Actor Rishi: ರಿಷಿ ಮುಡಿಗೇರಿದ ಒಟಿಟಿ ಅವಾರ್ಡ್! - Vistara News

South Cinema

Actor Rishi: ರಿಷಿ ಮುಡಿಗೇರಿದ ಒಟಿಟಿ ಅವಾರ್ಡ್!

Actor Rishi: ಶೈತನ್ ವೆಬ್ ಸೀರೀಸ್ ಮೂಲಕ ಒಟಿಟಿ ಪ್ರಪಂಚಕ್ಕೂ ಪರಿಚಿತರಾಗಿದ್ದ ರಿಷಿ ಇದೇ ಸೀರಿಸ್‌ಗಾಗಿ ಅತ್ಯುತ್ತಮ ಖಳನಾಯಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

VISTARANEWS.COM


on

Actor Rishi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ರಿಷಿ (Actor Rishi) ಅವರು ಅಪರೇಷನ್ ಅಲಮೇಲಮ್ಮ, ಕವಲುದಾರಿ, ನೋಡಿ ಸ್ವಾಮಿ ನಾವು ಇರೋದು ಹೀಗೆ ಪ್ರತಿ ಸಿನಿಮಾದಲ್ಲೊಂದು ಹೊಸ ಬಗೆಯ ಪಾತ್ರದ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿಕೊಂಡು ಬರುತ್ತಿದ್ದಾರೆ. ಶೈತನ್ ವೆಬ್ ಸೀರೀಸ್ ಮೂಲಕ ಒಟಿಟಿ ಪ್ರಪಂಚಕ್ಕೂ ಪರಿಚಿತರಾಗಿದ್ದ ರಿಷಿ ಇದೇ ಸೀರಿಸ್‌ಗಾಗಿ ಅತ್ಯುತ್ತಮ ಖಳನಾಯಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕಿರುತೆರೆ ಹಾಗೂ ಸಿನಿಮಾ ರಂಗಕ್ಕೆ ಪ್ರಶಸ್ತಿಗಳಿರುವಂತೆ ಒಟಿಟಿ ವೇದಿಕೆಗೂ ಪ್ರಶಸ್ತಿ ಇದೆ. ಪ್ರತಿ ವರ್ಷ ಬಹಳ ಅದ್ಧೂರಿಯಾಗಿ ನಡೆಯುವ ಈ ಅವಾರ್ಡ್ ಕಾರ್ಯಕ್ರಮ ಮುಂಬೈನಲ್ಲಿ ನೆರವೇರಿದೆ. ಇದೇ ವೇದಿಕೆಯಲ್ಲಿ ಬಾಲಿವುಡ್, ಕಾಲಿವುಡ್, ಮಾಲಿವುಡ್ ಹಾಗೂ ಸ್ಯಾಂಡಲ್ ವುಡ್ ಕಲಾವಿದರ ಸಮ್ಮುಖದಲ್ಲಿ ರಿಷಿ ಗಾಗಿ ಅತ್ಯುತ್ತಮ ಖಳನಾಯಕ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

ಈ ವರ್ಷ ಬಹಳಷ್ಟು ವೆಬ್ ಸೀರಿಸ್‌ಗಳು ಬಿಡುಗಡೆಯಾಗಿವೆ. ಆ ಎಲ್ಲಾ ವೆಬ್ ಸೀರಿಸ್ ಹಿಂದಿಕ್ಕಿ ಸೈತನ್ ಜೂರಿಗಳ ಮನಗೆದ್ದಿದೆ. ರಿಷಿ ಅಭಿನಯವೂ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ನೆಗೆಟಿವ್ ರೋಲ್‌ನಲ್ಲಿ ಅಬ್ಬರಿಸಿದ ತಾರೆ ರಿಷಿ ಅವರಿಗೆ 2023 ಒಟಿಟಿ ಅತ್ಯುತ್ತಮ ಖಳನಾಯಕ ಪ್ರಶಸ್ತಿ ಸಂದಿದೆ.

ತೆಲುಗಿನಲ್ಲಿ ಬ್ಯುಸಿಯಾದ ರಿಷಿ

ಶೈತನ್ ವೆಬ್ ಸೀರಿಸ್ ಮೂಲಕ ತೆಲುಗು ಪ್ರೇಕ್ಷಕರಿಗೆ ರಿಷಿ ಹತ್ತಿರವಾಗಿದ್ದಾರೆ. ಅವರ ಸಹಜ ನಟನೆ ಗಮನಸೆಳೆದಿದ್ದು, ಹೊಸ ಹೊಸ ಅವಕಾಶಗಳು ಅವರನ್ನು ಅರಸಿ ಬರುತ್ತಿವೆ. ಅದರ ಮುಂದುವರೆದ ಭಾಗ ಎನ್ನುವಂತೆ ತೆಲುಗಿನಲ್ಲಿ ಹೊಸ ಚಿತ್ರವೊಂದರಲ್ಲಿ ರಿಷಿ ನಟಿಸುತ್ತಿದ್ದಾರೆ. ಹೈದ್ರಾಬಾದ್‌ನಲ್ಲಿ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ನೈಜ ಘಟನೆಯ ಪ್ರೇರೆಪಿತ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಿಷಿ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಒಂದೊಳ್ಳೆ ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಗೋಪಿ ವಿಹಾನಿ ಎಂಬುವವರು ಆಕ್ಷನ್ ಕಟ್ ಹೇಳ್ತಿದ್ದು, ಇದು ಇವರ ಚೊಚ್ಚಲ ಹೆಜ್ಜೆ.

ಇದನ್ನೂ ಓದಿ: Actor Rishi: ವೆಬ್ ಸಿರೀಸ್‌ ಪ್ರಪಂಚಕ್ಕೆ ʻಕವಲುದಾರಿʼ ಖ್ಯಾತಿಯ ರಿಷಿ ಎಂಟ್ರಿ! ಸ್ಟ್ರೀಮಿಂಗ್‌ ಯಾವಾಗ?

ತೆಲುಗಿನಲ್ಲಿ ಒಂದಿಷ್ಟು ವರ್ಷಗಳ ಕಾಲ ಮಾರ್ಕೆಟಿಂಗ್ ಹಾಗೂ ಪಿಆರ್ ಆಗಿ ಕೆಲಸ ಮಾಡಿರುವ ಅನುಭವಿರುವ ರವಿ ಪನಸ ತಮ್ಮದೇ ರವಿ ಪಸನ ಫಿಲ್ಮಂ ಕಾರ್ಪೊರೇಷನ್‌ನಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ತಿರುವೀರ್, ಫರಿಯಾ ಅಬ್ದುಲ್ಲಾ, ರವೀಂದರ್ ವಿಜಯ್, ಶೆಲ್ಲಿ ಕಿಶೋರ್, ಕಾಲಕೇಯ ಪ್ರಭಾಕರ್, ಚಿರಾಗ್ ಜಾನಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹೊಸ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ರಿಷಿ ರಾಮನ ಅವತಾರ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ.

‘ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದು, ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ವಿಕಾಸ್ ಪಂಪಾಪತಿ ‘ರಾಮನ ಅವತಾರ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ.

ಸ್ಟಾರ್ ಫ್ಯಾಬ್ ಪ್ರೊಡಕ್ಷನ್‌ನಡಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

Rashmika Mandanna: ವಿಜಯ್‌ ದೇವರಕೊಂಡ ಹೆಸರು ಕೇಳುತ್ತಲೇ ನಾಚಿ ನೀರಾದ ರಶ್ಮಿಕಾ; ಸದ್ಯದಲ್ಲೇ ಗುಡ್‌ನ್ಯೂಸ್‌?

Rashmika Mandanna: ಟಾಲಿವುಡ್‌ನ ಕ್ಯೂಟ್‌ ಜೋಡಿ ಎಂದೇ ಕರೆಯಲ್ಪಡುವ ವಿಜಯ್‌ ದೇವರಕೊಂಡ ಮತ್ತು ಕನ್ನಡತಿ ರಶ್ಮಿಕಾ ಮಂದಣ್ಣ ಡೇಟಿಂಗ್‌ ನಡೆಸುತ್ತಿದ್ದಾರಾ? ಇವರಿಬ್ಬರು ಈ ಬಗ್ಗೆ ಬಾಯಿ ಬಿಡದಿದ್ದರೂ ಹೌದು ಎನ್ನುವುದಕ್ಕೆ ಅನೇಕ ಕಾರಣ ಸಿಗುತ್ತವೆ. ಸದ್ಯ ವಿಜಯ್‌ ದೇವರಕೊಂಡ ಅವರ ಸಹೋದರ, ʼಬೇಬಿʼ ಖ್ಯಾತಿನ ನಟ ಆನಂದ್‌ ದೇವರಕೊಂಡ ಇದೇ ರೀತಿಯ ಪ್ರಶ್ನೆ ಕೇಳಿದ್ದು, ರಶ್ಮಿಕಾ ನಾಚಿ ನೀರಾಗಿದ್ದಾರೆ. ಇಲ್ಲಿದೆ ಆ ವಿಡಿಯೊ.

VISTARANEWS.COM


on

Rashmika Mandanna
Koo

ಹೈದರಾಬಾದ್‌: ಕನ್ನಡತಿ, ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಟಾಲಿವುಡ್‌ ಸ್ಟಾರ್‌ ವಿಜಯ್‌ ದೇವರಕೊಂಡ (Vijay Deverakonda) ಮಧ್ಯೆ ಒಂದೊಳ್ಳೆ ಬಾಂಧವ್ಯವಿದೆ. ಇಬ್ಬರು ಪರಸ್ಪರ ಡೇಟಿಂಗ್‌ ಮಾಡುತ್ತಿರುವ ವಿಚಾರವನ್ನು ಬಾಯಿ ಬಿಟ್ಟು ಹೇಳಿಕೊಳ್ಳದಿದ್ದರೂ ಆಗಾಗ ಜತೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು, ವಿಜಯ್‌ ಮನೆಗೆ ರಶ್ಮಿಕಾ ಭೇಟಿ ನೀಡುತ್ತಿರುವುದು ಮುಂತಾದ ಕಾರಣಕ್ಕೆ ಇಬ್ಬರು ಸದ್ಯದಲ್ಲೇ ಮದುವೆಯಾಗುತ್ತಾರೆ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಗಾಸಿಪ್‌ ಕಾಲಂಗಳಲ್ಲಿಯೂ ಇಬ್ಬರು ಆಗಾಗ ಕಾಣಿಸಿಕೊಳ್ಳುತ್ತಾರೆ. ಇದೀಗ ಇದೇ ವಿಚಾರವಾಗಿ ವಿಜಯ್‌ ದೇವರಕೊಂಡ ಅವರ ಸಹೋದರ, ನಟ ಆನಂದ್‌ ದೇವರಕೊಂಡ (Anand Deverakonda) ಜತೆ ರಶ್ಮಿಕಾ ಮಾತನಾಡಿದ್ದು, ವಿಡಿಯೊ ವೈರಲ್‌ ಆಗಿದೆ.

ಸೋಮವಾರ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮವೊಂದರಲ್ಲಿ ಆನಂದ್‌ ದೇವರಕೊಂಡ ಮತ್ತು ರಶ್ಮಿಕಾ ಜತೆಯಾಗಿ ಭಾವಹಿಸಿದ್ದರು. ಆ ವೇಳೆ ರಶ್ಮಿಕಾ ಬಳಿ ಆನಂದ್‌ ಅನೇಕ ಪ್ರಶ್ನೆಗಳನ್ನು ಕೇಳಿದ್ದರು. ಈ ವೇಳೆ ನಿಮ್ಮ ನೆಚ್ಚಿನ ಸಹ ಕಲಾವಿದ ಯಾರು ಎಂದೂ ಪ್ರಶ್ನಿಸಿದ್ದರು. ಆನಂದ್‌ ಅವರು ವಿಜಯ್‌ ದೇವರಕೊಂಡ ಅವರನ್ನು ಉದ್ದೇಶಿಸಿಯೇ ಈ ಪ್ರಶ್ನೆ ಕೇಳಿದ್ದರು. ಇದನ್ನು ಅರಿತ ರಶ್ಮಿಕಾ ನಾಚಿ ನೀರಾಗಿದ್ದಾರೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಇಲ್ಲಿದೆ ಕ್ಯೂಟ್‌ ವಿಡಿಯೊ

ʼʼನಿಮ್ಮ ನೆಚ್ಚಿನ ಕೋಸ್ಟಾರ್‌ ಯಾರು?ʼʼ ಎಂದು ಆನಂದ್‌ ಕೇಳುತ್ತಿದ್ದಂತೆ ನೆರೆದಿದ್ದ ಜನರೆಲ್ಲ ವಿಜಯ್‌ ದೇವರಕೊಂಡ ಎಂದು ಕೋಗಲು ಆರಂಭಿಸಿದರು. “ಆನಂದ್, ನನ್ನನ್ನು ಯಾಕೆ ಇಕ್ಕಟ್ಟಿಗೆ ಸಿಲುಕಿಸುತ್ತಿದ್ದೀರಿ?” ಎಂದು ನಗುತ್ತಲೇ ರಶ್ಮಿಕಾ ಪ್ರಶ್ನಿಸಿದರು. ನಂತರ ಅವರು “ರೌಡಿ ಬಾಯ್” ಎಂದು ವಿಜಯ್ ಹೆಸರನ್ನು ಸುತ್ತುಬಳಸಿ ಹೇಳಿ ಅಭಿಮಾನಿಗಳಿಗೆ ಇನ್ನಷ್ಟು ಸುಳಿವು ನೀಡಿದರು. ಸದ್ಯ ವಿಜಯ್‌-ರಶ್ಮಿಕಾ ಅಭಿಮಾನಿಗಳು ಈ ಕುರಿತು ಚರ್ಚೆ ನಡೆಸಲು ಆರಂಭಿಸಿದ್ದಾರೆ. ಶೀಘ್ರದಲ್ಲಿಯೇ ಇವರು ತಮ್ಮ ಸಂಬಂಧವನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದೆಲ್ಲ ಮಾತನಾಡಲು ಆರಂಭಿಸಿದ್ದಾರೆ.

ಯಾಕಾಗಿ ಗಾಸಿಪ್‌?

ವಿಜಯ್‌ ಮತ್ತು ರಶ್ಮಿಕಾ ಜತೆಯಾಗಿ ಅಭಿನಯಿಸಿದ ತೆಲುಗು ಚಿತ್ರ ʼಗೀತಾ ಗೋವಿಂದಮ್‌ʼ 2018ರಲ್ಲಿ ತೆರೆಕಂಡಿತ್ತು. ಮೊದಲ ಬಾರಿ ಜತೆಯಾಗಿ ಅಭಿನಯಿಸಿದ್ದ ಈ ಕ್ಯೂಟ್‌ ಜೋಡಿಯನ್ನು ಪ್ರೇಕ್ಷಕರು ಬಹುವಾಗಿ ಮೆಚ್ಚಿಕೊಂಡಿದ್ದರು. ತೆರೆಮೇಲೆ ಇವರ ಕೆಮೆಷ್ಟ್ರಿ ಮ್ಯಾಜಿಕ್‌ ಮಾಡಿತ್ತು. ಅಂದಿನಿಂದ ಇವರು ಡೇಟಿಂಗ್‌ ನಡೆಸುತ್ತಿದ್ದಾರೆ ಎನ್ನುವ ಗಾಸಿಪ್‌ ಹಬ್ಬಿದೆ. ಬಳಿಕ 2019ರಲ್ಲಿ ಇವರಿಬ್ಬರು ಜತೆಯಾಗಿ ಕಾಣಿಸಿಕೊಂಡ ʼಡಿಯರ್‌ ಕಾಮ್ರೇಡ್‌ʼ ತೆಲುಗು ಸಿನಿಮಾ ರಿಲೀಸ್‌ ಆಗಿತ್ತು. ಇದು ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟೇನೂ ಸದ್ದು ಮಾಡದಿದ್ದರೂ ಈ ಜೋಡಿ ಮತ್ತೊಮ್ಮೆ ಗಮನ ಸೆಳೆದಿತ್ತು. ಆದರೆ ಇವರು ಸಾವರ್ಜನಿಕವಾಗಿ ತನ್ನ ಸಂಬಂಧವನ್ನು ಇದುವರೆಗೆ ಒಪ್ಪಿಕೊಂಡಿಲ್ಲ ಜತೆಗೆ ನಿರಾಕರಿಸಿಲ್ಲ.

ಇದನ್ನೂ ಓದಿ: Rashmika Mandanna: ನಟಿ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ

ಈ ವರ್ಷದ ಏಪ್ರಿಲ್‌ನಲ್ಲಿ ರಶ್ಮಿಕಾ ಹುಟ್ಟುಹಬ್ಬವನ್ನು ಇಬ್ಬರು ಅಬುದಾಬಿಯಲ್ಲಿ ಆಚರಿಸಿಕೊಂಡಿದ್ದರು. ಇವರು ಇದನ್ನು ಬಹಿರಂಗಪಡಿಸಿರಲಿಲ್ಲ. ಆದರೆ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊ ನೋಡಿದ ಅಭಿಮಾನಿಗಳು ಇಬ್ಬರು ಒಂದೇ ಸ್ಥಳದಲ್ಲಿ ಇದ್ದುದನ್ನು ಗುರುತಿಸಿದ್ದರು. ಸದ್ಯ ಇಬ್ಬರು ಬೇರೆ ಬೇರೆ ಪ್ರಾಜೆಕ್ಟ್‌ನಲ್ಲಿ ಬ್ಯುಸಿ ಇದ್ದಾರೆ. ರಶ್ಮಿಕಾ ದಕ್ಷಿಣ ಭಾರತದ ಸಿನಿಮಾಗಳ ಜತೆಗೆ ಬಾಲಿವುಡ್‌ನಲ್ಲಿಯೂ ಛಾಪು ಮೂಡಿಸಿದ್ದು, ಉತ್ತಮ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಸದ್ಯ ಒಪ್ಪಿಕೊಂಡ ಸಿನಿಮಾ ಮುಗಿಸಿ ಇಬ್ಬರು ಉಂಗುರ ಬದಲಾಯಿಸಿಕೊಳ್ಳಲಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

Continue Reading

ಕಾಲಿವುಡ್

Surya Prakash: ʻಮಾಯಿʼ ಸಿನಿಮಾ ಖ್ಯಾತಿಯ ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ ಇನ್ನಿಲ್ಲ

Surya Prakash: ‘ಮಾಯಿ’, ‘ಮಾಣಿಕ್ಕಂ’ ಮತ್ತು ‘ದಿವಾನ್’ ಚಿತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಸೂರ್ಯ ಪ್ರಕಾಶ್ (‘Maayi’ director) ಅವರ ಅಂತಿಮ ವಿಧಿವಿಧಾನಗಳ ಕುರಿತು ಕುಟುಂಬ ಮಾಹಿತಿ ಹಂಚಿಕೊಂಡಿಲ್ಲ.

VISTARANEWS.COM


on

Surya Prakash Maayi director dies
Koo

ಬೆಂಗಳೂರು: ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ (Surya Prakash) ಸೋಮವಾರ (ಮೇ 27) ಹೃದಯಾಘಾತದಿಂದ ನಿಧನರಾದರು. ‘ಮಾಯಿ’, ‘ಮಾಣಿಕ್ಕಂ’ ಮತ್ತು ‘ದಿವಾನ್’ ಚಿತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಸೂರ್ಯ ಪ್ರಕಾಶ್ (‘Maayi’ director) ಅವರ ಅಂತಿಮ ವಿಧಿವಿಧಾನಗಳ ಕುರಿತು ಕುಟುಂಬ ಮಾಹಿತಿ ಹಂಚಿಕೊಂಡಿಲ್ಲ.

ನಟ ಶರತ್‌ಕುಮಾರ್ ಮತ್ತು ರಾಧಿಕಾ ಶರತ್‌ಕುಮಾರ್ ತಮ್ಮ ಸಾಮಾಜಿಕ ಜಾಲತಾಣ ಮೂಲಕ ಸಂತಾಪ ಸೂಚಿಸಿದ್ದಾರೆ. “ಮಾಯಿ ಮತ್ತು ದಿವಾನ್ ಚಿತ್ರಗಳನ್ನು ನಿರ್ದೇಶಿಸಿದ ನನ್ನ ಆತ್ಮೀಯ ಸ್ನೇಹಿತ ಸೂರ್ಯ ಪ್ರಕಾಶ್ ಅವರ ನಿಧನದ ಸುದ್ದಿ ಕೇಳಿ ಆಘಾತ ಮತ್ತು ನೋವಾಯ್ತು. ನಿನ್ನೆಯಷ್ಟೇ ಅವರ ಜತೆ ಮಾತನಾಡಿದ್ದೆ. ಅವರ ಹಠಾತ್ ನಿಧನ ತುಂಬ ದುಃಖ ಉಂಟುಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆʼʼಎಂದು ನಟ ಶರತ್‌ಕುಮಾರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ರಾಧಿಕಾ ಶರತ್‌ಕುಮಾರ್ “ಅದ್ಭುತ ಮತ್ತು ಪ್ರತಿಭಾವಂತ ವ್ಯಕ್ತಿ, ಉತ್ತಮ ಬರಹಗಾರ, ಹಾಸ್ಯದ ಅಭಿರುಚಿಯುಳ್ಳ ನಿರ್ದೇಶಕ, ನಟ ಶರತ್‌ಕುಮಾರ್ ಅವರ ಆತ್ಮೀಯ ಸ್ನೇಹಿತ. ಅವರ ಕುಟುಂಬ ಮತ್ತು ಸಿನಿಮಾ ಉದ್ಯಮಕ್ಕೆ ದೊಡ್ಡ ನಷ್ಟʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

ಸೂರ್ಯ ಪ್ರಕಾಶ್ ಅವರು ರಾಜ್‌ಕಿರಣ್‌ ಅವರ ‘ಮಾಣಿಕ್ಕಂ’ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ನಂತರ ಅವರು ಶರತ್‌ಕುಮಾರ್ ಮತ್ತು ಮೀನಾಅವರಿಗೆ ‘ಮಾಯಿ’ ಸಿನಿಮಾಗಾಗಿ ನಿರ್ದೇಶನ ಮಾಡಿದರು. ಇದು ಸಕಾರಾತ್ಮಕ ವಿಮರ್ಶೆಗಳನ್ನು ಪಡೆಯಿತು. ತೆಲುಗಿನಲ್ಲಿ ‘ಸಿಂಹರಸಿ’ ಮತ್ತು ಕನ್ನಡದಲ್ಲಿ ‘ನರಸಿಂಹ’ ಎಂದು ಸಿನಿಮಾ ರಿಮೇಕ್ ಆಗಿತ್ತು.

ರಾಜಶೇಖರ್ ಅಭಿನಯದ ‘ಭರತಸಿಂಹ ರೆಡ್ಡಿ’ ಚಿತ್ರದ ಮೂಲಕ ಟಾಲಿವುಡ್‌ಗೂ ಎಂಟ್ರಿ ಕೊಟ್ಟಿದ್ದರು. ಶರತ್‌ಕುಮಾರ್ ಅವರ ‘ದಿವಾನ್’ ಮತ್ತು ಜೀವನ್ ಅವರ ‘ಅಧಿಬರ್’ ಮೂಲಕ ತಮಿಳಿಗೆ ಮತ್ತೆ ಕಮ್‌ಬ್ಯಾಕ್‌ ಆಗಿದ್ದರು.

Continue Reading

ಸ್ಯಾಂಡಲ್ ವುಡ್

Kiccha Sudeep: ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ; ಇವರನ್ನು ನೋಡಲು ಜನವೋ ಜನ!

Kiccha Sudeep: ಕೆಲವು ದಿನಗಳ ಹಿಂದೆ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಕೆಲವೇ ದಿನಗಳಲ್ಲಿ ಮ್ಯಾಕ್ಸ್‌ ಟ್ರೈಲರ್‌ ರಿಲೀಸ್‌ ಮಾಡಲಿದ್ದಾರೆ ಎನ್ನಲಾಗಿದೆ. ಇದೀಗ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ (Kiccha Sudeep) ಇಂದು (ಮೇ.27) ಬೆಳಗ್ಗೆ ಭೇಟಿ ನೀಡಿದ್ದಾರೆ.

VISTARANEWS.COM


on

Kiccha Sudeep visit chamundeshwari temple
Koo

ಮೈಸೂರು: ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ (Kiccha Sudeep) ಇಂದು (ಮೇ 27) ಬೆಳಗ್ಗೆ ಭೇಟಿ ನೀಡಿದ್ದಾರೆ. ನಾಡ ಅದಿದೇವತೆ ದರ್ಶನ ಪಡೆದಿದ್ದಾರೆ ಕಿಚ್ಚ ಸುದೀಪ್. ಕಿಚ್ಚ ಸುದೀಪ್ ನೋಡಲು ಅಭಿಮಾನಿಗಳು ಸಾಗರವೇ ನೆರೆದಿತ್ತು. ಕಿಚ್ಚ ಸುದೀಪ್‌ ಕಂಡೊಡನೆ (Kiccha Sudeep visit chamundeshwari temple) ಫ್ಯಾನ್ಸ್‌ ಜೈಕಾರ ಹಾಕಿದ್ದಾರೆ. ಕೆಲವು ದಿನಗಳ ಹಿಂದೆ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಕೆಲವೇ ದಿನಗಳಲ್ಲಿ ಮ್ಯಾಕ್ಸ್‌ ಟ್ರೈಲರ್‌ ರಿಲೀಸ್‌ ಮಾಡಲಿದ್ದಾರೆ ಎನ್ನಲಾಗಿದೆ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರೆಸ್ಟ್ ಆಯೋಜಿಸಿದ್ದ, ಯಕ್ಷ ಧ್ರುವ ಪಟ್ಲ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಮಾತಾಡುತ್ತಿದ್ದ ಕಿಚ್ಚ ಸುದೀಪ್ ತಮಗಿರುವ ತುಳುನಾಡಿನ ಕನೆಕ್ಷನ್ ಬಗ್ಗೆ ಮಾತಾಡಿದ್ದರು. ಅವರ ತಾಯಿ ತುಳುನಾಡಿನವರಾಗಿದ್ದು, ಅವರು ತುಂಬಾ ಚೆನ್ನಾಗಿ ತುಳು ಮಾತಾಡುತ್ತಾರೆ. ಆದರೆ, ತಮಗೆ ಮಾತ್ರ ಎರಡೇ ಎರಡು ತುಳು ಪದಗಳನ್ನು ಹೇಳಿಕೊಟ್ಟಿದ್ದಾರಷ್ಟೇ ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್ʼ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌? ಬೆಂಕಿ ಬಿರುಗಾಳಿ ಅಂದ್ರು ಫ್ಯಾನ್ಸ್‌!

‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ಮ್ಯಾಕ್ಸ್ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಕಿಚ್ಚ ಸುದೀಪ್‌ ಎಕ್ಸ್‌ನಲ್ಲಿ ʻʻಮಹಾಬಲಿಪುರಂನಲ್ಲಿ ʻಮ್ಯಾಕ್ಸ್‌ʼಗಾಗಿ ಒಂದು ಸುತ್ತು. ಸುದೀರ್ಘ 10 ತಿಂಗಳ ಪ್ರಯಾಣ. ನಾನು‌ ಪ್ರತಿ ಘಳಿಗೆಯನ್ನು ಆನಂದಿಸಿದೆ. ಸೆಟ್‌ನಲ್ಲಿ ಅದ್ಭುತ ತಂಡ ಮತ್ತು ಸುಂದರ ತಾರೆಯನ್ನು ಒಳಗೊಂಡಿತ್ತು. ಧನ್ಯವಾದಗಳು ಧನು ಸರ್. ನನ್ನನ್ನು ಚೆನ್ನಾಗಿ ಹೋಸ್ಟ್ ಮಾಡಿದ್ದಕ್ಕಾಗಿ ಧನ್ಯವಾದಗಳು, ವಿಜಯ್ ಮತ್ತು ಇಡೀ ತಂಡಕ್ಕೆ ಧನ್ಯವಾದʼʼಎಂದು ಬರೆದುಕೊಂಡಿದ್ದರು.

ಇದಕ್ಕೂ ಕೆಲವು ದಿನಗಳ ಹಿಂದೆ ಟ್ರೈಲರ್ ರಫ್ ಕಟ್ ಆಗಿರುವ ಬಗ್ಗೆ ಸುದೀಪ್ ಮಾಹಿತಿ ಹಂಚಿಕೊಂಡಿದ್ದರು. ಸುದೀಪ್‌ ಎಕ್ಸ್‌ನಲ್ಲಿ ʻʻಮ್ಯಾಕ್ಸ್ (Max) ಕ್ಲೈಮ್ಯಾಕ್ಸ್‌ನ ಪ್ರಮುಖ ಭಾಗ ಪೂರ್ಣಗೊಳಿಸಲಾಗಿದೆ. ಇಲ್ಲಿಯವರೆಗೆ ಚಿತ್ರೀಕರಿಸಿದ ಅಷ್ಟೂ ಶಾಟ್‌ಗಳನ್ನು ನೋಡಿದೆ. ಚಿತ್ರದ ಪ್ರತಿ ಬಿಟ್ ನೋಡಿ, ತಂಡದ ಎಫರ್ಟ್‌ ಕಂಡು ಸಂತೋಷವಾಗಿದೆ. ಸ್ವಲ್ಪ ಭಾಗ ಚಿತ್ರೀಕರಣ ಬಾಕಿ ಇದೆ. ಟ್ರೈಲರ್ ವೇಳೆ ರಫ್ ಕಟ್ ಸಹ ನೋಡಿದೆ ಮತ್ತು ಅದು ನನ್ನನ್ನು ರೋಮಾಂಚನಗೊಳಿಸಿತುʼʼ ಎಂದು ಬರೆದುಕೊಂಡಿದ್ದರು.

ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ.

ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷಿಯನ್‌ಗಳೂ ಇದ್ದಾರೆ. ಹಾಗೆಯೇ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್‌ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading

ಸಿನಿಮಾ

Ragini Dwivedi: ರಾಗಿಣಿ ದ್ವಿವೇದಿ ಅಭಿನಯದ ʻಬಿಂಗೊʼ ಚಿತ್ರದ ಡಬ್ಬಿಂಗ್‌ ಮುಕ್ತಾಯ

Ragini Dwivedi: ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ , ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

VISTARANEWS.COM


on

Ragini Dwivedi Bingo Movie Dubbing complete
Koo

ಬೆಂಗಳೂರು: “ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದ “ಬಿಂಗೊ” ಚಿತ್ರದ ಡಬ್ಬಿಂಗ್ ಮುಕ್ತಾಯಗೊಂಡಿದೆ. ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ (Ragini Dwivedi) ನಾಯಕ – ನಾಯಕಿಯಾಗಿ ನಟಿಸಿರುವ ಸಿನಿಮಾ ಇದು. “ಬಿಂಗೊ” ಚಿತ್ರದ ಡಬ್ಬಿಂಗ್ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೊದಲ್ಲಿ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗಿವೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಸಸ್ಪೆನ್ಸ್ ಥ್ರಿಲ್ಲರ್ ಜಾನರ್‌ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಮೇ 24ರಂದು ನಟಿ ರಾಗಿಣಿ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ “ಬಿಂಗೊ” ಚಿತ್ರತಂಡ ರಾಗಿಣಿ ಅವರಿಗೆ ಶುಭಾಶಯ ತಿಳಿಸಿದೆ. ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ , ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಸಿನಿಮಾಕ್ಕಿದೆ.

ಇದನ್ನೂ ಓದಿ: Ragini Dwivedi: ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ಸಾಂಗ್‌ಗೆ ಹೆಜ್ಜೆ ಹಾಕಿದ ತುಪ್ಪದ ಬೆಡಗಿ ರಾಗಿಣಿ!

ಮೋಹನ್‌ಲಾಲ್‌ ಜತೆ ಶೂಟಿಂಗ್‌ ಶುರು ಮಾಡಿದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ನಟಿಸುವ ಚಾನ್ಸ್​ ಸಿಕ್ಕಿರುವುದಕ್ಕೆ ರಾಗಿಣಿ ದ್ವಿವೇದಿ ಸಖತ್​ ಖುಷಿ ಆಗಿದ್ದಾರೆ.

ಈ ಪ್ಯಾನ್‌ ಇಂಡಿಯಾ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಎವಿಎಸ್ ಸ್ಟುಡಿಯೋಸ್ ಮತ್ತು ಕನೆಕ್ಟ್ ಮೀಡಿಯಾ 200 ಕೋಟಿ ರೂ ಬಜೆಟ್‌ನಲ್ಲಿ ಸಿನಿಮಾ ಮಾಡಲಿದೆ ಎಂದು ವರದಿಯಾಗಿದೆ. ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದ್ದು, ಇದು ಏಕ್ತಾ ಅವರ ಮೊದಲ ಪ್ಯಾನ್ ಇಂಡಿಯಾ ಚಿತ್ರವಾಗಿದೆ.

ನಂದ್ ಕಿಶೋರ್ ನಿರ್ದೇಶನದ ಈ ಚಿತ್ರ 2024ರಲ್ಲಿ ತೆಲುಗು, ಮಲಯಾಳಂ, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದೊಂದು ಪೌರಾಣಿಕ ಹಾಗೂ ಫ್ಯಾಂಟಸಿ ಕಥಾ ಹಂದರವನ್ನು ಹೊಂದಿರುವ ಸಿನಿಮಾ ಎಂದು ಹೇಳಿಕೊಂಡಿರುವ ನಂದಕಿಶೋರ್, ಸಾಹಸ ಪ್ರಧಾನ ದೃಶ್ಯಗಳನ್ನೂ ಹೊಂದಿರುವುದಾಗಿ ತಿಳಿಸಿದ್ದಾರೆ.

Continue Reading
Advertisement
Road Accident in Anekal
ಕ್ರೈಂ18 mins ago

Road Accident : ತಿರುವಿನಲ್ಲಿದ್ದ ಜವರಾಯ; ಸ್ಪೀಡಾಗಿ ಬಂದು ಫೆನ್ಸಿಂಗ್ ಕಂಬಕ್ಕೆ ಡಿಕ್ಕಿ, ಬೈಕ್‌ ಸವಾರ ಸಾವು

T20 World Cup 2024
ಕ್ರೀಡೆ19 mins ago

T20 World Cup 2024: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಎಂದೂ ಮರೆಯದ ಸ್ಮರಣೀಯ ಸನ್ನಿವೇಶಗಳಿವು

Human trafficking
ದೇಶ28 mins ago

Human trafficking Case: ದೇಶಾದ್ಯಂತ NIA ರೇಡ್‌; ಮಾನವ ಕಳ್ಳಸಾಗಣೆ ಜಾಲ ಬಯಲು

Stone Quarry Collapses
ದೇಶ33 mins ago

Stone Quarry Collapses: ಕಲ್ಲಿನ ಗಣಿ ಕುಸಿದು 10 ಮಂದಿ ಜೀವಂತ ಸಮಾಧಿ; ರಕ್ಷಣಾ ಕಾರ್ಯಾಚರಣೆಗೆ ಭೀಕರ ಮಳೆ ಅಡ್ಡಿ

tumkur murder
ತುಮಕೂರು46 mins ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

deep fake case
ಕ್ರೈಂ1 hour ago

Deepfake Case: ವಿದ್ಯಾರ್ಥಿನಿಯ ಡೀಪ್‌ ಫೇಕ್‌ ಫೋಟೋ ಸೃಷ್ಟಿ ಮಾಡಿದ ಅದೇ ಶಾಲೆಯ 2 ಹುಡುಗರು ಡಿಬಾರ್

Rashmika Mandanna
South Cinema1 hour ago

Rashmika Mandanna: ವಿಜಯ್‌ ದೇವರಕೊಂಡ ಹೆಸರು ಕೇಳುತ್ತಲೇ ನಾಚಿ ನೀರಾದ ರಶ್ಮಿಕಾ; ಸದ್ಯದಲ್ಲೇ ಗುಡ್‌ನ್ಯೂಸ್‌?

T20 World Cup 2024
ಕ್ರೀಡೆ1 hour ago

T20 World Cup 2024: ಟಿ20 ವಿಶ್ವ ಕಪ್​ನಲ್ಲಿ ಟೀಮ್​ ಇಂಡಿಯಾದ ಮುಂದಿರುವ ಸವಾಲುಗಳೇನು?

murder case belagavi news
ಕ್ರೈಂ2 hours ago

Murder Case: ಎಮ್ಮೆ ಮಾರಿ ಬಂದ ಕಾಸಿನಿಂದ ಕುಡಿದ; ಆಕ್ಷೇಪಿಸಿದ ಹೆಂಡತಿಯ ಕೊಂದು ನೇಣು ಹಾಕಿಕೊಂಡ

Pune Porsche Accident
ದೇಶ2 hours ago

Pune Porsche Accident: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ಲಂಚ ಪಡೆದಿದ್ದ ವೈದ್ಯರು; ಆಸ್ಪತ್ರೆ ಜವಾನ ಅರೆಸ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ18 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌