Nani reveals poster of film with Mrunal Thakur Actor Nani: ಮೃಣಾಲ್ ಠಾಕೂರ್ ಜತೆ ತೆರೆ ಹಂಚಿಕೊಳ್ಳುತ್ತಿರುವ ಸಿನಿಮಾ ಡೇಟ್‌, ಪೋಸ್ಟರ್‌ ರಿವೀಲ್‌ ಮಾಡಿದ ನಾನಿ! - Vistara News

South Cinema

Actor Nani: ಮೃಣಾಲ್ ಠಾಕೂರ್ ಜತೆ ತೆರೆ ಹಂಚಿಕೊಳ್ಳುತ್ತಿರುವ ಸಿನಿಮಾ ಡೇಟ್‌, ಪೋಸ್ಟರ್‌ ರಿವೀಲ್‌ ಮಾಡಿದ ನಾನಿ!

`ನಾನಿ 30′ (Actor Nani) ಸಿನಿಮಾದಲ್ಲಿ ನಾನಿ ಜತೆ ಮೃಣಾಲ್ ಠಾಕೂರ್ ತೆರೆ ಹಂಚಿಕೊಳ್ಳುತ್ತಿದ್ದಾರೆ. ಶೌರ್ಯುವ್ ನಿರ್ದೇಶಿಸಲಿರುವ ಈ ಚಿತ್ರದ ಬಿಡುಗಡೆ ದಿನಾಂಕ ಮತ್ತು ಮೊದಲ ಪೋಸ್ಟರ್‌ ನಾನಿ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Nani reveals poster of film with Mrunal Thakur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ನ್ಯಾಚುರಲ್‌ ಸ್ಟಾರ್‌ ನಾನಿ (Actor Nani) ಸದ್ಯ ದಸರಾ ಸಿನಿಮಾದ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಅವರ ಮುಂಬರುವ `ನಾನಿ 30′ ಸಿನಿಮಾ ಬಗ್ಗೆ ಅವರ ಅಭಿಮಾನಿಗಳು ಕುತೂಹಲದಲ್ಲಿದ್ದರು. ಇದೀಗ ನಟ ಸಿಹಿ ಸುದ್ದಿಯನ್ನು ನೀಡಿದ್ದಾರೆ. `ನಾನಿ 30′ ಸಿನಿಮಾದಲ್ಲಿ ನಾನಿ ಜತೆ ಮೃಣಾಲ್ ಠಾಕೂರ್ ತೆರೆ ಹಂಚಿಕೊಳ್ಳುತ್ತಿದ್ದಾರೆ. ಶೌರ್ಯುವ್ ನಿರ್ದೇಶಿಸಲಿರುವ ಈ ಚಿತ್ರದ ಬಿಡುಗಡೆ ದಿನಾಂಕ ಮತ್ತು ಮೊದಲ ಪೋಸ್ಟರ್‌ ನಾನಿ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

ಈ ಸಿನಿಮಾ ಭಾವನಾತ್ಮಕ ಕೌಟುಂಬಿಕವಾಗಿ ಮೂಡಿಬರಲಿದೆ ಎನ್ನಲಾಗಿದೆ. ಇದೇ ಡಿಸೆಂಬರ್ 21ರಂದು ಹೆಸರಿಡದ ನಾನಿ 30 ಸಿನಿಮಾ ಥಿಯೇಟರ್‌ಗಳಿಗೆ ಬರಲು ಸಿದ್ಧವಾಗಿದೆ. ಸಿನಿಮಾದ ಮೋದಲ ಪೋಸ್ಟರ್‌ ಕೂಡ ನಾನಿ ಹಂಚಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ನಾನಿ ಮಗುವನ್ನು ತಬ್ಬಿಕೊಳ್ಳುತ್ತಿರುವುದು ಕಾಣಬಹುದು. ಪುಟ್ಟ ಹುಡುಗಿಯ ಮುಖದಲ್ಲಿ ಆತಂಕದ ಭಾವವಿದೆ.

ನಾನಿ 30 ಮೊದಲ ಪೋಸ್ಟರ್‌

ಈ ಚಿತ್ರಕ್ಕೆ ಸಾನು ಜಾನ್ ವರುಗೀಸ್ ಛಾಯಾಗ್ರಹಣ, ಮಲಯಾಳಂನ ಜನಪ್ರಿಯ ಸಂಗೀತ ಸಂಯೋಜಕ ಹೇಶಮ್ ಅಬ್ದುಲ್ ವಹಾಬ್ ಸೇರಿದ್ದಾರೆ. ಪ್ರವೀಣ್ ಅಂತೋನಿ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದಿ: Actor Nani: ʻದಸರಾʼ ಸಿನಿಮಾದಲ್ಲಿ ನಾನಿ ನಟನೆಗೆ ಭೇಷ್‌ ಎಂದ ಪ್ರೇಕ್ಷಕರು: ಟ್ವೀಟ್‌ನಲ್ಲಿ ಸಂತಸ ಹೊರ ಹಾಕಿದ ಸಿನಿಪ್ರಿಯರು!

ತೆರೆ ಕಂಡ 6 ದಿನಗಳಲ್ಲೇ 100 ಕೋಟಿ ಬಾಚಿದ ‘ದಸರಾ’

ನಾನಿಯ ಮೊದಲ ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ‘ದಸರಾ’ಗೆ ಯುವ ಪ್ರತಿಭೆ ಶ್ರೀಕಾಂತ್ ಒಡೆಲಾ ಆಕ್ಷನ್ ಕಟ್ ಹೇಳಿದ್ದಾರೆ. 6 ದಿನಗಳಿಗೆ ಈ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್‌ ಸೇರಿದೆ. ಶ್ರೀರಾಮ ನವಮಿ ಪ್ರಯುಕ್ತ ವಿಶ್ವಾದ್ಯಂತ ತೆರೆಕಂಡ ‘ದಸರಾ’ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ನಾಯಕಿಯಾಗಿ ನಟಿಸಿದ್ದಾರೆ. ವಿಶ್ವಾದ್ಯಂತ ಅದ್ಭುತ ಪ್ರದರ್ಶನ ಕಾಣುತ್ತಿರುವ ದಸರಾ ಚಿತ್ರವನ್ನು ಎಸ್ ಎಸ್ ರಾಜಮೌಳಿ, ಮಹೇಶ್ ಬಾಬು ಹಾಗೂ ಪ್ರಭಾಸ್ ಕೂಡಾ ಮೆಚ್ಚಿಕೊಂಡಿದ್ದಾರೆ. ಚಿತ್ರದಲ್ಲಿ ಕನ್ನಡಿಗ ದೀಕ್ಷಿತ್‌ ಶೆಟ್ಟಿ ಕೂಡಾ ನಟಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ರಿಷಬ್ ಶೆಟ್ಟಿ ಸಿನಿಮಾದ ತೆಲುಗು ವರ್ಷನ್ ರೆಡಿ: ಟಾಲಿವುಡ್‌ನಲ್ಲಿ ಬಿಡುಗಡೆಗೆ ದಿನಾಂಕ ನಿಗದಿ! ಯಾವುದು ಆ ಸಿನಿಮಾ?

VISTARANEWS.COM


on

‘ಕಾಂತಾರ’ ಸಿನಿಮಾದ ಭರ್ಜರಿ ಯಶಸ್ಸಿನ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಿಷಬ್ ಶೆಟ್ಟಿ ಅವರ ಮತ್ತೊಂದು ಸಿನಿಮಾ ಈಗ ಸದ್ದಿಲ್ಲದೆ ತೆಲುಗಿನಲ್ಲಿ ಬಿಡುಗಡೆಗೆ ಸಜ್ಜಾಗಿದೆ. 2022ರಲ್ಲಿ ಕನ್ನಡದಲ್ಲಿ ತೆರೆಕಂಡಿದ್ದ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವು ಈಗ ತೆಲುಗಿಗೆ ಡಬ್ ಆಗಿದ್ದು, ‘ಎ ಫಿಲ್ಮ್ ಬೈ ಗಿರಿ’ (A Film By Giri) ಎಂಬ ಹೆಸರಿನಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಬಿಡುಗಡೆಯಾಗುತ್ತಿದೆ. ಮೇ 8ರಂದು ಈ ಸಿನಿಮಾ ತೆಲುಗು ರಾಜ್ಯಗಳಲ್ಲಿ ತೆರೆಗೆ ಬರಲಿದೆ.

‘ಕಾಂತಾರ’ ಬಿಡುಗಡೆಗೂ ಮುನ್ನವೇ ಸಿದ್ಧವಾಗಿದ್ದ ಈ ಚಿತ್ರವು ಕನ್ನಡದಲ್ಲಿ ಸಾಧಾರಣ ಯಶಸ್ಸು ಕಂಡಿತ್ತು. ಆದರೆ ಈಗ ರಿಷಬ್ ಶೆಟ್ಟಿ ಅವರಿಗೆ ದಕ್ಷಿಣ ಭಾರತದಾದ್ಯಂತ ದೊಡ್ಡ ಅಭಿಮಾನಿ ಬಳಗ ಇರುವುದರಿಂದ, ಅವರ ಹಳೆಯ ಸಿನಿಮಾವನ್ನು ತೆಲುಗಿಗೆ ತರಲು ವಿತರಕರು ಆಸಕ್ತಿ ತೋರಿಸಿದ್ದಾರೆ. ವಿಶೇಷವಾಗಿ ರಿಷಬ್ ಶೆಟ್ಟಿ ಅವರು ಮುಂದಿನ ದಿನಗಳಲ್ಲಿ ‘ಜೈ ಹನುಮಾನ್’ ನಂತಹ ದೊಡ್ಡ ತೆಲುಗು ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿರುವುದರಿಂದ, ಟಾಲಿವುಡ್ ಮಾರುಕಟ್ಟೆಯಲ್ಲಿ ಅವರಿಗೆ ಈಗ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಇದನ್ನೇ ಬಂಡವಾಳವಾಗಿಸಿಕೊಂಡು ಎಂಜಿ ಮೂವೀಸ್ ಸಂಸ್ಥೆಯು ಈ ಚಿತ್ರವನ್ನು ಡಬ್ ಮಾಡಿ ಬಿಡುಗಡೆ ಮಾಡುತ್ತಿದೆ.

ಕರಣ್ ಆನಂದ್ ಮತ್ತು ಅನಿರುದ್ಧ ಮಹೇಶ್ ನಿರ್ದೇಶನದ ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರ ಜೊತೆಗೆ ತಪಸ್ವಿನಿ ಪೂಣಚ್ಚ ಹಾಗೂ ರಚನಾ ಇಂದರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಮತ್ತು ರಿಷಬ್ ಶೆಟ್ಟಿ ಫಿಲ್ಮ್ಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದವು. ಹರಿಹರಪುರ ಎಂಬ ಊರಿನಲ್ಲಿ ಸಿನಿಮಾ ಮಾಡುವ ಕನಸು ಹೊತ್ತ ಯುವಕರ ಕಥೆ ಹೊಂದಿರುವ ಈ ಚಿತ್ರವು ಹಾಸ್ಯ ಮತ್ತು ಭಾವನಾತ್ಮಕ ಸನ್ನಿವೇಶಗಳಿಂದ ಕೂಡಿದೆ. ಕನ್ನಡದಲ್ಲಿ ಈಗಾಗಲೇ ಓಟಿಟಿಯಲ್ಲಿ ಲಭ್ಯವಿದ್ದರೂ, ತೆಲುಗು ಪ್ರೇಕ್ಷಕರು ಬೆಳ್ಳಿತೆರೆಯ ಮೇಲೆ ರಿಷಬ್ ಶೆಟ್ಟಿ ಅವರ ನಟನೆಯನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.

Continue Reading

Latest

‘ಕೆಡಿ’ ಹಾಡಿನ ವಿವಾದಕ್ಕೆ ತೆರೆ: ಕ್ಷಮೆಯಾಚಿಸಿ 50 ಬುಡಕಟ್ಟು ಹುಡುಗಿಯರ ಶಿಕ್ಷಣದ ಜವಾಬ್ದಾರಿ ಹೊತ್ತ ಸಂಜಯ್ ದತ್!

VISTARANEWS.COM


on

ಧ್ರುವ ಸರ್ಜಾ ನಟನೆಯ ‘ಕೆಡಿ-ದಿ ಡೆವಿಲ್’ ಸಿನಿಮಾದ “ಸರ್ಸೆ ಸೆರಗ ಸರ್ಸೆ” ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಂಜಯ್ ದತ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾಗಿ ಕ್ಷಮೆಯಾಚಿಸಿದ್ದಾರೆ. ಈ ಹಾಡಿನ ಸಾಹಿತ್ಯ ಮತ್ತು ನೃತ್ಯ ಸಂಯೋಜನೆಯು ಮಹಿಳೆಯರನ್ನು ಅಶ್ಲೀಲವಾಗಿ ಬಿಂಬಿಸಿದೆ ಎಂಬ ಆರೋಪದ ಮೇಲೆ ಆಯೋಗವು ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ವಿಚಾರಣೆ ವೇಳೆ ಸಂಜಯ್ ದತ್ ಅವರು, ಈ ಹಾಡಿನ ಸಾಹಿತ್ಯ ರಚನೆಯಲ್ಲಾಗಲಿ ಅಥವಾ ಅದರ ಅನುವಾದದಲ್ಲಾಗಲಿ ನನ್ನ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸುತ್ತಲೇ, ಈ ಘಟನೆಯಿಂದ ಯಾರಿಗಾದರೂ ನೋವಾಗಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.

ಕೇವಲ ಕ್ಷಮೆಯಾಚನೆಗೆ ಸೀಮಿತವಾಗದ ಸಂಜಯ್ ದತ್, ಬುಡಕಟ್ಟು ಸಮುದಾಯದ ಹೆಣ್ಣುಮಕ್ಕಳ ಏಳಿಗೆಗಾಗಿ ಒಂದು ಮಹತ್ವದ ಭರವಸೆ ನೀಡಿದ್ದಾರೆ. ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಮಹಾರಾಷ್ಟ್ರದ ನಾಗ್ಪುರ ಭಾಗದ ಬುಡಕಟ್ಟು ಸಮುದಾಯದ 50 ಹೆಣ್ಣುಮಕ್ಕಳ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಅವರು ಆಯೋಗಕ್ಕೆ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ತಾವು ನಟಿಸುವ ಯಾವುದೇ ದೃಶ್ಯ ಅಥವಾ ಹಾಡುಗಳಲ್ಲಿ ಮಹಿಳೆಯರಿಗೆ, ಮಕ್ಕಳಿಗೆ ಅಥವಾ ಯಾವುದೇ ಸಮುದಾಯಕ್ಕೆ ಅಗೌರವ ಆಗದಂತೆ ಎಚ್ಚರಿಕೆ ವಹಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

ವಿವಾದಕ್ಕೀಡಾಗಿದ್ದ ಈ ಹಾಡನ್ನು ಈಗಾಗಲೇ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ನಿಷೇಧಿಸಿದ್ದು, ಚಿತ್ರತಂಡವು ಯೂಟ್ಯೂಬ್‌ನಿಂದ ಇದನ್ನು ತೆಗೆದುಹಾಕಿದೆ. ಪ್ರೇಮ್ ನಿರ್ದೇಶನದ ಈ ಬಹುನಿರೀಕ್ಷಿತ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ತೆರೆಕಾಣಲು ಸಜ್ಜಾಗಿದೆ. ಸಂಜಯ್ ದತ್ ಅವರ ಈ ಮಾನವೀಯ ನಡೆಯಿಂದ ಸದ್ಯ ವಿವಾದ ತಣ್ಣಗಾದಂತಿದೆ. ಅವರ ಈ ಶೈಕ್ಷಣಿಕ ನೆರವಿನ ನಿರ್ಧಾರವು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

Latest

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

VISTARANEWS.COM


on

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ. ಅಟ್ಲಿ ಅವರ ಪತ್ನಿ ಪ್ರಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಅಟ್ಲಿ ಹಾಗೂ ಅವರ ಪತ್ನಿ ಪ್ರಿಯಾ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ಈ ದಂಪತಿ ಎರಡನೇ ಬಾರಿಗೆ ಪೋಷಕರಾಗಿದ್ದು, ಮುದ್ದಾದ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ವಿಶೇಷವೆಂದರೆ, ಅಟ್ಲಿ ನಿರ್ದೇಶನದ ‘ರಾಕಾ’ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಅವರು ತಮ್ಮ ಎರಡನೇ ಪ್ರೆಗ್ನೆನ್ಸಿ ಸುದ್ದಿಯನ್ನು ಹಂಚಿಕೊಂಡ ಮರುದಿನವೇ ಅಟ್ಲೀ ಕೂಡ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಪ್ರಿಯಾ ಅಟ್ಲಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಇಂದು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಟ್ಲಿ ಮತ್ತು ಪ್ರಿಯಾ, ತಮ್ಮ ಮನೆಗೆ ಹೆಣ್ಣು ಮಗುವಿನ ಆಗಮನವಾಗಿರುವುದನ್ನು ಖಚಿತಪಡಿಸಿದ್ದಾರೆ. ಈ ಪೋಸ್ಟ್‌ ಗೆ ‘ಧನ್ಯತೆಯ ಭಾವ ಮೂಡಿದೆ’ ಎಂದು ಕ್ಯಾಪ್ಷನ್ ನೀಡಿದ್ದಾರೆ. ತಮ್ಮ ಮೊದಲ ಪುತ್ರ ಮೀರ್ ಈಗ ದೊಡ್ಡ ಅಣ್ಣನ ಜವಾಬ್ದಾರಿ ವಹಿಸಿಕೊಳ್ಳಲು ಸಜ್ಜಾಗಿರುವ ಮುದ್ದಾದ ಪೋಸ್ಟರ್ ಒಂದನ್ನೂ ಹಂಚಿಕೊಂಡಿರುವುದು ಕುತೂಹಲ ಮೂಡಿಸಿದೆ.
ಅಟ್ಲಿ ಅವರ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಇಡೀ ದೇಶದ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಅಟ್ಲಿ ಮತ್ತು ಪ್ರಿಯಾ ಹಲವು ವರ್ಷಗಳ ಕಾಲ ಪ್ರೀತಿಸಿ 2014ರಲ್ಲಿ ವಿವಾಹವಾಗಿದ್ದರು. ಮದುವೆಯಾದ ಎಂಟು ವರ್ಷಗಳ ನಂತರ 2023ರ ಜನವರಿ 31ರಂದು ದಂಪತಿಗೆ ಮೊದಲ ಪುತ್ರ ಮೀರ್ ಜನಿಸಿದ್ದ. ಈಗ ಎರಡನೇ ಮಗುವಿನ ಆಗಮನವಾಗಿದೆ.
ಚಿತ್ರರಂಗದಲ್ಲಿಯೂ ಅಟ್ಲಿ ಅವರಿಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಈಗ ಅವರು ‘ರಾಕಾ’ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಮತ್ತು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ.

Continue Reading

Latest

ಗ್ಯಾಂಗ್‌ಸ್ಟರ್ ಸಿನಿಮಾ ಎಂಬ ಭ್ರಮೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಯಶ್; ‘ಟಾಕ್ಸಿಕ್’ ಹಿಂದಿದೆ ಬೇರೆಯದೇ ಪ್ಲ್ಯಾನ್‌!

VISTARANEWS.COM


on

ಸ್ಯಾಂಡಲ್‌ವುಡ್‌ನಿಂದ ಜಾಗತಿಕ ಮಟ್ಟಕ್ಕೆ ಬೆಳೆದಿರುವ ರಾಕಿಂಗ್ ಸ್ಟಾರ್ ಯಶ್, ತಮ್ಮ ಮುಂದಿನ ಸಿನಿಮಾ ‘ಟಾಕ್ಸಿಕ್’ ಬಗ್ಗೆ ಅಭಿಮಾನಿಗಳಲ್ಲಿ ಇದ್ದ ಕುತೂಹಲಕ್ಕೆ ಹೊಸ ಟ್ವಿಸ್ಟ್ ನೀಡಿದ್ದಾರೆ. ಇತ್ತೀಚೆಗೆ ಅಮೆರಿಕದ ಲಾಸ್ ವೇಗಾಸ್‌ನಲ್ಲಿ ನಡೆದ ‘ಸಿನಿಮಾಕಾನ್ 2026’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್, ಈ ಸಿನಿಮಾ ಕೇವಲ ರಕ್ತಪಾತದ ಗ್ಯಾಂಗ್‌ಸ್ಟರ್ ಕಥೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೇಲ್ನೋಟಕ್ಕೆ ಇದು ಆಕ್ಷನ್ ಸಿನಿಮಾದಂತೆ ಕಂಡರೂ, ಕಥೆಯ ಒಳಗೆ ಮಾನವನ ಮನಸ್ಥಿತಿಯ ಆಳವಾದ ಪದರಗಳಿವೆ ಮತ್ತು ಇದು ಪ್ರತಿಯೊಬ್ಬರಿಗೂ ಹತ್ತಿರವಾಗುವಂತಹ ಭಾವನಾತ್ಮಕ ಕಥೆಯನ್ನು ಹೊಂದಿದೆ ಎಂದು ಅವರು ಅಚ್ಚರಿಯ ಮಾಹಿತಿ ಹಂಚಿಕೊಂಡಿದ್ದಾರೆ.

ವಿಶೇಷವೆಂದರೆ, ‘ಟಾಕ್ಸಿಕ್’ ಕೇವಲ ಭಾರತೀಯ ಭಾಷೆಗಳಿಗೆ ಸೀಮಿತವಾಗಿಲ್ಲ. ಈ ಚಿತ್ರವನ್ನು ಕನ್ನಡದ ಜೊತೆಗೆ ನೇರವಾಗಿ ಇಂಗ್ಲಿಷ್ ಭಾಷೆಯಲ್ಲೂ ಚಿತ್ರೀಕರಿಸಲಾಗಿದ್ದು, ಅಂತರರಾಷ್ಟ್ರೀಯ ಪ್ರೇಕ್ಷಕರನ್ನು ಸೆಳೆಯುವ ಗುರಿ ಹೊಂದಿದೆ. ಜಾಗತಿಕ ಮಟ್ಟದ ತಂತ್ರಜ್ಞರು ಈ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದು, ದೃಶ್ಯ ವೈಭವದ ಜೊತೆಗೆ ಪ್ರೇಕ್ಷಕರನ್ನು ಆಳವಾಗಿ ಯೋಚಿಸುವಂತೆ ಮಾಡುವ ವಿಭಿನ್ನ ಶೈಲಿಯ ಸಿನಿಮಾ ಇದಾಗಲಿದೆ ಎಂಬ ಭರವಸೆಯನ್ನು ಯಶ್ ನೀಡಿದ್ದಾರೆ. ಈ ಸುದ್ದಿಯು ಯಶ್ ಅವರ ಅಭಿಮಾನಿಗಳಲ್ಲಿ ಸಿನಿಮಾದ ಮೇಲಿರುವ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಚಿತ್ರದ ಬಿಡುಗಡೆ ವಿಚಾರಕ್ಕೆ ಬರುವುದಾದರೆ, ಈ ಹಿಂದೆ ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಸಿನಿಮಾ ವಿಳಂಬವಾಗಬಹುದು ಎಂಬ ವದಂತಿಗಳಿದ್ದವು. ಆದರೆ, ಸದ್ಯಕ್ಕೆ ಲಭ್ಯವಿರುವ ಮಾಹಿತಿಯ ಪ್ರಕಾರ ಎಲ್ಲ ಅಡೆತಡೆಗಳನ್ನು ದಾಟಿ ಸಿನಿಮಾ ಜೂನ್ 4, 2026 ರಂದು ಅದ್ಧೂರಿಯಾಗಿ ವಿಶ್ವದಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಕಿಯಾರಾ ಅಡ್ವಾಣಿ, ನಯನತಾರಾ ಅವರಂತಹ ಘಟಾನುಘಟಿ ಕಲಾವಿದರ ದಂಡೇ ಈ ಸಿನಿಮಾದಲ್ಲಿದ್ದು, ಜೂನ್ ತಿಂಗಳಿನಲ್ಲಿ ‘ಟಾಕ್ಸಿಕ್’ ಹವಾ ಶುರುವಾಗುವುದು ಗ್ಯಾರಂಟಿ ಎನ್ನಲಾಗುತ್ತಿದೆ.

Continue Reading
Advertisement
Latest5 hours ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest6 hours ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest6 hours ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest8 hours ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest8 hours ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest10 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest10 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest11 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest1 day ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest1 day ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌