Site icon Vistara News

Actor Nani: ಕ್ರೇಜಿ ಸ್ಟಾರ್ ರವಿಚಂದ್ರನ್ ಭೇಟಿ ಮಾಡಿದ ನ್ಯಾಚುರಲ್ ಸ್ಟಾರ್ ನಾನಿ

Actor Nani Met ravichandran

ಬೆಂಗಳೂರು: ನ್ಯಾಚುರಲ್ ಸ್ಟಾರ್ ನಾನಿ (Actor Nani) ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್ 30ರಂದು ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ತೆರೆಗೆ ಅಪ್ಪಳಿಸಲಿದೆ ದಸರಾದಲ್ಲಿ ಕನ್ನಡದ ʼದಿಯಾʼ ಸಿನಿಮಾದ ನಟ ದೀಕ್ಷಿತ್ ಶೆಟ್ಟಿ ಕೂಡ ನಟಿಸಿದ್ದಾರೆ. ಮಾರ್ಚ್​ 15ರಂದು ಈ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದರು ನಾನಿ. ಈ ವೇಳೆ ನಾನಿ ಅವರು ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಟ್ರೈಲರ್‌ ಮೂಲಕ ನಾನಿ ‘ದಸರಾ’ ದರ್ಬಾರ್ ಶುರುವಾಗಿದೆ. ನ್ಯಾಚುರಲ್ ಸ್ಟಾರ್ ರಗಡ್ ಲುಕ್, ಹಾವ ಭಾವ ಎಲ್ಲವೂ ಗಮನ ಸೆಳೆದಿದ್ದು, ನಾನಿ ಅಭಿಮಾನಿಗಳು ಕೂಡ ಸಿನಿಮಾ ಮೇಲೆ ಅಪಾರ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ತೆಲಂಗಾಣದ ಗೋದಾವರಿಖಾನಿ ಸುತ್ತಮುತ್ತಲಿನ ವೀರ್ಲಪಲ್ಲಿ ಗ್ರಾಮ ಹಾಗೂ ಸಿಂಗರೇಣಿ ಕಲ್ಲಿದ್ದಲಿನ ಪ್ರಪಂಚವನ್ನು ತೆರೆ ಮೇಲೆ ತರುತ್ತಿದೆ ದಸರಾ ಸಿನಿಮಾ.

ಇದನ್ನೂ ಓದಿ: Actor Nani: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಸರಾ’ ಟ್ರೈಲರ್‌ ಔಟ್‌: ಲುಕ್‌ ಕಂಡು ʻಪುಷ್ಪರಾಜ್‌ʼ ಅಂದ್ರು ನೆಟ್ಟಿಗರು!

ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್‌ನಡಿ ಸುಧಾಕರ್ ಚೆರುಕುರಿ ಬಿಗ್ ಬಜೆಟಟ್‌ನಲ್ಲಿ ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಒಡೆಲಾ ಚೊಚ್ಚಲ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬಂದಿದ್ದು, ಖ್ಯಾತ ನಟಿ ಕೀರ್ತಿ ಸುರೇಶ್ ನಾನಿ ಜೋಡಿಯಾಗಿ ಸ್ಕ್ರೀನ್ ಶೇರ್ ಮಾಡಿದ್ದಾರೆ.

ಬಹು ದೊಡ್ಡ ತಾರಾಗಣ ಒಳಗೊಂಡ ಈ ಚಿತ್ರದಲ್ಲಿ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ಸ್ಟಾರ್ ಕಲಾವಿದರ ತಾರಾಬಳಗವಿದೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣದಲ್ಲಿ ‘ದಸರಾ’ ಸಿನಿಮಾ ಮೂಡಿ ಬಂದಿದೆ.

Exit mobile version