ಬೆಂಗಳೂರು: ಸ್ಯಾಂಡಲ್‌ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿ (Actor Sriimurali) ಅವರು ಇಂದು (ಡಿ.17) ಜನುಮದಿನದ ಸಂಭ್ರಮದಲ್ಲಿದ್ದಾರೆ. ಇಂದೇ ತಮ್ಮ ಫ್ಯಾನ್ಸ್‌ಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಬಹುನಿರೀಕ್ಷಿತ ‘ಬಘೀರ’ ಟೀಸರ್ ರಿಲೀಸ್ ಆಗಿದೆ. ಒಂದೂವರೆ ನಿಮಿಷದ ಆಕ್ಷನ್ ಪ್ಯಾಕ್ಡ್ ಟೀಸರ್ ರಿಲೀಸ್ ಆಗಿ ಸದ್ದು ಮಾಡ್ತಿದೆ. ರಗಡ್ ಲುಕ್‌ನಲ್ಲಿ ಶ್ರೀ ಮುರುಳಿ ಮಿಂಚಿದ್ದಾರೆ.
ʼಕೆಜಿಎಫ್ ಚಾಪ್ಟರ್ 2ʼ ಮತ್ತು ʼಕಾಂತಾರʼ ಸಿನಿಮಾಗಳ ಮೆಗಾ ಯಶಸ್ಸಿನ ನಂತರ ಹೊಂಬಾಳೆ ಫಿಲ್ಮ್ಸ್ ʼಬಘೀರʼ ಚಿತ್ರವನ್ನು ನಿರ್ಮಿಸಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಕಥೆ ಬರೆದಿದ್ದು, ʼಲಕ್ಕಿʼ ಸಿನಿಮಾ ಖ್ಯಾತಿಯ ಡಾ. ಸೂರಿ ನಿರ್ದೇಶನ ಮಾಡುತ್ತಿದ್ದಾರೆ.
ಸೂರಿ ಅವರು ಯಶ್ ಅವರ ʼಲಕ್ಕಿ ʼ ಚಿತ್ರದ ನಂತರ ನಾಲ್ಕು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಬರುತ್ತಿದ್ದಾರೆ. ಮಫ್ತಿ, ಭರಾಟೆ, ರಥಾವರ, ಕಂಠಿ ಚಿತ್ರಗಳಲ್ಲಿ ಅಬ್ಬರಿಸಿದ ಶ್ರೀಮುರುಳಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ರಕ್ಷಿತ್ ಶೆಟ್ಟಿ ನಟನೆಯ ʻಸಪ್ತ ಸಾಗರದಾಚೆ ಎಲ್ಲೋʼ, ಗಣೇಶ್ ನಟನೆಯ “ಬಾನ ದಾರಿಯಲ್ಲಿʼ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸುತ್ತಿರುವ ರುಕ್ಮಿಣಿ ವಸಂತ್ ಈಗ “ಬಘೀರʼ ಚಿತ್ರಕ್ಕೂ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಬಂತು ಪರಾಕ್ ಟೈಟಲ್ ಪೋಸ್ಟರ್
ಶ್ರೀಮುರಳಿ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾವೊಂದು ಘೋಷಣೆಯಾಗಿದೆ. ಯುವ ಪ್ರತಿಭೆಗಳ ಜತೆ ಬಘೀರ ಕೈ ಜೋಡಿಸಿದ್ದಾರೆ. ರೋರಿಂಗ್ ಸ್ಟಾರ್ ಜನ್ಮೋತ್ಸವದ ಸ್ಪೆಷಲ್ ಆಗಿ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ನವ ನಿರ್ದೇಶಕ ಹಾಲೇಶ್ ಕೋಗುಂಡಿ ಸಾರಥ್ಯದ ಚಿತ್ರಕ್ಕೆ ಪರಾಕ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.
ಇದನ್ನೂ ಓದಿ: Actor Sriimurali: ರೋರಿಂಗ್ ಸ್ಟಾರ್ ಶ್ರೀಮುರಳಿ ಜನುಮದಿನ; ಹೊಸ ಸಿನಿಮಾ ಅನೌನ್ಸ್!
ಒಂದಷ್ಟು ಕಿರು ಚಿತ್ರಗಳನ್ನು ನಿರ್ದೇಶಿಸಿರುವ ಅನುಭವವಿರುವ ಹಾಲೇಶ್ ಅವರು ಪರಾಕ್ ಸಿನಿಮಾ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಕ್ರಿಯೇಟರ್ ಹಾಗೂ ಡೈರೆಕ್ಟರ್ ಆಗಿರುವ ಹಾಲೇಶ್ ಅವರಿಗೆ ಮಂಜುನಾಥ್ ಬರವಣಿಗೆಯಲ್ಲಿ ಸಾಥ್ ಕೊಟ್ಟಿದ್ದಾರೆ. ಆಕ್ಷನ್ ಸಸ್ಪೆನ್ಸ್ ಥ್ರಿಲರ್‌ನಲ್ಲಿ ಪರಾಕ್ ಸಿನಿಮಾವನ್ನು ಬ್ರ್ಯಾಂಡ್ ಕೋ ಆಪರೇಟ್ಸ್ ಪ್ರೊಡಕ್ಷನ್ ಪ್ರೈವೇಟ್ ಲಿಮಿಟೆಡ್ ನಡಿ ನಿರ್ಮಾಣ ಮಾಡಲಾಗುತ್ತಿದೆ. ಕೋಗುಂಡಿ ಅಖಿಲೇಶ್ ಹಾಗೂ ಆಶಿಕ್ ಮಾಡಾಲ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.
ಬಹುತೇಕ ಬೆಣ್ಣೆ ನಗರಿ ದಾವಣಗೆರೆ ಪ್ರತಿಭೆಗಳೇ ಒಂದಾಗಿ ಮಾಡುತ್ತಿರುವ ಪರಾಕ್ ಚಿತ್ರದ ಟೈಟಲ್ ಪೋಸ್ಟರ್ ಆಕರ್ಷಕವಾಗಿದೆ. ಹೊಸ ಅವತಾರದಲ್ಲಿ ಶ್ರೀ ದರ್ಶನ ಕೊಟ್ಟಿದ್ದಾರೆ. ಸದ್ಯ ಟೈಟಲ್ ಪೋಸ್ಟರ್ ರಿಲೀಸ್ ಮಾಡಿರುವ ಪರಾಕ್ ಬಳಗ ಮೇ ಅಥವಾ ಜೂನ್ ತಿಂಗಳಿನಿಂದ ಶೂಟಿಂಗ್ ಅಖಾಡಕ್ಕೆ ಇಳಿಯುವ ಯೋಜನೆ ಹಾಕಿಕೊಂಡಿದೆ.