Site icon Vistara News

Actor Siddharth; ತಮಿಳು ನಟ ಸಿದ್ಧಾರ್ಥ್ ಸುದ್ದಿಗೋಷ್ಠಿಗೆ ವಿರೋಧ; ಕನ್ನಡಿಗರ ಪರವಾಗಿ ಕ್ಷಮಿಸಿ ಎಂದ ಪ್ರಕಾಶ್ ರಾಜ್!

Actor Siddharth forced to leave press conference

ಬೆಂಗಳೂರು: ನಟ ಸಿದ್ಧಾರ್ಥ್‌ (Actor Siddharth) ನಟನೆಯ ಚಿತ್ತ ಸಿನಿಮಾ ಸೆ. 28ರಂದು ತಮಿಳು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಿದೆ. ಮಲ್ಲೇಶ್ವರದ ಎಸ್​ಆರ್​ವಿಯಲ್ಲಿ ನಟ ಸಿದ್ಧಾರ್ಥ್ ಸೆ.28ರಂದು ಸುದ್ದಿಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಕರವೇ ಕಾರ್ಯಕರ್ತರು ಸುದ್ದಿಗೋಷ್ಠಿಯನ್ನು ತಡೆದಿದ್ದರು. ನಟ ಕೂಡ ಶಾಂತಯುತವಾಗಿ ಅಲ್ಲಿಂದ ಎದ್ದು ಹೋದರು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಪ್ರಕಾಶ್ ರಾಜ್ ಟ್ವೀಟ್‌ ಮಾಡಿ ನಟ ಸಿದ್ದಾರ್ಥ್ ಬಳಿ ಕ್ಷಮೆ ಕೇಳಿದ್ದಾರೆ.

ʻʻಕಾವೇರಿ ನಮ್ಮದು. ಹೌದು. ನಮ್ಮದೇ. ಆದರೆ, ದಶಕಗಳ ಈ ಸಮಸ್ಯೆಯನ್ನು ಪರಿಹರಿಸಲಾರದ ಎಲ್ಲಾ ಅಸಮರ್ಥ ರಾಜಕೀಯ ಪಕ್ಷಗಳನ್ನು, ನಾಯಕರನ್ನು ಪ್ರಶ್ನಿಸದೆ, ಕೇಂದ್ರ ಸರ್ಕಾರಕ್ಕೆ ಒತ್ತಡ ತರದ ನಾಲಾಯಕ್ ಸಂಸದರನ್ನು ತರಾಟೆಗೆ ತೆಗೆದುಕೊಳ್ಳದೆ.. ಹೀಗೆ ಅಸಹಾಯಕ ಜನಸಾಮಾನ್ಯರನ್ನು.. ಕಲಾವಿದರನ್ನು ಹಿಂಸಿಸುವುದು ತಪ್ಪು ..ಒಬ್ಬ ಕನ್ನಡಿಗನಾಗಿ ಸಹೃದಯ ಕನ್ನಡಿಗರ ಪರವಾಗಿ ಕ್ಷಮಿಸಿʼʼಎಂದು ಟ್ವೀಟ್‌ ಮಾಡಿದ್ದಾರೆ.

ತಮಿಳು ನಟ ಸಿದ್ಧಾರ್ಥ್ ಸುದ್ದಿಗೋಷ್ಠಿಗೆ ಕರವೇ ಕಾರ್ಯಕರ್ತರಿಂದ  ವಿರೋಧ

ನಟ ಸಿದ್ಧಾರ್ಥ್‌ (Actor Siddharth) ನಟನೆಯ ಚಿತ್ತ ಸಿನಿಮಾ ಸೆ. 28ರಂದು ತಮಿಳು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಿದೆ. ಮಲ್ಲೇಶ್ವರದ ಎಸ್​ಆರ್​ವಿಯಲ್ಲಿ ನಟ ಸಿದ್ಧಾರ್ಥ್ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಕರವೇ ಕಾರ್ಯಕರ್ತರು ತಡೆದಿದ್ದಾರೆ. ಕಾವೇರಿ ವಿವಾದ ಭುಗಿಲೆದ್ದ ಸಂದರ್ಭದಲ್ಲಿ ತಮಿಳು ಸಿನಿಮಾದ ಪ್ರಚಾರ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿದ್ಧಾರ್ಥ್ ಬಳಿಯೂ ಕರವೇ ಕಾರ್ಯಕರ್ತರು ಮನವಿ ಮಾಡಿ, ʻʻದಯವಿಟ್ಟು ಕಾರ್ಯಕ್ರಮವನ್ನು ಸ್ಥಗಿತಗೊಳಿಸಿ, ಮತ್ತೆ ಎಂದಾದರೂ ಕಾರ್ಯಕ್ರಮ ಮಾಡಿಕೊಳ್ಳಿ ಆದರೆ ಈಗ ಬೇಡ. ಇದು ಸೂಕ್ಷ್ಮ ಸಮಯʼʼ ಎಂದು ಹೇಳಿದರು.

ನಟ ಸಿದ್ಧಾರ್ಥ್, ಕನ್ನಡದಲ್ಲಿಯೇ ಸಿನಿಮಾದ ಕುರಿತು ಮಾತನಾಡಲು ಪ್ರಯತ್ನಿಸಿದರು. ಆದರೆ ಕರವೇ ಕಾರ್ಯಕರ್ತರು ಸಿದ್ಧಾರ್ಥ್ ಮಾತನ್ನು ತಡೆದು, ಯಾರೂ ಸಹ ತಮಿಳು ಸಿನಿಮಾಕ್ಕೆ ಪ್ರಚಾರ ನೀಡಬಾರದೆಂದು ಆಗ್ರಹಿಸಿದರು. ಸಿದ್ಧಾರ್ಥ್ ಸಹ ಕೂಡಲೇ ಎದ್ದು ದಯವಿಟ್ಟು ಎಲ್ಲರೂ ನನ್ನ ಸಿನಿಮಾ ನೋಡಿ ಎಂದು ಹೇಳಿ ಕೈಮುಗಿದು ಹೊರಟರು.ಸಿದ್ಧಾರ್ಥ್ ನಟನೆಯ ‘ಚಿತ್ತ’ ಸಿನಿಮಾ ಸೆಪ್ಟೆಂಬರ್ 28ರಂದು ಬಿಡುಗಡೆ ಆಗಿದೆ. ಸಿನಿಮಾವು ತಮಿಳು, ಕನ್ನಡ, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ ತೆರೆಗೆ ಬಂದಿದೆ. ‘ಚಿತ್ತ’ ಸಿನಿಮಾದ ಕನ್ನಡ ಆವೃತ್ತಿ ‘ಚಿಕ್ಕು’ಗೆ ಸ್ವತಃ ನಟ ಸಿದ್ಧಾರ್ಥ್ ಕನ್ನಡದಲ್ಲಿಯೇ ಡಬ್ ಮಾಡಿದ್ದಾರೆ.

ಪ್ರಕಾಶ್‌ ರಾಜ್‌ ಟ್ವೀಟ್‌

ಕನ್ನಡದಲ್ಲಿ ಚಿಕ್ಕು

ಏತಕಿ ಎಂಟರ್‌ಟೇನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ನಿರ್ಮಾಣಗೊಂಡಿರುವ ‘ಚಿಕ್ಕು’ ಚಿತ್ರದ ವಿತರಣಾ ಹಕ್ಕುಗಳನ್ನು ಕರ್ನಾಟಕದ ಜನಪ್ರಿಯ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯಾದ ಕೆ.ಆರ್.ಜಿ. ಸ್ಟುಡಿಯೋಸ್ ಪಡೆದುಕೊಂಡಿದೆ. ‘ಚಿಕ್ಕು’ ಚಿತ್ರದಲ್ಲಿ ಸಿದ್ಧಾರ್ಥ್ (Actor Siddharth) ಒಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ವೃತ್ತಿಜೀವನದಲ್ಲೇ ಇದೊಂದು ವಿಭಿನ್ನ ಚಿತ್ರವಷ್ಟೇ ಅಲ್ಲ, ಇದೊಂದು ಹೊಸ ಮೈಲಿಗಲ್ಲು ಎಂದು ಹೇಳಲಾಗುತ್ತಿದೆ.

Exit mobile version