಮತ್ತು ಅಪ್ಪ ಅವರ ಸಂಬಂಧ ಕೂಡ ಚೆನ್ನಾಗಿಯೇ ಇತ್ತು. ನಾನು, ಅಣ್ಣ ಇಬ್ಬರೂ ಕಳೆದ ಎರಡು ವರ್ಷಗಳಿಂದ ಅಮ್ಮನ ಜತೆಗೆ ಹೈದರಾಬಾದ್‌ನಲ್ಲಿ ನೆಲೆಸಿದ್ದೆವು. ಈಗ ನಾವು ನಮ್ಮ ಅಮ್ಮನನ್ನು ಕಳೆದುಕೊಂಡಿದ್ದೇವೆ. ಅವರು ನಮ್ಮ ಕುಟುಂಬದ ದೊಡ್ಡ ಪಿಲ್ಲರ್‌. ನಾವಿನ್ನ ಚಿಕ್ಕವರು. ನಮಗೂ ಭವಿಷ್ಯವಿದೆ. ಯಾರೂ ಅಮ್ಮನ ಸಂಬಂಧ ಬಗೆಗೆ ತಪ್ಪಾಗಿ ಮಾತಾಡಬೇಡಿ. ನಮ್ಮಷ್ಟಕ್ಕೆ ನಮ್ಮನ್ನು ಬದುಕಲು ಬಿಡಿʼʼ ಎಂದಿದ್ದಾರೆ ಪ್ರತೀಕ್ಷಾ.

Continue Reading

ಬಾಲಿವುಡ್

Aishwarya Rai : ಐಶ್ವರ್ಯಾ ರೈ ಸ್ಟೈಲಿಶ್‌ರನ್ನು ವಜಾ ಮಾಡಿ ಎಂದ ನೆಟ್ಟಿಗರು! ಯಾಕಿಷ್ಟು ಆಕ್ರೋಶ?

Aishwarya Rai : ಫಲ್ಗುಣಿ ಮತ್ತು ಶೇನ್ ಪೀಕಾಕ್ ಅವರು ಫ್ರಾನ್ಸಿಸ್ ಫೋರ್ಡ್ ಕೊಪ್ಪೊಲಾ ಅವರ “ಮೆಗಾಲೋಪೊಲಿಸ್” ನ ಪ್ರಥಮ ಪ್ರದರ್ಶನಕ್ಕಾಗಿ ಉಡುಪನ್ನು ವಿನ್ಯಾಸಗೊಳಿಸಿದರು. ಆದರೆ ಈ ಗೌನ್‌ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಬ್ಬರು ʻʻಈ ಗೌನ್‌ನಲ್ಲಿ ತುಂಬ ಚೆಂದ ಕಾಣುತ್ತೀರಿ. ಆದರೆ ಇದು ಕಾನ್‌ ಉತ್ಸವಕ್ಕೆ ಸರಿ ಹೊಂದುವಂತಿಲ್ಲʼʼಎಂದು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Aishwarya Rai stopping blue gown at Cannes 2024
Koo

ಬೆಂಗಳೂರು: ಐಶ್ವರ್ಯಾ ರೈ (Aishwarya Rai ) ಬಚ್ಚನ್ ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವವಾದ ಕಾನ್ ಫಿಲ್ಮ್ ಫೆಸ್ಟಿವಲ್ನಲ್ಲಿ (Cannes 2024) ಎರಡನೇ ಬಾರಿ ಮಿಂಚಿದ್ದಾರೆ. ಸ್ಕ್ರೀನಿಂಗ್‌ ಆಫ್‌ ಕೈಂಡ್ಸ್ ಆಫ್ ಕೈಂಡನೆಸ್‌ ಪ್ರದರ್ಶನಕ್ಕೆ ಹಾಜರಾಗುವ ಮೊದಲು ನಟಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದರು. ಐಶ್ವರ್ಯಾ ರೈ ಅವರು ಎರಡನೇ ಬಾರಿ ಬೆಳ್ಳಿ ಮತ್ತು ನೀಲಿ ಮಿಶ್ರಿತ ಗೌನ್ ಧರಿಸಿದ್ದರು. ಫಲ್ಗುಣಿ ಮತ್ತು ಶೇನ್ ಪೀಕಾಕ್ ವಿನ್ಯಾಸಗೊಳಿಸಿದ ಸ್ಕರ್ಟ್ ಇದಾಗಿತ್ತು. ‌ ಆದರೆ ಈ ಸ್ಕರ್ಟ್‌ ಬಗ್ಗೆ ಅನೇಕರು ಟೀಕೆ ಮಾಡಿದ್ದಾರೆ.

ಫಲ್ಗುಣಿ ಮತ್ತು ಶೇನ್ ಪೀಕಾಕ್ ಅವರು ಫ್ರಾನ್ಸಿಸ್ ಫೋರ್ಡ್ ಕೊಪ್ಪೊಲಾ ಅವರ “ಮೆಗಾಲೋಪೊಲಿಸ್” ನ ಪ್ರಥಮ ಪ್ರದರ್ಶನಕ್ಕಾಗಿ ಉಡುಪನ್ನು ವಿನ್ಯಾಸಗೊಳಿಸಿದರು. ಆದರೆ ಈ ಗೌನ್‌ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಬ್ಬರು ʻʻಈ ಗೌನ್‌ನಲ್ಲಿ ತುಂಬ ಚೆಂದ ಕಾಣುತ್ತೀರಿ. ಆದರೆ ಇದು ಕಾನ್‌ ಉತ್ಸವಕ್ಕೆ ಸರಿ ಹೊಂದುವಂತಿಲ್ಲʼʼ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻಬರ್ತ್‌ಡೇ ಪಾರ್ಟಿ ಇಂದ ಪ್ರಭಾವಿತರಾದರೇ? ನಿಮ್ಮ ಸ್ಟೈಲಿಶ್‌ರನ್ನು ಮೊದಲು ಕೆಲಸದಿಂದ ಕಿತ್ತು ಹಾಕಿʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Aishwarya Rai : ಐಶ್ವರ್ಯಾ ರೈಯಂತ ಕಣ್ಣು ಬೇಕೇ? ಮೀನು ತಿನ್ನಿ; ಮಹಾರಾಷ್ಟ್ರದ ಸಚಿವನ ವಿವಾದಾತ್ಮಕ ಹೇಳಿಕೆ

ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ.

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

ಇದನ್ನೂ ಓದಿ: Aishwarya Rai: ಅತ್ತೆ, ನಾದಿನಿ ಕ್ರಾಪ್‌ ಮಾಡಿ ಫೋಟೊ ಹಂಚಿಕೊಂಡ ಐಶ್ವರ್ಯಾ ರೈ; ಕುಟುಂಬದಲ್ಲಿ ಬಿರುಕು?

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಲಿಪಾಲ ಮತ್ತು ಕಿಯಾರಾ ಆಡ್ವಾಣಿ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಪೋಸ್‌ ಕೂಡ ಕೊಟ್ಟಿದ್ದಾರೆ. 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

Continue Reading

ಸ್ಯಾಂಡಲ್ ವುಡ್

Milana Nagaraj: ಗರ್ಭಿಣಿ ಮಿಲನಾ ನಾಗರಾಜ್‌ ಧರಿಸಿರುವ ಕ್ರಶ್ಡ್ ಅನಾರ್ಕಲಿ ಬಾರ್ಡರ್‌ ಗೌನ್‌ನ ವಿಶೇಷ ಏನು?

ಕ್ರಶ್ಡ್‌ ಅನಾರ್ಕಲಿ ಗೌನ್‌ನಲ್ಲಿ (Actress Fashion) ಕಾಣಿಸಿಕೊಂಡಿರುವ ನಟಿ ಮಿಲನಾ ನಾಗರಾಜ್‌ ಟ್ರೆಡಿಷನಲ್‌ ಲುಕ್‌ನಲ್ಲಿ ಆಕರ್ಷಕವಾಗಿ ಕಾಣಿಸಿಕೊಂಡಿದ್ದಾರೆ. ಅಂದ ಹಾಗೆ, ಇವರು ಧರಿಸಿರುವ ಅನಾರ್ಕಲಿ ಗೌನ್‌ ವಿಶೇಷತೆ ಏನು? ಇಲ್ಲಿದೆ ಒಂದಿಷ್ಟು ಟಿಪ್ಸ್.

VISTARANEWS.COM


on

Milana Nagaraj Anarkali border gown worn
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು

ಕ್ರಶ್ಡ್‌ ಅನಾರ್ಕಲಿ ಗೌನ್‌ನಲ್ಲಿ (Actress Fashion) ಆಕರ್ಷಕವಾಗಿ ಕಾಣಿಸಿಕೊಂಡಿರುವ ನಟಿ ಮಿಲನಾ ನಾಗರಾಜ್‌ ಟ್ರೆಡಿಷನಲ್‌ ಲುಕ್‌ನಲ್ಲಿ ಮಹಿಳೆಯರ ಗಮನ ಸೆಳೆದಿದ್ದಾರೆ. ಅಂದ ಹಾಗೆ ಮಿಲನಾ ನಾಗರಾಜ್‌ ಈಗ ಗರ್ಭಿಣಿ.
ಈಗಷ್ಟೇ ವಿದೇಶದಲ್ಲಿ ಬೇಬಿ ಮೂನ್‌ ಮುಗಿಸಿ ಪತಿ ಡಾರ್ಲಿಂಗ್‌ ಕೃಷ್ಣ ಅವರೊಂದಿಗೆ ಮರಳಿರುವ ಮಿಲನಾ ಅವರು ನಾನಾ ಇವೆಂಟ್‌ನಲ್ಲಿ ಒಂದಲ್ಲ ಒಂದು ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ. ಬೇಬಿ ಬಂಪ್‌ ಹೈಲೈಟಾಗದಂತೆ ಡ್ರೆಸ್‌ಗಳನ್ನು ಧರಿಸುತ್ತಾರೆ. ಡೀಸೆಂಟಾಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇದು ಫ್ಯಾಷನ್‌ ವಿಮರ್ಶಕರ ಪ್ರಶಂಸೆಗೂ ಒಳಗಾಗುತ್ತಿರುತ್ತಾರೆ.

ಅನಾರ್ಕಲಿ ಗೌನ್‌ನಲ್ಲಿ ಮಿಲನಾ ಸ್ಟೈಲ್‌ & ಸ್ಮೈಲ್‌:

“ಪ್ರೆಗ್ನೆಂಟ್‌ ಆಗಿರುವ ಮಿಲನಾ ನಾಗರಾಜ್‌ ಅವರ ಬೇಬಿ ಬಂಪ್‌ ಎಲ್ಲಿಯೂ ಹೈಲೈಟ್‌ ಆಗುತ್ತಿಲ್ಲ ಎನ್ನುವುದಕ್ಕಿಂತ ಅವರು ಧರಿಸುತ್ತಿರುವ ಉಡುಪುಗಳ ಡಿಸೈನ್‌ ಅಷ್ಟೊಂದು ನೀಟಾಗಿದೆ. ಅವರು ಧರಿಸಿರುವ ಒಂದೊಂದು ಔಟ್‌ಫಿಟ್‌ ಕೂಡ ಡಿಸೆಂಟ್‌ ಲುಕ್‌ ನೀಡುವುದರೊಂದಿಗೆ ಅವರಿಗೆ ಕಂಫರ್ಟಬಲ್‌ ಫೀಲ್‌ ನೀಡಿದೆ” ಎನ್ನುತ್ತಾರೆ ಫ್ಯಾಷನಿಸ್ಟಾಗಳು.

ಇದನ್ನೂ ಓದಿ: Milana Nagaraj: ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಲವ್‌ ಮಾಕ್ಟೆಲ್‌ʼ ಜೋಡಿ!

ಗೋಲ್ಡನ್‌ ಅನಾರ್ಕಲಿ ಡಿಟೇಲ್ಸ್‌

ಎಥ್ನಿಕ್‌ವೇರ್‌ ಡಿಸೈನ್‌ಗಳಿಗೆ ಖ್ಯಾತಿ ಗಳಿಸಿರುವ ಸೆಲೆಬ್ರೆಟಿ ಡಿಸೈನರ್‌ ಸಿಂಧೂ ರೆಡ್ಡಿಯವರ ಡಿಸೈನರ್‌ವೇರ್‌ ಇದು. ಕ್ರಶ್ಡ್‌ ಟಿಶ್ಯೂ ಮೆಟೀರಿಯಲ್‌ನ ಈ ಫ್ಯಾಬ್ರಿಕ್‌ ಅನಾರ್ಕಲಿ ವಿನ್ಯಾಸವನ್ನು ಒಳಗೊಂಡಿದೆ. ಮಿಲನಾಗೆ ಎಲಿಗೆಂಟ್‌ ಲುಕ್‌ ನೀಡಿರುವ ಈ ಅನಾರ್ಕಲಿ ಗೌನ್‌ಗೆ ಸ್ಲೀವ್‌ ಹಾಗೂ ಡಿಸೈನರ್‌ವೇರ್‌ ಕೆಳಗೆ ಇರುವ ಬಿಗ್‌ ಬಾರ್ಡರ್‌ ಕಂಪ್ಲೀಟ್‌ ಟ್ರೆಡಿಷನಲ್‌ ಲುಕ್‌ ನೀಡಿದೆ. ಇದರೊಂದಿಗೆ ಕಾಂಟ್ರಸ್ಟ್‌ ಶೇಡ್‌ನ ಬನಾರಸಿ ಬಾರ್ಡರ್‌ ಬಗೆಯ ಸೊಂಟದ ಪಟ್ಟಿ ಅಂದರೆ ಟೈಯಿಂಗ್‌ ಹ್ಯಾಂಡ್‌ ವರ್ಕ್‌ ಎಂಬ್ರಾಯ್ಡರಿ ಮಾಡಿರುವ ವೇಸ್ಟ್‌ ಬೆಲ್ಟ್‌ ಅಥವಾ ಕಮರ್‌ಬಾಂದ್‌ ಗೌನನ್ನು ಇನ್ನಷ್ಟು ಆಕರ್ಷಕವಾಗಿಸಿದೆ. ಇದರೊಂದಿಗೆ ಮ್ಯಾಚ್‌ ಮಾಡಿರುವ ರೆಡ್‌ ಪ್ಯೂರ್‌ ಅರ್ಗಾನ್ಜಾ ದುಪಟ್ಟಾ ಕೂಡ ಸಖತ್‌ ಲುಕ್‌ ನೀಡಿದೆ ಎಂದು ವಿವರಿಸುತ್ತಾರೆ ಸೆಲೆಬ್ರೆಟಿ ಡಿಸೈನರ್‌ ಸಿಂಧೂ ರೆಡ್ಡಿ. ಅವರ ಪ್ರಕಾರ, ಅನಾರ್ಕಲಿ ಡಿಸೈನ್‌ನಲ್ಲೂ ಟ್ರೆಡಿಷನಲ್‌ ಲುಕ್‌ ನೀಡಬಹುದು ಎನ್ನುವುದಕ್ಕೆ ಈ ಡಿಸೈನರ್‌ವೇರ್‌ ಸಾಕ್ಷಿ ಎನ್ನುತ್ತಾರೆ.

ಮಿಲನಾ ನಾಗರಾಜ್‌ ಆಕರ್ಷಕ ಲುಕ್‌

ನಟಿ ಮಿಲನಾ ನಾಗರಾಜ್‌ ಖಾಸಗಿ ಕಾರ್ಯಕ್ರಮಕ್ಕೆಂದು ಧರಿಸಿದ ಈ ಅನಾರ್ಕಲಿ ಗೌನ್‌ನ ಸ್ಟೈಲಿಂಗ್‌ ಸ್ಟೈಲಿಸ್ಟ್‌ಗಳಾದ ತೇಜು ಹಾಗೂ ಖುಷಿ ಮಾಡಿದ್ದಾರೆ. ಇನ್ನು, ವರಹಾ ಸಿಲ್ವರ್‌ ಜ್ಯುವೆಲರಿ ಧರಿಸಿರುವ ಮಿಲನಾ ಲೈಟ್‌ ಮೇಕಪ್‌ನಲ್ಲಿ ಸಖತ್‌ ಆಗಿ ಕಾಣಿಸಿಕೊಂಡಿದ್ದಾರೆ. ಮಿಲನಾಗೆ ಈ ಡಿಸೈನರ್‌ವೇರ್‌ ಸಖತ್‌ ಇಷ್ಟವಾಗಿದೆಯಂತೆ. ಅದರಲ್ಲೂ ಟ್ರೆಡಿಷನಲ್‌ ಲುಕ್‌ ನೀಡುವ ಈ ಔಟ್‌ಫಿಟ್‌ ಲೈಟ್‌ವೈಟ್‌ ಆಗಿರುವುದು ಮತ್ತಷ್ಟು ಕಂಫರ್ಟಬಲ್‌ ಆಗಿಸಿದೆಯಂತೆ. ಯಾವುದೇ ಉಡುಪನ್ನು ನಾನು ಇಷ್ಟಪಟ್ಟು ಧರಿಸುತ್ತೇನೆ ಎನ್ನುತ್ತಾರೆ ಅವರು.

ಮಿಲನಾ ಎಲಿಗೆಂಟ್‌ ಫ್ಯಾಷನ್‌ ಮಂತ್ರ

ಈ ಹಿಂದೆ ವಿಸ್ತಾರ ನ್ಯೂಸ್‌ನ ಫ್ಯಾಷನ್‌ ಕುರಿತ ಸಂದರ್ಶನದಲ್ಲಿ ಮಿಲನಾ ಅವರೇ ಹೇಳಿದಂತೆ, ಯಾವುದೇ ಔಟ್‌ಫಿಟ್‌ ಹಾಗೂ ಡಿಸೈನರ್‌ವೇರ್‌ ಕಂಫರ್ಟಬಲ್‌ ಫೀಲ್‌ ನೀಡಿದಾಗ ತಂತಾನೇ ನೋಡಲು ಆಕರ್ಷಕವಾಗಿ ಕಾಣಿಸುತ್ತದೆ. ನಮ್ಮ ಪರ್ಸನಾಲಿಟಿಗೆ ತಕ್ಕಂತೆ ಧರಿಸಿದಾಗ ಇನ್ನಷ್ಟು ಸುಂದರವಾಗಿ ಕಾಣುತ್ತದೆ ಎಂಬುದು ಸತ್ಯಕ್ಕೆ ಹತ್ತಿರ ಎಂಬುದು ತಿಳಿದು ಬರುತ್ತದೆ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ )

Continue Reading
Advertisement
Koppal tragedy
ಕೊಪ್ಪಳ9 mins ago

Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

Prajwal Revanna case Devaraje Gowda should be given mental treatment says Congress
ರಾಜಕೀಯ16 mins ago

Prajwal Revanna Case: ದೇವರಾಜೇಗೌಡರಿಗೆ ಮೆಂಟಲ್‌ ಟ್ರೀಟ್ಮೆಂಟ್‌ ಕೊಡಿಸಬೇಕಿದೆ: ಕಾಂಗ್ರೆಸ್‌ ವ್ಯಂಗ್ಯ

Health Tips in Kannada tomato juice is good for health
ಆರೋಗ್ಯ21 mins ago

Health Tips in Kannada: ಟೊಮ್ಯಾಟೊ ಜ್ಯೂಸ್‌ ಆರೋಗ್ಯಕ್ಕೇಕೆ ಒಳ್ಳೆಯದು ಗೊತ್ತೆ?

T20 World Cup 2024
ಕ್ರೀಡೆ23 mins ago

T20 World Cup 2024: ಪಾಕ್​ ಉಗ್ರರ ಭೀತಿ; ಬಿಗಿ ಭದ್ರತೆ ಕೈಗೊಂಡ ವಿಂಡೀಸ್​ ಕ್ರಿಕೆಟ್​ ಮಂಡಳಿ

Cannes 2024 Indian influencer who stitched a 20 kg dress
ಬಾಲಿವುಡ್27 mins ago

Cannes 2024: 20 ಕೆಜಿ ತೂಕದ ಗೌನ್ ಧರಿಸಿ ಬೆರಗುಗೊಳಿಸಿದ ನ್ಯಾನ್ಸಿ ತ್ಯಾಗಿ!

ಕರ್ನಾಟಕ30 mins ago

Prajwal Revanna Case: ನಾನು ಹೊರಬಂದ್ರೆ ಸರ್ಕಾರ ಪತನ ಎಂದ ದೇವರಾಜೇಗೌಡ; ಹಾಗಾದ್ರೆ ಜೈಲಲ್ಲೇ ಇರ್ತಾರೆ ಎಂದ ಪರಮೇಶ್ವರ್‌

Woman
ದೇಶ31 mins ago

ಪತ್ನಿಯ ಶೀಲ ಶಂಕಿಸಿ, ಆಕೆಯ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕಿದ ದುಷ್ಟ; ಏನು ಮಾಡಬೇಕು ಇಂಥವರಿಗೆ?

murder case
ಕ್ರೈಂ34 mins ago

Murder case : ಕುಡಿದ ನಶೆಯಲ್ಲಿ ಗೆಳೆಯನ ಕೊಂದ; ಸೇಡಿಗಾಗಿ ಗ್ರಾ.ಪಂ ಸದಸ್ಯನ ಮನೆ ಮೇಲೆ ಅಟ್ಯಾಕ್‌

Pavitra Jayaram Relationship With Chandu Shilpa Prema statement
ಕಿರುತೆರೆ60 mins ago

Pavithra Jayaram: ನನ್ನ ಗಂಡನಿಗೂ ಪವಿತ್ರಾಗೂ ‘ಸಂಬಂಧ’ ಇದ್ದದ್ದು ನಿಜ ಎಂದ ಚಂದ್ರಕಾಂತ್‌ ಪತ್ನಿ!

Money Guide
ಮನಿ-ಗೈಡ್1 hour ago

Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ21 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌