ಸ್ಯಾಂಡಲ್‌ವುಡ್ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. 47 ವರ್ಷ ವಯಸ್ಸಿನ ದಿಲೀಪ್ ರಾಜ್ ಅವರನ್ನು ಬೆಳಗಿನ ಜಾವ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ದಿಲೀಪ್ ರಾಜ್ ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿದ್ದರು.
‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ಲವ್ ಮಾಕ್‌ಟೇಲ್-3 ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಮೂಲಕ ಮನೆಮಾತಾಗಿದ್ದರು. ನಿರ್ಮಾಪಕರಾಗಿಯೂ ಅವರು ಹಲವು ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದರು.
ಸ್ಯಾಂಡಲ್‌ವುಡ್‌ನ ನಟರು, ನಿರ್ದೇಶಕರು,ನಿರ್ಮಾಪಕರು ಸೇರಿದಂತೆ ಚಿತ್ರರಂಗ ಗಣ್ಯರು ದಿಲೀಪ್ ರಾಜ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದಿಲೀಪ್ ರಾಜ್ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.

