ಬೆಂಗಳೂರು: ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ನಟ ನಾಗಭೂಷಣ್ (Actor Nagabhushan) ಅವರಿಗೆ ಆಗಸ್ಟ್ 17 ಜನುಮದಿನ ಸಂಭ್ರಮ. ʻಟಗರು ಪಲ್ಯʼ ಸಿನಿಮಾ ಬಳಗದಿಂದ ವಿಶೇಷ ಉಡುಗೊರೆ ಸಿಕ್ಕಿದೆ. ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಮೂರನೇ ಚಿತ್ರದ ಟೈಟಲ್ ಟ್ರ್ಯಾಕ್ ನಾಯಕ ನಾಗಭೂಷಣ್ ಬರ್ತ್ ಡೇ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಧನಂಜಯ್ ಕ್ಯಾಚಿ ಮ್ಯಾಚಿ ಪದಗಳನ್ನು ಸೇರಿಸಿ ಸಾಹಿತ್ಯ ರಚಿಸಿದ್ದು, ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ವಿಜಯ್ ಪ್ರಕಾಶ್ ಹಾಡಿಗೆ ದನಿ ನೀಡಿದ್ದಾರೆ.
ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶನದ ಚೊಚ್ಚಲ ಚಿತ್ರವಾಗಿರುವ ʼಟಗರು ಪಲ್ಯʼ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ನಾಗಭೂಷಣ್ ನಾಯಕನಾಗಿ ನಟಿಸಿದ್ದಾರೆ. ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆಯ ಸುತ್ತ ಇಡೀ ಸಿನಿಮಾವನ್ನು ನಿರ್ದೇಶಕ ಉಮೇಶ್ ಕೆ. ಕೃಪಾ ಕಟ್ಟಿಕೊಟ್ಟಿದ್ದಾರೆ. ಹಿರಿಯ ಕಲಾವಿದರಾದ ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಸೇರಿದಂತೆ ದೊಡ್ಡ ತಾರಾ ಬಳಗವಿರುವ “ಟಗರು ಪಲ್ಯ” ಗಮನ ಸೆಳೆದಿದೆ.
ಎಸ್ ಕೆ ರಾವ್ ಕ್ಯಾಮೆರಾ ಹಿಡಿದಿದ್ದಾರೆ. ಟೈಟಲ್ ಟ್ರ್ಯಾಕ್ ಮೂಲಕ ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಕನ್ನಡ ರಾಜ್ಯೋತ್ಸವಕ್ಕೆ ಸಿನಿಮಾವನ್ನು ತೆರೆಗೆ ತರಲು ಯೋಜನೆ ಹಾಕಿಕೊಂಡಿದೆ.
ಇದನ್ನೂ ಓದಿ: Dolly Dhanjay: ಡಾಲಿ ಧನಂಜಯ್ ನಿರ್ಮಾಣದ ‘ಟಗರು ಪಲ್ಯ’ ಸಿನಿಮಾ ಶೂಟಿಂಗ್ ಕಂಪ್ಲೀಟ್
‘ಟಗರು ಪಲ್ಯ’ ಚಿತ್ರದಲ್ಲಿ ಅಮೃತಾ ಪ್ರೇಮ್ ಹಳ್ಳಿ ಹುಡುಗಿ ಪಾತ್ರವನ್ನು ನಿಭಾಯಿಸಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು, ವರ್ಕ್ ಶಾಪ್ ಮೂಲಕ ಸಾಕಷ್ಟು ಕಲಿತು ಹಳ್ಳಿ ಹುಡುಗಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಮಂಡ್ಯ ಭಾಗದ ಕಥೆಯನ್ನೊಳ್ಳಗೊಂಡ ಈ ಚಿತ್ರದಲ್ಲಿ ಅಲ್ಲಿನ ಸೊಗಡಿನ ಭಾಷೆ ಕಲಿತು ಅಷ್ಟೇ ಚೆನ್ನಾಗಿ ಅಭಿನಯಿಸಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ.