ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ (Actor Upendra) ಅವರ ಜನುದಿನಕ್ಕೆ ಫ್ಯಾನ್ಸ್ ಅದ್ಧೂರಿಯಾಗಿ ಆಚರಿಸಿದ್ದಾರೆ. ಉಪ್ಪಿ 56ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಊರ್ವಶಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಜತೆ ಸೆಲೆಬ್ರೇಟ್ ಮಾಡಿದ್ದಾರೆ. ಉಪ್ಪಿ ನಿರ್ದೇಶನದ ಬಹುನಿರೀಕ್ಷಿತ ‘ಯುಐ’ ಟೀಸರ್ ಕೂಡ ಸಂಹೆ 6.30ಕ್ಕೆ ಅನಾವರಣಗೊಂಡಿದೆ. ಕೇಕ್ ಕತ್ತರಿಸಿ, ಅಭಿಮಾನಿಗಳಿಗೆ ಸಿಹಿ ತಿನಿಸಿದ್ದಾರೆ. ಬಳಿಕ ಫ್ಯಾನ್ಸ್ ಜತೆ ಸೆಲ್ಫಿಗೆ ಉಪ್ಪಿ ಪೋಸ್ ನೀಡಿದ್ದಾರೆ.
25 ವರ್ಷಗಳ ಹಿಂದೆ A ಸಿನಿಮಾದ ಮುಹೂರ್ತ ಊರ್ವಶಿ ಥಿಯೇಟರ್‌ನಲ್ಲಿಯೇ ಆಗಿತ್ತು. ಉಪೇಂದ್ರ ಅವರ ಸಿನಿಜರ್ನಿಯನ್ನ ವಿಡಿಯೊ ಮೂಲಕ UI ಚಿತ್ರತಂಡ ಮೆಲುಕು ಹಾಕಿದೆ. ದುನಿಯಾ ವಿಜಯ್, ಲಹರಿ ವೇಲು ಸೇರದಂತೆ ಅನೇಕ ಸಿನಿ ಗಣ್ಯರು ಶುಭ ಹಾರೈಸಿದರು. ಹ್ಯಾಟ್ರಿಕ್ ಹೀರೊ ಶಿವಣ್ಣ ಮಾತನಾಡಿ ʻʻನನ್ನ ಜೀವನದ ಅತ್ಯಂತ ಮೆಚ್ಚಿನ ನಿರ್ದೇಶಕ ಉಪ್ಪಿ. ನನ್ನನ್ನು ಬೇರೆ ಲೆವೆಲ್‌ಗೆ ಕೊಂಡೊಯ್ದ ಡೈರೆಕ್ಟರ್ ನೀವು. ನಾನು ಓಂ ಚಿತ್ರವನ್ನ ಯಾವತ್ತೂ ಮರೆಯುವುದಕ್ಕೆ ಸಾಧ್ಯವಿಲ್ಲ. ಐ ಲವ್ ಯು ಎಂದುʼʼ ಉಪ್ಪಿಗೆ ಪ್ರೀತಿಯ ಅಪ್ಪುಗೆ ಕೊಟ್ಟರು ಶಿವಣ್ಣ.
ಇದುವರೆಗೂ ಉಪ್ಪಿ ನಿರ್ದೇಶಿಸಿದ ಸಿನಿಮಾಗಳಲ್ಲೇ ಹೆಚ್ಚಿನ ಬಜೆಟ್ ಸಿನಿಮಾದಾಗಿದೆ ಈ UI. ಇದೀಗ ಈ ಸಿನಿಮಾ ಬಜೆಟ್ ಸುಮಾರು 100 ಕೋಟಿ ರೂ. ಎಂದು ವರದಿಗಳಾಗಿವೆ. ವರ್ಷಗಳ ನಂತರ ನಿರ್ದೇಶನದತ್ತ ಮುಖ ಮಾಡಿರುವ ಉಪ್ಪಿ, ಜತೆಗೆ ಈ ಚಿತ್ರದಲ್ಲಿ ಯುವ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಉಪ್ಪಿ ಕ್ಯಾಪ್ ಹಾಕಿ, ಮೈಕ್ ಹಿಡಿದು ನಿರ್ದೇಶನಕ್ಕೆ ಇಳಿದಿದ್ದು, ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಇತಿಹಾಸ ಮರುಕಳಿಸಲಿದೆಯಾ ಎಂದು ಅಭಿಮಾನಿಗಳು ಚರ್ಚೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Actor Upendra: ಸಿನಿ ರಸಿಕರಿಗೆ ಗುಡ್ ನ್ಯೂಸ್ ಕೊಟ್ಟ ರಿಯಲ್ ಸ್ಟಾರ್ ಉಪೇಂದ್ರ: ವಿಡಿಯೊ ವೈರಲ್!
ʻತರ್ಲೆ ನನ್ಮಗʼ, ʻಆಪರೇಷನ್ ಅಂತʼ, ʻಶ್ʼ..!, ʻಓಂʼ, ʻಉಪ್ಪಿ-2ʼ, ʻಸೂಪರ್ʼ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ. ʻಉಪ್ಪಿ 2ʼ ನಂತರ ಬುದ್ಧಿವಂತನ ನಿರ್ದೇಶನದಲ್ಲಿ ಯಾವ ಸಿನಿಮಾ ಕೂಡ ತೆರೆಗೆ ಬರಲಿಲ್ಲ.ಈ ಸಿನಿಮಾದಲ್ಲಿ 3ಡಿ ಬಾಡಿ ಸ್ಕ್ಯಾನ್ ಬಳಸಿದ್ದಾರೆ. ಸುಮಾರು 200 ಕ್ಯಾಮೆರಾಗಳನ್ನು ಬಳಸಿ ಶೂಟ್ ಮಾಡಲಾಗಿದ್ದು, ಈ ತಂತ್ರಜ್ಞಾನ ಬಳಸಿದ್ದು ಏಪ್ಯಾದಲ್ಲಿಯೇ ಮೊದಲ ಸಿನಿಮಾ ಎನ್ನಲಾಗಿದೆ. ʻಅವತಾರ್ 2′ ಸಿನಿಮಾಗೆ ಈ ತಂತ್ರಜ್ಞಾನವನ್ನು ಬಳಸಲಾಗಿತ್ತು. ಇಷ್ಟೇ ಅಲ್ಲದೆ ಸುಮಾರು 14 ಸಾವಿರ ವಿಎಫ್‌ಎಕ್ಸ್ ಶಾಟ್ಸ್ ಬಳಸಲಾಗಿದೆ.
ಸದ್ಯ ಕನ್ನಡದಲ್ಲಿ ನಿರ್ಮಾಣ ಆಗುತ್ತಿರುವ ಹೈ ಬಜೆಟ್ ಸಿನಿಮಾಗಳಲ್ಲಿ ‘UI’ ಕೂಡ ಒಂದು. ತನ್ನ ಕನಸನ್ನು ಸಿನಿಪ್ರಿಯರು ಒಟಿಟಿಯಲ್ಲಿ ಅಲ್ಲದೆ ಥಿಯೇಟರ್‌ನಲ್ಲೇ ಸಿನಿಮಾ ನೋಡಬೇಕು ಅಂತ ಉಪ್ಪಿ ಆಸೆ ಪಟ್ಟು ಅದ್ಧೂರಿಯಾಗಿ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಟಗರು, ಸಲಗ ಖ್ಯಾತಿಯ ಕೆ.ಪಿ. ಶ್ರೀಕಾಂತ್ ಹಾಗೂ ಲಹರಿ ಸಂಸ್ಥೆಯವರು ನಿರ್ಮಾಣ ಜವಾಬ್ದಾರಿಯನ್ನು ಹೊತ್ತಿಕೊಂಡಿದ್ದಾರೆ.