ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ? - Vistara News

ಸಿನಿಮಾ

ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಚಂದ್ರಕಾಂತ್‌ ಕೂಡ ನಟರಾಗಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ನಿಶ್ಚಯಿಸಿದ್ದರು. ಆದರೆ, ಒಂದೇ ವಾರದಲ್ಲಿ ಇಬ್ಬರೂ ದುರಂತ ಸಾವು ಕಂಡಿದ್ದಾರೆ.

VISTARANEWS.COM


on

Pavithra Jayaram
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್:‌ ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani Serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ (Pavithra Jayaram)‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ಅವರ ಪ್ರಿಯತಮ, ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಂಧ್ರಪ್ರದೇಶದಲ್ಲಿ (Andhra Pradesh) ಚಂದ್ರಕಾಂತ್‌ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪವಿತ್ರ ಜಯರಾಮ್‌ ಅವರ ನಿಧನದ ಬಳಿಕ ಖಿನ್ನತೆಗೊಳಗಾಗಿದ್ದ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶದ ರಂಗಾರೆಡ್ಡಿ ಜಿಲ್ಲೆ ನರಸಿಂಗ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಅಲ್ಕಾಪುರ ಕಾಲೊನಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ಪವಿತ್ರಾ ಜಯರಾಮ್‌ ಅವರು ಕಾರು ಅಪಘಾತದಲ್ಲಿ ಮೇ 12ರಂದು ಮೃತಪಟ್ಟಿದ್ದರು. ಅದೇ ಕಾರಿನಲ್ಲಿ ಚಂದ್ರಕಾಂತ್‌ ಅವರು ಕೂಡ ತೆರಳುತ್ತಿದ್ದಾರೆ. ಘಟನೆಯ ಬಳಿಕ ನೊಂದಿದ್ದ ಅವರು ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ನಟಿಯ ಅಗಲಿಕೆಯ ನೋವು ತಾಳದೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಆಂಧ್ರಪ್ರದೇಶದ ಕರ್ನೂಲು ಬಳಿ ಮೇ 12ರಂದು ಬೆಳಗ್ಗೆ ಅಪಘಾತ ಸಂಭವಿಸಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಚಂದ್ರಕಾಂತ್‌ ಕೂಡ ನಟರಾಗಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ನಿಶ್ಚಯಿಸಿದ್ದರು. ಆದರೆ, ಒಂದೇ ವಾರದಲ್ಲಿ ಇಬ್ಬರೂ ದುರಂತ ಸಾವು ಕಂಡಿದ್ದಾರೆ.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼಎಂದಿದ್ದರು.

ಇದನ್ನೂ ಓದಿ: Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

ಬ್ಯಾಕ್ ಟು ಬ್ಯಾಕ್ ಫ್ಲಾಪ್ ಗಳಿಂದ ಭಾರಿ ನಷ್ಟ ಅನುಭವಿಸಿದ್ದರಿಂದ 250 ಕೋಟಿ ರೂ. ಸಾಲವನ್ನು ಮರು ಪಾವತಿಸಲು ಬಾಲಿವುಡ್ ನ ಖ್ಯಾತ ಚಿತ್ರ ನಿರ್ಮಾಪಕ ವಶು ಭಗ್ನಾನಿ (Vashu Bhagnani) ಅವರು ತಮ್ಮ ಪೂಜಾ ಎಂಟರ್‌ಟೈನ್‌ಮೆಂಟ್‌ನ ಏಳು ಮಹಡಿಗಳ ಕಚೇರಿಯನ್ನು ಮಾರಾಟ ಮಾಡಿದ್ದಾರೆ.

VISTARANEWS.COM


on

By

Vashu Bhagnani
Koo

ಬಾಲಿವುಡ್ ನ (Bollywood) ಖ್ಯಾತ ಚಿತ್ರ ನಿರ್ಮಾಪಕ (Producer) ವಶು ಭಗ್ನಾನಿ (Vashu Bhagnani) ಅವರು ತಮ್ಮ 250 ಕೋಟಿ ಸಾಲವನ್ನು ಪಾವತಿಸಲು ಪೂಜಾ ಎಂಟರ್‌ಟೈನ್‌ಮೆಂಟ್‌ನ (Pooja Entertainment) ಏಳು ಮಹಡಿಗಳ ಕಚೇರಿಯನ್ನು ಮಾರಾಟ ಮಾಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಫ್ಲಾಪ್ ಗಳಿಂದ ಪೂಜಾ ಎಂಟರ್‌ಟೈನ್‌ಮೆಂಟ್‌ ಭಾರೀ ನಷ್ಟ ಅನುಭವಿದೆ.

ವಶು ಭಗ್ನಾನಿ ಮಾರಾಟದಿಂದ ಪಡೆದ ಹಣದಿಂದ ಸಾಲವನ್ನು ತೀರಿಸುತ್ತಿದ್ದಾರೆ ಮತ್ತು ಪ್ರೊಡಕ್ಷನ್ ಹೌಸ್ ಶೇ. 80ರಷ್ಟು ಸಿಬ್ಬಂದಿಯನ್ನು ವಜಾಗೊಳಿಸಿದೆ ಎನ್ನಲಾಗಿದೆ.

2021ರಲ್ಲಿ ಕೋವಿಡ್ ಸಾಂಕ್ರಾಮಿಕದ ಬಳಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಮೊದಲ ಹಿಂದಿ ಚಲನಚಿತ್ರ ಬೆಲ್ ಬಾಟಮ್. ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಸೋತಿತು ಮತ್ತು ಮುಂದಿನ ಚಿತ್ರ ಮಿಷನ್ ರಾಣಿಗಂಜ್, ದೊಡ್ಡ ಬಜೆಟ್ ನ ಗಣಪತ್ ಪ್ರದರ್ಶನ ನೀಡಲು ವಿಫಲವಾದಾಗ ಕಂಪನಿಗೆ ಭಾರೀ ಹಿನ್ನಡೆಯಾಯಿತು. ಸ್ವಾಧೀನ ಒಪ್ಪಂದದ ಹೊರತಾಗಿಯೂ ನೆಟ್‌ಫ್ಲಿಕ್ಸ್‌ನಿಂದ ತಿರಸ್ಕರಿಸಲ್ಪಟ್ಟಿತು.

ಈ ಹೊತ್ತಿಗೆ ಕಂಪನಿಯ ನಷ್ಟವನ್ನು ಅನುಭವಿಸುತ್ತಿತ್ತು. ಬಡೇ ಮಿಯಾನ್ ಚೋಟೆ ಮಿಯಾನ್‌ನಲ್ಲಿನ ಅಗಾಧ ಹೂಡಿಕೆ ಮಾಡಿ ಸಂಪೂರ್ಣ ಕೈಸುಟ್ಟುಕೊಂಡಿತ್ತು.

Vashu Bhagnani


ಇಷ್ಟೊಂದು ನಷ್ಟದಲ್ಲಿದ್ದರೂ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅಭಿನಯದ ಆಕ್ಷನ್ ಚಿತ್ರಕ್ಕೆ ಹಣ ಪಾವತಿಸುವುದಾಗಿ ಭರವಸೆಯನ್ನು ನೀಡಿದೆ. ಅಲಿ ಅಬ್ಬಾಸ್ ಜಾಫರ್ ನಿರ್ದೇಶನದ ಈ ಚಿತ್ರದ ಐತಿಹಾಸಿಕ ವೈಫಲ್ಯವು ಕಂಪನಿಯನ್ನು ಬಹುತೇಕ ದುರ್ಬಲಗೊಳಿಸಿತು. ಅಪಾರ ಸಾಲವನ್ನು ತೀರಿಸಲು ಕಟ್ಟಡವನ್ನು ಮಾರಾಟ ಮಾಡದೆ ವಶುಗೆ ಬೇರೆ ದಾರಿ ಇರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: Nisha Ravikrishnan:ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ʻಗಟ್ಟಿಮೇಳ’ ನಟಿ!

ಆರ್ಥಿಕ ಪರಿಸ್ಥಿತಿಯ ಹೊರತಾಗಿಯೂ ವಶು ಮತ್ತು ಅವರ ಮಗ ಜಾಕಿ ಭಗ್ನಾನಿ ಅವರು ತಮ್ಮ ಕಾರ್ಯಗಳನ್ನು ಮುಂದುವರಿಸುವುದಾಗಿ ಹೇಳಿದ್ದಾರೆ ಮತ್ತು ಅವರು ಮತ್ತೆ ಪುಟಿದೇಳಲು ಸಹಾಯ ಮಾಡುವ ಯೋಜನೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ಪ್ರೊಡಕ್ಷನ್ ಹೌಸ್‌ನ ಸಿಬ್ಬಂದಿಯೊಬ್ಬರು ಪೂಜಾ ಎಂಟರ್‌ಟೈನ್‌ಮೆಂಟ್‌ಗೆ ಪಾವತಿ ಮಾಡಿಲ್ಲ ಎಂದು ಆರೋಪಿಸಿದ ಒಂದು ದಿನದ ಅನಂತರ ಈ ಮಾಹಿತಿ ಹೊರಬಿದ್ದಿದೆ.

Continue Reading

ಬಾಲಿವುಡ್

Sonakshi Sinha: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್;‌ Photos ಇಲ್ಲಿವೆ

Sonakshi Sinha: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್‌ ಇಕ್ಬಾಲ್‌ ಅವರು ಭಾನುವಾರ (ಜೂನ್‌ 23) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಇಬ್ಬರೂ ಮದುವೆಯಾಗಿದ್ದು, ಶೀಘ್ರದಲ್ಲೇ ಮುಂಬೈನಲ್ಲಿ ಅದ್ಧೂರಿ ರಿಸೆಪ್ಶನ್‌ ಏರ್ಪಾಡು ಮಾಡಲಿದ್ದಾರೆ. ಬಾಲಿವುಡ್‌ ನಟ-ನಟಿಯರು ರಿಸೆಪ್ಶನ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Sonakshi Sinha
Koo

ಮುಂಬೈ: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ತಮ್ಮ ದೀರ್ಘಕಾಲದ ಗೆಳೆಯ ಜಹೀರ್‌ ಇಕ್ಬಾಲ್‌ (Zaheer Iqbal) ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಎರಡೂ ಕುಟುಂಬಗಳ ಆಪ್ತರು, ಗೆಳೆಯರ ಸಮ್ಮುಖದಲ್ಲಿ ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್‌ ಇಕ್ಬಾಲ್‌ ಅವರು ಮದುವೆಯಾಗಿದ್ದು, ಮದುವೆಯ ಫೋಟೊಗಳನ್ನು ಸೋನಾಕ್ಷಿ ಸಿನ್ಹಾ ಅವರೇ ಹಂಚಿಕೊಂಡಿದ್ದಾರೆ. ಸೋನಾಕ್ಷಿ ಸಿನ್ಹಾ ಮದುವೆಯ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ.

ಸೋನಾಕ್ಷಿ ಸಿನ್ಹಾ ಅವರು ಫೋಟೊಗಳನ್ನು ಹಂಚಿಕೊಂಡಿರುವ ಜತೆಗೆ ಭಾವನಾತ್ಮಕವಾಗಿ ಪೋಸ್ಟ್‌ ಮಾಡಿದ್ದಾರೆ. “ಏಳು ವರ್ಷದ ಹಿಂದಿನ ಇದೇ ದಿನ ಅಂದರೆ, 2017ರ ಜೂನ್‌ 23ರಂದು ನಮ್ಮಿಬ್ಬರ ಕಣ್ಣುಗಳು ಮೊದಲ ಬಾರಿ ಸಂಧಿಸಿದವು. ಆ ಕಣ್ಣುಗಳ ನೋಟದಲ್ಲಿಯೇ ನಾವು ನಿಜವಾದ ಪ್ರೇಮವನ್ನು ಕಂಡೆವು ಹಾಗೂ ಆ ಪ್ರೀತಿ ತುಂಬಿದ ನೋಟವನ್ನು ಜೀವನಪೂರ್ತಿ ಸವಿಯಲು ನಿರ್ಧರಿಸಿದೆವು. ಸವಾಲುಗಳನ್ನು ಎದುರಿಸಿ, ದೇವರು ಹಾಗೂ ಕುಟುಂಬಸ್ಥರ ಆಶೀರ್ವಾದದೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದೇವೆ. ಮುಂದಿನ ದಿನಗಳಲ್ಲೂ ಪ್ರೀತಿಯು ನಮ್ಮ ಜೀವನವನ್ನು ಇನ್ನಷ್ಟು ಸುಂದರಗೊಳಿಸುತ್ತದೆ ಎಂಬ ನಂಬಿಕೆ ಇದೆ” ಎಂಬುದಾಗಿ ಅವರು ಬರೆದುಕೊಂಡಿದ್ದಾರೆ.

ಶುಭ ಕೋರಲು ಆಗದೆ ಅಭಿಮಾನಿಗಳಿಗೆ ನಿರಾಸೆ

ಕ್ರೀಮ್‌ ಬಣ್ಣದ ಸೀರೆಯಲ್ಲಿ ಸೋನಾಕ್ಷಿ ಸಿನ್ಹಾ ಹಾಗೂ ಕುರ್ತಾದಲ್ಲಿ ಜಹೀರ್‌ ಇಕ್ಬಾಲ್‌ ಮಿಂಚಿದ್ದಾರೆ. ಸೋನಾಕ್ಷಿ ಅವರು ಜಹೀರ್‌ ಇಕ್ಬಾಲ್‌ ಅವರನ್ನು ತಬ್ಬಿಕೊಂಡರೆ, ಸೋನಾಕ್ಷಿ ಕೈಗೆ ಜಹೀರ್‌ ಸಿಹಿ ಮುತ್ತು ಕೊಟ್ಟಿದ್ದಾರೆ. ಆದರೆ, ಸೋನಾಕ್ಷಿ ಸಿನ್ಹಾ ಅವರು ಇನ್‌ಸ್ಟಾಗ್ರಾಂನಲ್ಲಿ ಫೋಟೊಗಳನ್ನು ಹಂಚಿಕೊಂಡು, ಪೋಸ್ಟ್‌ಗೆ ಕಮೆಂಟ್‌ಗಳನ್ನು ಬ್ಲಾಕ್‌ ಮಾಡಿದ ಕಾರಣ ಅಭಿಮಾನಿಗಳಿಗೆ ಶುಭಾಶಯ ತಿಳಿಸಲು ಆಗಿಲ್ಲ. ಇದರಿಂದಾಗಿ ಅಭಿಮಾನಿಗಳಿಗೆ ತುಸು ನಿರಾಸೆಯಾಗಿದೆ ಎಂದು ತಿಳಿದುಬಂದಿದೆ.

ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್‌ ಇಕ್ಬಾಲ್‌ ಅವರು ಹಿಂದು ಅಥವಾ ಇಸ್ಲಾಂ ಸಂಪ್ರದಾಯದಂತೆ ಮದುವೆಯಾಗದೆ, ಜಹೀರ್‌ ಅವರ ತಂದೆ ಇಕ್ಬಾಲ್‌ ರತಾನ್ಸಿ ಅವರು ಇದಕ್ಕೂ ಮೊದಲು ಹೇಳಿದಂತೆ ‘ನಾಗರಿಕʼ ಸಂಪ್ರದಾಯದಂತೆ ಅಂದರೆ, ಸಾಮಾನ್ಯವಾಗಿ ಮದುವೆಯಾಗಿದ್ದಾರೆ. ಇಬ್ಬರೂ ತಮ್ಮ ವಿವಾಹವನ್ನು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನು, ಆರಂಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ಸೋನಾಕ್ಷಿ ಸಿನ್ಹಾ ಅವರ ತಂದೆ ಶತ್ರುಘ್ನ ಸಿನ್ಹಾ ಅವರು ಮುನಿಸು ಮರೆತು, ನವದಂಪತಿಗೆ ಆಶೀರ್ವಾದ ಮಾಡಿದ್ದಾರೆ.

ಕಳೆದ ಎರಡು ವಾರದ ಹಿಂದಷ್ಟೇ ಸೋನಾಕ್ಷಿ ಅವರು ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರನ್ನು ವರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಬಳಿಕ ಇದನ್ನು ಮದುವೆಯ ಆಮಂತ್ರಣವು ದೃಢಪಡಿಸಿತ್ತು. ಸೋನಾಕ್ಷಿ ಏಳು ವರ್ಷಗಳಿಂದ ಜಹೀರ್ ಜತೆ ಡೇಟಿಂಗ್ ನಡೆಸುತ್ತಿದ್ದಾರೆ. ಮದುವೆಯ ವದಂತಿಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಶತ್ರುಘ್ನ ಅವರು ಮದುವೆಯ ಬಗ್ಗೆ ತಿಳಿದಿರಲಿಲ್ಲ ಎಂದು ಒಪ್ಪಿಕೊಂಡಿದ್ದರು. ಆದರೆ, ಅವರು ಮುನಿಸು ಮರೆತು ಮದುವೆಗೆ ಹಾಜರಾಗಿ, ಆಶೀರ್ವಾದ ಮಾಡಿದ್ದಾರೆ.

ಇದನ್ನೂ ಓದಿ: Venkatesh Iyer Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್​

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್ ಹಾಗೂ ನನ್ನ ಮಧ್ಯೆ ಮನಸ್ತಾಪ ತಂದಿದ್ದೇ ನಟಿ ನಿಖಿತಾ ಎಂದ ಓಂ ಪ್ರಕಾಶ್!

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ 12 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ನಟ ದರ್ಶನ್ (Actor Darshan) ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರಿಂದ (Actor Darshan), ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಿದ್ದಾರೆ. ಪರಪ್ಪನ ಅಗ್ರಹಾರ (Actor Darshan) ಜೈಲಿನ ಬಳಿ ಬಿಗಿ ಬಂಧೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ದರ್ಶನ್​ಗೆ ಈಗಾಗಲೇ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ಸಹ ನೀಡಲಾಗಿದೆ.

VISTARANEWS.COM


on

Actor Darshan case om prakash reaction
Koo

ಬೆಂಗಳೂರು: ನಟ ದರ್ಶನ್‌ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ನ್ಯಾಯಾಂಗ ಬಂಧನಲ್ಲಿ ಇರುವುದು ಗೊತ್ತೇ ಇದೆ. ದರ್ಶನ್ (Darshan) ಜೊತೆ ಹಲವಾರು ಹಿಟ್ ಸಿನಿಮಾಗಳನ್ನು ಕೊಟ್ಟ ನಟ, ನಿರ್ದೇಶಕ, ನಿರ್ಮಾಪಕ ಓಂ ಪ್ರಕಾಶ್ ರಾವ್ (Om Prakash Rao) ಅವರು 10 ವರ್ಷಗಳಿಂದ ದರ್ಶನ್ ಅವರನ್ನು ಮಾತನಾಡಿಸಿಲ್ಲ. ಓಂ ಪ್ರಕಾಶ್ ರಾವ್ ಅವರು 10 ವರ್ಷಗಳಿಂದ ದರ್ಶನ್ ಜತೆ ಏಕೆ ಅಂತರ ಇಟ್ಟರು? ಹಾಗೇ ದರ್ಶನ್‌ ಕೊಲೆ ಕೇಸ್‌ ಬಗ್ಗೆ ಹಲವಾರು ವಿಚಾರಗಳನ್ನು ಮಾಧ್ಯಮವೊಂದಕ್ಕೆ ಹೇಳಿಕೊಂಡಿದ್ದಾರೆ.

ಓಂ ಪ್ರಕಾಶ್‌ ಮಾತನಾಡಿ ʻʻದರ್ಶನ್‌ ಅವರಿಗೆ ಇದು ಬೇಕಾಗಿರಲಿಲ್ಲ. ಅವರಿಗಿರುವ ಫಾಲೋವರ್ಸ್‌ಗಳು, ಫೇಮ್‌, ಪಬ್ಲಿಸಿಟಿ ಎಲ್ಲ ಅಪಾರವಾಗಿತ್ತು. ಇದೀಗ ಸಣ್ಣ ವಿಷಯಕ್ಕೆ ಆರೋಪ ಸ್ಥಾನದಲ್ಲಿ ಇದ್ದಾರೆ ಎಂದಾಗ ಬೇಜಾರಾಯ್ತು. ಆರೋಪಿ ಸ್ಥಾನದಲ್ಲಿ ಇದ್ದಾರೆ ಎಂದರೆ ತುಂಬ ದುಃಖವಾಗಿದೆ. ಸಿನಿಮಾದಲ್ಲಿ ಜಗಳ ಎಂದು ಬಂದಾಗ, ಸಿನಿಮಾಗೋಸ್ಕರ ಅಷ್ಟೇ. ಆದರೆ ವೈಯಕ್ತಿಕವಾಗಿ ತೆಗೋಬಾರದು. ನನಗೆ ತುಂಬ ಗೌರವ ಕೊಟ್ಟ ನಟ ಎಂದರೆ ದರ್ಶನ್‌ʼʼಎಂದರು.

ಹೇಳಿದ್ದನ್ನ ತಿರುಚಿ ನನ್ನ, ದರ್ಶನ್ ಮಧ್ಯೆ ನಿಖಿತಾ ಮನಸ್ತಾಪ ತಂದ್ರು!

ʻʻಮುಂಚೆ ದರ್ಶನ್‌ ಹಾಗೂ ನನ್ನ ಸ್ನೇಹ ಚೆನ್ನಾಗಿಯೇ ಇತ್ತು. ನಮಗೆ ಒಂದು ಜ್ಞಾನ ಇರುತ್ತೆ. ಸಡನ್‌ ಆಗಿ ಯಾರೋ ಹೇಳಿದ್ದು ಕೇಳೋದು ತಪ್ಪು. ಆದರೆ ದರ್ಶನ್‌ ಯಾರೋ ಹೇಳಿದ್ದನ್ನು ಬೇಗ ಕೇಳುತ್ತಿದ್ದ. ನನ್ನ ದರ್ಶನ್‌ ಮಧ್ಯೆ ಮನಸ್ತಾಪ ತಂದಿಟ್ಟಿದ್ದು ನಿಖಿತಾ ಎಂಬ ಕಲಾವಿದೆ. ಯಾವುದೋ ಒಂದು ವಿಷಯವನ್ನು ತಿರುಚಿ ಹೇಳಿದ್ದಾರೋ ಗೊತ್ತಿಲ್ಲ. ಎಲ್ಲರೂ ಅವರ ಅವರ ಸೇಫ್ಟಿ ನೋಡ್ಕೋತ್ತಾರೆ ಅನ್ಸತ್ತೆ. ಹಾಗೇ ನನ್ನ ದರ್ಶನ್‌ ಜತೆ ವೈಮನಸ್ಸು ಆಯ್ತು. ಆ ಬಗ್ಗೆ ತುಂಬ ಸಲ ಬೇಜಾರು ಮಾಡಿಕೊಂಡಿದ್ದು ಇದೆʼʼಎಂದರು.

ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

ʻʻದರ್ಶನ್‌ ಅವರಿಗೆ ತುಂಬ ಫ್ಯಾನ್ಸ್‌ ಇದ್ದಾರೆ. ಕೆಲವರು ದರ್ಶನ್‌ ಬಗ್ಗೆ ಮಾತಾಡುತ್ತಿಲ್ಲ. ನೀವು ಮೈಕ್‌ ಹಿಡಿತ್ತಿದ್ದೀರಾ ಅಷ್ಟೇ ಗನ್‌ ಏನೂ ತೋರಿಸಿಲ್ಲ. ಆದರೆ ಮಾತನಾಡಬೇಕು. ಆದರೆ ಯಾವುದೇ ಕಲಾವಿದರು ಮಾತನಾಡುತ್ತಿಲ್ಲ. ಕೆಲವರು ದರ್ಶನ್‌ ಜತೆ ಪ್ರೀತಿಯಲ್ಲಿ ಇದ್ದಾಗ ಹೇಗಿತ್ತು ಒಡನಾಟ ಎಂಬುದು ಮಾತನಾಡಿ. ಇದರಲ್ಲಿ ತಪ್ಪೇನಿಲ್ಲ. ಒಂದು ವಿಷಯ ಏನೆಂದರೆ, ಬ್ಯಾನ್‌ ಎನ್ನುವ ವರ್ಡ್‌ ಬಂತು. ಬ್ಯಾನ್‌ ಏಕೆ ಮಾಡಬೇಕು? ಆಗಿನ ಕಾಲಕ್ಕೆ ನಿಖಿತಾ ಅವರನ್ನೂ ಬ್ಯಾನ್‌ ಮಾಡಬೇಕು ಎಂಬ ಮಾತುಗಳು ಬಂದಿದ್ದವು. ಯಾರು ರೂಲ್ಸ್‌ ಮಾಡಿಲ್ಲ. ಮಾತುಕತೆ ಬಂದಿತ್ತು ಅಷ್ಟೇʼʼಎಂದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ 12 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ನಟ ದರ್ಶನ್ (Actor Darshan) ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರಿಂದ (Actor Darshan), ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಿದ್ದಾರೆ. ಪರಪ್ಪನ ಅಗ್ರಹಾರ (Actor Darshan) ಜೈಲಿನ ಬಳಿ ಬಿಗಿ ಬಂಧೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ದರ್ಶನ್​ಗೆ ಈಗಾಗಲೇ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ಸಹ ನೀಡಲಾಗಿದೆ.ದರ್ಶನ್​ಗೆ ವಿಚಾರಣಾಧೀನ ಕೈದಿ ಸಂಖ್ಯೆ 6106 ನ್ನು ನೀಡಲಾಗಿದೆ. ಇನ್ನು ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಧನರಾಜ್​ಗೆ 6107, ವಿನಯ್​ಗೆ 6108, ಪ್ರದೂಶ್​ಗೆ 6109 ಸಂಖ್ಯೆಗಳನ್ನು ನೀಡಲಾಗಿದೆ.

Continue Reading

ಸ್ಯಾಂಡಲ್ ವುಡ್

Actor Darshan: ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ!

Actor Darshan: ಇದೀಗ ರೇಣುಕಾಸ್ವಾಮಿ ಫೇಕ್ ಅಕೌಂಟ್‌ಗಳ ಮೂಲಕ ಸಾಕಷ್ಟು ಜನರಿಗೆ ಇದೇ ರೀತಿ ಕೆಟ್ಟ ಮೆಸೇಜ್ ಕಳುಹಿಸುತ್ತಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ. ಇದೀಗ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ ಕೂಡ ತಮಗೂ ಈ ಅಕೌಂಟ್‌ನಿಂದ ಕೆಟ್ಟ ಮೆಸೇಜ್ ಬಂದಿತ್ತು ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವಿಡಿಯೊ ಶೇರ್‌ ಮಾಡಿ, ಅಕೌಂಟ್‌ ಫೋಟೊವನ್ನು ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

VISTARANEWS.COM


on

Chitral Rangaswamy bad message by Renuka Swamy
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ವಿಚಾರಕ್ಕೆ (Actor Darshan) ಸಂಬಂಧಪಟ್ಟಂತೆ ದರ್ಶನ್‌ 14 ದಿನ ನ್ಯಾಯಾಂಗ ಬಂಧನದಲ್ಲಿದ್ದಾರೆ. ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್ ಮಾಡಿದ್ದು ತಪ್ಪು ಎಂಬುದು ಕೆಲವರ ವಾದ. ಇದೀಗ ರೇಣುಕಾಸ್ವಾಮಿ ಫೇಕ್ ಅಕೌಂಟ್‌ಗಳ ಮೂಲಕ ಸಾಕಷ್ಟು ಜನರಿಗೆ ಇದೇ ರೀತಿ ಕೆಟ್ಟ ಮೆಸೇಜ್ ಕಳುಹಿಸುತ್ತಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ. ಇದೀಗ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ (Chitral Rangaswamy) ಕೂಡ ತಮಗೂ ಈ ಅಕೌಂಟ್‌ನಿಂದ ಕೆಟ್ಟ ಮೆಸೇಜ್ ಬಂದಿತ್ತು ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವಿಡಿಯೊ ಶೇರ್‌ ಮಾಡಿ, ಅಕೌಂಟ್‌ ಫೋಟೊವನ್ನು ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

‌ʻʻಎಲ್ಲರಿಗೂ ನಮಸ್ಕಾರ, ಪಸ್ತುತ ಏನು ನಡೆಯುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಈ ಕೊಲೆ ವಿಚಾರವಾಗಿ ಎಲ್ಲರಿಗೂ ಡಿಸ್ಟರ್ಬ್‌ ಕೂಡ ಆಗಿದೆ. ಇಲ್ಲಿ ಯಾರಿಗೂ ನಾನು ಸಪೋರ್ಟ್‌ ಮಾಡಲು ಬಂದಿಲ್ಲ. ದೇವರು ರೇಣುಕಾ ಸ್ವಾಮಿ ಕುಟುಂಬಕ್ಕೆ ಶಕ್ತಿ ಕೊಡಲಿ. ಆದರೆ ರೇಣುಕಾ ಸ್ವಾಮಿ ಅವರು ಈ ತರ ಹಲವರಿಗೆ ಮೆಸೆಜ್ ಕಳುಹಿಸಿದ್ದರು. ಈ ಬಗ್ಗೆ ಮಾರ್ಚ್‌ನಲ್ಲಿ ಪೊಲೀಸ್‌ ಸ್ಟೇಷನ್‌ನಲ್ಲಿ ಕಂಪ್ಲೇಟ್‌ ಕೂಡ ಆಗಿದೆ. ಅವರ ಅಕೌಂಟ್‌ ಈ ರೀತಿ ಗೌತಮ್‌ ಅನ್ನುವ ಹೆಸರಲ್ಲಿ ಇತ್ತು. ಈ ಅಕೌಂಟ್ ಇಂದ ಅದೇ ರೀತಿಯ ಕೆಟ್ಟ ಮೆಸೇಜ್‌ಗಳನ್ನು ಇನ್ನು ಸಾಕಷ್ಟು ಜನರಿಗೆ ಕಳುಹಿಸಿದ್ದರಂತೆ. ನನಗೆ ಅಚ್ಚರಿ ಆಯಿತು. ನಾನು ಅದರ ಸ್ಕ್ರೀನ್‌ ಶಾಟ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡರೆ ತಪ್ಪಾಗುತ್ತದೆ. ಹಾಗಾಗಿ ಹಾಕಲಿಲ್ಲ. ನನಗೆ ಆ ರೀತಿ ಮರ್ಮಾಂಗದ ಚಿತ್ರ ಆಗಲಿ, ಬೆತ್ತಲೆ ಫೋಟೊ ಆಗಲಿ ಅಥವಾ ಹಸ್ತ ಮೈಥುನ ವೀಡಿಯೋ ಆಗಲಿ ಬಂದರೆ ನಾನು ಕೂಡಲೇ ಆ ಅಕೌಂಟ್ ಬ್ಲಾಕ್ ಮಾಡ್ತೀನಿ. ನನ್ನ ಇನ್‌ಸ್ಟಾಗ್ರಾಮ್ ಬ್ಲಾಕ್ ಲಿಸ್ಟ್ ಅಲ್ಲಿ ನೋಡಿದಾಗ ಈ ಅಕೌಂಟ್ ಇದೆ. ಇಷ್ಟು ದಿನ ನಾನು ಸುಮ್ಮನಿದ್ದೆ. ಆದರೆ ಇದನ್ನು ನೋಡಿದ ಮೇಲೆ ಹೇಳಬೇಕು ಎಂದು ಮುಂದೆ ಬಂದೆ. ಭಯ ಅನ್ನಿಸಿತು. ಬೇಸರ ಆಗುತ್ತದೆ. ಅಂತಹ ಸುಂದರ ಹೆಂಡತಿ ಇರುವಾಗ ಈ ರೀತಿ ಸರೀನಾ? ಛೀ ಎನಿಸುತ್ತದೆ. ನನಗೆ ಪ್ರತಿದಿನ ಇಂತಹ ಸಾಕಷ್ಟು ಕೆಟ್ಟ ಮೆಸೇಜ್, ಟ್ರೋಲ್ ಎದುರಾಗುತ್ತಿರುತ್ತದೆ” ಎಂದು ಚಿತ್ರಾಲ್ ವಿವರಿಸಿದ್ದಾರೆ.

ಇದನ್ನೂ ಓದಿ: Actor Darshan: ದರ್ಶನ್ ಇರುವ ಕೊಠಡಿ ಹೇಗಿದೆ? ಸಾಮಾನ್ಯರಿಗಿಲ್ಲಿ ಪ್ರವೇಶವಿಲ್ಲ!

ಬಿಗ್‌ಬಾಸ್ ಕನ್ನಡ ಸೀಸನ್ -10 ಮುಗಿದು ಬಹಳ ದಿನಗಳಾಯ್ತು.ವೇದಿಕೆಯಲ್ಲಿ ಲೈವ್ ಲೈವ್ ಆಡಿಯೆನ್ಸ್ ಬೆಂಬಲದ ಎಲ್ಲರನ್ನು ಮನೆಯೊಳಗೆ ಕಳುಹಿಸಲಾಗಿತ್ತು. ಆದರೆ ಈ ಪ್ರಕ್ರಿಯೆಯಲ್ಲಿ ನಟಿ ಹಾಗೂ ಬಾಡಿ ಬಿಲ್ಡರ್ ಚಿತ್ರಾಲ್ ರಂಗಸ್ವಾಮಿ ಸೋತು ಹೊರಬಂದಿದ್ದರು. ಚಿತ್ರಲ್‌ ರಂಗಸ್ವಾಮಿ ಕಿರುತೆರೆ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸಿನಿಮಾಗಳಲ್ಲೂ ನಟಿಸಿದ್ದಾರೆ. ಜೊತೆಗೆ ಬಾಡಿ ಬಿಲ್ಡರ್‌ ಆಗಿಯೂ ಗುರುತಿಸಿಕೊಂಡಿದ್ದಾರೆ. 2017ರಿಂದ ಬಾಡಿ ಬಿಲ್ಡಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

Continue Reading
Advertisement
Surrogacy Leaves
ಪ್ರಮುಖ ಸುದ್ದಿ47 mins ago

Surrogacy Leaves: ಬಾಡಿಗೆ ತಾಯ್ತನದ ನಿಯಮ ಬದಲಿಸಿದ ಕೇಂದ್ರ; ಇನ್ನು ಸಿಗಲಿದೆ 6 ತಿಂಗಳು ರಜೆ!

T20 world Cup 2024
ಕ್ರೀಡೆ1 hour ago

T20 World Cup 2024 : ಇಂಗ್ಲೆಂಡ್ ವಿರುದ್ಧ ಯುಎಸ್​​ಎ ತಂಡಕ್ಕೆ 10 ವಿಕೆಟ್​ ಹೀನಾಯ ಸೋಲು

SBI
ದೇಶ2 hours ago

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

IND vs SA
ಪ್ರಮುಖ ಸುದ್ದಿ2 hours ago

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

T20 world cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

Rahul Gandhi
ದೇಶ3 hours ago

Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

Babar Azam
ಪ್ರಮುಖ ಸುದ್ದಿ3 hours ago

Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

Abbi Falls
ಕರ್ನಾಟಕ4 hours ago

Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Shakib Al Hasan
ಪ್ರಮುಖ ಸುದ್ದಿ4 hours ago

Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

Vashu Bhagnani
ಸಿನಿಮಾ4 hours ago

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು7 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌