ಬೆಂಗಳೂರು: ಜನಪ್ರಿಯ ಖಳನಟ ಮನ್ಸೂರ್ ಅಲಿ ಖಾನ್ (Mansoor Ali Khan) ಅವರು ಇತ್ತೀಚೆಗೆ ಸಹ ನಟಿ ತ್ರಿಶಾ ಕೃಷ್ಣನ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಅವರ ವಿರುದ್ಧ ಪೊಲೀಸ್ ಕೇಸ್ ಕೂಡ ದಾಖಲಾಗಿತ್ತು. ತೀವ್ರ ಹಿನ್ನಡೆಯನ್ನು ಎದುರಿಸಿದ ನಂತರ ಮನ್ಸೂರ್ ಅಲಿ ಖಾನ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಮನ್ಸೂರ್ ಅಲಿ ಖಾನ್ ಅವರ ಟೀಕೆಗಳನ್ನು ತ್ರಿಶಾ ತೀವ್ರವಾಗಿ ಖಂಡಿಸಿದ್ದಾರೆ. ನಾನು ಅವರೊಂದಿಗೆ ಪರದೆಯನ್ನು ಹಂಚಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದಾರೆ.
ರಾಷ್ಟ್ರೀಯ ಮಹಿಳಾ ಆಯೋಗದ ನಿರ್ದೇಶನದಂತೆ, ಥೌಸಂಡ್ ಲೈಟ್ಸ್ ಆಲ್-ವುಮೆನ್ ಪೊಲೀಸರು ಮನ್ಸೂರ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು 509 (ಮಹಿಳೆಯರ ಘನತೆಗೆ ಧಕ್ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಲಿಯೋ ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್, ಗಾಯಕಿ ಚಿನ್ಮಯಿ, ನಟ-ರಾಜಕಾರಣಿ ಖುಷ್ಬು, ನಟಿ ಮಾಳವಿಕಾ ಮೋಹನನ್, ತೆಲುಗು ಸೂಪರ್ ಸ್ಟಾರ್ ಚಿರಂಜೀವಿ ಮತ್ತು ದಕ್ಷಿಣ ಭಾರತೀಯ ಚಲನಚಿತ್ರ ಕಲಾವಿದರ ಸಂಘ ಕೂಡ ಇತ್ತೀಚೆಗೆ ಮನ್ಸೂರ್ ಅಲಿ ಖಾನ್ ಅವರ ಹೇಳಿಕೆಯನ್ನು ಖಂಡಿಸಿದ್ದರು. ಪರಿಸ್ಥಿತಿಯ ಗಂಭೀರತೆಯನ್ನು ಒಪ್ಪಿಕೊಂಡಿರುವ ಮನ್ಸೂರ್ ಅಲಿ ಖಾನ್ ಇದೀಗ ತ್ರಿಷಾಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಈಗ ವಿಚಾರಣೆ ಬಳಿಕ ಮನ್ಸೂರ್ ಅವರು ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ. ‘ಸಹನಟಿ ತ್ರಿಷಾ ಅವರೇ ನನ್ನನ್ನು ಕ್ಷಮಿಸಿ’ ಎಂದು ಮನ್ಸೂರ್ ಹೇಳಿರುವುದಾಗಿ ಟ್ರೇಡ್ ಅನಲಿಸ್ಟ್ ರಮೇಶ್ ಬಾಲಾ ಟ್ವೀಟ್ ಮಾಡಿದ್ದಾರೆ.
ಮನ್ಸೂರ್ ಅಲಿ ಖಾನ್ ಹೇಳಿದ್ದೇನು?
“ನಾನು ಲಿಯೋ ಸಿನಿಮಾದಲ್ಲಿ ತ್ರಿಶಾ ಅವರ ಜತೆ ನಟಿಸುತ್ತೇನೆ ಎಂದಾಗ ಖುಷಿಯಾಯಿತು. ಬೇರೆ ನಟಿಯರ ಜತೆ ಇದ್ದಂತೆ ತ್ರಿಶಾ ಅವರ ಜತೆಗೂ ಒಂದು ಬೆಡ್‌ರೂಮ್ ಸೀನ್ ಇರುತ್ತದೆ ಎಂದು ಭಾವಿಸಿದ್ದೆ. ನಾನು ತುಂಬ ರೇಪ್ ದೃಶ್ಯಗಳಲ್ಲಿ ನಟಿಸಿರುವ ಕಾರಣ ಇದೆಲ್ಲ ನನಗೆ ಏನೂ ಅನಿಸುವುದಿಲ್ಲ. ಆದರೆ, ಸಿನಿಮಾ ತಂಡದವರು ಕಾಶ್ಮೀರದಲ್ಲಿ ಶೂಟಿಂಗ್ ಮಾಡುವ ವೇಳೆ ನನಗೆ ತ್ರಿಶಾ ಅವರನ್ನು ತೋರಿಸಲೇ ಇಲ್ಲ” ಎಂದು ಹೇಳಿದ್ದರು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು.
ಇದನ್ನೂ ಓದಿ: Mansoor Ali Khan: ತ್ರಿಶಾ ಕೃಷ್ಣನ್ ವಿವಾದ; ಮನ್ಸೂರ್ ಅಲಿ ಖಾನ್ ವಿರುದ್ಧ ಕೇಸ್
#BREAKING : Actor #MansoorAliKhan
— Ramesh Bala (@rameshlaus) November 24, 2023
apologizes to Actress @trishtrashers
" எனது சக திரைநாயகி திரிஷாவே
என்னை மன்னித்துவிடு!
இல்லறமாம் நல்லறத்தில் நின் மாங்கல்யம் தேங்காய் தட்டில் வலம்வரும்போது நான் ஆசிர்வதிக்கும் பாக்யத்தை இறைவன் தந்தருள்வானாக!! ஆமீன். "
—மன்சூர் அலிகான்
ತಿರುಗೇಟು ಕೊಟ್ಟಿದ್ದ ತ್ರಿಶಾ ಕೃಷ್ಣನ್
ಮನ್ಸೂರ್ ಅಲಿ ಖಾನ್ ವಿರುದ್ಧ ತ್ರಿಶಾ ಕೃಷ್ಣನ್ ಆಕ್ರೋಶ ವ್ಯಕ್ತಪಡಿಸಿದ್ದರು “ಮನ್ಸೂರ್ ಅಲಿ ಖಾನ್ ಅವರು ಇತ್ತೀಚೆಗೆ ನನ್ನ ಬಗ್ಗೆ ಅಸಭ್ಯವಾಗಿ ಮಾತನಾಡಿದ ವಿಡಿಯೊ ನೋಡಿದೆ. ಇಂತಹ ಕೀಳು ಅಭಿರುಚಿಯ, ಸ್ತ್ರೀದ್ವೇಷದಿಂದ ಕೂಡಿರುವ, ತುಚ್ಚ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ನಾನು ಇಂತಹ ವ್ಯಕ್ತಿಯ ಜತೆ ಇದುವರೆಗೆ ತೆರೆ ಹಂಚಿಕೊಂಡಿಲ್ಲ ಎಂಬುದೇ ಸಮಾಧಾನದ ಸಂಗತಿ. ಅಷ್ಟೇ ಅಲ್ಲ, ನಾನು ಸಿನಿಮಾ ಕ್ಷೇತ್ರದಲ್ಲಿ ಇರುವವರೆಗೆ ಈ ವ್ಯಕ್ತಿಯ ಜತೆ ನಟಿಸುವುದಿಲ್ಲ. ಇಂತಹ ವ್ಯಕ್ತಿಗಳು ಮನುಕುಲಕ್ಕೇ ಕೆಟ್ಟ ಹೆಸರು ತರುತ್ತಾರೆ” ಎಂದು ಪೋಸ್ಟ್ ಮಾಡಿದ್ದರು.
ವಿವಾದ ಭುಗಲೇಳುತ್ತಲೇ ಮನ್ಸೂರ್ ಅಲಿ ಖಾನ್ ಸ್ಪಷ್ಟನೆ ನೀಡಿದ್ದರು. “ನಾನು ನಟಿಯರನ್ನು ಗೌರವಿಸುತ್ತೇನೆ. ನನ್ನ ಮಗಳು ತ್ರಿಶಾ ಅವರ ದೊಡ್ಡ ಅಭಿಮಾನಿ. ನಾನು ಉದ್ದೇಶಪೂರ್ವಕವಾಗಿ ನೋವುಂಟು ಮಾಡಬೇಕು ಎಂದು ಹಾಗೆ ಹೇಳಿಲ್ಲ. ತಮಾಷೆಯಾಗಿ ಮಾತನಾಡುವಾಗ ಹಾಗೆ ಹೇಳಿದೆ” ಎಂದ್ದರು.