Site icon Vistara News

Actor Nani: ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡ ನ್ಯಾಚುರಲ್ ಸ್ಟಾರ್ ನಾನಿ: ‘ದಸರಾ’ ಟೀಸರ್‌ ಔಟ್‌!

Actor Nani Dasara teaser out

ಬೆಂಗಳೂರು : ಭಾರತೀಯ ಚಿತ್ರರಂಗದ ಸ್ಟಾರ್ ಡೈರೆಕ್ಟರ್ ಎಸ್. ಎಸ್ ರಾಜಮೌಳಿ ಅವರು ನ್ಯಾಚುರಲ್ ಸ್ಟಾರ್ ನಾನಿ (Actor Nani) ಅಭಿನಯದ ದಸರಾ ತೆಲುಗು ಟೀಸರ್ ಬಿಡುಗಡೆ ಮಾಡಿದ್ದಾರೆ. ಶಾಹಿದ್ ಕಪೂರ್, ರಕ್ಷಿತ್ ಶೆಟ್ಟಿ, ದುಲ್ಕರ್ ಸಲ್ಮಾನ್, ಧನುಷ್, ಹಿಂದಿ, ಕನ್ನಡ, ಮಲಯಾಳಂ, ತಮಿಳು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ನಾನಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುವ ದಸರಾ ಹಬ್ಬವನ್ನು ಭಾರತದಾದ್ಯಂತ ಹೆಚ್ಚು ಸಂತೋಷ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ಆಚರಣೆಗಳಲ್ಲಿ ರಾವಣನ ಪ್ರತಿಕೃತಿಗಳನ್ನು ಸುಡಲಾಗುತ್ತದೆ. ಅದರಂತೆ ‘ದಸರಾ’ ಚಿತ್ರವೂ ಕೆಟ್ಟದರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂಬುದಕ್ಕೆ ಟೀಸರ್ ತುಣುಕು ಸಾಕ್ಷಿಯಾಗಿದೆ.

ಚಿತ್ರಕ್ಕಾಗಿ ನ್ಯಾಚುರಲ್ ಸ್ಟಾರ್ ನಾನಿ ಮೇಕೋವರ್, ರಗಡ್ ಲುಕ್ ಟೀಸರ್ ನಲ್ಲಿ ಗಮನ ಸೆಳೆಯುತ್ತಿದೆ. ಗೋದಾವರಿ ಖಾನಿ ಸುತ್ತಮುತ್ತಲಿನ ವೀರ್ಲಪಲ್ಲಿ ಗ್ರಾಮ ಹಾಗೂ ಸಿಂಗರೇಣಿ ಕಲ್ಲಿದ್ದಲಿನ ಪ್ರಪಂಚವನ್ನು ಟೀಸರ್ ಝಲಕ್ ನಲ್ಲಿ ಅನಾವರಣ ಮಾಡಲಾಗಿದ್ದು ಪ್ರೇಕ್ಷಕರಲ್ಲಿ ಕುತೂಹಲ ಸೃಷ್ಟಿ ಮಾಡಿದೆ.

ಇದನ್ನೂ ಓದಿ: Nani | ಫ್ರೆಂಡ್‌ಶಿಪ್‌ ಡೇಗೆ ನಾನಿ ನಟನೆಯ ದಸರಾ ಸಿನಿಮಾ ಪೋಸ್ಟರ್‌ ರಿವೀಲ್‌: ನಾನಿ ಜತೆ ಮಿಂಚಿದ ಕನ್ನಡದ ನಟ

ಟೀಸರ್ ಬಿಡುಗಡೆ ವೇಳೆ ಮಾತನಾಡಿದ ನಟ ನ್ಯಾಚುರಲ್ ಸ್ಟಾರ್ ನಾನಿ ʻʻಕಳೆದ ವರ್ಷ ತೆಲುಗಿನಲ್ಲಿ ಆರ್ ಆರ್ ಆರ್ ಕನ್ನಡದಲ್ಲಿ ಕೆಜಿಎಫ್ 2 , ಕಾಂತಾರ ಸಿನಿಮಾಗಳ ಸೂಪರ್ ಹಿಟ್ ಆಗಿವೆ. ಈ ವರ್ಷ ದಸರಾ ಆ ಸಿನಿಮಾಗಳ ಲಿಸ್ಟ್ ಗೆ ಸೇರಲಿದೆ ಎಂದು ಗರ್ವದಿಂದ ಹೇಳುತ್ತೇನೆʼʼ ಎಂದರು.

ನಾನಿ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯ ಸ್ಟಾರ್ ನಟರು ಟೀಸರ್ ಬಿಡುಗಡೆಯಾಗಿದೆ. ಮಾಸ್ ಆ್ಯಕ್ಷನ್ ಸಬ್ಜೆಕ್ಟ್ ಒಳಗೊಂಡ ‘ದಸರಾ’ ಈಗಾಗಲೇ ಸಿನಿ ಪ್ರಿಯರಲ್ಲಿ ನಿರೀಕ್ಷೆ ಹುಟ್ಟುಹಾಕಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ಮೂಡಿ ಬರುತ್ತಿರುವ ಚಿತ್ರದಲ್ಲಿ ನಾನಿ ಮಾಸ್ ಅವತಾರದಲ್ಲಿ ರಂಜಿಸಲು ರೆಡಿಯಾಗಿದ್ದು, ಮಾರ್ಚ್ 30ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.

ನಾನಿ ಹಾಗೂ ಕೀರ್ತಿ ಸುರೇಶ್ ಜೋಡಿಯಾಗಿರುವ ‘ದಸರಾ’ ಚಿತ್ರಕ್ಕೆ ಶ್ರೀಕಾಂತ್ ಒಡೆಲಾ ಆ್ಯಕ್ಷನ್ ಕಟ್ ಹೇಳಿದ್ದಾರೆ. ಮಾರ್ಚ್ 30ರಂದು ಸಿನಿಮಾ ಗ್ರ್ಯಾಂಡ್ ಆಗಿ ತೆರೆ ಕಾಣುತ್ತಿದೆ. ಈಗಾಗಲೇ ಹಾಡುಗಳ ಮೂಲಕ ಕ್ರೇಜ್ ಸೃಷ್ಟಿಸಿರುವ ಚಿತ್ರತಂಡ ಟೀಸರ್ ಝಲಕ್ ಮೂಲಕ ಪ್ರೇಕ್ಷಕರ ಮನ ಸೆಳೆಯಲು ಸಜ್ಜಾಗಿದೆ.

ಇದನ್ನೂ ಓದಿ: Balarama elephant | ದಸರಾ ಅಂಬಾರಿ ಹೊರುವ ಬಲರಾಮನಿಗೆ ಗುಂಡೇಟು, ಆರೋಪಿ ಬಂಧನ

ಬಹು ದೊಡ್ಡ ತಾರಾಗಣ ಒಳಗೊಂಡ ಈ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ಸ್ಟಾರ್ ಕಲಾವಿದರ ತಾರಾಬಳಗವಿದೆ. ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಡಿ ಸುಧಾಕರ್ ಚೆರುಕುರಿ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ.

Exit mobile version